Homeಮುಖಪುಟರಾತ್ರಿ ಕಾವಲುಗಾರನಾಗಿದ್ದ ಯುವಕ ಇಂದು ಐಐಎಂ ಸಹಾಯಕ ಪ್ರಾಧ್ಯಾಪಕನಾದ ಕಥೆ

ರಾತ್ರಿ ಕಾವಲುಗಾರನಾಗಿದ್ದ ಯುವಕ ಇಂದು ಐಐಎಂ ಸಹಾಯಕ ಪ್ರಾಧ್ಯಾಪಕನಾದ ಕಥೆ

’ಈ ಪೋಸ್ಟ್ ವೈರಲ್ ಆಗುತ್ತದೆ ಎಂದು ನಾನು ಎಂದಿಗೂ ಭಾವಿಸಿರಲಿಲ್ಲ. ಇದು ನನ್ನ ಜೀವನ ಕಥೆ, ಇನ್ನೂ ಕೆಲವರಿಗೆ ಸ್ಫೂರ್ತಿ ನೀಡುತ್ತದೆ ಎಂದು ಭಾವಿಸುತ್ತೇನೆ"

- Advertisement -
- Advertisement -

ಕನಸು ಕಾಣುವುದು ಸುಲಭ ಆದರೆ ಕಂಡ ಕನಸು ನನಸು ಮಾಡಿಕೊಳ್ಳಲು ಕಠಿಣ ಪರಿಶ್ರಮ ಅತ್ಯಗತ್ಯ. ಕನಸು ನನಸು ಮಾಡಿಕೊಳ್ಳುವ ದಾರಿಯಲ್ಲಿ ಸಾಗಿ ರಾತ್ರಿ ಪಾಳಿಯ ಕಾವಲುಗಾರನಾಗಿದ್ದ ರಂಜಿತ್ ರಾಮಚಂದ್ರನ್ ಇಂದು ರಾಂಚಿಯ ಇಂಡಿಯನ್ ಇನ್ಸ್‌ಟಿಟ್ಯೂಟ್ ಆಫ್ ಮ್ಯಾನೆಜ್‌ಮೆಂಟ್ (ಐಐಎಂ)ನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಹಲವರಿಗೆ ಮಾದರಿಯಾಗಿ ನಿಂತಿದ್ದಾರೆ.

28 ವರ್ಷದ ರಂಜಿತ್ ರಾಮಚಂದ್ರನ್, ಏಪ್ರಿಲ್ 9 ರಂದು ತಮ್ಮ ಸ್ಪೂರ್ತಿದಾಯಕ ಕಥೆಯನ್ನು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಫೇಸ್‌ಬುಕ್‌ನಲ್ಲಿ ಈ ಪೋಸ್ಟ್ ವೈರಲ್ ಆಗಿದ್ದು, 39,000 ಕ್ಕೂ ಹೆಚ್ಚು ಲೈಕ್‌ಗಳನ್ನು ಗಳಿಸಿದ್ದಾರೆ.  ಕೇರಳದ ಹಣಕಾಸು ಸಚಿವ ಟಿ ಎಂ ಥಾಮಸ್ ಐಸಾಕ್ ಕೂಡ ಫೇಸ್‌ಬುಕ್‌ನಲ್ಲಿ ಅಭಿನಂದನೆ ತಿಳಿಸಿದ್ದಾರೆ.

ಪದವಿವರೆಗೆ ಮಾತೃಭಾಷೆ ಮಲಯಾಳಂನಲ್ಲಿ ಓದಿರುವ ರಂಜಿತ್ ರಾಮಚಂದ್ರನ್ ರಾತ್ರಿ ವೇಳೆಯಲ್ಲಿ ಕಾವಲುಗಾರನಾಗಿ ದುಡಿದು, ಹಗಲಿನ ಸಮಯವನ್ನು ವ್ಯರ್ಥ ಮಾಡದೇ ವಿದ್ಯಾಭ್ಯಾಸ ಮಾಡಿ ಇತರರಿಗೆ ಮಾದರಿಯಾಗಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ: ಕೇಂದ್ರದೊಂದಿಗೆ ಮಾತುಕತೆಗೆ ಸಿದ್ದವಿದ್ದೇವೆ, ಹಕ್ಕೊತ್ತಾಯಗಳು ಅವೆ ಇರಲಿವೆ- ರಾಕೇಶ್‌ ಟಿಕಾಯತ್

ರಾಮಚಂದ್ರನ್ ಅವರು ಕಾಸರಗೋಡಿನ ಪಣತ್ತೂರಿನಲ್ಲಿ ಬಿಎಸ್ಎನ್ಎಲ್ ದೂರವಾಣಿ ವಿನಿಮಯ ಕೇಂದ್ರದಲ್ಲಿ ರಾತ್ರಿ ಕಾವಲುಗಾರರಾಗಿ ಕೆಲಸ ಮಾಡುತ್ತಿದ್ದರು. ಅದೇ ಜಿಲ್ಲೆಯ ಸೇಂಟ್‌ ಪಯಸ್‌ ಕಾಲೇಜಿನಲ್ಲಿ  ಅರ್ಥಶಾಸ್ತ್ರ ಪದವಿ ಪಡೆದಿದ್ದಾರೆ. ನಂತರ ಉನ್ನತ ಶಿಕ್ಷಣಕ್ಕಾಗಿ ಮದ್ರಾಸ್‌ನ ಐಐಟಿಗೆ ಸೇರಿದ್ದಾರೆ.

“ನಾನು ಹಗಲಿನ ವೇಳೆಯಲ್ಲಿ ಕಾಲೇಜಿಗೆ ಹೋಗುತ್ತಿದ್ದೆ ಮತ್ತು ರಾತ್ರಿ ವೇಳೆಯಲ್ಲಿ ದೂರವಾಣಿ ವಿನಿಮಯ ಕೇಂದ್ರದಲ್ಲಿ ಕೆಲಸ ಮಾಡಿದ್ದೇನೆ” ಎಂದು ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಮಲಯಾಳಂ ಭಾಷೆ ಮಾತ್ರ ತಿಳಿದಿದ್ದರಿಂದ ಅಧ್ಯಯನ ಮಾಡಲು ಕಷ್ಟವಾಗಿ, ಪಿಎಚ್‌ಡಿಯನ್ನು ಅರ್ಧದಲ್ಲೇ ತ್ಯಜಿಸಲು ರಂಜಿತ್ ನಿರ್ಧರಿಸಿದ್ದರು. ಆದರೆ ಅವರ ಮಾರ್ಗದರ್ಶಿ ಡಾ. ಸುಭಾಷ್ ಅವರು ಹಾಗೆ ಮಾಡದಂತೆ ಮನವೊಲಿಸಿರು ಎಂದು ತಿಳಿಸಿದ್ದಾರೆ. ಕಳೆದ ವರ್ಷ ಡಾಕ್ಟರೇಟ್ ಗಳಿಸಿದ ರಂಜಿತ್, ಕಳೆದ ಎರಡು ತಿಂಗಳಿನಿಂದ ಬೆಂಗಳೂರಿನ ಕ್ರೈಸ್ಟ್ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿದ್ದಾರೆ. ಶೀಘ್ರವೇ ಐಐಎಂ– ರಾಂಚಿಯಲ್ಲಿ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ.

“ಈ ಪೋಸ್ಟ್ ವೈರಲ್ ಆಗುತ್ತದೆ ಎಂದು ನಾನು ಎಂದಿಗೂ ಭಾವಿಸಿರಲಿಲ್ಲ. ಇದು ನನ್ನ ಜೀವನ ಕಥೆ, ಇನ್ನೂ ಕೆಲವರಿಗೆ ಸ್ಫೂರ್ತಿ ನೀಡುತ್ತದೆ ಎಂದು ಭಾವಿಸುತ್ತೇನೆ. ಪ್ರತಿಯೊಬ್ಬರೂ ಒಳ್ಳೆಯ ಕನಸು ಕಾಣಬೇಕು ಮತ್ತು ಅವರ ಕನಸು ನನಸು ಮಾಡಲು ಹೋರಾಡಬೇಕೆಂದು ನಾನು ಬಯಸುತ್ತೇನೆ” ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಆರ್ಥಿಕ ತೊಂದರೆಗಳಿಂದಾಗಿ ರಂಜಿತ್ ತಮ್ಮ ಶಾಲಾ ಶಿಕ್ಷಣವನ್ನು ತ್ಯಜಿಸಿ ಬೇಕಾದ ಸ್ಥತಿ ಇತ್ತು ಎಂದಿದ್ದಾರೆ. ರಂಜಿತ್ ಅವರ ತಂದೆ ದರ್ಜಿ ಕೆಲಸ ಮಾಡುತ್ತಾರೆ, ತಾಯಿ  ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ದಿನಗೂಲಿ ಕಾರ್ಮಿಕರಾಗಿದ್ದಾರೆ.


ಇದನ್ನೂ ಓದಿ: ಬೀದಿಬದಿ ವಾಸಿಸುವ ಬಾಲಕಿಯರಿಗೆ ಸಿಎಎ, ಎನ್‌ಆರ್‌ಸಿ ಪಾಠ ಮಾಡಿದ್ದಕ್ಕೆ ದೇಶದ್ರೋಹ ಪ್ರಕರಣ ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...