Homeಕರ್ನಾಟಕದಿಲ್ಲಿಯಲ್ಲೊಬ್ಬ ಪಾಳೆಯಗಾರ, ಕರ್ನಾಟಕದಲ್ಲೊಬ್ಬ ಮಾಂಡಲಿಕ; ಭಲೇ ಜೋಡಿ: ಸಿದ್ದರಾಮಯ್ಯ

ದಿಲ್ಲಿಯಲ್ಲೊಬ್ಬ ಪಾಳೆಯಗಾರ, ಕರ್ನಾಟಕದಲ್ಲೊಬ್ಬ ಮಾಂಡಲಿಕ; ಭಲೇ ಜೋಡಿ: ಸಿದ್ದರಾಮಯ್ಯ

ನಗರಗಳಲ್ಲಿ ರಾತ್ರಿ ಕರ್ಪ್ಯೂ ಹೇರಿದ್ದು, ಕೊರೊನಾ ಓಡಿಸಲು ತಟ್ಟೆ ಬಡಿಯಲು ಪ್ರಧಾನಿ ಮೋದಿ ನೀಡಿದ್ದ ಕರೆಯಷ್ಟೇ ಬಾಲಿಷ ಕ್ರಮ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ರಾಜ್ಯದ ಬಿಜೆಪಿ ಸರ್ಕಾರ ನಗರಗಳಲ್ಲಿ ರಾತ್ರಿ ಕರ್ಪ್ಯೂ ಹೇರಲು ಕೈಗೊಂಡಿರುವ ಕ್ರಮ, ಕೊರೊನಾ ಓಡಿಸಲು ತಟ್ಟೆ ಬಡಿಯಲು ಪ್ರಧಾನಿ ನರೇಂದ್ರ ಮೋದಿಯವರು ನೀಡಿದ್ದ ಕರೆಯಷ್ಟೇ ಬಾಲಿಷ ಕ್ರಮ ಎಂದು ಸಿದ್ದರಾಮಯ್ಯ ತಿಳಿಸಿದ್ದು,  ದೆಹಲಿಯಲ್ಲೊಬ್ಬರು ಪಾಳೆಯಗಾರ, ಕರ್ನಾಟಕದಲ್ಲೊಬ್ಬರು ಮಾಂಡಲಿಕ, ಭಲೇ ಜೋಡಿ ಎಂದು ಅವರು ವ್ಯಂಗ್ಯವಾಡಿದ್ದಾರೆ.

ಈ ಬಗ್ಗೆ ಶನಿವಾರ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ರಾತ್ರಿ ತೆರೆದಿರುವ ಹೊಟೇಲ್, ಚಿತ್ರಮಂದಿರ ಮತ್ತು ಅಂಗಡಿಮುಂಗಟ್ಟುಗಳನ್ನು ಮುಚ್ಚಿದರೆ ಸಾಲದೇ? ಕೊರೊನಾ ನಿಯಂತ್ರಣಕ್ಕೆ ಯಾವ ರೀತಿಯಲ್ಲಿಯೂ ಉಪಯೋಗವಾಗದ ಆಯ್ದ ನಗರಗಳಲ್ಲಿ ರಾತ್ರಿ ಕರ್ಪ್ಯೂವಿನ ನಾಟಕ ಯಾಕೆ?” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಆಪರೇಷನ್ ಕಮಲ ಭೀತಿ: ಕಾಂಗ್ರೆಸ್ ಮೈತ್ರಿಕೂಟದ 20 ಅಭ್ಯರ್ಥಿಗಳು ಜೈಪುರ ರೆಸಾರ್ಟ್‌ಗೆ!

“ಕೊರೊನಾ ನಿಯಂತ್ರಿಸುವ ಪ್ರಾಮಾಣಿಕ ಇಚ್ಛೆ ಮುಖ್ಯಮಂತ್ರಿಗಳು ಹೊಂದಿದ್ದರೆ, ಮೊದಲು ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಕ್ರಮಕೈಗೊಳ್ಳಬೇಕು, ಕೋವಿಡ್ ಪರೀಕ್ಷೆ ಹೆಚ್ಚಿಸಬೇಕು, ಸೋಂಕಿತರಿಗೆ ತಕ್ಷಣ ಚಿಕಿತ್ಸೆ ಲಭ್ಯವಿರುವಂತೆ ನೋಡಿಕೊಳ್ಳಬೇಕು” ಎಂದು ಅವರು ಸಲಹೆ ನೀಡಿದ್ದಾರೆ.

“ಕೋವಿಡ್ ವ್ಯಾಕ್ಸಿನ್ ಪ್ರಾರಂಭಿಸಿ 80 ದಿನಗಳು ಕಳೆದರೂ ಕೇವಲ ಶೇಕಡಾ ಒಂದರಷ್ಟು ಜನಸಂಖ್ಯೆಗೆ ಮಾತ್ರ ನೀಡಲು ಸಾಧ್ಯವಾಗಿದೆ. ರಾಜ್ಯದಲ್ಲಿ ಈಗಾಗಲೇ ವ್ಯಾಕ್ಸಿನ್ ಕೊರತೆಯ ದೂರು ಕೇಳಿಬರತೊಡಗಿದೆ. ಗಿಮಿಕ್‌ಗಳನ್ನು ಬಿಟ್ಟು ಈ ಕಡೆ ಗಮನಹರಿಸಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ದೇಶದ ಪ್ರಧಾನಿಯ ಅಂಧಾ ದರ್ಬಾರ್‌ನಿಂದ ರಾಜ್ಯದ ಮುಖ್ಯಮಂತ್ರಿಗಳು ಸ್ಪೂರ್ತಿ ಪಡೆದರೆ, ಮುಖ್ಯಮಂತ್ರಿಗಳಿಂದ ಪ್ರೇರಣೆ ಪಡೆದು ಕೆಲವು ಜಿಲ್ಲಾಧಿಕಾರಿಗಳು ಕೊರೊನಾ ನಿಯಂತ್ರಣದ ಹೆಸರಲ್ಲಿ ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ. ಮುಖ್ಯಮಂತ್ರಿಗಳೇ, ನೀವು ಸ್ವಲ್ಪ ಬುದ್ದಿ ಕಲಿಯಿರಿ, ಅವರಿಗೂ ಸ್ವಲ್ಪ‌ ಬುದ್ದಿ ಹೇಳಿ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ಅತ್ಯಾಚಾರಿ ಕುಲದೀಪ್ ಸೆಂಗಾರ್‌ ಪತ್ನಿಗೆ ಜಿಲ್ಲಾ ಪಂಚಾಯತ್ ಟಿಕೆಟ್ ನೀಡಿದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ.

ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಹೋರಾಟ...

ತಮಿಳುನಾಡು| ಮರ್ಯಾದೆಗೇಡು ಹತ್ಯೆ ಶಂಕೆ; 25 ವರ್ಷದ ದಲಿತ ಯುವಕನ ಭೀಕರ ಕೊಲೆ

ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನೊಬ್ಬನನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ಮರ್ಯಾದೆಗೇಡು ಕೊಲೆಯ ಶಂಕೆ ವ್ಯಕ್ತವಾಗಿದೆ. ಆಗಸ್ಟ್ 16 ರಂದು ರಾತ್ರಿ ಚೆಂಗಲ್ಪಟ್ಟುವಿನ ಕೇಳಂಬಾಕ್ಕಂ ನಿವಾಸಿ ಪ್ರವೀಣ್ ಅವರ ಮೇಲೆ ದಾಳಿಕೋರರಾದ...

44 ಲಕ್ಷ ಮತದಾರರಿಗೆ ನೋಟಿಸ್: BLA ಗಳಿಗೆ ಪಟ್ಟಿ ನೀಡಿ, ಪಾರದರ್ಶಕತೆ ಕಾಯ್ದುಕೊಳ್ಳಲು ‘ಜಾಗೃತ ಕರ್ನಾಟಕ’ ಒತ್ತಾಯ

ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಪ್ರಕಟಗೊಳ್ಳುತ್ತಿರುವ ಕರಡು ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಎಚ್ಚರವಹಿಸಬೇಕು ಹಾಗೂ ನೋಟಿಸ್ ಪ್ರಕ್ರಿಯೆಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಆಗ್ರಹಿಸಿ ‘ಜಾಗೃತ...

ಕೇರಳ ಬಿಜೆಪಿಗೆ ಹಿರಿಯ ನಟ ಎಸ್. ದೇವನ್ ಗುಡ್‌ಬೈ: ‘ದಳಪತಿ’ ವಿಜಯ್ ಟಿವಿಕೆ ಪಕ್ಷ ಸೇರಲು ಒಲವು!

ಮಲಯಾಳಂ ನಟ ಹಾಗೂ ರಾಜಕಾರಣಿ ಎಸ್. ದೇವನ್ ಅವರು ತಮಿಳುನಾಡಿನ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷವನ್ನು ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಕೇರಳ...

ಮತ್ತೆ ಜೈಲಿನಿಂದ ಹೊರಬಂದ ಅತ್ಯಾಚಾರಿ ರಾಮ್ ರಹೀಮ್! 6 ವರ್ಷದಲ್ಲಿ 17ನೇ ಬಾರಿ ಪೆರೋಲ್

ನವದೆಹಲಿ/ರೋಹ್ಟಕ್: ಇಬ್ಬರು ಮಹಿಳಾ ಶಿಷ್ಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಹರಿಯಾಣ ಸರ್ಕಾರ ಪುನಃ...

ಎಸ್‌ಐಆರ್‌ ಕರಡು ತಿರಸ್ಕರಿಸಿದ ನಾಗರಿಕ ಸಂಘಟನೆಗಳು; ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ

ಆಗಸ್ಟ್ 24 ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಮತದಾರರ ಎಸ್‌ಐಆರ್‌ ಕರಡು ಪಟ್ಟಿಯನ್ನು ಕರ್ನಾಟಕದ ನಾಗರಿಕ ಸಂಘಟನೆಗಳು ತಿರಸ್ಕರಿಸಿದ್ದು, ಲಕ್ಷಾಂತರ ಮತದಾರರಿಗೆ ನೋಟಿಸ್‌ ಕೊಡಲು ಸಿದ್ಧತೆ ನಡೆಸಿರುವ ಕೇಂದ್ರ ಚುನಾವಣಾ...

‘ಕೇಂದ್ರ ಸರ್ಕಾರ ಜಾತಿ ಗಣತಿಗೆ ರೂಪಿಸಿರುವ ಪ್ರಶ್ನಾವಳಿ ವಿಧಾನ ದಾರಿತಪ್ಪಿಸುವಂತಿವೆ’: ಹೊಸ ಪ್ರಶ್ನಾವಳಿ ರಚಿಸಲು ಪ್ರಧಾನಿ ಮೋದಿಗೆ ಖರ್ಗೆ-ರಾಹುಲ್ ಪತ್ರ

ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ದತ್ತಾಂಶ ಸಂಗ್ರಹಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ರೂಪಿಸಿರುವ ಪ್ರಶ್ನಾವಳಿಯ ವಿಧಾನವು ಅತ್ಯಂತ ದಾರಿತಪ್ಪಿಸುವಂತಿದೆ ಎಂದು ಗಂಭೀರ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭಾ ವಿರೋಧ ಪಕ್ಷದ ನಾಯಕ...

ಪತ್ರಕರ್ತ ಅಭಿಷೇಕ್ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಸುಪ್ರೀಂ ಕೋರ್ಟ್ ಆದೇಶ

ರಾಮ ಮಂದಿರ ದೇಣಿಗೆ ಅಕ್ರಮದ ಕುರಿತು ವರದಿ ಮಾಡಿದ್ದ ಪತ್ರಕರ್ತ ಅಭಿಷೇಕ್ ಉಪಾಧ್ಯಾಯ ಅವರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಂತರ ಆದೇಶ ನೀಡಿದ್ದು,...

2027ರ ಜನಗಣತಿಯಲ್ಲಿ ಪೋಷಕರ ಧರ್ಮ, ಜನ್ಮಸ್ಥಳದ ವಿವರ ಏಕೆ? ಕೇಂದ್ರದ ವಿರುದ್ಧ ಸಿಪಿಐ(ಎಂ) ಆಕ್ರೋಶ

2027ರ ಜನಗಣತಿ ಪ್ರಶ್ನಾವಳಿಯಲ್ಲಿ ಪೋಷಕರ ಧರ್ಮ ಹಾಗೂ ಜನ್ಮಸ್ಥಳದ ಕುರಿತಾದ ವಿವರಗಳನ್ನು ಸಂಗ್ರಹಿಸಲು ಉದ್ದೇಶಿಸಿರುವುದರ ವಿರುದ್ಧ ಸಿಪಿಐ(ಎಂ) ತೀವ್ರ ಆತಂಕ ವ್ಯಕ್ತಪಡಿಸಿದ್ದು, ಈ ಕ್ರಮವು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಜಾರಿಗೆ ತರುವ...

ಟಿಎಂಸಿ ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಶಾಕ್: 20 ಎಂಪಿಗಳಿಗೆ ನೋಟಿಸ್ ಜಾರಿ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು, ಎನ್‌ಸಿಪಿಐ (NCPI) ಎಂಬ ಅಷ್ಟಾಗಿ ಜನಪ್ರಿಯವಲ್ಲದ ಪಕ್ಷದೊಂದಿಗೆ ವಿಲೀನಗೊಂಡು ಎನ್‌ಡಿಎ ಒಕ್ಕೂಟವನ್ನು ಸೇರಿಕೊಂಡಿರುವ 20 ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ. ಟಿಎಂಸಿ ಪ್ರಧಾನ...