Homeಮುಖಪುಟಭಾರತಕ್ಕೆ ಮಹಿಳೆ ಮುಖ್ಯ ನ್ಯಾಯಾಮೂರ್ತಿಯಾಗುವ ಸಮಯ ಬಂದಿದೆ- ಎಸ್.‌ಎ.ಬೋಬ್ಡೆ

ಭಾರತಕ್ಕೆ ಮಹಿಳೆ ಮುಖ್ಯ ನ್ಯಾಯಾಮೂರ್ತಿಯಾಗುವ ಸಮಯ ಬಂದಿದೆ- ಎಸ್.‌ಎ.ಬೋಬ್ಡೆ

ದೇಶದ 25 ಹೈಕೋರ್ಟ್‌ಗಳಲ್ಲಿ ತೆಲಂಗಾಣ ಹೈಕೋರ್ಟ್ ಒಂದರಲ್ಲಿ ಮಾತ್ರ ಮುಖ್ಯ ನ್ಯಾಯಮೂರ್ತಿಯಾಗಿ ಹಿಮಾ ಕೊಹ್ಲಿ ಇದ್ದಾರೆ.

- Advertisement -
- Advertisement -

ಭಾರತಕ್ಕೆ ಮಹಿಳಾ ಮುಖ್ಯ ನ್ಯಾಯಮೂರ್ತಿ ನೇಮಕವಾಗುವ ಸಮಯ ಬಂದಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎಸ್.‌ಎ. ಬೋಬ್ಡೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಏಪ್ರಿಲ್ 23 ರಂದು ನಿವೃತ್ತರಾಗಲಿರುವ ಭಾರತದ ಹಾಲಿ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬಡೆ, ಕಳೆದ ತಿಂಗಳು ನ್ಯಾಯಮೂರ್ತಿ ರಮಣ ಅವರನ್ನು ಮುಂದಿನ ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೆ ಶಿಫಾರಸು ಮಾಡಿದ್ದಾರೆ.

“ನಮ್ಮ ಮನಸ್ಸಿನಲ್ಲಿ ಮಹಿಳೆಯರ ಬಗ್ಗೆ ಆಸಕ್ತಿ ಇದೆ. ನಾವು ಅದನ್ನು ಉತ್ತಮವಾಗಿ ಕಾರ್ಯಗತಗೊಳಿಸುತ್ತಿದ್ದೇವೆ. ನಮ್ಮ ವರ್ತನೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಆದರೆ, ಉತ್ತಮ ಅಭ್ಯರ್ಥಿಗಳನ್ನು ಪಡೆಯುವುದು ಒಂದೇ ಮುಖ್ಯ ವಿಷಯ” ಎಂದಿದ್ದಾರೆ.

ಹೈಕೋರ್ಟ್‌ಗಳಿಗೆ ತಾತ್ಕಾಲಿಕ ನ್ಯಾಯಾಧೀಶರ ನೇಮಕ ವಿಚಾರಣೆಯ ಸಂದರ್ಭದಲ್ಲಿ ಈ ಅಭಿಪ್ರಾಯವನ್ನು ಮುಖ್ಯ ನ್ಯಾಯಮೂರ್ತಿ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಎನ್‌ವಿ ರಮಣ ನೇಮಕ

ಮಹಿಳಾ ವಕೀಲರ ಸಂಘವನ್ನು ಪ್ರತಿನಿಧಿಸಿದ ವಕೀಲರಾದ ಸ್ನೇಹ ಖಲಿತಾ ಮತ್ತು ಶೋಭಾ ಗುಪ್ತಾ ಅವರು ಕೇವಲ 11 ಶೇಕಡಾ ಮಹಿಳೆಯರು ಮಾತ್ರ ನ್ಯಾಯಾಂಗದಲ್ಲಿದ್ದಾರೆ ಎಂದು ವಾದಿಸಿದರು. ಹೆಚ್ಚಿನ ಮಹಿಳೆಯರನ್ನು ನ್ಯಾಯಾಧೀಶರನ್ನಾಗಿ ನೇಮಿಸಬೇಕೆಂದು ಕೋರಿದರು.

“ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳು ನ್ಯಾಯಾಧೀಶರಾಗಿ ಬರಲು ಅನೇಕ ಮಹಿಳೆಯರನ್ನು ಆಹ್ವಾನಿಸಿದ್ದಾರೆ. ಆದರೆ ಅವರೆಲ್ಲಾ ಆಹ್ವಾನವನ್ನು ನಿರಾಕರಿಸಿದ್ದಾರೆ. ಮನೆಯ ಜವಾಬ್ದಾರಿ, 12 ನೇ ತರಗತಿ  ವ್ಯಾಸಂಗ ಮಾಡುತ್ತಿರುವ ಮಕ್ಕಳ ಜವಾಬ್ದಾರಿ ಮುಂತಾದ ವಿಚಾರಗಳನ್ನು ಹೇಳಿ ಆಹ್ವಾನ ನಿರಾಕರಿಸಿದ್ದಾರೆ ಎಂದು ಮುಖ್ಯ ನ್ಯಾಯಾಧೀಶರು ನನಗೆ ವರದಿ ಮಾಡಿವೆ. ಇವುಗಳು ನಾವು ಚರ್ಚಿಸಲು ಸಾಧ್ಯವಿಲ್ಲ” ಎಂದು ತ್ರಿಸದಸ್ಯ ಪೀಠದ ಮುಖ್ಯಸ್ಥರಾದ ಮುಖ್ಯ ನ್ಯಾಯಮೂರ್ತಿ ಬೋಬ್ಡೆ ಹೇಳಿದ್ದಾರೆ.

ದೇಶದ 25 ಹೈಕೋರ್ಟ್‌ಗಳಲ್ಲಿ ತೆಲಂಗಾಣ ಹೈಕೋರ್ಟ್ ಒಂದರಲ್ಲಿ ಮಾತ್ರ ಮುಖ್ಯ ನ್ಯಾಯಮೂರ್ತಿಯಾಗಿ ಹಿಮಾ ಕೊಹ್ಲಿ ಇದ್ದಾರೆ ಎಂದು ಮಹಿಳಾ ವಕೀಲರು ಪೀಠಕ್ಕೆ ತಿಳಿಸಿದ್ದಾರೆ.

661 ಹೈಕೋರ್ಟ್ ನ್ಯಾಯಾಧೀಶರಲ್ಲಿ ಕೇವಲ 73 ಮಂದಿ ಸರಿಸುಮಾರು 11.04 ರಷ್ಟು ಮಹಿಳೆಯರು ಇದ್ದಾರೆ. ಮಣಿಪುರ, ಮೇಘಾಲಯ, ಪಾಟ್ನಾ, ತ್ರಿಪುರ ಮತ್ತು ಉತ್ತರಾಖಂಡದ ಐದು ಹೈಕೋರ್ಟ್‌ಗಳಲ್ಲಿ ಒಬ್ಬರು ಮಹಿಳಾ ನ್ಯಾಯಾಧೀಶರೂ ಇಲ್ಲ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಎಲ್ಲಾ ಹಿಂದೂಗಳು ಮುಸ್ಲಿಮರ ಕ್ಷಮೆ ಯಾಚಿಸಬೇಕಾಗಿದೆ: ಕುಂಭಮೇಳದ ಬಗ್ಗೆ ಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...