Homeಮುಖಪುಟವಿದೇಶಿ ಲಸಿಕೆಗಳ ಅನುಮೋದನೆ ಬಗ್ಗೆ ಕೇಂದ್ರಕ್ಕೆ ‘ಟಾಂಗ್’‌ ನೀಡಿದ ರಾಹುಲ್ ಗಾಂಧಿ!

ವಿದೇಶಿ ಲಸಿಕೆಗಳ ಅನುಮೋದನೆ ಬಗ್ಗೆ ಕೇಂದ್ರಕ್ಕೆ ‘ಟಾಂಗ್’‌ ನೀಡಿದ ರಾಹುಲ್ ಗಾಂಧಿ!

- Advertisement -
- Advertisement -

ಕಾಂಗ್ರೆಸ್‌‌ ಮುಖಂಡ ರಾಹುಲ್ ಗಾಂಧಿ ಅವರು ಮಹಾತ್ಮ ಗಾಂಧಿಯವರ ಮಾತುಗಳನ್ನು ಉಲ್ಲೇಖಿಸಿ, ವಿದೇಶಿ ಉತ್ಪಾದಿತ ಕೊರೊನಾ ಲಸಿಕೆಗಳಿಗೆ ತುರ್ತು ಅನುಮೋದನೆ ನೀಡಿರುವ ಕೇಂದ್ರ ಸರ್ಕಾರದ ನಿರ್ಧಾರವು ಕಾಂಗ್ರೆಸ್‌ ಪಕ್ಷದ ಸಲಹೆಗಳಿಂದ ಪ್ರೇರೇಪಿತವಾಗಿದೆ ಎಂದು ಸೂಚಿಸಿದ್ದಾರೆ.

ಲಸಿಕೆಗಳಿಗೆ ಶೀಘ್ರವಾಗಿ ಅನುಮೋದನೆ ನೀಡುವಂತೆ ಸರ್ಕಾರವನ್ನು ಒತ್ತಾಯಿಸಿ ರಾಹುಲ್ ಗಾಂಧಿ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದರು.

ವಿದೇಶಿ ಲಸಿಕೆಗಳಿಗೆ ಅನಿಯಂತ್ರಿತ ಅನುಮೋದನೆ ಕೇಳುವ ಮೂಲಕ ರಾಹುಲ್‌ ಗಾಂಧಿಯವರು ಫಾರ್ಮಾ ಕಂಪನಿಗಳಿಗೆ ಲಾಬಿ ನಡೆಸುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಮತ್ತು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಈ ಹಿಂದೆ ಆರೋಪಿಸಿದ್ದರು.

ಇದನ್ನೂ ಓದಿ: ತಬ್ಲಿಗಿ ಮರ್ಕಜ್ ಮತ್ತು ಕುಂಭಮೇಳಕ್ಕೂ ಹೋಲಿಕೆ ಸರಿಯಲ್ಲ: ಉತ್ತರಖಂಡ ಸಿಎಂ

ಈ ಬಗ್ಗೆ ರಾಹುಲ್‌ ಗಾಂಧಿ ಅವರು, “ಮೊದಲು ಅವರು ನಿಮ್ಮನ್ನು ನಿರ್ಲಕ್ಷಿಸುತ್ತಾರೆ, ನಂತರ ಅವರು ನಿಮ್ಮನ್ನು ನೋಡಿ ನಗುತ್ತಾರೆ, ನಂತರ ಅವರು ನಿಮ್ಮೊಂದಿಗೆ ಹೋರಾಡುತ್ತಾರೆ, ನಂತರ ನೀವು ಗೆಲ್ಲುತ್ತೀರಿ” ಎಂಬ ಮಹಾತ್ಮ ಗಾಂಧಿಯ ಮಾತನ್ನು ಉಲ್ಲೇಖಿಸಿ, “ಕೇಂದ್ರ ಸರ್ಕಾರವು ವಿದೇಶಿ ಉತ್ಪಾದಿತ ಲಸಿಕೆಗಳಿಗೆ ತ್ವರಿತಗತಿಯಲ್ಲಿ ತುರ್ತು ಬಳಕೆಗೆ ಅನುಮೋದನೆ ನೀಡಿದೆ” ಎಂಬ ಮಾಧ್ಯಮ ವರದಿಯ ಚಿತ್ರವನ್ನು ಟ್ಯಾಗ್ ಮಾಡಿದ್ದಾರೆ.

ಕೊರೊನಾ ಲಸಿಕೆಗಳ ಕೊರತೆಯನ್ನು ಸರಿದೂಗಿಸಲು, ದೇಶದಲ್ಲಿ ಲಸಿಕಾ ಪ್ರಕ್ರಿಯೆಯನ್ನು ಹೆಚ್ಚಿಸುವ ಗುರಿಯೊಂದಿಗೆ, ಕೇಂದ್ರ ಸರ್ಕಾರವು ಮಂಗಳವಾರ ವಿದೇಶಿ-ಉತ್ಪಾದಿತ ಲಸಿಕೆಗಳಿಗೆ ತುರ್ತು ಬಳಕೆಗೆ ಅನುಮೋದನೆಯನ್ನು ನೀಡಿದೆ.

ಇದನ್ನೂ ಓದಿ: ಕೊರೊನಾ ಉಲ್ಬಣ: ಮೇ 1ರ ವರೆಗೆ ಮಹಾರಾಷ್ಟ್ರದಲ್ಲಿ ಕರ್ಫ್ಯೂ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...