Homeಮುಖಪುಟಮಹಾರಾಷ್ಟ್ರ ಕೊರೋನಾ ಪಾಲಿಟಿಕ್ಸ್: ಬಿಜೆಪಿ ಮುಖಂಡರಿಂದ 4.75 ಕೋಟಿ ರೂ. ಮೌಲ್ಯದ ರೆಮ್‌ಡಿಸಿವಿರ್ ಅಕ್ರಮ ಸಂಗ್ರಹ...

ಮಹಾರಾಷ್ಟ್ರ ಕೊರೋನಾ ಪಾಲಿಟಿಕ್ಸ್: ಬಿಜೆಪಿ ಮುಖಂಡರಿಂದ 4.75 ಕೋಟಿ ರೂ. ಮೌಲ್ಯದ ರೆಮ್‌ಡಿಸಿವಿರ್ ಅಕ್ರಮ ಸಂಗ್ರಹ ಆರೋಪ

- Advertisement -
- Advertisement -

ಕೊರೋನಾ ಪೀಡಿತರಿಗೆ ಚಿಕಿತ್ಸೆ ನೀಡುವಾಗ ಬಳಸುವ ರೆಮ್‌ಡಿಸಿವಿರ್ ಔಷಧಿ ಕೊರತೆ ಬಗ್ಗೆ ಎಲ್ಲೆಲ್ಲೂ ದೂರುಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಮಹರಾಷ್ಟ್ರ ಬಿಜೆಪಿ ಮುಖಂಡರು 4.75 ಕೋಟಿ ರೂ. ಮೌಲ್ಯದ ರೆಮ್‌ಡಿಸಿವಿರ್ ಅಕ್ರಮ ಸಂಗ್ರಹ ಆರೋಪ ಕೇಳಿಬಂದಿದೆ. ರೆಮ್ಡೆಸಿವಿರ್ ಸುತ್ತ ನಡೆಯುತ್ತಿರುವ ಈ ಗದ್ದಲದಲ್ಲಿ, ಕೊರೋನಾ ವಿಷಯದಲ್ಲೂ ಬಿಜೆಪಿ ರಾಜಕೀಯ ಮಾಡುತ್ತಿದೆಯೇ ಎಂಬ ಪ್ರಶ್ನೆಗಳು ಎದ್ದಿವೆ.

ಶನಿವಾರ ಮುಂಜಾನೆ ಮಹಾರಾಷ್ಟ್ರ ಸಚಿವ ನವಾಬ್ ಮಲೀಕ್ ರಾಜ್ಯಕ್ಕೆ ರೆಮ್‌ಡಿಸಿವಿರ್ ಔಷಧಿಯನ್ನು ಪೂರೈಸಬಾರದು ಎಂದು ಕೇಂದ್ರ ಸರ್ಕಾರ ಮತ್ತು ಬಿಜೆಪಿ ಪೂರೈಕೆದಾರರ ಮೇಲೆ ಒತ್ತಡ ಹಾಕುತ್ತಿದೆ. ಪೂರೈಸಿದರೆ ಲೈಸೆನ್ಸ್ ರದ್ದು ಮಾಡುತ್ತೀವಿ ಎಂದು ಅವರನ್ನು ಬೆದರಿಸಲಾಗುತ್ತಿದೆ’ ಎಂಬ ಗಂಭೀರ ಆರೋಪ ಮಾಡಿದ್ದರು.

ನಂತರ ರೆಮ್‌ಡಿಸಿವಿರ್ ಮಾತ್ರೆಗಳ ಹೆಚ್ಚುವರಿ ಸಂಗ್ರಹವಿದೆ ಎಂದು ಮುಂಬೈ ಪೊಲೀಸರು ಫಾರ್ಮಾ ಕಂಪನಿಯ ನಿರ್ದೇಶಕರೊಬ್ಬರನ್ನು ಪ್ರಶ್ನಿಸಿದಾಗ, ಅಲ್ಲಿಗೆ ಧಾವಿಸಿದ ದೇವೇಂದ್ರ ಫಢ್ನವೀಸ್ ಫಾರ್ಮಾ ಕಂಪನಿ ಪರ ಮಾತಾನಾಡಿ, ನಾವು ಅವನ್ನು ಕೊಳ್ಳಲು ಆರ್ಡರ್ ಕೊಟ್ಟಿ ಎಂದು ಹೇಳಿರುವುದು ಹೊಸ ವಿವಾದ ಹುಟ್ಟುಹಾಕಿದೆ.

“ನಾಲ್ಕು ದಿನಗಳ ಹಿಂದೆ ನಾವು ರೆಮ್‌ಡಿಸಿವಿರ್ ಪೂರೈಸುವಂತೆ ಬ್ರಕ್ ಫಾರ್ಮಾಗೆ ವಿನಂತಿಸಿದ್ದೆವು. ಆದರೆ ಅನುಮತಿ ನೀಡುವವರೆಗೂ ಅವರಿಗೆ ಔಷಧಿ ಪೂರೈಸಲು ಸಾಧ್ಯವಾಗಲಿಲ್ಲ. ನಾನು ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಅವರೊಂದಿಗೆ ಮಾತನಾಡಿದ ನಂತರ ಅನುಮತಿ ಸಿಕ್ಕಿತು” ಎಂದು ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ. ಅಲ್ಲದೆ ರೆಮ್‌ಡಿಸಿವಿರ್ ಪೂರೈಕೆದಾರರಿಗೆ ಮಹಾರಾಷ್ಟ್ರ ಸರ್ಕಾರ ಕಿರುಕುಳ ಕೊಡುತ್ತಿದೆ ಎಂದು ಆರೋಪಿಸಿದ್ದಾರೆ.

ಈ ಕುರಿತಾಗಿ ಆರ್‌ಟಿಐ ಕಾರ್ಯಕರ್ತ ಮತ್ತು ಸಾಮಾಜಿಕ ಹೋರಾಟಗಾರ ಸಾಕೇತ್ ಗೋಖಲೆ ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. “ಕಳೆದ ರಾತ್ರಿ ಮುಂಬೈನ ವೈಲ್ ಪಾರ್ಲೆ ಪೊಲೀಸರು ಗುಜರಾತ್ ಫಾರ್ಮಾ ಕಂಪನಿ ಅಕ್ರಮವಾಗಿ ಸಂಗ್ರಹಿಸಿದ್ದ 4.75 ಕೋಟಿ ರೂ. ಮೌಲ್ಯದ ರೆಮ್‌ಡಿಸಿವಿರ್ ಮಾತ್ರೆಗಳನ್ನು ವಶಪಡಿಸಿಕೊಂಡರು. ಥಟ್ಟನೆ ನಟ್ಟನಡುರಾತ್ರಿ ವೈಲ್ ಪಾರ್ಲೆ ಪೊಲೀಸ್ ಸ್ಟೇಷನ್‌ನಲ್ಲಿ ಪ್ರತ್ಯಕ್ಷರಾದ ಮಾಜಿ ಸಿಎಂ ದೇವೇಂದ್ರ ಫಢ್ನವೀಸ್, ‘ಬಿಜೆಪಿ ಈ ಔಷಧಿಗಳನ್ನು ಆರ್ಡರ್ ಮಾಡಿ ದಮನ್ ಮತ್ತು ಗುಜರಾತ್‌ನಿಂದ ತರಿಸಿಕೊಂಡಿದೆ’ ಎನ್ನುತ್ತಾರೆ. ನಂತರವರು ಜನರಿಗೆ ವಿತರಿಸಲು ಆ ಸ್ಟಾಕ್ ಅನ್ನು ಬಿಜೆಪಿ ತರಿಸಿಕೊಂಡಿದೆ ಎಂದು ಸಮರ್ಥಿಸಿಕೊಂಡಿದ್ದಾರೆ” ಎಂದು ಗೋಖಲೆ ಟ್ವೀಟ್ ಮಾಡಿದ್ದಾರೆ.

1. ಸರ್ಕಾರಗಳಿಗಷ್ಟೇ ಮಾರಬೇಕಾದ ರೆಮ್‌ಡಿಸಿವಿರ್ ಅನ್ನು ಫಡ್ನವೀಸ್ ಅವರಂತಹ ಖಾಸಗಿ ವ್ಯಕ್ತಿ, ಗುಜರಾತ್‌ನಿಂದ ಹೇಗೆ ತರಿಸಿಕೊಳ್ಳುತ್ತಾರೆ?
2. ಪೂರೈಕೆದಾರರ ಕುರಿತು ಫಡ್ನವೀಸ್ ರಾಜ್ಯ ಸರ್ಕಾರಕ್ಕೆ ತಿಳಿಸಿ, ಅಧಿಕೃತ ಮಾರ್ಗದಲ್ಲೇ ರಾಜ್ಯ ಸರ್ಕಾರ ಅವನ್ನು ಖರೀದಿಸಲು ಅವಕಾಶವನ್ನೇಕೆ ಮಾಡಿಕೊಡಲಿಲ್ಲ?
3. ತೀವ್ರ ಕೊರತೆ ಇರುವ ಈ ಸಂದರ್ಭದಲ್ಲಿ ಬಿಜೆಪಿ ರೆಮ್‌ಡಿಸಿವಿರ್ ಅನ್ನು ತನ್ನ ಪಾರ್ಟಿ ಆಫೀಸ್‌ನಲ್ಲಿ (ಗುಜರಾತ್‌ನಲ್ಲೂ ಹೀಗೇ ಆಗಿದೆ) ಸ್ಟಾಕ್ ಮಾಡಿದ್ದು ಏಕೆ?
ರಾಜ್ಯ ಸಚಿವ ನವಾಬ್ ಮಲೀಕ್ ನಿನ್ನೆಯಷ್ಟೇ, ರೆಮ್‌ಡಿಸಿವಿರ್ ಪಡೆಯಲು ಕೇಂದ್ರ ಸರ್ಕಾರ ಅಡ್ಡಿ ಮಾಡುತ್ತಿದೆ ಎಂದಿದ್ದಾರೆ. ಆದರೆ ಫಡ್ನವೀಸರ ಬಿಜೆಪಿ ಪಕ್ಷ ಜನರಿಗೆ ವಿತರಿಸಲು ರೆಮ್‌ಡಿಸಿವಿರ್ ಸ್ಟಾಕ್ ಮಾಡಿಕೊಂಡಿದೆ. ಇದು ಪಕ್ಕಾ ಬಿಜೆಪಿ ಪಾಲಿಟಿಕ್ಸ್ ಎಂದಿರುವ ಸಾಕೇತ್ ಗೋಖಲೆ, ಸಂಕಷ್ಟದ ಸಮತದಲ್ಲೂ ಬೇಳೆ ಬೇಯಿಸಿಕೊಳ್ಳುವ ಬಿಜೆಪಿ ರಾಜಕಾರಣವನ್ನು ಟೀಕಿಸಿದ್ದಾರೆ,
ಈ ಬಗ್ಗೆ ಸರಿಯಾದ ತನಿಖೆ ಮಾಡುವಂತೆ ಅವರು ಮಹಾರಾಷ್ಟ್ರ ಗೃಹ ಸಚಿವ, ಆರೋಗ್ಯ ಸಚಿವರಿಗೆ ಪತ್ರ ಬರೆಯಲಿದ್ದಾರೆ.


ಇದನ್ನೂ ಓದಿ: ಮಹಾರಾಷ್ಟ್ರಕ್ಕೆ ರೆಮ್‌ಡಿಸಿವಿರ್ ನೀಡಿದರೆ ಲೈಸನ್ಸ್‌ ರದ್ದು ಮಾಡುತ್ತೇವೆಂದು ಕಂಪನಿಗಳಿಗೆ ಕೇಂದ್ರ ಬೆದರಿಕೆ’: ಮಹಾಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...