Homeಮುಖಪುಟಅತ್ಯಾಚಾರಿ ಕುಲದೀಪ್ ಸೆಂಗಾರ್‌ ಪತ್ನಿಗೆ ಜಿಲ್ಲಾ ಪಂಚಾಯತ್ ಟಿಕೆಟ್ ನೀಡಿದ ಬಿಜೆಪಿ

ಅತ್ಯಾಚಾರಿ ಕುಲದೀಪ್ ಸೆಂಗಾರ್‌ ಪತ್ನಿಗೆ ಜಿಲ್ಲಾ ಪಂಚಾಯತ್ ಟಿಕೆಟ್ ನೀಡಿದ ಬಿಜೆಪಿ

ಪಕ್ಷದ ಹಿರಿಯ ಮುಖಂಡರು ಅವರ ಪರವಾಗಿ ಮತ್ತು ಇತರ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.

- Advertisement -
- Advertisement -

ಮುಂಬರುವ ಉತ್ತರ ಪ್ರದೇಶದ ಪಂಚಾಯತ್‌‌ ಚುನಾವಣೆಗಳಲ್ಲಿ ಬಿಜೆಪಿಯು ರಾಜ್ಯದ ಐದು ಜಿಲ್ಲೆಗಳಲ್ಲಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಗುರುವಾರ ಘೋಷಿಸಿದೆ. ಈ ಪಟ್ಟಿಯಲ್ಲಿ ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಮಾಜಿ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಪತ್ನಿ ಸಂಗೀತ ಸೇಂಗಾರ್ ಅವರ ಹೆಸರೂ ಕಾಣಿಸಿಕೊಂಡಿದೆ. ಕುಲದೀಪ್‌ ಸೆಂಗಾರ್‌ ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೊಳಗಾದ ನಂತರ ಅವರ ಶಾಸಕ ಸ್ಥಾನದ ಸದಸ್ಯತ್ವವನ್ನು ರದ್ದುಪಡಿಸಲಾಯಿತು.

ಉನ್ನಾವೊದ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿರುವ ಸಂಗೀತಾಗೆ, ಫತೇಪುರ್ ಚೌರಾಸಿ ತೃತಾಯದ ಜಿಲ್ಲಾ ಪಂಚಾಯತ್ ಸ್ಥಾನದಿಂದ ಟಿಕೆಟ್ ನೀಡಲಾಗಿದೆ. ಉನ್ನಾವೊದ ವಿವಿಧ ಜಿಲ್ಲಾ ಪಂಚಾಯತ್ ವಾರ್ಡ್‌ಗಳಿಗೆ 51 ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಲಾಗಿದೆ.

ಇದನ್ನೂ ಓದಿ: ಉನ್ನಾವ್‌ ಅತ್ಯಾಚಾರ ಸಂತ್ರಸ್ತೆಯ ತಂದೆ ಕೊಲೆ ಪ್ರಕರಣ: ಬಿಜೆಪಿಯ ಮಾಜಿ ಶಾಸಕ ಕುಲದೀಪ್‌ ಸೆಂಗಾರ್‌ಗೆ 10 ವರ್ಷ ಜೈಲು

ಸಂಗೀತ 2016 ರಲ್ಲಿ ಉನ್ನಾವೊ ಜಿಲ್ಲೆಯಿಂದ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿದ್ದರು. ಆ ಸಮಯದಲ್ಲಿ ಅವರು ರಾಜಕೀಯ ಪಕ್ಷದ ಚಿಹ್ನೆಯ ಮೇಲೆ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ. ಆದರೆ ಈ ಬಾರಿ ಬಿಜೆಪಿ ಸೇರಿದಂತೆ ರಾಜಕೀಯ ಪಕ್ಷಗಳು ತನ್ನ ಅಭ್ಯರ್ಥಿಗಳನ್ನು ಅಧಿಕೃತವಾಗಿ ಘೋಷಿಸಲು ನಿರ್ಧರಿಸಿದೆ.

ಆಯ್ದ ಜಿಲ್ಲೆಗಳಿಂದ ಪ್ರತಿದಿನ ಅಭ್ಯರ್ಥಿಗಳನ್ನು ಘೋಷಿಸಲಾಗುತ್ತಿದೆ. ಗುರುವಾರ ಉನ್ನಾವೊ, ಮೌ, ಬಲರಾಂಪುರ್, ಬಸ್ತಿ ಮತ್ತು ಕುಶಿನಗರದಿಂದ ಆಭ್ಯರ್ಥಿಗಳನ್ನು ಘೋಷಿಸಲಾಯಿತು.

ತನ್ನ ಗಂಡನ ಶಾಸಕ ಸ್ಥಾನವು ರದ್ದುಗೊಂಡ ನಂತರ ಬಂಗಾರ್‌ಮೌ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಕಾಂತ್ ಕಟಿಯಾರ್ ಪರ ಸಂಗೀತ ಅಭಿಯಾನ ನಡೆಸಿದ್ದರು. ಈ ಬಾರಿ ಪಕ್ಷದ ಹಿರಿಯ ಮುಖಂಡರು ಅವರ ಪರವಾಗಿ ಮತ್ತು ಇತರ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.

ಇದನ್ನೂ ಓದಿ: ಅಪಘಾತಕ್ಕೀಡಾಗಿದ್ದ ಉನ್ನಾವ್ ಅತ್ಯಾಚಾರ ಸಂತ್ರಸ್ತೆ ಪರ ವಕೀಲ ಸಾವು

ಬಿಜೆಪಿ ಅಭ್ಯರ್ಥಿಯಾಗಿ, ಕುಲದೀಪ್ ಸೆಂಗಾರ್ 2017 ರಲ್ಲಿ ಉನ್ನಾವೊದ ಬಂಗಾರ್‌ಮೌ ವಿಧಾನಸಭಾ ಕ್ಷೇತ್ರದಿಂದ ನಿಂತು ಚುನಾವಣೆಯಲ್ಲಿ ಜಯಗಳಿಸಿದ್ದರು. ಆದಾಗ್ಯೂ, ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೊಳಗಾದ ನಂತರ ಅವರನ್ನು ಪಕ್ಷದಿಂದ ಹೊರಹಾಕಲಾಯಿತು.

ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದು ಮಾತ್ರವಲ್ಲದೆ, ಸಂತ್ರಸ್ತೆಯ ತಂದೆಯನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸಲು ಸಂಚು ರೂಪಿಸಿದ್ದಕ್ಕಾಗಿ ಸಿಬಿಐ ಆರೋಪಪಟ್ಟಿ ಮಾಡಿತ್ತು. ಸಂತ್ರಸ್ತೆಯ ತಂದೆಯ ಕೊಲೆಗೆ ಸಂಬಂಧಿಸಿದಂತೆ ಸೆಂಗಾರ್‌ನ ಸಹೋದರ ಮತ್ತು ಇತರರ ಮೇಲೆ ಆರೋಪಪಟ್ಟಿ ಸಲ್ಲಿಸಲಾಗಿದೆ.

ಇದನ್ನೂ ಓದಿ: 8 ಪೊಲೀಸರನ್ನು ಗುಂಡಿಕ್ಕಿ ಕೊಂದ ಕ್ರಿಮಿನಲ್! ಉತ್ತರ ಪ್ರದೇಶದಲ್ಲೊಂದು ಭೀಕರ ಘಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...