Homeಮುಖಪುಟಪಾಲ್ಘರ್‌ ಗುಂಪು ಹತ್ಯೆಗೆ ಒಂದು ವರ್ಷ- ಏಳು ಚಾರ್ಜ್‌ಶೀಟ್ ಸಲ್ಲಿಕೆ; ಏನಾಗಿತ್ತುಅಂದು?

ಪಾಲ್ಘರ್‌ ಗುಂಪು ಹತ್ಯೆಗೆ ಒಂದು ವರ್ಷ- ಏಳು ಚಾರ್ಜ್‌ಶೀಟ್ ಸಲ್ಲಿಕೆ; ಏನಾಗಿತ್ತುಅಂದು?

ಬಿಜೆಪಿ ಸೇರಿದಂತೆ ಕೆಲವು ಮಾಧ್ಯಮಗಳು ಘಟನೆಗೆ ಕೋಮು ಆಯಾಮ ನೀಡಲು ಪ್ರಯತ್ನಿಸಿತ್ತು.

- Advertisement -
- Advertisement -

ಮಹಾರಾಷ್ಟ್ರದಲ್ಲಿ ಪಾಲ್ಘರ್ ಗುಂಪು ಹತ್ಯೆ ಘಟನೆ ನಡೆದು ಇಂದಿಗೆ ಒಂದು ವರ್ಷವಾಗಿದೆ. ಘಟನೆಯಲ್ಲಿ ಇಬ್ಬರು ಸಾಧುಗಳು ಮತ್ತು ಅವರ ಚಾಲಕನನ್ನು ಮಕ್ಕಳ ಕಳ್ಳರು ಎಂಬ ಅನುಮಾನದ ಮೇಲೆ ಜನರ ಗುಂಪೊಂದು ಹೊಡೆದೆ ಹತ್ಯೆ ಮಾಡಿತ್ತು. ಈ ಪ್ರಕರಣದಲ್ಲಿ ನೋಂದಾಯಿಸಲಾದ ಮೂರು ಎಫ್ಐಆರ್‌‌ಗಳಲ್ಲಿ ರಾಜ್ಯ ಸಿಐಡಿಯು ಏಳು ಚಾರ್ಜ್‌ಶೀಟ್‌‌ಗಳನ್ನು ಸಲ್ಲಿಸಿದೆ.

ಈ ಪ್ರಕರಣದಲ್ಲಿ 251 ವಯಸ್ಕರನ್ನು ಬಂಧಿಸಲಾಗಿದ್ದು, 15 ಬಾಲಾಪರಾಧಿಗಳನ್ನು ಬಂಧಿಸಲಾಗಿದೆ. ಬಂಧಿತರಲ್ಲಿ, ಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ 75 ಮಂದಿ ಇನ್ನೂ ಜೈಲುಗಳಲ್ಲಿ ಇದ್ದಾರೆ. ಈ ಪ್ರಕರಣದಲ್ಲಿ ವಾಂಟೆಡ್ ಆರೋಪಿಗಳೆಂದು ಹೆಸರಿಸಲಾದ ಇನ್ನೂ 52 ಜನರನ್ನು ಸಿಐಡಿ ಹುಡುಕುತ್ತಿದೆ.

ಇದನ್ನೂ ಓದಿ: Fact check: ಪಾಲ್ಘರ್ ಗುಂಪು ಹತ್ಯೆಯ ಬಗ್ಗೆ ಸುಳ್ಳು ವರದಿ ಮಾಡಿದ ಪಿಟಿಐ

ಘಟನೆಯ ನಡೆದ ಕೂಡಲೇ ಸಾಮಾಜಿಕ ಜಾಲತಾಣದಲ್ಲಿ ಕೋಮು ಬಣ್ಣ ಹಚ್ಚಲಾಗಿತ್ತು. ಬಿಜೆಪಿ ಸೇರಿದಂತೆ ಕೆಲವು ಮಾಧ್ಯಮಗಳು ಕೂಡಾ ಘಟನೆಗೆ ಕೋಮು ಆಯಾಮ ನೀಡಲು ಪ್ರಯತ್ನಿಸಿತ್ತು. ಆದರೆ ಸಿಐಡಿ ಇದು ಕೋಮು ಆಧಾರಿತ ಹತ್ಯೆ ಅಲ್ಲ ಎಂದು ಹೇಳಿದೆ.

ಘಟನೆ ನಡೆದ ಕೂಡಲೇ ಮಹಾರಾಷ್ಟ್ರದ ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನವೀಸ್ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಈ ಘಟನೆ ಕುರಿತು ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ್ದರು. ಕಳೆದ ವರ್ಷ ಲಾಕ್ ಡೌನ್ ಸಮಯದಲ್ಲಿ ನಡೆದ ಘಟನೆಯ ಬಗ್ಗೆ ಬಿಜೆಪಿಯು “ಕೋಮು ರಾಜಕೀಯ” ಮಾಡುತ್ತಿದೆ ಎಂದು ಮಹಾ ವಿಕಾಸ್ ಅಘಾಡಿ ಸರ್ಕಾರ ಆರೋಪಿಸಿತ್ತು.

ಕಳೆದ ವರ್ಷ ಏಪ್ರಿಲ್ 16 ರಂದು ಸಾಧು ಮಹಂತ್ ಕಲ್ಪವೃಕ್ಷ ಗಿರಿ (70) ಸುಶಿಲ್‌‌ ಗಿರಿ ಮಹಾರಾಜ್ (35) ಮತ್ತು ಅವರ ಚಾಲಕ ನಿಲೇಶ್ ತೆಲ್ಗಡೆ (30) ಅವರು ವಾಹನವೊಂದರಲ್ಲಿ ಮುಂಬೈಯಿಂದ ಸೂರತ್‌ಗೆ ಪ್ರಯಾಣಿಸುತ್ತಿದ್ದರು. ಆದರೆ ಮಹಾರಾಷ್ಟ್ರದ ಬುಡಕಟ್ಟು ಪ್ರಾಬಲ್ಯದ ಪಾಲ್ಘರ್ ಜಿಲ್ಲೆಯ ದಹನು ತಾಲ್ಲೂಕಿನಲ್ಲಿನ ಪ್ರದೇಶವೊಂದರಲ್ಲಿ ಜನರು ಮಕ್ಕಳ ಕಳ್ಳರು ಎಂದು ಅವರನ್ನು ಹೊಡೆದು ಕೊಂದಿದ್ದಾರೆ. ಈ ಪ್ರದೇಶದಲ್ಲಿ ಹಲವು ದಿನಗಳಿಂದ ಮಕ್ಕಳ ಕಳ್ಳರು ಮತ್ತು ಅಂಗಾಂಗ ಮಾರಾಟ ಮಾಡುವವರು ಸುತ್ತಾಡುತ್ತಿದ್ದಾರೆ ಎಂದು ವಾಟ್ಸಪ್‌ ಮೂಲಕ ವದಂತಿಗಳು ಹರಡಿತ್ತು.

ಇದನ್ನೂ ಓದಿ: ಪಾಲ್ಘರ್‌ ಘಟನೆಗೆ ಕೋಮು ಆಯಾಮವಿಲ್ಲ: ಮುಖ್ಯಮಂತ್ರಿ ಉದ್ದವ್ ಠಾಕ್ರೆ ಸ್ಪಷ್ಟನೆ

ಮೊದಲಿಗೆ ಜನರಿಂದ ಸಂತ್ರಸ್ತರನ್ನು ಪೊಲೀಸರು ರಕ್ಷಿಸಿದ್ದರು. ಆದರೆ 300 ರಿಂದ 400 ರಷ್ಟಿದ್ದ ಜನರ ಗುಂಪು ಪೊಲೀಸ್ ವಾಹನದಿಂದ ಅವರನ್ನು ಎಳೆದು ಹಾಕಿ ಹತ್ಯೆ ಮಾಡಿದೆ. ಒಬ್ಬ ಪೋಲಿಸ್ ವಯಸ್ಸಾದ ಸಾಧುವನ್ನು ತ್ಯಜಿಸಿ ಪಲಾಯನ ಮಾಡುವ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು.

ಅಂತಿಮವಾಗಿ ಪಾಲ್ಘರ್ ಎಸ್ಪಿ ಗೌರವ್ ಸಿಂಗ್ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಲಾಯಿತು. ಐವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿತ್ತು. ಅಲ್ಲದೆ, ಸ್ಥಳೀಯ ಪೊಲೀಸ್ ಠಾಣೆಯ 35 ಅಧಿಕಾರಿಗಳನ್ನು ವರ್ಗಾಯಿಸಲಾಗಿತ್ತು.

ಘಟನೆ ನಡೆದ ನಾಲ್ಕು ದಿನಗಳ ನಂತರ ಈ ಪ್ರಕರಣವನ್ನು ಎಡಿಜಿ ಅತುಲ್‌ಚಂದ್ರ ಕುಲಕರ್ಣಿ ನೇತೃತ್ವದ ರಾಜ್ಯ ಸಿಐಡಿಗೆ ಹಸ್ತಾಂತರಿಸಲಾಯಿತು. ಅವರ ಮೇಲ್ವಿಚಾರಣೆಯಲ್ಲಿ ಮೂರು ಎಫ್‌ಐಆರ್‌ಗಳನ್ನು ನೋಂದಾಯಿಸಲಾಗಿದೆ. ಮೊದಲ ಎರಡು ಎಫ್‌ಐಆರ್‌ಗಳನ್ನು ಸಾಧುಗಳ ಹತ್ಯೆಗೆ ಸಂಬಂಧಿಸಿದ್ದಾಗಿದ್ದು, ಮೂರನೆಯದು ಸ್ಥಳಕ್ಕೆ ತಲುಪಿದ ಪೊಲೀಸ್ ತಂಡದ ಮೇಲೆ ಕಲ್ಲು ತೂರಾಟಕ್ಕೆ ಸಂಬಂಧಿಸಿದೆ.

ಇದನ್ನೂ ಓದಿ: ನನ್ನ ಮೇಲೆ ಗುಂಪು ಹಲ್ಲೆಯಾದಾಗ ನೀವೇಕೆ ಮಾತಾಡಲಿಲ್ಲ?: ಸ್ವಾಮಿ ಅಗ್ನಿವೇಶ್ ಪ್ರಶ್ನೆ

ಕಳೆದ ಜುಲೈನಲ್ಲಿ ಸಿಐಡಿ 126 ಆರೋಪಿಗಳ ವಿರುದ್ಧ ಮೊದಲ ಎರಡು ಎಫ್‌ಐಆರ್‌ಗಳಲ್ಲಿ ಎರಡು ಚಾರ್ಜ್‌ಶೀಟ್‌ಗಳನ್ನು ಸಲ್ಲಿಸಿತ್ತು. ಕಳೆದ ಅಕ್ಟೋಬರ್‌ನಲ್ಲಿ ಇನ್ನೂ 75 ಜನರನ್ನು ಬಂಧಿಸಲಾಗಿದ್ದು, ಇನ್ನೂ ಎರಡು ಚಾರ್ಜ್‌ಶೀಟ್‌ಗಳನ್ನು ಸಲ್ಲಿಸಲಾಗಿದೆ, ಅದರ ನಂತರ ಕಳೆದ ಡಿಸೆಂಬರ್‌ನಲ್ಲಿ ಬಂಧಿಸಲ್ಪಟ್ಟ 22 ಜನರ ವಿರುದ್ಧ ಮೂರನೇ ಪೂರಕ ಚಾರ್ಜ್‌ಶೀಟ್ ದಾಖಲಿಸಲಾಗಿದೆ.

ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಈ ಆರು ಚಾರ್ಜ್‌ಶೀಟ್‌ಗಳ ಹೊರತಾಗಿ, ಪೊಲೀಸರಿಗೆ ತಮ್ಮ ಕರ್ತವ್ಯ ನಿರ್ವಹಿಸದಂತೆ ಅಡ್ಡಿಯುಂಟು ಮಾಡಿದ ಮತ್ತು ಅವರ ಕೊಲೆ ಯತ್ನ ಮಾಡಿದ ಆರೋಪದ ಮೇಲೆ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕಳೆದ ಆಗಸ್ಟ್‌ನಲ್ಲಿ ಮತ್ತೊಂದು ಚಾರ್ಜ್‌ಶೀಟ್ ದಾಖಲಿಸಲಾಗಿತ್ತು.

ಘಟನೆಯ ನಂತರ, ವಿಶೇಷವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಘಟನೆಯು ಕೋಮು ಆಧಾರಿತ ಹಿಂಸಾಚಾರ ಎಂದು ಹೇಳಿ ಹರಿಯಬಿಡಲಾಗಿತ್ತು. ಘಟನೆಯ ಬಗ್ಗೆ ಸರಿಯಾಗಿ ತನಿಖೆ ನಡೆಸುತ್ತಿಲ್ಲ ಎಂದು ಬಿಜೆಪಿ ಆರೋಪಿಸಿತ್ತು ಮತ್ತು ಕೇಂದ್ರ ಏಜೆನ್ಸಿಗಳು ತನಿಖೆ ನಡೆಸಬೇಕೆಂದು ಒತ್ತಾಯಿಸಿತ್ತು. ಆದರೆ, ಈ ಎಲ್ಲಾ ಆರೋಪಗಳು ಸುಳ್ಳು ಎಂದು ಆಗ ಮಹಾರಾಷ್ಟ್ರದ ಗೃಹ ಸಚಿವರಾಗಿದ್ದ ಅನಿಲ್ ದೇಶ್ಮುಖ್ ಅವರು ಮೃತಪಟ್ಟವರು ಮತ್ತು ಆರೋಪಿಗಳು ಒಂದೇ ಧರ್ಮಕ್ಕೆ ಸೇರಿದವರು ಎಂದು ಬಂಧಿತ ಆರೋಪಿಗಳ ಹೆಸರನ್ನು ಟ್ವಿಟರ್‌ನಲ್ಲಿ ಬಿಡುಗಡೆ ಮಾಡಿದ್ದರು.

ಇದನ್ನೂ ಓದಿ: ಪಾಲ್ಘರ್ ಘಟನೆ: 101 ಬಂಧಿತರಲ್ಲಿ ಒಬ್ಬರೂ ಮುಸ್ಲಿಮರಿಲ್ಲ – ಗೃಹಸಚಿವರ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...