ದೇಶದಲ್ಲಿ ಕೊರೊನಾ ಸೋಂಕು ದಿನೇ ದಿನೇ ಉಲ್ಬಣವಾಗುತ್ತಿದೆ. ಈಗೀನ ಎರಡನೇ ಅಲೆ ತೀವ್ರ ಸ್ಪರೂಪದ್ದಾಗಿದ್ದು, ಅಧಿಕ ಸಾವುಗಳಿಗೆ ಕಾರಣವಾಗುತ್ತಿದೆ. ಇಂತಹ ಸಮಯದಲ್ಲಿ ಆರೋಗ್ಯ ಕಾರ್ಯಕರ್ತರು ತಮ್ಮ ಜೀವವನ್ನೇ ಪಣಕ್ಕಿಟ್ಟು ಕಾರ್ಯ ನಿರ್ವಹಿಸುತ್ತಿದ್ದಾರೆ. ಕೊರೊನಾ ಸಂಕಚ್ಟದಲ್ಲಿ ಹಗಲು-ರಾತ್ರಿ ದುಡಿಯುತ್ತಿರುವ ಇವರಿಗೆ ಕೇಂದ್ರ ಸರ್ಕಾರ ಈಗ ಮತ್ತೊಂದು ಆಘಾತ ನೀಡಿದೆ.
ಕೊರೊನಾ ಸೋಂಕಿತರನ್ನು ನೋಡಿಕೊಳ್ಳುವ ಮೊದಲ ಸಾಲಿನಲ್ಲಿ ಬರುವ, ಕೊರೊನಾ ವಿರುದ್ಧ ಹೋರಾಡುತ್ತಿರುವ ಆರೋಗ್ಯ ಕಾರ್ಯಕರ್ತರಿಗೆ ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯ ವಿಮಾ ಯೋಜನೆಯಡಿ ತಲಾ 50 ಲಕ್ಷ ರೂಪಾಯಿವರೆಗೆ ವಿಮಾ ಸೌಲಭ್ಯ ನೀಡುವುದಾಗಿ ಘೋಷಿಸಿತ್ತು.
ಕಳೆದ ವರ್ಷದ ಮಾರ್ಚ್‌ನಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಕೊರೊನಾ ಮೊದಲ ಅಲೆಯಲ್ಲಿ ಎಷ್ಟು ಜನರಿಗೆ ಈ ವಿಮೆಯ ಸೌಲಭ್ಯ ದೊರಕಿದೆಯೋ ಗೊತ್ತಿಲ್ಲ. ಆದರೆ ಈ ವರ್ಷದ ಮಾರ್ಚ್ 24 ರಂದು ಸರ್ಕಾರ ಸುತ್ತೊಲೆ ಹೊರಡಿಸಿ ಈ ವಿಮಾ ಯೋಜನೆಯನ್ನು ಅಂತ್ಯಗೊಳಿಸಿರುವುದಾಗಿ ಆದೇಶ ಹೊರಡಿಸಿದೆ.
ಇದನ್ನೂ ಓದಿ: ಕೊರೊನಾ ವಾರಿಯರ್ಸ್‌ಗೆ ಸಲ್ಲಬೇಕಾದ ಪ್ರಶಂಸೆಯನ್ನು ಮೋದಿ ಕದಿಯುತ್ತಿದ್ದಾರೆ: ಚುನಾವಣಾ ಆಯೋಗಕ್ಕೆ TMC ದೂರು

ಕೊರೊನಾ ಎರಡನೇ ಅಲೆಯಲ್ಲಿ ಹೆಚ್ಚು ಆತಂಕಕ್ಕೆ ಒಳಗಾಗಿರುವ ವಲಯ ಆರೋಗ್ಯ ಕಾರ್ಯಕರ್ತರದ್ದು, ವಿಮಾ ಸೌಲಭ್ಯ ಎಷ್ಟು ದೊರಕಿದೆಯೋ ಇಲ್ಲವೋ ಮಾಹಿತಿಯಿಲ್ಲ. ಆದರೆ, ತಾವು ಕೊಂಚ ನೆಮ್ಮದಿಯಿಂದ ಕೆಲಸ ಮಾಡಲು ಈ ವಿಮಾ ಸೌಲಭ್ಯ ಒಂದು ಭದ್ರತೆ ಒದಗಿಸಿತ್ತು. ಅದನ್ನು ಈಗ ಕೇಂದ್ರ ಸರ್ಕಾರ ಅಂತ್ಯಗೊಳಿಸಿದೆ.
ಈಗೀನ ಸನ್ನಿವೇಶ ನಿಜಕ್ಕೂ ಗಂಭೀರ ಆಗುತ್ತಿರುವ ಹೊತ್ತಿನಲ್ಲಿ ಜನರ ಜೀವ ಉಳಿಸಲು ಹೆಣಗಾಡುತ್ತಿರುವ ವೈದ್ಯರು, ತಳಮಟ್ಟದ ಆಶಾ ಕಾರ್ಯಕರ್ತೆಯರು, ಆಂಬ್ಯುಲೆನ್ಸ್ ಚಾಲಕರು, ಆರೋಗ್ಯ ಸಿಬ್ಬಂದಿಗಳ ವಿಮಾ ಸೌಲಭ್ಯಕ್ಕೆ ಅಂತ್ಯ ಹಾಡಿರುವುದು ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.
ಇದನ್ನೂ ಓದಿ: ಉದ್ಯೋಗ ಕೊಡದಿದ್ದರೆ ಮೋದಿಜಿಯನ್ನು ಮನೆಗೆ ಕಳಿಸುತ್ತೇವೆ: ನೋ ಜಾಬ್, ನೋ ವೋಟ್ ಟ್ವಿಟರ್ ಟ್ರೆಂಡಿಂಗ್
ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯಡಿಯಲ್ಲಿ ಕೊರೊನಾ ವಿರುದ್ಧ ಹೋರಾಡುತ್ತಿರುವ ಸರ್ಕಾರಿ ಆಸ್ಪತ್ರೆಗಳು ಮತ್ತು ಆರೋಗ್ಯ ರಕ್ಷಣಾ ಕೇಂದ್ರಗಳಲ್ಲಿ ದುಡಿಯುತ್ತಿರುವ ಆರೋಗ್ಯ ಕಾರ್ಯಕರ್ತರಿಗೆ ನೀಡಲಾಗಿತ್ತು.
ಸಫಾಯಿ ಕರ್ಮಚಾರಿಗಳು, ವಾರ್ಡ್ ಬಾಯ್ ಗಳು, ನರ್ಸ್ ಗಳು, ಆಶಾ ಕಾರ್ಯಕರ್ತೆಯರು, ಅರೆ ವೈದ್ಯಕೀಯ ಸಿಬ್ಬಂದಿ, ತಂತ್ರಜ್ಞರು, ವೈದ್ಯರು ಮತ್ತು ವಿಶೇಷ ತಜ್ಞರು ಹಾಗೂ ಇತರೆ ಆರೋಗ್ಯ ಕಾರ್ಯಕರ್ತರನ್ನು ವಿಶೇಷ ವಿಮಾ ಯೋಜನೆ ವ್ಯಾಪ್ತಿಗೆ ಸೇರ್ಪಡೆ ಮಾಡಲಾಗಿತ್ತು.
ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುವುದು, ಅವರನ್ನು ಭೇಟಿ ಮಾಡುವುದು ಮತ್ತಿತರ ಕಾರ್ಯಗಳಲ್ಲಿ ತೊಡಗಿದ್ದ ಯಾವುದೇ ಆರೋಗ್ಯ ವೃತ್ತಿಪರರು ಅವಘಡದಲ್ಲಿ ಸಿಲುಕಿ ಅವರು ಸಾವನ್ನಪ್ಪಿದರೆ ಅವರಿಗೆ 50 ಲಕ್ಷ ರೂಪಾಯಿವರೆಗೆ ವಿಮಾ ಪರಿಹಾರ ನೀಡಲಾಗುವುದು. ಅಂದಾಜು 22 ಲಕ್ಷ ಆರೋಗ್ಯ ಕಾರ್ಯಕರ್ತೆಯರಿಗೆ ಈ ವಿಮಾ ಸೌಕರ್ಯ ಒದಗಿಸಲಾಗುವುದು ಎಂದು ಹೇಳಲಾಗಿತ್ತು.
ಇದನ್ನೂ ಓದಿ: ಕುಂಭಮೇಳದಿಂದ ದೆಹಲಿಗೆ ಹಿಂದಿರುಗುವವರಿಗೆ 14 ದಿನಗಳ ಕ್ವಾರಂಟೈನ್ ಕಡ್ಡಾಯ


