Homeಮುಖಪುಟಇವಿಎಂ ಸುರಕ್ಷತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಡಿಎಂಕೆ ಮುಖ್ಯಸ್ಥ ಸ್ಟಾಲಿನ್!

ಇವಿಎಂ ಸುರಕ್ಷತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಡಿಎಂಕೆ ಮುಖ್ಯಸ್ಥ ಸ್ಟಾಲಿನ್!

- Advertisement -
- Advertisement -

ಏಪ್ರಿಲ್ 6 ರಂದು ತಮಿಳುನಾಡಿನಲ್ಲಿ ಮತದಾನ ಮುಗಿದಿದ್ದು, ಇದೀಗ ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಅವರು ಇವಿಎಂ ಮತ್ತು ಸ್ಟ್ರಾಂಗ್ ರೂಮ್‌ಗಳ ಸುರಕ್ಷತೆಯ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ. ಅವರು ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿಗೆ ಪತ್ರ ಬರೆದಿದ್ದು, ಇವಿಎಂ ಮತ್ತು ಸ್ಟ್ರಾಂಗ್‌ ರೂಮ್‌ಗಳ ಸುರಕ್ಷತೆಗಾಗಿ ರೂಪಿಸಿದ ಮಾರ್ಗಸೂಚಿಗಳು ತಮಿಳುನಾಡಿನಲ್ಲಿ ಅನುಸರಿಸಲಾಗುತ್ತಿಲ್ಲ ಎಂದು ದೂರಿದ್ದಾರೆ.

“ರಾಜ್ಯದಾದ್ಯಂತ ಇರುವ ಮತದಾನದ ಇವಿಎಂಗಳನ್ನು ಸಂಗ್ರಹಿಸಲಾಗಿರುವ ಅನೇಕ ಸ್ಟ್ರಾಂಗ್‌‌ ರೂಮ್‌ ಕ್ಯಾಂಪಸ್‌ಗಳಲ್ಲಿ ಒಟ್ಟು ಪ್ರೋಟೋಕಾಲ್ ಕೊರತೆ ಇದೆ” ಎಂದು ಸ್ಟಾಲಿನ್ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ರಾತ್ರಿಯ ಸಮಯದಲ್ಲಿ “ನಿಗೂಢವಾಗಿ” ಸ್ಟ್ರಾಂಗ್‌ ರೂಂಗಳ ಒಳಗೆ ಕೆಲವು ಮುಚ್ಚಲ್ಪಟ್ಟಿರುವ ಕಂಟೈನರುಗಳು ಹೋಗಿದೆ ಎಂದು ಅವರು ಆರೋಪಿಸಿದ್ದು, ಕೆಲವು ಘಟನೆಗಳನ್ನು ಎತ್ತಿ ತೋರಿಸಿದ್ದಾರೆ.

ಇದನ್ನೂ ಓದಿ: ಸೆಪ್ಟಂಬರ್‌ ತಿಂಗಳವರೆಗೆ ಕೇಂದ್ರ ಸರ್ಕಾರ ಮಾಡಿದ ಒಟ್ಟು ಸಾಲ 107.04 ಲಕ್ಷ ಕೋಟಿ!

“ರಾಮನಾಥಪುರಂನಲ್ಲಿ, 31 ಜನರು ಎರಡು ಲ್ಯಾಪ್‌ಟಾಪ್‌ಗಳೊಂದಿಗೆ ಸ್ಟ್ರಾಂಗ್ ರೂಮ್ ಕ್ಯಾಂಪಸ್‌ಗೆ ಪ್ರವೇಶಿಸಿದರು. ಅವರನ್ನು ವಿಚಾರಿಸಿದಾಗ ಇವಿಎಂಗಳನ್ನು ಸಂಗ್ರಹಿಸಿರುವ ಅದೇ ಮಹಡಿಯಲ್ಲಿ ಲಭ್ಯವಿರುವ ಕೆಲವು ಕಂಪ್ಯೂಟರ್‌ಗಳನ್ನು ನಿರ್ವಹಿಸಲು ಅವರು ಸ್ಟ್ರಾಂಗ್‌ ರೂಂ ಪ್ರವೇಶಿಸಿದ್ದಾರೆ ಎಂದು ತಿಳಿದುಬಂದಿದೆ” ಎಂದು ಅವರು ಹೇಳಿದ್ದಾರೆ.

“ಮತ್ತೊಂದು ಘಟನೆಯಲ್ಲಿ ಇವಿಯಂ ಇರುವ ನೇವೆಲಿಯ ಅಣ್ಣಾ ವಿಶ್ವವಿದ್ಯಾಲಯ ಕ್ಯಾಂಪಸ್‌ನಲ್ಲಿ, ಮೂವರು ಕಂಪ್ಯೂಟರ್-ತಜ್ಞರನ್ನು ಯಾವುದೋ ಕಾರಣಗಳಿಗಾಗಿ ಅಧಿಕಾರಿಗಳು ನೀಡಿದ ಪಾಸ್‌‌ನೊಂದಿಗೆ ಆವರಣಕ್ಕೆ ಪ್ರವೇಶಿಸಲು ಅವಕಾಶ ನೀಡಲಾಯಿತು” ಎಂದು ಸ್ಟಾಲಿನ್ ಪತ್ರದಲ್ಲಿ ಆರೋಪಿಸಿದ್ದಾರೆ.‘

“ಬಹಿರಂಗಪಡಿಸದ ಕಾರಣಗಳಿಗಾಗಿ ಹಲವಾರು ಅನಧಿಕೃತ ಜನರಿಗೆ ತಿರುವಳ್ಳೂರಿನಲ್ಲಿ ಸ್ಟ್ರಾಂಗ್‌ ರೂಮ್‌ಗಳಿಗೆ ಪ್ರವೇಶಿಸಲು ಅವಕಾಶ ನೀಡಲಾಗಿದೆ. ಈ ಸಮಯದಲ್ಲಿ ಸಿಸಿಟಿವಿ ಕ್ಯಾಮೆರಾಗಳು ಸುಮಾರು 30 ನಿಮಿಷಗಳ ಕಾಲ ಕಾರ್ಯನಿರ್ವಹಿಸುತ್ತಿರಲಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮೋದಿಯ 20 ಲಕ್ಷ ಕೋಟಿ ಪ್ಯಾಕೇಜ್‌ನಲ್ಲಿ ಬಿಡುಗಡೆಯಾಗಿದ್ದೆಷ್ಟು? – ವಿವರ ಇಲ್ಲಿದೆ!

ಇವಿಎಂ ಮತ್ತು ಸ್ಟ್ರಾಂಗ್‌ ರೂಮ್‌ಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಹಾಗೂ ಯಾವುದೇ ಅನಧಿಕೃತ ವ್ಯಕ್ತಿಗೆ ಸ್ಟ್ರಾಂಗ್‌‌ ರೂಮ್‌ಗೆ ಪ್ರವೇಶಿಸಲು ಚುನಾವಣಾ ಆಯೋಗವು ಅವಕಾಶ ನೀಡಬಾರದು ಎಂದು ಡಿಎಂಕೆ ಮುಖ್ಯಸ್ಥ ಒತ್ತಾಯಿಸಿದ್ದಾರೆ.

ಯಾವುದೇ ವಾಹನಗಳು ಸ್ಟ್ರಾಂಗ್‌ ರೂಂ ಕ್ಯಾಂಪಸ್‌ಗಳಿಗೆ ಪ್ರವೇಶಿಸಲು ಚುನಾವಣಾ ಆಯೋಗವು ಅನುಮತಿಸಬಾರದು ಮತ್ತು ಸ್ಟ್ರಾಂಗ್‌ ರೂಮ್‌ಗಳಲ್ಲಿನ ಎಲ್ಲಾ ವೈಫೈ ಸಂಪರ್ಕಗಳನ್ನು ನಿರ್ಬಂಧಿಸಿ ನಿಷ್ಕ್ರಿಯಗೊಳಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಆಯೋಗವು ಅಧಿಕೃತ ವ್ಯಕ್ತಿಗಳ ಪಟ್ಟಿಯನ್ನು ಸಹ ಒದಗಿಸಬೇಕು ಮತ್ತು ಇದರಿಂದಾಗಿ ಅಭ್ಯರ್ಥಿಗಳು ಯಾವುದೇ ಅನಧಿಕೃತ ವ್ಯಕ್ತಿಗಳು ಬಲವಾದ ಕೊಠಡಿ ಕ್ಯಾಂಪಸ್‌ಗಳಿಗೆ ಪ್ರವೇಶಿಸುತ್ತಾರೆಯೇ ಎಂದು ಮೇಲ್ವಿಚಾರಣೆ ಮಾಡಬಹುದು ಮತ್ತು ಪರಿಶೀಲಿಸಬಹುದು ಎಂದು ಪಕ್ಷವು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಉತ್ತರಪ್ರದೇಶ: 2ನೆ ಬಾರಿ ಮಾಸ್ಕ್ ನಿಯಮ ಉಲ್ಲಂಘಿಸಿದರೆ 10 ಸಾವಿರ ರೂ. ದಂಡ

ವೀಡಿಯೋ ನೋಡಿ: ರಾಜ್ಯ ಸರ್ಕಾರ ಸಂಬಳ ನೀಡದೆ ಇದ್ದಿದ್ದಕ್ಕೆ ಭಿಕ್ಷಾಟನೆ ನಡೆಸಿದ ಕೆಎಸ್‌ಆರ್‌ಟಿಸಿ ನೌಕರರನ ಮಗು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...