Homeಕರೋನಾ ತಲ್ಲಣಬೆಂಗಳೂರಿನಿಂದ ಮೈಸೂರಿಗೆ ಬರುವವರಿಗೆ ಕೊರೊನಾ ನೆಗೆಟಿವ್ ರಿಪೋರ್ಟ್ ಕಡ್ಡಾಯ- ಜಿಲ್ಲಾಧಿಕಾರಿ

ಬೆಂಗಳೂರಿನಿಂದ ಮೈಸೂರಿಗೆ ಬರುವವರಿಗೆ ಕೊರೊನಾ ನೆಗೆಟಿವ್ ರಿಪೋರ್ಟ್ ಕಡ್ಡಾಯ- ಜಿಲ್ಲಾಧಿಕಾರಿ

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ಉಲ್ಬಣಗೊಳ್ಳುತ್ತಿದೆ ಎಂದು ರಾಜ್ಯ ಸರ್ಕಾರ ಹಲವು ನಿಯಮಗಳನ್ನು ಜಾರಿ ಮಾಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ ಈ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಮೈಸೂರಿಗೆ ಬರುವವರು ಕೊರೊನಾ ನೆಗೆಟಿವ್ ವರದಿ ತರುವುದು ಕಡ್ಡಾಯ ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಪ್ರವಾಸಿ ತಾಣಗಳು, ರೆಸಾರ್ಟ್‌ಗಳು, ಕನ್ವೆನ್ಷನ್‌ಹಾಲ್‌, ಪಾರ್ಟಿ, ರಿಕ್ರಿಯೇಷನ್‌ ಕ್ಲಬ್‌ ಹಾಗೂ ಚಿತ್ರಮಂದಿರ ಪ್ರವೇಶಕ್ಕೆ ಕೊರೊನಾ ನೆಗೆಟಿವ್ (ಕಳೆದ 72 ಗಂಟೆಯೊಳಗಿನ) ‌ ವರದಿ ತರುವುದನ್ನು ಕಡ್ಡಾಯ ಮಾಡಲಾಗಿದೆ.

‘ಏಪ್ರಿಲ್ 10 ರಿಂದ ಏಪ್ರಿಲ್20 ರ ವರೆಗೆ ಜಿಲ್ಲೆಯಲ್ಲಿ ಕೊರೊನಾ ವಿಶೇಷ ಮಾರ್ಗಸೂಚಿ ಹೊರಡಿಸಲು ತೀರ್ಮಾನಿಸಲಾಗಿದೆ. ಅದಕ್ಕಾಗಿ 300 ಗೃಹರಕ್ಷಕ ದಳದ ಸಿಬ್ಬಂದಿಯನ್ನು ನಿಯೋಜಿಸಿಕೊಳ್ಳಲಾಗುತ್ತಿದೆ. ಕೊರೊನಾ ನಿಯಮಗಳನ್ನು ಪಾಲಿಸುವ ಮೂಲಕ ಕೊರೊನಾ ಹರಡುವುದನ್ನು ತಡೆಗಟ್ಟಬೇಕು’ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ: ಹುತಾತ್ಮ ಸ್ಮಾರಕಕ್ಕೆ ಸೇರಿದ ದೇಶದ 23 ರಾಜ್ಯಗಳ 1,500 ಹಳ್ಳಿಗಳ ಮಣ್ಣು

 

ಬೆಂಗಳೂರು ನಗರ ಮತ್ತು ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡುವುದು ದಿನೇ ದಿನೇ ಹೆಚ್ಚಾಗುತ್ತಿರುವುದು ಕಂಡುಬಂದಿದೆ. ಮೈಸೂರು ಜಿಲ್ಲೆಯಿಂದ ಅನೇಕ ಉದ್ಯೋಗ-ವ್ಯಾಪಾರ ಉದ್ದೇಶಗಳಿಗಾಗಿ ಪ್ರತಿ ದಿನ ಬೆಂಗಳೂರು ಜಿಲ್ಲೆಗೆ ಹೋಗಿ ಬರುತ್ತಿದ್ದಾರೆ. ಅಲ್ಲದೇ ಮೈಸೂರು ಜಿಲ್ಲೆಯು ಪ್ರವಾಸಿ ತಾಣವಾಗಿರುವುದರಿಂದ ಅನೇಕ ಪ್ರವಾಸಿಗರು ಬೆಂಗಳೂರು ಜಿಲ್ಲೆಯಿಂದ ಮೈಸೂರು ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ. ಇದರಿಂದ ಮೈಸೂರು ಜಿಲ್ಲೆಯಾದ್ಯಂತ ಕೊರೊನಾ ಪ್ರಕರಣಗಳು ಹರಡುವುದು ಹೆಚ್ಚಾಗಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೀಗಾಗಿ ಕೊರೊನಾ ನೆಗೆಟಿವ್ ವರದಿ ಹೊಂದಿರುವುದು ಸೂಕ್ತವಾಗಿರುತ್ತದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.


ಇದನ್ನೂ ಓದಿ: ಅಪ್ಪ-ಮಗನ ನಿಜ ಬಣ್ಣ ಬಯಲಾಗಲಿದೆ: ಸಿಎಂ ಮತ್ತು ವಿಜಯೇಂದ್ರ ಬಗ್ಗೆ ಬಿಜೆಪಿ ಶಾಸಕ ಯತ್ನಾಳ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪತಂಜಲಿ ಫುಡ್ಸ್‌ನಿಂದ ಜಿಎಸ್‌ಟಿ ಬಾಕಿ; ₹27.46 ಕೋಟಿ ವಸೂಲಿಗೆ ಶೋಕಾಸ್ ನೋಟಿಸ್

0
ಬಾಬಾ ರಾಮ್‌ದೇವ್ ಅವರ ಪತಂಜಲಿ ಫುಡ್ಸ್‌ಗೆ ಜಿಎಸ್‌ಟಿ ಗುಪ್ತಚರ ಇಲಾಖೆ ಶೋಕಾಸ್ ನೋಟಿಸ್ ನೀಡಿದ್ದು, ₹27.46 ಕೋಟಿ ಮೌಲ್ಯದ ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್ ಅನ್ನು ಏಕೆ ವಸೂಲಿ ಮಾಡಬಾರದು ಎಂದು ಕಂಪನಿಗೆ ವಿವರಣೆ...