Homeಮುಖಪುಟಅಸ್ಸಾಂ: ಬಿಜೆಪಿ ಮುಖಂಡನ ಮೇಲಿನ ಪ್ರಚಾರ ನಿಷೇಧ ಅರ್ಧ ತೆರವುಗೊಳಿಸಿದ ಚುನಾವಣಾ ಆಯೋಗ!

ಅಸ್ಸಾಂ: ಬಿಜೆಪಿ ಮುಖಂಡನ ಮೇಲಿನ ಪ್ರಚಾರ ನಿಷೇಧ ಅರ್ಧ ತೆರವುಗೊಳಿಸಿದ ಚುನಾವಣಾ ಆಯೋಗ!

- Advertisement -
- Advertisement -

ಶುಕ್ರವಾರ ರಾತ್ರಿ ತಾನೇ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಅಸ್ಸಾಂ ಸಚಿವ ಮತ್ತು ಬಿಜೆಪಿಯ ಹಿರಿಯ ಮುಖಂಡ ಹಿಮಂತ ಬಿಸ್ವಾ ಶರ್ಮಾ ಅವರ ಮೇಲೆ 48 ಗಂಟೆಗಳ ಪ್ರಚಾರ ನಿಷೇಧ ಹೇರಿದ್ದ ಚುನಾವಣಾ ಆಯೋಗ ಶನಿವಾರ ಅದನ್ನು ಏಕಾಏಕಿ ಅರ್ಧಕ್ಕೆ ಇಳಿಸಿದೆ. ಹಾಗಾಗಿ ಹಿಮಂತ ಬಿಸ್ವಾ ಶರ್ಮಾ ನಾಳೆ ಪ್ರಚಾರ ನಡೆಸಬಹುದಾಗಿದೆ.

ವಿರೋಧ ಪಕ್ಷದ ನಾಯಕರಾಗಿದ್ದ ಬಿಪಿಎಫ್ ಮುಖ್ಯಸ್ಥ ಹಗ್ರಾಮ ಮೊಹಿಲರಿ ಅವರನ್ನು  ಜೈಲಿಗೆ ಕಳುಹಿಸುವುದಾಗಿ ಹಿಮಂತ ಬಿಸ್ವಾ ಶರ್ಮಾ ಬೆದರಿಕೆ ಹಾಕಿದ್ದರು. “ಹಗ್ರಾಮ ಮೊಹಿಲರಿ ಉಗ್ರವಾದ ಚಟುವಟಿಕೆಯಲ್ಲಿ ತೊಡಗಿದರೆ… ಆತ ಜೈಲಿಗೆ ಹೋಗುತ್ತಾನೆ. ಇದು ನೇರವಾದ ಮಾತು… ಈಗಾಗಲೇ ಸಾಕಷ್ಟು ಪುರಾವೆಗಳು ದೊರೆತಿವೆ. ಈ ಪ್ರಕರಣವನ್ನು ಎನ್ಐಎ (ರಾಷ್ಟ್ರೀಯ ತನಿಖಾ ಸಂಸ್ಥೆ) ಗೆ ನೀಡಲಾಗುತ್ತಿದೆ. ಕೊಕ್ರಜಹಾರ್ ನಲ್ಲಿ ಕಾರಿನೊಳಗೆ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡ ಪ್ರಕರಣವನ್ನು ಎನ್ಐಎಗೆ ನೀಡಲಾಗುತ್ತಿದೆ. ಬೋಡೋಲ್ಯಾಂಡ್ ಪ್ರಾದೇಶಿಕ ಪ್ರದೇಶದಲ್ಲಿ ಹಗ್ರಾಮ ಸಹಿತ ಯಾರಿಗೂ ಅಶಾಂತಿ ಸೃಷ್ಟಿಸಲು ಅವಕಾಶ ನೀಡುವುದಿಲ್ಲ” ಎಂದು ಶರ್ಮಾ ಹೇಳಿದ್ದರು.

ಈಗ ಅವರ ನಿಷೇಧವನ್ನು ಕೇವಲ 24 ಗಂಟೆಗಳವರೆಗೆ ಕಡಿಮೆಗೊಳಿಸುವುದರೊಂದಿಗೆ ಶರ್ಮಾ ಅವರು ನಾಳೆ ಪ್ರಚಾರ ಮಾಡಲು ಸಾಧ್ಯವಾಗುತ್ತದೆ. ಅಸ್ಸಾಂನ ಮೂರನೇ ಮತ್ತು ಅಂತಿಮ ಹಂತದ ವಿಧಾನಸಭಾ ಚುನಾವಣೆಯು ಮಂಗಳವಾರ ನಡೆಯಲಿದೆ.

ಶರ್ಮಾ ಅವರಿಗೆ ಬರೆದ ಪತ್ರದಲ್ಲಿ ಚುನಾವಣಾ ಆಯೋಗವು “ನಿಮ್ಮ ಬೇಷರತ್ತಾದ ಕ್ಷಮೆಯಾಚನೆ ಮತ್ತು ಭರವಸೆ/ಜವಾಬ್ದಾರಿಯನ್ನು ಗಮನಿಸಿದೆ ಮತ್ತು ಅದರ ಹಿಂದಿನ ಆದೇಶವನ್ನು ಮಾರ್ಪಡಿಸುತ್ತದೆ. ಮತ್ತು ಚುನಾವಣಾ ಪ್ರಚಾರದಿಂದ ನಿಷೇಧ ಅವಧಿಯನ್ನು 48 ಗಂಟೆಗಳಿಂದ 24 ಗಂಟೆಗಳವರೆಗೆ ಕಡಿಮೆ ಮಾಡುತ್ತದೆ” ಎಂದು ಬರೆದಿದೆ.

ಇನ್ನೊಂದೆಡೆ ತಮಿಳುನಾಡಿನಲ್ಲಿ ಅವಹೇಳನಕಾರಿ ಹೇಳಿಕೆ ನಿಡಿದ ಆರೋಪದಲ್ಲಿ ಡಿಎಂಕೆ ಮುಖಂಡ ಎ.ರಾಜಾ ರವರಿಗೆ ಚುನಾವಣಾ ಆಯೋಗ 48 ಗಂಟೆಗಳ ಕಾಲ ಪ್ರಚಾರದಲ್ಲಿ ಪಾಲ್ಗೊಳ್ಳದಂತೆ ನಿಷೇಧ ಹೇರಿದೆ.


ಇದನ್ನೂ ಓದಿ: ಕಾಂಗ್ರೆಸ್ ಮಿತ್ರಪಕ್ಷಕ್ಕೆ ಬೆದರಿಕೆ: ಬಿಜೆಪಿ ಸಚಿವನಿಗೆ 48 ಗಂಟೆ ಪ್ರಚಾರ ಮಾಡದಂತೆ ನಿಷೇಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...