ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಜನಸಂದಣಿಯನ್ನು ತಡೆಯಲು ಕೇರಳ ಸರ್ಕಾರವು ಹೆಚ್ಚಿನ ನಿರ್ಬಂಧಗಳನ್ನು ವಿಧಿಸಿದೆ.
ಹೋಟೆಲ್‌ಗಳು ಮತ್ತು ಅಂಗಡಿಗಳು ರಾತ್ರಿ 9 ರೊಳಗೆ ಬಂದ್ ಮಾಡಬೇಕು, ಜೊತೆಗೆ ಹೋಟೆಲ್‌ಗಳಿಗೆ ಕೇವಲ 50% ದಷ್ಟು ಮಾತ್ರ ಅವಕಾಶ ನೀಡಲಾಗುವುದು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ವಿ.ಪಿ.ಜಾಯ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ನಿರ್ಧರಿಸಲಾಗಿದೆ.
ಇದನ್ನೂ ಓದಿ: ಮನೆ ಬಾಗಿಲಿಗೆ ಬಂದು ಕೊರೊನಾ ಟೆಸ್ಟ್ ಮಾಡುವವರಿಗೆ ಸಹಕರಿಸಿ- ಸಚಿವ ಸುಧಾಕರ್
ಎಲ್ಲಾ ಸಾರ್ವಜನಿಕ ಸಭೆ-ಸಮಾರಂಭಗಳನ್ನು ಎರಡು ಗಂಟೆಗಳ ಒಳಗೆ ಮುಗಿಸುವುದರ ಜೊತೆಗೆ, ಕಟ್ಟುನಿಟ್ಟಿನ ನಿರ್ಬಂಧಗಳನ್ನು ಹೇರಲಾಗಿದೆ. ಹೊರಾಂಗಣ ಸಭೆಗಳಿಗೆ 200 ಮತ್ತು ಒಳಾಂಗಣ ಸಭೆಗಳಿಗೆ 100 ಜನರಿಗೆ ಮಾತ್ರ ಅವಕಾಶ ಎಂದು ಸರ್ಕಾರ ಹೇಳಿದೆ. ಸಾರ್ವಜನಿಕವಾಗಿ ಯಾವುದೇ ಹಬ್ಬಕ್ಕೆ ಅನುಮತಿ ನಿರಾಕರಿಸಲಾಗಿದೆ.
ಜನಸಂದಣಿಗೆ ಕಾರಣವಾಗುವ ಮಾಲ್‌ಗಳು ಮತ್ತು ಸೂಪರ್‌ಮಾರ್ಕೆಟ್‌ಗಳಲ್ಲಿ ಮೆಗಾ ಶಾಪಿಂಗ್ ಉತ್ಸವಗಳನ್ನು ನಿಷೇಧಿಸಲಾಗಿದೆ.
ಈ ಹಿಂದೆ ಏಪ್ರಿಲ್ 7 ರಂದು ನಡೆದ ಸಭೆಯಲ್ಲಿ, ರಾಜ್ಯಕ್ಕೆ ಪ್ರವೇಶಿಸುವವರಿಗೆ 7 ದಿನಗಳ ಕಡ್ಡಾಯ ಕ್ವಾರಂಟೈನ್ ಅನ್ನು ಕಠಿಣಗೊಳಿಸಲು ನಿರ್ಧರಿಸಲಾಗಿತ್ತು.
ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 40,000 ದಾಟಿದೆ.
ಇದನ್ನೂ ಓದಿ: ಸುಪ್ರೀಂ ಕೋರ್ಟ್‌ನ 50% ಸಿಬ್ಬಂದಿಗೆ ಕೊರೊನಾ ಸೋಂಕು, ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ


