ಕೇರಳದ ಮೂರು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಪೂರ್ಣಗೊಳಿಸಲು ತ್ವರಿತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇರಳ ಹೈಕೋರ್ಟ್ ಏಪ್ರಿಲ್ 12 ರಂದು ಭಾರತ ಚುನಾವಣಾ ಆಯೋಗಕ್ಕೆ (ಇಸಿಐ) ನಿರ್ದೇಶನ ನೀಡಿದೆ.
ರಾಜ್ಯಸಭಾ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ತೀರ್ಪಿನ ವಿರುದ್ಧ ಕೇರಳ ಹೈಕೋರ್ಟ್ ಸೋಮವಾರ ಆದೇಶ ಹೊರಡಿಸಿದೆ. ರಾಜ್ಯದಿಂದ ಮೂರು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಮೇ 2 ರೊಳಗೆ ನಡೆಯಬೇಕು ಎಂದು ಹೈಕೋರ್ಟ್ ಹೇಳಿದೆ.
ಸಿಪಿಎಂ ಮತ್ತು ವಿಧಾನಸಭೆಯ ಕಾರ್ಯದರ್ಶಿ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಏಪ್ರಿಲ್ 12 ರಂದು ಚುನಾವಣೆ ನಡೆಸಲು ಚುನಾವಣಾ ಆಯೋಗ ಈ ಹಿಂದೆ ನಿರ್ಧರಿಸಿತ್ತು. ಆದರೆ ಅಧಿಸೂಚನೆಯನ್ನು ಪ್ರಕಟಿಸುವ ದಿನ ಚುನಾವಣೆಯನ್ನು ಮುಂದೂಡಲು ನಿರ್ಧರಿಸಿತ್ತು.
ಇದನ್ನೂ ಓದಿ: ಸುಪ್ರೀಂ ಕೋರ್ಟ್‌ನ 50% ಸಿಬ್ಬಂದಿಗೆ ಕೊರೊನಾ ಸೋಂಕು, ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ
ಚುನಾವಣಾ ಆಯೋಗದ ನಿರ್ಧಾರದ ವಿರುದ್ಧ ಸಿಪಿಎಂ ಮತ್ತು ವಿಧಾನಸಭೆಯ ಕಾರ್ಯದರ್ಶಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ವಯಲಾರ್ ರವಿ (ಕಾಂಗ್ರೆಸ್), ಅಬ್ದುಲ್ ವಹಾಬ್ (ಐಯುಎಂಎಲ್), ಕೆ.ಕೆ.ರಾಗೇಶ್ (ಸಿಪಿಎಂ), ಮೂವರು ಸದಸ್ಯರು ಏಪ್ರಿಲ್ 21ರಂದು ನಿವೃತ್ತರಾಗುತ್ತಿದ್ದು, ತೆರವಾಗುವ ಸ್ಥಾನಗಳಿಗೆ ಚುನಾವಣೆ ನಡೆಯಬೇಕಿದೆ.
“ಹೊಸ ಚುನಾಯಿತ ಪ್ರತಿನಿಧಿಗಳು ಬರುವ ಮೇ 2 ರ ಒಳಗೆ ಮೊದಲು ಖಾಲಿ ಸ್ಥಾನಗಳಿಗೆ ಚುನಾವಣೆಗಳನ್ನು ಪೂರ್ಣಗೊಳಿಸಲು ತ್ವರಿತ ಕ್ರಮಗಳನ್ನು ತೆಗೆದುಕೊಳ್ಳುವುದು ಸೂಕ್ತವಾಗಿದೆ” ಎಂದು ನ್ಯಾಯಮೂರ್ತಿ ಪಿ.ವಿ.ಆಶಾ ತಿಳಿಸಿದ್ದಾರೆ.
ಏಪ್ರಿಲ್ 21 ರಂದು ನಿವೃತ್ತ ಸದಸ್ಯರ ಅವಧಿ ಮುಗಿಯುವ ಮೊದಲು ಚುನಾವಣೆಯ ವೇಳಾಪಟ್ಟಿಯನ್ನು ಘೋಷಿಸಲು ಮತ್ತು ತಿಳಿಸಲು ನಿರ್ಧರಿಸಲಾಗಿತ್ತು. ಚುನಾವಣೆಯ ವೇಳಾಪಟ್ಟಿಯನ್ನು ನಿಗದಿಪಡಿಸುವುದು ಆಯೋಗದ ವ್ಯಾಪ್ತಿಯಲ್ಲಿತ್ತು. ಆದರೆ, ಆಯೋಗವು ಚುನಾವಣೆಗೆ ನಿರ್ದಿಷ್ಟ ದಿನಾಂಕ ನಮೂದಿಸಿರಲಿಲ್ಲ.
ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯದ ಉಲ್ಲೇಖದ ಮೇರೆಗೆ ಚುನಾವಣಾ ಪ್ರಕ್ರಿಯೆಯನ್ನು ಕೈಬಿಡುವ ಆಯೋಗದ ನಿರ್ಧಾರದ ವಿರುದ್ಧ ಅರ್ಜಿ ಸಲ್ಲಿಸಲಾಗಿತ್ತು. ಇದು ಸಂವಿಧಾನವು ಖಾತರಿಪಡಿಸಿದ ಆಯೋಗದ ಸ್ವಾತಂತ್ರ್ಯವನ್ನು ಉಲ್ಲಂಘಿಸಿದೆ ಎಂದು ಅರ್ಜಿದಾರರು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ್ದರು.
ಇದನ್ನೂ ಓದಿ: ಆಪರೇಷನ್ ಕಮಲ ಭೀತಿ – ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಗಳನ್ನು ವಿದೇಶಕ್ಕೆ ಕಳುಹಿಸಿದ ಬಿಪಿಎಫ್!


