Homeಮುಖಪುಟಕುಂಭಮೇಳ ಯಾತ್ರಿಗಳು ಕೋವಿಡ್ ಅನ್ನು ಪ್ರಸಾದದಂತೆ ವಿತರಿಸಲಿದ್ದಾರೆ: ಭಕ್ತರ ವಿರುದ್ಧ ಕಿಡಿಕಾರಿದ ಮುಂಬೈ ಮೇಯರ್

ಕುಂಭಮೇಳ ಯಾತ್ರಿಗಳು ಕೋವಿಡ್ ಅನ್ನು ಪ್ರಸಾದದಂತೆ ವಿತರಿಸಲಿದ್ದಾರೆ: ಭಕ್ತರ ವಿರುದ್ಧ ಕಿಡಿಕಾರಿದ ಮುಂಬೈ ಮೇಯರ್

- Advertisement -
- Advertisement -

ಕೋವಿಡ್ ಎರಡನೇ ಅಲೆಯ ನಡುವೆಯೂ ನಡೆಯುತ್ತಿರುವ ಉತ್ತರಾಖಂಡದ ಹರಿದ್ವಾರದ ಕುಂಭಮೇಳದಿಂದ ಹಿಂದಿರುಗಿದ ಯಾತ್ರಿಗಳು ತಮ್ಮ ರಾಜ್ಯಗಳಲ್ಲಿ ಕೊರೊನಾವನ್ನು “ಪ್ರಸಾದ” ಎಂದು ವಿತರಿಸಲಿದ್ದಾರೆ ಎಂದು ಮುಂಬೈನ ಮೇಯರ್ ಭಕ್ತರ ವಿರುದ್ಧ ಕಿಡಿಕಾರಿದ್ದಾರೆ.

ಕುಂಭಮೇಳದಿಂದ ಮುಂಬೈಗೆ ಮರಳುವ ಯಾತ್ರಾರ್ಥಿಗಳನ್ನು ಕ್ವಾರಂಟೈನ್‌ಗೆ ಒಳಪಡಿಸಲಿದ್ದೇವೆ ಮತ್ತು ಇದರ ಖರ್ಚನ್ನು ಅವರೇ ಭರಿಸಬೇಕು ಎಂದು ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಶನ್‌ನ ಮೇಯರ್ ಕಿಶೋರಿ ಪಡ್ನೇಕರ್ ತಿಳಿಸಿದ್ದಾರೆ.

“ಕುಂಭಮೇಳದಿಂದ ಆಯಾ ರಾಜ್ಯಗಳಿಗೆ ಹಿಂದಿರುಗುವವರು ಕೊರೋನಾವನ್ನು ‘ಪ್ರಸಾದ’ ಎಂಬಂತೆ ವಿತರಿಸುತ್ತಾರೆ. ಈ ಎಲ್ಲ ಜನರನ್ನು ಆಯಾ ರಾಜ್ಯಗಳಲ್ಲಿ ತಮ್ಮ ಸ್ವಂತ ವೆಚ್ಚದಲ್ಲಿ ನಿರ್ಬಂಧಿಸಬೇಕು. ಮುಂಬೈನಲ್ಲಿಯೂ ಸಹ, ಹಿಂದಿರುಗುವಾಗ ಅವರನ್ನು ಕ್ವಾರಂಟೈನ್‌ಗೆ ಒಳಪಡಿಸುವ ಬಗ್ಗೆ ಯೋಚಿಸುತ್ತಿದ್ದೇವೆ” ಎಂದು ಕಿಶೋರಿ ಪಡ್ನೇಕರ್ ಹೇಳಿರುವುದಾಗಿ ಎಎನ್‌ಐ ವರದಿ ಮಾಡಿದೆ.

“95 ಪ್ರತಿಶತದಷ್ಟು ಮುಂಬೈವಾಲಾಗಳು ಕೊರೊನಾ ನಿರ್ಬಂಧಗಳಿಗೆ ಬದ್ಧರಾಗಿದ್ದಾರೆ. ಉಳಿದ 5 ಪ್ರತಿಶತದಷ್ಟು ಜನರು ನಿರ್ಬಂಧಗಳನ್ನು ಪಾಲಿಸುತ್ತಿಲ್ಲ. ಅವರು ಇತರರಿಗೆ ಸಮಸ್ಯೆಗಳನ್ನು ಉಂಟುಮಾಡುತ್ತಿದ್ದಾರೆ. ಪ್ರಸ್ತುತ ಕೊರೊನಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಸಂಪೂರ್ಣ ಲಾಕ್‌ಡೌನ್ ವಿಧಿಸಬೇಕು ಎಂದು ನಾನು ಭಾವಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

ಗಂಗಾ ನದಿಯ ದಡದಲ್ಲಿ ನಡೆದಿರುವ ಕುಂಭಮೇಳಕ್ಕಾಗಿ ಲಕ್ಷಾಂತರ ಭಕ್ತರು ಶಾಹಿ ಸ್ನಾನ (ಪವಿತ್ರ ಸ್ನಾನ) ಮಾಡಿದ್ದಾರೆ. ಕುಂಭಮೇಳದಲ್ಲಿ ಭಾಗವಹಿಸಿದ್ದ ಸಾಧುಗಳಿಬ್ಬರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಇತರ 80 ಮಂದಿ ಸಾಧುಗಳಿಗೆ ಕೊರೊನಾ ದೃಢಪಟ್ಟಿದೆ. ಲಕ್ಷಾಂತರ ಮಂದಿ ಸೇರುತ್ತಿರುವ ಕುಂಭಮೇಳದಲ್ಲಿ ಭಾಗವಹಿಸಿದ್ದ ಎರಡು ಸಾವಿರಕ್ಕೂ ಅಧಿಕ ಭಕ್ತರಿಗೆ ಕೊರೊನಾ ಸೋಂಕು ಹರಡಿದೆ ಎಂದು ವರದಿಯಾಗಿದೆ. ಕುಂಭಮೇಳಕ್ಕೆ ದೇಶಾದ್ಯಂತದ ಯಾತ್ರಾರ್ಥಿಗಳು ಬಂದು ತಮ್ಮ ರಾಜ್ಯಗಳಿಗೆ ​​ಮತ್ತು ಹಳ್ಳಿಗಳಿಗೆ ಮರಳುತ್ತಿರುವುದರಿಂದ ಇದು “ಸೂಪರ್-ಸ್ಪ್ರೆಡರ್” ಆಗಿ ಬದಲಾಗಬಹುದು ಎಂದು ತಜ್ಞರು ಹೇಳಿದ್ದಾರೆ.


ಇದನ್ನೂ ಓದಿ: ಕುಂಭಮೇಳ ಸಾಂಕೇತಿಕವಾಗಿಸಬೇಕು, ಇದು ಕೊರೊನಾ ವಿರುದ್ಧದ ಹೋರಾಟಕ್ಕೆ ಬಲ ತರುತ್ತದೆ: ಪ್ರಧಾನಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...