Homeಮುಖಪುಟಕುಂಭಮೇಳದಿಂದ ದೆಹಲಿಗೆ ಹಿಂದಿರುಗುವವರಿಗೆ 14 ದಿನಗಳ ಕ್ವಾರಂಟೈನ್ ಕಡ್ಡಾಯ

ಕುಂಭಮೇಳದಿಂದ ದೆಹಲಿಗೆ ಹಿಂದಿರುಗುವವರಿಗೆ 14 ದಿನಗಳ ಕ್ವಾರಂಟೈನ್ ಕಡ್ಡಾಯ

- Advertisement -
- Advertisement -

ಹೆಚ್ಚುತ್ತಿರುವ ಕೊರೊನಾ ಎರಡನೇ ಅಲೆಯ ನಡುವೆಯು ಉತ್ತರಖಂಡದ ಹರಿದ್ವಾರದಲ್ಲಿ ನಡೆದ ಕುಂಭಮೇಳದಲ್ಲಿ ಭಾಗವಹಿಸಿ ದೆಹಲಿಗೆ ಹಿಂತಿರುಗುವವರಿಗೆ 14 ದಿನಗಳ ಮನೆ ಕ್ವಾರಂಟೈನ್ ಕಡ್ಡಾಯ ಎಂದು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ಶನಿವಾರ ಮಧ್ಯರಾತ್ರಿ ಆದೇಶಿಸಿದೆ. ಏಪ್ರಿಲ್ 4 ರಿಂದ 17ರವರೆಗೆ ನಡೆದ ಕುಂಭಮೇಳದಲ್ಲಿ ಭಾಗವಹಿಸಿದವರು ತಮ್ಮ ವಿವರಗಳನ್ನು ದೆಹಲಿ ವೆಬ್‌ಸೈಟ್‌ನಲ್ಲಿ ದಾಖಲಿಸಬೇಕು, ಅಲ್ಲದೇ ಏಪ್ರಿಲ್ 18ರಿಂದ ಯಾರಾದರೂ ಕುಂಭಮೇಳಕ್ಕೆ ಹೋಗಲು ಯೋಜಿಸಿದ್ದರೆ ಅವರು ಸಹ ವೆಬ್‌ಸೈಟ್‌ ಮೂಲಕ ದೆಹಲಿ ಸರ್ಕಾರದ ಗಮನಕ್ಕೆ ತರಬೇಕು, ತಪ್ಪಿದವರಿಗೆ ಶಿಕ್ಷೆ ವಿಧಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

24 ಗಂಟೆಗಳ ಒಳಗಾಗಿ ಅಂದರೆ ಭಾನುವಾರ ಮಧ್ಯರಾತ್ರಿಯ ಒಳಗಾಗಿ ಕುಂಭಮೇಳಕ್ಕೆ ತೆರಳಿದ ನಿವಾಸಿಗಳು ತಮ್ಮ ವಿವರಗಳನ್ನು ದೆಹಲಿ ಸರ್ಕಾರದ ವೆಬ್‌ಸೈಟ್‌ನಲ್ಲಿ ನೊಂದಾಯಿಸಬೇಕು. ಟೆಸ್ಟ್, ಟ್ರೇಸ್ ಮತ್ತು ಕ್ವಾಂರಟೈನ್‌ಗೆ ಒಳಪಡಿಸಲು ಇದು ಅಗತ್ಯ ಎಂದು ಮುಖ್ಯ ಕಾರ್ಯದರ್ಶಿ ವಿಜಯ್ ದೇವ್ ತಿಳಿಸಿದ್ದಾರೆ.

ಏಪ್ರಿಲ್ 12 ಮತ್ತು 14 ರಂದು ಕುಂಭಮೇಳದಲ್ಲಿ ನಡೆದ ‘ರಾಯಲ್ ಸ್ನಾನ’ (ಪವಿತ್ರ ಸ್ನಾನ) ದಲ್ಲಿ ಭಕ್ತರು ಭಾಗವಹಿಸಿರುವುದರಿಂದ ಈ ಧಾರ್ಮಿಕ ಸಭೆಯು ಸೂಪರ್ ಸ್ಪ್ರೆಡರ್ ಘಟನೆಯಾಗಿ ಪರಿಣಮಿಸುತ್ತದೆ ಎಂದು ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ. ಒಂದು ವಾರದಲ್ಲಿಯೇ ಮೇಳದಲ್ಲಿ ಭಾಗವಹಿಸಿದ ಸುಮಾರು 2000 ಅಧಿಕ ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇಬ್ಬರು ಸಾಧುಗಳು ನಿಧನರಾಗಿದ್ದಾರೆ.

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ದೆಹಲಿಯು ಕಳೆದ 24 ಗಂಟೆಗಳಲ್ಲಿ 24,375 ಹೊಸ ಪ್ರಕರಣಗಳನ್ನು ದಾಖಲಿಸಿದೆ.

“ಕುಂಭಮೇಳದಿಂದ ಆಯಾ ರಾಜ್ಯಗಳಿಗೆ ಹಿಂದಿರುಗುವವರು ಕೊರೊನಾವನ್ನು ‘ಪ್ರಸಾದ’ ಎಂಬಂತೆ ವಿತರಿಸುತ್ತಾರೆ. ಈ ಎಲ್ಲ ಜನರನ್ನು ಆಯಾ ರಾಜ್ಯಗಳಲ್ಲಿ ತಮ್ಮ ಸ್ವಂತ ವೆಚ್ಚದಲ್ಲಿ ನಿರ್ಬಂಧಿಸಬೇಕು. ಮುಂಬೈನಲ್ಲಿಯೂ ಸಹ, ಹಿಂದಿರುಗುವಾಗ ಅವರನ್ನು ಕ್ವಾರಂಟೈನ್‌ಗೆ ಒಳಪಡಿಸುವ ಬಗ್ಗೆ ಯೋಚಿಸುತ್ತಿದ್ದೇವೆ” ಎಂದು ಮುಂಬೈ ಮೇಯರ್ ಕಿಶೋರಿ ಪಡ್ನೇಕರ್ ನಿನ್ನೆ ಹೇಳಿದ್ದರು.


ಇದನ್ನೂ ಓದಿ: ಕೊರೊನಾ ಎರಡನೆ ಅಲೆಗೆ ವೇದಿಕೆ ಒದಗಿಸಿದ್ದು ಮೋದಿ ಸರ್ಕಾರದ ಅಪಕ್ವ ನಿರ್ಧಾರಗಳು, ಕಣ್ಕಟ್ಟು ಅಂಕಿಅಂಶಗಳು ಮತ್ತು ಬೇಜವಾಬ್ದಾರಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...