Homeಮುಖಪುಟರಫೇಲ್ ಹಗರಣ ಕುರಿತು PIL: ಮತ್ತೆ ವಿಚಾರಣೆಗೆ ಮುಂದಾದ ಸುಪ್ರೀಂ

ರಫೇಲ್ ಹಗರಣ ಕುರಿತು PIL: ಮತ್ತೆ ವಿಚಾರಣೆಗೆ ಮುಂದಾದ ಸುಪ್ರೀಂ

- Advertisement -
- Advertisement -

ಫ್ರೆಂಚ್ ಯುದ್ಧ ವಿಮಾನ ರಫೇಲ್ ತಯಾರಕರಾದ ಡಸಾಲ್ಟ್ ಕಂಪನಿಯು, 36 ರಫೇಲ್‌ ವಿಮಾನಗಳಿಗಾಗಿ ಭಾರತವು ಫ್ರಾನ್ಸ್‌ನೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದ ಬೆನ್ನಲ್ಲೇ ಭಾರತದ ಮಧ್ಯವರ್ತಿಯೊಬ್ಬರಿಗೆ 1.1 ಮಿಲಿಯನ್ ಯೂರೋ ಪಾವತಿಸಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸಲ್ಲಿಕೆಯಾಗಿರುವ PIL (ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ) ಅನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ.

ವಕೀಲರೊಬ್ಬರು ಸಲ್ಲಿಸಿದ ಅರ್ಜಿಯನ್ನು ಎರಡು ವಾರಗಳ ನಂತರ ವಿಚಾರಣೆ ನಡೆಸುವುದಾಗಿ ಭಾರತದ ಮುಖ್ಯ ನ್ಯಾಯಮೂರ್ತಿ ಎಸ್‌.ಎ ಬೋಬ್ಡೆ ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಫ್ರೆಂಚ್ ಭ್ರಷ್ಟಾಚಾರ-ವಿರೋಧಿ ಸಂಸ್ಥೆ ‘ಎಜೆನ್ಸ್ ಫ್ರಾಂಕೈಸ್ ಆಂಟಿಕೊರಪ್ಷನ್ (ಎಎಫ್‌ಎ)’ ಅವರು ಡಸಾಲ್ಟ್ ಅವರ ಲೆಕ್ಕಪರಿಶೋಧನೆಯ ಸಮಯದಲ್ಲಿ ಭಾರತದ ಮಧ್ಯವರ್ತಿಯೊಬ್ಬರಿಗೆ 1.1 ಮಿಲಿಯನ್ ಯೂರೋ ಹಣ ಕೊಡುಗೆಯಾಗಿ ನೀಡಿದೆ ಎಂಬ ಅಂಶ ಬೆಳಕಿಗೆ ಬಂದಿದೆ. “ರಾಫೇಲ್ ಜೆಟ್‌ಗಳ 50 ದೊಡ್ಡ ಪ್ರತಿಕೃತಿಗಳ ತಯಾರಿಕೆಗೆ ಪಾವತಿಸಲು ಈ ಹಣವನ್ನು ಬಳಸಲಾಗಿದೆ ಎಂದು ಕಂಪನಿ ಹೇಳಿದೆ, ಆದರೆ ಈ ಮಾದರಿಗಳನ್ನು ತಯಾರಿಸಲಾಗಿದೆಯೆಂದು ತನಿಖಾಧಿಕಾರಿಗಳಿಗೆ ಯಾವುದೇ ಪುರಾವೆ ನೀಡಲಾಗಿಲ್ಲ” ಎಂದು ಫ್ರೆಂಚ್ ಮಾಧ್ಯಮ ಮೀಡಿಯಾಪಾರ್ಟ್ ವರದಿ ಮಾಡಿತ್ತು.

ಅಗುಸ್ಟಾವೆಸ್ಟ್‌ಲ್ಯಾಂಡ್ ಪ್ರಕರಣದಲ್ಲಿ ವಿ.ವಿ.ಐ.ಪಿ ಹೆಲಿಕ್ಯಾಪ್ಟರ್‌ಗಳ ಒಪ್ಪಂದದಲ್ಲಿ ಭಾರತದಲ್ಲಿ ಕಿಕ್‌ಬ್ಯಾಕ್‌ ಪಡೆದ ಆರೋಪದ ಮೇಲೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದಿಂದ ತನಿಖೆ ಎದುರಿಸುತ್ತಿರುವ ಸುಶೇನ್ ಗುಪ್ತಾ ನಡೆಸುತ್ತಿರುವ ಭಾರತೀಯ ಕಂಪನಿ ಡೆಫ್ಸಿಸ್ ಸೊಲ್ಯೂಷನ್ಸ್‌ನಿಂದ ಮೇಲಿನ ಹಣಕ್ಕೆ ರಶೀದಿ ನೀಡಲಾಗಿದೆ. ಭಾರತದ ಡಸಾಲ್ಟ್‌ನ ಉಪ ಗುತ್ತಿಗೆದಾರರಲ್ಲಿ ಡೆಫ್ಸಿಸ್ ಕೂಡ ಒಂದಾಗಿದೆ. ಹೆಲಿಕ್ಯಾಪ್ಟರ್ ಡೀಲ್ ಪ್ರಕರಣದಲ್ಲಿ ಸುಶೇನ್ ಗುಪ್ತಾ ಅವರನ್ನು ಈ ಹಿಂದೆ ಬಂಧಿಸಲಾಗಿತ್ತು. ಈಗ ಜಾಮೀನು ನೀಡಲಾಗಿದೆ. ಅವರ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ.

ಭಾರತವು ಫ್ರಾನ್ಸ್‌ನಿಂದ 36 ಫೈಟರ್ ಜೆಟ್‌ಗಳನ್ನು 2016 ರಲ್ಲಿ, 59,000 ಕೋಟಿ ರೂ ಹಣ ನೀಡಿ ಅಂತರಾಷ್ಟ್ರೀಯ ಒಪ್ಪಂದದಲ್ಲಿ ಖರೀದಿಸಿತ್ತು.


ಇದನ್ನೂ ಓದಿ: ರಫೇಲ್ ಒಪ್ಪಂದಕ್ಕಾಗಿ ಭಾರತೀಯ ಮಧ್ಯವರ್ತಿಗೆ 1 ಮಿಲಿಯನ್ ಯೂರೋ ನೀಡಲಾಗಿದೆ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...