ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಗೆ ಮತ್ತೊಮ್ಮೆ ಕೊರೊನಾ ಸೋಂಕು ತಗುಲಿದ್ದು ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕಳೆದ ಮೂರು ದಿನಗಳಿಂದ ಯಡಿಯೂರಪ್ಪ ತೀವ್ರ ಜ್ವರದಿಂದ ಬಳಲುತ್ತಿದ್ದರೂ ಸಹ ಉಪಚುನಾವಣೆಗಳ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರು. ಆಯಾಸದಿಂದಾಗಿ ಇಂದು ಮುಂಜಾನೆ ರಾಮಯ್ಯ ಮೆಮೋರಿಯಲ್ ಆಸ್ಪತ್ರೆಗೆ ದಾಖಲಾಗಿದ್ದ ಅವರು ಆ ನಡುವೆಯೇ ಬೆಳಿಗ್ಗೆ ಅವರು ತಮ್ಮ ನಿವಾಸದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಕುರಿತು ಹಿರಿಯ ಅಧಿಕಾರಿಗಳ ಸಭೆ ನಡಿಸಿದ್ದರು. ಇಂದು ಮಧ್ಯಾಹ್ನ ಕೊರೊನಾ ತಗುಲಿರುವುದು ಗೊತ್ತಾಗುತ್ತಲೇ ಅವರನ್ನು ಮಣಿಪಾಲ ಆಸ್ಪತ್ರೆಗೆ ವರ್ಗಾಹಿಸಲಾಗಿದೆ.
Karnataka CM BS Yediyurappa tests positive for #COVID19. He'll be shifted to Manipal hospital from Ramaiah Memorial hospital where he was admitted earlier today: Karnataka Chief Minister's Office (CMO)
He had held an emergency meeting over COVID, at his residence earlier today. pic.twitter.com/i5fPumgIIl
— ANI (@ANI) April 16, 2021
“ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳು ಮಿತಿ ಮೀರುತ್ತಿರುವುದರಿಂದ ಅಧಿಕಾರಿಗಳಿಂದ ರಾಜ್ಯದ ಪರಿಸ್ಥಿತಿಯ ಬಗ್ಗೆ ಪೂರ್ಣ ಮಾಹಿತಿ ಪಡೆದಿದ್ದೇನೆ. ಇನ್ನು ಯಾವ ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ ಹೇರಬೇಕೆಂದು ಯೋಚಿಸುತ್ತೇವೆ. ಸದ್ಯಕ್ಕೆ ಯಾವುದೇ ಮಹತ್ವದ ಬದಲಾವಣೆಗಳಿರುವುದಿಲ್ಲ. ಪ್ರಧಾನಿ ನರೇಂದ್ರ ಮೋದಿಯವರ ಸಲಹೆ ಮತ್ತು ಇತರ ರಾಜ್ಯಗಳ ನಡೆ ಅನುಸರಿಸಿ ಏಪ್ರಿಲ್ 20 ರಂದು ಸಭೆ ಸೇರಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ” ಎಂದು ಬೆಳಿಗ್ಗೆ ಯಡಿಯೂರಪ್ಪ ಹೇಳಿದ್ದರು.
ಕಳೆದ ವರ್ಷ ಆಗಸ್ಟ್ 02 ರಂದು ಯಡಿಯೂರಪ್ಪನವರಿಗೆ ಕೊರೊನಾ ಸೋಂಕು ತಗುಲಿತ್ತು. ಆಗಲೂ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ನಂತರ ಅವರು ಚೇತರಿಸಿಕೊಂಡಿದ್ದರು.
ಇದನ್ನೂ ಓದಿ: ರಾತ್ರಿ ಕರ್ಫ್ಯೂ ಮುಂದುವರಿಕೆ, ಏ.20ರಂದು ಮುಂದಿನ ಸಭೆ: ಬಿ.ಎಸ್ ಯಡಿಯೂರಪ್ಪ


