ದೇಶಾದ್ಯಂತ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಸಿಬಿಎಸ್‌ಇ 12 ನೇ ತರಗತಿ ಬೋರ್ಡ್ ಪರೀಕ್ಷೆಗಳನ್ನು ಮುಂದೂಡಲಾಗಿದೆ. 10 ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಲಾಗಿದೆ ಎಂದು ಬುಧವಾರ ನಡೆದ ಉನ್ನತ ಮಟ್ಟದ ಸಭೆಯ ಬಳಿಕ ಘೋಷಣೆ ಮಾಡಲಾಗಿದೆ.
ರಾಷ್ಟ್ರವ್ಯಾಪಿ ಕೊರೊನಾ ಸೋಂಕು ಉಲ್ಬಣದಿಂದಾಗಿ ಪೋಷಕರು, ವಿದ್ಯಾರ್ಥಿಗಳು, ಪ್ರತಿಪಕ್ಷಗಳು ಸೇರಿದಂತೆ ವಿವಿಧ ರಾಜ್ಯಗಳು ಸಿಬಿಎಸ್‌ಇ ಪರೀಕ್ಷೆಗಳನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿದ್ದರು. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ, ಶಿಕ್ಷಣ ಸಚಿವರು ಮತ್ತು ಉನ್ನತ ಅಧಿಕಾರಿಗಳು ಸಭೆ ನಡೆಸಿ ಈ ನಿರ್ಧಾರವನ್ನು ಪ್ರಕಟಿಸಲಾಗಿದೆ.
ಮೇ 4 ರಿಂದ ಜೂನ್ 14 ರವರೆಗೆ ನಡೆಯಬೇಕಿದ್ದ 12 ನೇ ತರಗತಿಯ ಸಿಬಿಎಸ್‌ಇ (ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್) ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಟ್ವೀಟ್‌ಗಳಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಮರ್ಕಾಜ್ ಮಸೀದಿಯಲ್ಲಿ ಪ್ರಾರ್ಥನೆಗೆ 20 ಜನರಿಗಷ್ಟೇ ಅವಕಾಶ: ಕೇಂದ್ರದ ನಿಲುವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್
2. The Board Exams for Class Xth to be held from 4th May to June 14th, 2021 are hereby cancelled. The results of Class Xth Board will be prepared on the basis of an objective criterion to be developed by the Board.
— Dr. Ramesh Pokhriyal Nishank (@DrRPNishank) April 14, 2021
ಜೂನ್ 1 ರಂದು ಈ ಬಗ್ಗೆ ಮಂಡಳಿಯು ಪರಿಸ್ಥಿತಿ ಅವಲೋಕಿಸಲಿದೆ. ಹೊಸ ಪರೀಕ್ಷೆಯ ದಿನಾಂಕದ ಮೊದಲು ವಿದ್ಯಾರ್ಥಿಗಳಿಗೆ ಕನಿಷ್ಠ 15 ದಿನಗಳ ಮೊದಲೇ ಸೂಚನೆ ನೀಡಲಾಗುತ್ತದೆ ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ರದ್ದುಗೊಳಿಸಿರುವ 10 ನೇ ತರಗತಿ ಪರೀಕ್ಷೆಗಳಲ್ಲಿ, “ಮಂಡಳಿಯು ರೂಪಿಸುವ ವಸ್ತುನಿಷ್ಠ ಮಾನದಂಡದ ಆಧಾರದ ಮೇಲೆ” ಫಲಿತಾಂಶವನ್ನು ನೀಡಲಾಗುತ್ತದೆ. ಮಂಡಳಿ ನೀಡುವ ಅಂಕಗಳಿಂದ ತೃಪ್ತರಾಗದ ವಿದ್ಯಾರ್ಥಿಗಳಿಗೆ ಅವರು ಪರೀಕ್ಷೆಗಳನ್ನು ತೆಗೆದುಕೊಳ್ಳಲು ಅವಕಾಶ ನೀಡಲಾಗುವುದು ಎಂದು ಹೇಳಿದ್ದಾರೆ.
ಇದನ್ನೂ ಓದಿ: ಇಫ್ತಾರ್ ಕೂಟ ನಡೆಸುವಂತಿಲ್ಲ, ರಂಜಾನ್‌ಗೆ ರಾಜ್ಯದಲ್ಲಿ ಹೊಸ ಮಾರ್ಗಸೂಚಿ

ಸರ್ಕಾರದ ನಿರ್ಧಾರಕ್ಕೆ ಸಮ್ಮತ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, “ಸರ್ಕಾರವು ಅಂತಿಮವಾಗಿ 10 ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಿದೆ, ಆದರೆ 12 ನೇ ತರಗತಿ ಪರೀಕ್ಷೆಗಳ ಬಗ್ಗೆಯೂ ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕು. ಜೂನ್ ತನಕ ವಿದ್ಯಾರ್ಥಿಗಳನ್ನು ಅನಗತ್ಯ ಒತ್ತಡಕ್ಕೆ ಒಳಪಡಿಸುವುದರಲ್ಲಿ ಯಾವುದೇ ಅರ್ಥವಿಲ್ಲ. ಇದು ಅನ್ಯಾಯವಾಗಿದೆ. ಈಗಲೇ ನಿರ್ಧಾರ ತೆಗೆದುಕೊಳ್ಳಬೇಕೆಂದು ನಾನು ಸರ್ಕಾರವನ್ನು ಒತ್ತಾಯಿಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.
Glad the government has finally cancelled the 10th standard exams however a final decision MUST be taken for the 12th grade too. Keeping students under undue pressure until June makes no sense.
It’s unfair. I urge the government to decide now.#cancelboardexam2021
— Priyanka Gandhi Vadra (@priyankagandhi) April 14, 2021
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್, ಕ್ಷಾಂತರ ವಿದ್ಯಾರ್ಥಿಗಳು ಸೋಂಕಿಗೆ ಒಳಗಾಗುವುದನ್ನು ತಡೆಯಲು ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೇಂದ್ರವನ್ನು ಒತ್ತಾಯಿಸಿದ್ದರು. ಹಲವು ಪೋಷಕರ ಗುಂಪುಗಳು ಪರೀಕ್ಷೆ ರದ್ದುಗೊಳಿಸುವಂತೆ ಪ್ರಧಾನಿಯವರಿಗೆ ಪತ್ರ ಬರೆದಿದ್ದವು.
ಸೋಂಕಿನ ಎರಡನೇ ಅಲೆಯಲ್ಲಿ ಬುಧವಾರ ಬೆಳಿಗ್ಗೆ, ಭಾರತದಲ್ಲಿ 1,84,372 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 1,027 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ಮಸ್ಕಿಯಲ್ಲಿ ಮಟಮಟ ಮಧ್ಯಾಹ್ನವೇ ಕಾಂಚಾಣ ಝಣಝಣ: ಬಿಜೆಪಿ ಪರ ಪ್ರಚಾರಕ್ಕಿಳಿದ ಗಾಯಕಿ ಮಂಗ್ಲಿ


