Homeಮುಖಪುಟವಿಜಯ್‌ ಸೇದುಪತಿ ನಟನೆಯ ಚೊಚ್ಚಲ ಬಾಲಿವು‌ಡ್ ಚಿತ್ರ ‘ಮುಂಬೈಕರ್‌’ ಪೋಸ್ಟರ್‌ ಬಿಡುಗಡೆ

ವಿಜಯ್‌ ಸೇದುಪತಿ ನಟನೆಯ ಚೊಚ್ಚಲ ಬಾಲಿವು‌ಡ್ ಚಿತ್ರ ‘ಮುಂಬೈಕರ್‌’ ಪೋಸ್ಟರ್‌ ಬಿಡುಗಡೆ

- Advertisement -
- Advertisement -

ನಟ ವಿಜಯ್ ಸೇದುಪತಿ ಅವರು ವಿಕ್ರಾಂತ್ ಮಾಸ್ಸಿ ಅಭಿನಯದ ಬಾಲಿವುಡ್ ಚಿತ್ರ, ‘ಮುಂಬೈಕರ್’ ನ ಅಧಿಕೃತ ಪೋಸ್ಟರ್ ಅನ್ನು ಶನಿವಾರ ಬಿಡುಗಡೆ ಮಾಡಿದರು.

ರಿಯಾ ಶಿಬು ನೇತೃತ್ವದಲ್ಲಿ, ಸಂತೋಷ್ ಶಿವನ್ ನಿರ್ದೇಶನದಲ್ಲಿ ನಿರ್ಮಾಣವಾಗುತ್ತಿರುವ ‘ಮುಂಬೈಕರ್‌’ ಚಿತ್ರವು ಸೇದುಪತಿ ಅವರ ಚೊಚ್ಚಲ ಬಾಲಿವುಡ್‌ ಚಿತ್ರವಾಗಿದೆ.

ಇದನ್ನೂ ಓದಿ: ರಾಜ್ಯ ಸರ್ಕಾರದ ನಿರ್ಧಾರಕ್ಕೆ ಆಕ್ರೋಶ: ತಿರುಗಿಬಿದ್ದ ಕನ್ನಡ ಚಿತ್ರರಂಗ

‘ಮುಂಬೈಕರ್’ ಚಿತ್ರವು ಲೋಕೇಶ್ ಕನಗರಾಜ್ ಅವರ 2017 ರ ತಮಿಳು ಆಕ್ಷನ್ ಥ್ರಿಲ್ಲರ್ ‘ಮನಗರಂ’ ಚಿತ್ರದ ಹಿಂದಿ ರಿಮೇಕ್ ಆಗಿದೆ ಎನ್ನಲಾಗಿದೆ.

2017 ರಲ್ಲಿ ಬಿಡುಗಡೆಯಾದ ‘ಮನಗರಂ’ ಚಿತ್ರದಲ್ಲಿ ಶ್ರೀ, ಸುಂದೀಪ್ ಕಿಶನ್ ಮತ್ತು ರೆಜಿನಾ ಕಸ್ಸಂದ್ರ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ಈ ಚಿತ್ರದ ಕಥೆಯು, ಚೆನ್ನೈಗೆ ತೆರಳಿದ ತಪ್ಪಾದ ಗುರುತಿನಿಂದಾಗಿ ಪ್ರಕರಣವೊಂದರಲ್ಲಿ ಸಿಕ್ಕು ಹಲ್ಲೆಗೊಳಗಾಗುವ ಯುವಕನ ಸುತ್ತ ಸುತ್ತುತ್ತದೆ. ಜೊತೆಗೆ ಹಿಂಸಾತ್ಮಕ ನಗರದಲ್ಲಿ ಮಾರಣಾಂತಿಕ ಸಂದರ್ಭಗಳನ್ನು ಎದುರಿಸುತ್ತಾ ಬದುಕಲು ಹೆಣಗಾಡುವ ಚಿತ್ರಣಗಳನ್ನು ಕಟ್ಟಿಕೊಡಲಾಗಿದೆ.

ಟ್ವಿಟರ್‌ನಲ್ಲಿ ವಿಜಯ್ ಸೇದುಪತಿ ಬಿಡುಗಡೆ ಮಾಡಿದ ಈ ಚಿತ್ರದಲ್ಲಿ ಅವರು ನಿರ್ವಹಿಸುವ ಪಾತ್ರದ ಫಸ್ಟ್ ಲುಕ್ ಚಿತ್ರ ಇಲ್ಲಿದೆ.

ಸೇದುಪತಿ ಅಭಿನಯದ ಈ ಚಿತ್ರದಲ್ಲಿ ತಾನ್ಯಾ ಮಾಣಿಕ್ತಾಲಾ, ಸಂಜಯ್ ಮಿಶ್ರಾ, ರಣವೀರ್ ಶೋರೆ ಮತ್ತು ಸಚಿನ್ ಖೇಡ್ಕರ್ ಪ್ರಮುಖ ಪಾತ್ರಗಳನ್ನು ನಿರ್ವಹಿಸಲಿದ್ದಾರೆ.

ಇದನ್ನೂ ಓದಿ:ಆಸ್ಕರ್ ಪ್ರಶಸ್ತಿಗೆ ಮೊದಲ ಮುಸ್ಲಿಂ ನಟ ನಾಮನಿರ್ದೇಶನ: ಇತಿಹಾಸ ಸೃಷ್ಟಿಸಿದ ರಿಜ್ ಅಹ್ಮದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...