ಕಾಂಗ್ರೆಸ್ ಮುಖಂಡ, ವಯನಾಡ್ ಕ್ಷೇತ್ರದ ಸಂಸದ ರಾಹುಲ್ ಗಾಂಧಿ ಕೊರೊನಾ ಪಾಸಿಟಿವ್ ಆಗಿದ್ದಾರೆ. ಈ ಕುರಿತು ಅವರು ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಸಣ್ಣ ಗುಣಲಕ್ಷಣಗಳು ಕಾಣಿಸಿಕೊಂಡ ನಂತರ ಈಗ ತಾನೇ ಕೊರೊನಾ ಪಾಸಿಟಿವ್ ಆಗಿದ್ದೇನೆ ಎಂದು ತಿಳಿದುಬಂದಿದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದವರೆಲ್ಲರೂ ಸುರಕ್ಷತಾ ಮಾರ್ಗಸೂಚಿಗಳನ್ನು ಅನುಸರಿಸಿ, ಸುರಕ್ಷಿತವಾಗಿರಿ ಎಂದು ಅವರು ಟ್ವೀಟ್ ಮಾಡಿದ್ದಾರೆ.
After experiencing mild symptoms, I’ve just tested positive for COVID.
All those who’ve been in contact with me recently, please follow all safety protocols and stay safe.
— Rahul Gandhi (@RahulGandhi) April 20, 2021
ಕೋವಿಡ್ ಎರಡನೇ ಅಲೆ ಭಾರತಕ್ಕೆ ದೊಡ್ಡ ಮಟ್ಟದಲ್ಲಿ ಅಪ್ಪಳಿಸಿದ್ದು ದಿನಕ್ಕೆ ಎರಡೂವರೆ ಲಕ್ಷದಷ್ಟು ಕೊರೊನಾ ಪ್ರಕರಣಗಳು ವರದಿಯಾಗುತ್ತಿವೆ. ನಿನ್ನೆ ತಾನೇ ಮಾಜಿ ಪ್ರಧಾನಿ, ಕಾಂಗ್ರೆಸ್ ಮುಖಂಡ ಮನಮೋಹನ್ ಸಿಂಗ್ ಕೊರೊನಾ ಪಾಸಿಟಿವ್ ಆಗಿದ್ದರು.
ರಾಹುಲ್ ಗಾಂಧಿ ತಮಗೆ ಕೊರೊನಾ ಸೋಂಕು ತಗುಲಿರುವುದರ ಬಗ್ಗೆ ಮಾಹಿತಿ ನೀಡುತ್ತಲೇ ಹಲವರು ಶೀಘ್ರ ಗುಣಮುಖರಾಗಿ ಎಂದು ಹಾರೈಸಿದ್ದಾರೆ. ಅವರು ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ತಮ್ಮ ಎಲ್ಲಾ ಚುನಾವಣಾ ರ್ಯಾಲಿಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದ್ದರು.
ಇದನ್ನೂ ಓದಿ: 18-45 ವರ್ಷ ವಯಸ್ಸಿನವರಿಗೆ ಲಸಿಕೆ ಉಚಿತವಲ್ಲ: ಕೇಂದ್ರದ ತಾರತಮ್ಯಕ್ಕೆ ರಾಹುಲ್ ಗಾಂಧಿ ಆಕ್ಷೇಪ


