Homeಕರ್ನಾಟಕಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ: ಬಿಎಸ್‌ವೈ ವಿರುದ್ಧ ಬಿಜೆಪಿ ಹೈಕಮಾಂಡ್ ತಂತ್ರವೇ?

ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ: ಬಿಎಸ್‌ವೈ ವಿರುದ್ಧ ಬಿಜೆಪಿ ಹೈಕಮಾಂಡ್ ತಂತ್ರವೇ?

- Advertisement -
- Advertisement -

ದೇಶದಾದ್ಯಂತ ಕೊರೊನಾ ಸೋಂಕಿನ ಎರಡನೆ ಅಲೆ ತೀವ್ರ ರೀತಿಯಲ್ಲಿ ಹಬ್ಬುತ್ತಿದ್ದು, ಹಲವಾರು ರಾಜ್ಯಗಳಲ್ಲಿ ಸೋಂಕಿತರು ಬೆಡ್, ಆಮ್ಲಜನಕ, ಔಷಧಿ ಸಿಗದೇ ಪರದಾಡುತ್ತಿದ್ದಾರೆ. ರಾಜ್ಯದಲ್ಲಿ ಕೂಡಾ ಕೊರೊನಾ ತನ್ನ ತೀವ್ರತೆಯನ್ನು ಹೆಚ್ಚಿಸಿಕೊಳ್ಳುತ್ತಿದೆ. ಈ ಹೊತ್ತಲ್ಲಿ ರಾಜ್ಯದ ಬಿಜೆಪಿ ಸರ್ಕಾರವು ಹೆಚ್ಚಿನ ಯಾವುದೆ ಸೌಲಭ್ಯಗಳನ್ನು ಮಾಡುತ್ತಿರುವಂತೆ ತೋರುತ್ತಿಲ್ಲ. ಎರಡನೆ ಬಾರಿಗೆ ಕೊರೊನಾ ಸೋಂಕು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ಯಡಿಯೂರಪ್ಪ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಈ ನಡುವೆ ರಾಜ್ಯದಲ್ಲಿ ಚುನಾಯಿತ ಸರ್ಕಾರ ಇರಬೇಕಾದರೆ ರಾಜ್ಯಪಾಲರು ಸರ್ವಪಕ್ಷಗಳ ಸಭೆಯನ್ನು ನಡೆಸಿ ಅನಧೀಕೃತವಾಗಿ ರಾಜ್ಯದ ಆಡಳಿತ ಯಂತ್ರವನ್ನು ಕೈಗೆತ್ತಿಕೊಂಡಿದ್ದಾರೆ. ಇದು ರಾಜ್ಯದ ಮುಖ್ಯಮಂತ್ರಿಯ ಬದಲಾವಣೆಗೆ ವೇದಿಕೆ ತಯಾರಾಗುತ್ತಿದೆಯೆ ಎಂಬ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ರಾಜ್ಯ ಬಿಜೆಪಿಯಲ್ಲಿ ಆಂತರಿಕ ಕಲಹ ನಡೆದಿದ್ದು, ರಾಜ್ಯಗಳು ತಮ್ಮ ಸ್ವಾಯತ್ತತೆ ಕಳೆದುಕೊಳ್ಳುವಂತೆ ಬಿಜೆಪಿ ಹೈಕಮಾಂಡ್ ಮಾಡುತ್ತಿದೆ ಎಂದು ಆರೋಪಗಳು ಎದ್ದಿದೆ. ಆರೋಪವನ್ನು ಸಮರ್ಥಿಸುವಂತೆ ಚುನಾಯಿತ ಸರ್ಕಾರ ಇದ್ದಾಗಲು ರಾಜ್ಯಪಾಲರು ಸರ್ವಪಕ್ಷಗಳ ಸಭೆಯನ್ನು ಕರೆದಿದ್ದಾರೆ. ಬಿಜೆಪಿ ಪಕ್ಷದೊಳಗೆ ಯಡಿಯೂರಪ್ಪ ವಿರುದ್ದ ಮೊದಲಿನಿಂದಲೂ ಅಸಮಾಧಾನಗಳು ಇದ್ದವು. ಹಲವಾರು ಬಿಜೆಪಿ ನಾಯಕರು ಬಹಿರಂಗವಾಗಿಯೆ ಯಡಿಯೂರಪ್ಪ ಅವರ ವಿರುದ್ದ ಕಿಡಿಕಾರಿದ್ದರು. ಬಿಜೆಪಿಯ ಉನ್ನತ ನಾಯಕರಿಗೂ ಬಿಎಸ್‌ವೈ ಮುಖ್ಯಮಂತ್ರಿ ಆಗುವುದು ಬೇಕಿರಲಿಲ್ಲ. ಆದರೆ ಯಡಿಯೂರಪ್ಪ ಅವರ ಜಾತಿ ಬಲ, ನಾಯಕತ್ವ ಇವೆಲ್ಲವನ್ನು ಕಟ್ಟಿ ಹಾಕುವಂತಾಗಿತ್ತು.

ಇದನ್ನೂ ಓದಿ: ಸೋಂಕಿನಿಂದ ತತ್ತರಿಸಿರುವ ರಾಜ್ಯಗಳಿಗೆ ನೆರವಿನ ಹಸ್ತ ಬೇಕಿದೆ, ಬುರುಡೆ ಮಾತಲ್ಲ: ಪ್ರಧಾನಿಗೆ ಸಿದ್ದರಾಮಯ್ಯ

ಇನ್ನು ರಾಜ್ಯಪಾಲರು ಕರೆದಿದ್ದ ಸರ್ವಪಕ್ಷಗಳ ಸಭೆಗೆ ಪ್ರತಿಪಕ್ಷ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿತ್ತು. ಅಂದು ಟ್ವೀಟ್‌‌ ಮಾಡಿದ್ದ ಕಾಂಗ್ರೆಸ್‌, “ರಾಜ್ಯಪಾಲರು ಸರ್ವಪಕ್ಷ ಸಭೆ ಕರೆದಿರುವುದು ಏನು ಸೂಚಿಸುತ್ತದೆ? ರಾಜ್ಯದಲ್ಲಿ ಚುನಾಯಿತ ಸರ್ಕಾರವಿಲ್ಲವೇ? ಸರ್ಕಾರದ ಅಸಾಮರ್ಥ್ಯವೇ ಅಥವಾ ಬಿಎಸ್‌ವೈ ಮುಕ್ತ ಬಿಜೆಪಿ ಅಭಿಯಾನದ ಭಾಗವೇ? ಎಂದು ಪ್ರಶ್ನಿಸಿತ್ತು. ಜೊತೆಗೆ ಆಡಳಿತ ಪಕ್ಷದವರಾದ ಸಚಿವ ಈಶ್ವರಪ್ಪ ಕೂಡಾ ಸಭೆಯ ಬಗ್ಗೆ ಅಪಸ್ವರ ಎತ್ತಿದ್ದರು.

ಇಷ್ಟಕ್ಕೆ ನಿಲ್ಲದೆ ರಾಜ್ಯಪಾಲರು, ಬುಧವಾರದಂದು ವಿಶ್ವವಿದ್ಯಾಲಯಗಳಲ್ಲಿ ಕೋವಿಡ್‌ ನಿರ್ವಹಣೆ ಕುರಿತು ಕುಲಪತಿಗಳ ಸಮಾವೇಶವನ್ನು ಕೂಡಾ ತಮ್ಮ ಅಧ್ಯಕ್ಷತೆಯಲ್ಲಿ ನಡೆಸಿದ್ದಾರೆ. ರಾಜಭವನದಲ್ಲಿ ಬುಧವಾರ ಸಂಜೆ ರಾಜ್ಯಪಾಲರು ಕರೆದಿದ್ದ ಸಮಾವೇಶದಲ್ಲಿ ವಿಶ್ವವಿದ್ಯಾಲಯಗಳು, ಅವುಗಳ ವ್ಯಾಪ್ತಿಯಲ್ಲಿರುವ ಕಾಲೇಜುಗಳು, ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಕೋವಿಡ್‌ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಎಲ್ಲ ಕುಲಪತಿಗಳಿಗೆ ಸೂಚಿಸಿದ್ದಾರೆ.

ರಾಜ್ಯಪಾಲರ ಈ ನಡೆಯ ಹಿಂದೆ ಆರ್‌ಎಸ್‌ಎಸ್‌ ಹಿನ್ನೆಲೆಯ ಬಿ.ಎಲ್ ಸಂತೋಷ್ ಇದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದೆ. ಇದೀಗ ಮುಖ್ಯಮಂತ್ರಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿನ ಪರಿಸ್ಥಿತಿ ಕೆಟ್ಟದಾಗಿದೆ. ಜೊತೆಗೆ ರಾಜಕೀಯವು ನಡೆಯುತ್ತಿದೆ. ಇದೆಲ್ಲವೂ ಎಲ್ಲಿಗೆ ಹೋಗಿ ಮುಟ್ಟುತ್ತದೆ ಕಾದು ನೋಡಬೇಕಿದೆ.

ಇದನ್ನೂ ಓದಿ: ಕೇರಳದ ಪ್ರತಿಯೊಬ್ಬರಿಗೂ ಉಚಿತ ಲಸಿಕೆ: ಸಿಎಂ ಪಿಣರಾಯಿ ವಿಜಯನ್ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...