Homeಮುಖಪುಟಆಪರೇಷನ್ ಕಮಲ ಭೀತಿ: ಕಾಂಗ್ರೆಸ್ ಮೈತ್ರಿಕೂಟದ 20 ಅಭ್ಯರ್ಥಿಗಳು ಜೈಪುರ ರೆಸಾರ್ಟ್‌ಗೆ!

ಆಪರೇಷನ್ ಕಮಲ ಭೀತಿ: ಕಾಂಗ್ರೆಸ್ ಮೈತ್ರಿಕೂಟದ 20 ಅಭ್ಯರ್ಥಿಗಳು ಜೈಪುರ ರೆಸಾರ್ಟ್‌ಗೆ!

ಅಸ್ಸಾಂನಲ್ಲಿ ಎಪ್ರಿಲ್ ಆರಕ್ಕೆ ಚುನಾವಣೆ ಮುಗಿದಿದ್ದು, ಫಲಿತಾಂಶ ಇನ್ನಷ್ಟೇ ಬರಬೇಕಿದೆ

- Advertisement -
- Advertisement -

ಅಸ್ಸಾಂ ವಿಧಾನಸಭಾ ಚುನಾವಣೆ ಎಪ್ರಿಲ್ 6 ರಂದು ಮುಗಿದಿದ್ದು, ಬಿಜೆಪಿಯಿಂದ ‘ಆಪರೇಷನ್ ಕಮಲ’ ನಡೆಯುತ್ತದೆ ಎಂಬ ಭೀತಿಗೆ ಚುಣಾವಣೆಯಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟದ ಸುಮಾರು 20 ಅಭ್ಯರ್ಥಿಗಳನ್ನು ಶುಕ್ರವಾರ ಜೈಪುರಕ್ಕೆ ಕರೆತಲಾಗಿದೆ.

ಮೂಲಗಳ ಪ್ರಕಾರ, ಹೆಚ್ಚಿನ ಅಭ್ಯರ್ಥಿಗಳು ಕಾಂಗ್ರೆಸ್ ಮಿತ್ರಪಕ್ಷವಾದ ಆಲ್-ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಎಐಯುಡಿಎಫ್) ಗೆ ಸೇರಿದವರಾಗಿದ್ದಾರೆ.

ಅವರನ್ನು ಜೈಪುರದ ಹೊರವಲಯದಲ್ಲಿರುವ ಹೋಟೆಲ್ ಫೇರ್‌ಮಾಂಟ್‌ಗೆ ಕರೆದೊಯ್ಯಲಾಗಿದೆ. ಕಳೆದ ವರ್ಷ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧ ಪಕ್ಷದ ಮುಖಂಡ ಸಚಿನ್ ಪೈಲಟ್‌ ದಂಗೆಯೆದ್ದಾಗ ಉಂಟಾಗಿದ್ದ ರಾಜಕೀಯ ಬಿಕ್ಕಟ್ಟಿನ ಸಂದರ್ಭದಲ್ಲಿ ಕೂಡಾ ರಾಜಸ್ಥಾನದ ಕಾಂಗ್ರೆಸ್ ಶಾಸಕರನ್ನು ಇದೇ ಹೋಟೆಲ್‌ನಲ್ಲಿ ಇರಿಸಲಾಗಿತ್ತು.

ಇದನ್ನೂ ಓದಿ: ಮಮತಾ ಬ್ಯಾನರ್ಜಿಗೆ ಮತ್ತೆ ನೋಟಿಸ್ ನೀಡಿದ ಚುನಾವಣಾ ಆಯೋಗ!

“ಅಸ್ಸಾಂನಿಂದ ಇಂದು ಸುಮಾರು 20 ಅಭ್ಯರ್ಥಿಗಳನ್ನು ಜೈಪುರಕ್ಕೆ ಸ್ಥಳಾಂತರಿಸಲಾಗಿದೆ” ಎಂದು ರಾಜಸ್ಥಾನ ಕಾಂಗ್ರೆಸ್ ಮುಖಂಡ ಮಹೇಶ್ ಜೋಶಿ ಹೇಳಿದ್ದಾರೆ.

“ಬಹುಮತ ಹೊಂದಿದ್ದರೂ ಬಿಜೆಪಿಯ ಕುದುರೆ ವ್ಯಾಪಾರದಿಂದಾಗಿ ಪಕ್ಷವು ಸರ್ಕಾರ ರಚಿಸಲು ಸಾಧ್ಯವಾಗದಂತೆ ನಡೆದ ಹಲವಾರು ಘಟನೆಗಳ ದೃಷ್ಟಿಯಲ್ಲಿಟ್ಟುಕೊಂಡು, ಮುನ್ನೆಚ್ಚರಿಕೆ ಕ್ರಮವಾಗಿ ಅಭ್ಯರ್ಥಿಗಳನ್ನು ಇಲ್ಲಿಗೆ ಕರೆತರಲಾಯಿತು” ಎಂದು ಕಾಂಗ್ರೆಸ್‌ನ ಮತ್ತೊಬ್ಬ ಮುಖಂಡರು ಹೇಳಿದ್ದಾರೆ.

ಬಿಜೆಪಿ ಅವರ ಯಾವುದೆ ಪ್ರಭಾವ ಬೀರದೆ ಇರಲು ಬೇಕಾಗಿ ಅಭ್ಯರ್ಥಿಗಳನ್ನು ಜೈಪುರಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಮೂರು ಹಂತದ ಅಸ್ಸಾಂ ವಿಧಾನಸಭಾ ಚುನಾವಣೆ ಏಪ್ರಿಲ್ 6 ರಂದು ಮುಕ್ತಾಯಗೊಂಡಿದ್ದು, ಫಲಿತಾಂಶ ಮೇ 2 ರಂದು ಹೊರಬರಲಿದೆ.

ಇದನ್ನೂ ಓದಿ: ರಸಗೊಬ್ಬರ ಬೆಲೆ ಏರಿಕೆ ಪ್ರಶ್ನಿಸದ ರಾಜ್ಯ ಸರ್ಕಾರ, ಬಿಜೆಪಿ ಸಂಸದರು ಹೇಡಿಗಳು- ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...