Homeಕರ್ನಾಟಕಏರ್‌ಪೋರ್ಟ್-ಸಿಲ್ಕ್‌ಬೋರ್ಡ್ ಮೆಟ್ರೋ ಕಾಮಗಾರಿ ವಿಳಂಬಕ್ಕೆ ಮೋದಿಯವರೆ ಹೊಣೆಯೇ?: ಜಾಹೀರಾತಿಗೆ ಕೋಟಿ ರೂ ಖರ್ಚು ಏಕೆ?

ಏರ್‌ಪೋರ್ಟ್-ಸಿಲ್ಕ್‌ಬೋರ್ಡ್ ಮೆಟ್ರೋ ಕಾಮಗಾರಿ ವಿಳಂಬಕ್ಕೆ ಮೋದಿಯವರೆ ಹೊಣೆಯೇ?: ಜಾಹೀರಾತಿಗೆ ಕೋಟಿ ರೂ ಖರ್ಚು ಏಕೆ?

- Advertisement -
- Advertisement -

ಇಂದು ದೇಶದ್ಯಾಂತ ಪ್ರಮುಖ ದಿನಪತ್ರಿಕೆಗಳಲ್ಲಿ “ಬೆಂಗಳೂರು ಮೆಟ್ರೋ ಹಂತ II ಎ ಮತ್ತು II ಬಿ ಗೆ (ಬೆಂಗಳೂರಿನ ಏರ್‌ಪೋರ್ಟ್-ಕೆ.ಆರ್ ಪುರಂ- ಸಿಲ್ಕ್‌ಬೋರ್ಡ್ ಮೆಟ್ರೋ ಮಾರ್ಗ) ಕೇಂದ್ರ ಕ್ಯಾಬಿನೆಟ್ ಅನುಮೋದನೆ ನೀಡಿದ್ದಕ್ಕೆ ನರೇಂದ್ರ ಮೋದಿಯವರಿಗೆ ಧನ್ಯವಾದಗಳು” ಹೆಸರಿನಲ್ಲಿ ಪೂರ್ಣ ಪುಟದ ಜಾಹೀರಾತನ್ನು ಕರ್ನಾಟಕ ಸಿಎಂ ಯಡಿಯೂರಪ್ಪನವರು ನೀಡಿದ್ದಾರೆ. ಇದರ ವಿರುದ್ದ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಟೀಕೆ ಕೇಳಿಬಂದಿದ್ದು, ಈ ಮೆಟ್ರೋ ಕಾಮಗಾರಿ ವಿಳಂಬಕ್ಕೆ ಮೋದಿಯವರೆ ಹೊಣೆಯೇ?, ಜನ ಸಂಕಷ್ಟದಲ್ಲಿರುವಾಗ ಜಾಹೀರಾತಿಗೆ ಕೋಟಿ ರೂ ಖರ್ಚು ಏಕೆ? ಎಂಬ ಪ್ರಶ್ನೆಗಳು ಎದ್ದಿವೆ.

ರಾಜ್ಯ ಸರ್ಕಾರವು 3 ವರ್ಷಗಳ ಹಿಂದೆಯೇ (ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ) ಈ ಮಾರ್ಗಗಳನ್ನು ಅನುಮೋದಿಸಿ, ಭೂಸ್ವಾಧೀನವನ್ನು ಪೂರ್ಣಗೊಳಿಸಿತು ಮತ್ತು ಟೆಂಡರ್ ಸಹ ಮಾಡಿತು. ಆದರೆ ಕೇಂದ್ರ ಕ್ಯಾಬಿನೆಟ್ ಅನುಮೋದನೆಗಾಗಿ ಇಷ್ಟು ದಿನ ಏಕೆ ಕಾಯಬೇಕಾಯಿತು, ಇಷ್ಟು ವರ್ಷ ಏಕೆ ತಡೆಹಿಡಿಯಿತು ಎಂದು ಡಾ.ಎಚ್.ವಿ ವಾಸು, ಪ್ರೊ.ಪುರುಷೋತ್ತಮ ಬಿಳಿಮಲೆ ಸೇರಿದಂತೆ ಹಲವರು ಪ್ರಶ್ನಿಸಿದ್ದಾರೆ.

ಯಡಿಯೂರಪ್ಪನವರು ನೀಡಿರುವ ಜಾಹೀರಾತಿನಲ್ಲಿ 5 ವರ್ಷಗಳಲ್ಲಿ ಪೂರೈಸುವ ಈ ಯೋಜನೆಗೆ 14,778 ಕೋಟಿ ರೂಗಳಿಗೆ ಅನುಮೋದನೆ ನೀಡಿದೆ ಎಂದು ಘೋಷಿಸಿದ್ದಾರೆ. ಅದು  ಮೆಟ್ರೋದ 2‌A ಮತ್ತು 2‌Bಯ ಒಟ್ಟು ಯೋಜನಾ ವೆಚ್ಚವಾಗಿದೆ. ಅಂದರೆ ಬೆಂಗಳೂರು ಮೆಟ್ರೋ ಹಂತ 2 (ಎ) ಮತ್ತು 2 (ಬಿ) ಯೋಜನೆಯ ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್‌ನಿಂದ ಕೆ.ಆರ್.ಪುರಂ ಮತ್ತು ಕೆ.ಆರ್.ಪುರಂನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದವರೆಗೆ 58.19 ಕಿ.ಮೀ ವಿಸ್ತರಣೆಗೆ 14,788 ಕೋಟಿ ರೂ. ಒಟ್ಟು ಯೋಜನಾ ವೆಚ್ಚ. ಇದರ ಪೂರ್ತಿ ಹಣವನ್ನು ಕೇಂದ್ರ ಸರ್ಕಾರ ನೀಡುವುದಿಲ್ಲ. ಕೇಂದ್ರ ಸಣ್ಣ ಪಾಲನ್ನಷ್ಟೇ ನೀಡುತ್ತದೆ. ರಾಜ್ಯಗಳೇ ಹೆಚ್ಚಿನ ಪಾಲು ಭರಿಸಿದರೂ ಅದರ ಕ್ರೆಡಿಟ್‌ ಅನ್ನು ಕೇಂದ್ರ ಸರ್ಕಾರಕ್ಕೆ ಏಕೆ ನೀಡಬೇಕು ಎಂದು ಅವರು ಪ್ರಶ್ನಿಸಿದ್ದಾರೆ.

ಇದರಲ್ಲಿ ಕೇಂದ್ರ ಸರ್ಕಾರವು ನೇರ ಅನುದಾನವನ್ನಾಗಿ ಶೇಕಡಾ 15 ರಷ್ಟನ್ನು ನೀಡುತ್ತದೆ. ಶೇ. 35 ರಷ್ಟು ಹಣವನ್ನು ರಾಜ್ಯ ಸರ್ಕಾರ ಭರಿಸಿದರೆ, ಶೇ.35 ರಷ್ಟು ಹಣವನ್ನು ಕೇಂದ್ರ ಸರ್ಕಾರದ ಬಹುಪಕ್ಷೀಯ ಮತ್ತು ದ್ವಿಪಕ್ಷೀಯ ಅಭಿವೃದ್ಧಿ ಸಂಸ್ಥೆಗಳ ಮೂಲಕ ಸಾಲ ಪಡೆಯಬೇಕಾಗಿದೆ. ಉಳಿದ ಶೇ.15 ರಷ್ಟು ಹಣವನ್ನು ಖಾಸಗಿ ವಲಯದಿಂದ ಸಂಗ್ರಹಿಸಲಾಗುತ್ತದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವಿವರವಾದ ವರದಿ ಮಾಡಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಅರುಣ್ ಜಾವಗಲ್ “ಹಲವು ವರ್ಷಗಳಿಂದ ಈ ಯೋಜನೆ ಅನುಮೋದನೆಗಾಗಿ ಕಾಯುತ್ತಿದೆ. ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ಬೆಂಗಳೂರು ಮೆಟ್ರೋ ಹಂತ II ಎ ಮತ್ತು II ಬಿ ಮಾರ್ಗಕ್ಕಾಗಿ ಬೇಕಾಗುವ ಹಣದಲ್ಲಿ ಶೇ.50 ಅನುದಾವನ್ನು ಕೇಂದ್ರ ಸರ್ಕಾರ ನೀಡಬೇಕೆಂದು ಒತ್ತಾಯಿಸಿದ್ದರು. ಆದರೆ ಅದಕ್ಕೆ ಕೇಂದ್ರ ಸರ್ಕಾರ ಒಪ್ಪಿರಲಿಲ್ಲ. ಈಗಲೂ ತಾನು ಕೊಡಬೇಕಾದ ಪಾಲನ್ನು ಕೇಂದ್ರ ಸರ್ಕಾರ ಕೊಡುತ್ತದೆ ಎಂಬುದರಲ್ಲಿ ನಂಬಿಕೆಯಿಲ್ಲ. ಇನ್ನು ಈ ಯೋಜನೆಗಾಗಿ ಸಾಲ ಮಾಡುವುದರಲ್ಲಿ ಎಷ್ಟನ್ನು ಕೇಂದ್ರ ಸರ್ಕಾರ ತೀರಿಸುತ್ತದೆ ಎಂಬುದನ್ನು ಸ್ಪಷ್ಟಪಡಿಸಿಲ್ಲ. ಈ ಕುರಿತು ಯಡಿಯೂರಪ್ಪನವರು ಸಾರ್ವಜನಿಕರಿಗೆ ಪಾರದಾರ್ಶಕ ಮಾಹಿತಿ ನೀಡಬೇಕೆಂದು” ಒತ್ತಾಯಿಸಿದರು.

ಇನ್ನು ಈ ಯೋಜನೆಗೆ ದೇಶಾದ್ಯಂತ ರಾಜ್ಯ ಸರ್ಕಾರದ ಹಣದಲ್ಲಿ ಜಾಹೀರಾತು ನೀಡುವ ಅಗತ್ಯವೇನಿತ್ತು ಎಂದು ಪ್ರಶ್ನಿಸಿರುವ ಅವರು, ಒಂದು ಕಡೆ ಸರಕಾರದ ಬಳಿ ದುಡ್ಡಿಲ್ಲ ಅಂತಾರೆ, ಇನ್ನೊಂದು ಕಡೆ ಪುಟಗಟ್ಟಲೇ ಜಾಹಿರಾತು ನೀಡ್ತಾರೆ. ಕೇಂದ್ರ ಸರಕಾರ ಕರ್ನಾಟಕದ ಯೋಜನೆಗೆ ದುಡ್ಡು ಕೊಡೋದು ನಾವು ಕೊಟ್ಟ ತೆರಿಗೆ ಹಣದಿಂದಲೇ. ಅಕಸ್ಮಾತ್ ನಿಮಗೆ ಏನಾದ್ರೂ ಧನ್ಯವಾದ ಹೇಳಬೇಕು ಅಂದ್ರೆ ನಿಮ್ಮ ಸ್ವಂತ ದುಡ್ಡಲ್ಲಿ ಜಾಹಿರಾತು ನೀಡಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿಯವರು ಈ ಕುರಿತು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಇಂದು ನಾವು ಸಾವಿನ ಮನೆಯಲ್ಲಿದ್ದೇವೆ. ಇಂತಹ ಸಮಯದಲ್ಲಿ ರಾಜ್ಯಸರ್ಕಾರ ಮೆಟ್ರೋಗೆ ಕೇಂದ್ರ ಸರ್ಕಾರ ಹಣ ನೀಡುತ್ತಿದೆ ಎಂದು ದೊಡ್ಡ ದೊಡ್ಡ ಜಾಹೀರಾತು ನೀಡುತ್ತಿದೆ ಎಂದರೆ ಈ ಸರ್ಕಾರಕ್ಕೆ ಇನ್ನು ಬುದ್ದಿ ಬಂದಿಲ್ಲ ಎಂದರ್ಥ. ಇಂತಹ ವಿಷಮ ಪರಿಸ್ಥಿತಿಯಲ್ಲಿ ಜಾಹೀರಾತುಗಳ ಅವಶ್ಯಕತೆ ಇದೆಯೇ ಎಂಬುದನ್ನು ಈ ಮುರ್ಖ ಸರ್ಕಾರ ಮನವರಿಕೆ ಮಾಡಿಕೊಳ್ಳಬೇಕು. ರಾಜ್ಯದಲ್ಲಿ ಬೆಡ್‌ಗಳಿಲ್ಲ, ಆಕ್ಸಿಜನ್, ಔ‍‍ಷಧಿ ಕೊರತೆಯಿಂದ ಜನ ಸಾಯುತ್ತಿರುವ ಪರಿಸ್ಥಿತಿಯಲ್ಲಿ ಜಾಹೀರಾತು ನೀಡುವ ಮೂಲಕ ಸಾವಿನ ಮನೆಯ ಜನರೊಂದಿಗೆ ಚೆಲ್ಲಾಟವಾಡುತ್ತಿದ್ದೀರಿ” ಎಂದು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಕೇಂದ್ರ ಬಜೆಟ್‌ನಲ್ಲಿ ಏರ್‌ಪೋರ್ಟ್-ಸಿಲ್ಕ್‌ಬೋರ್ಡ್ ಮೆಟ್ರೋ ಕಾಮಗಾರಿಗೆ 15,000 ಕೋಟಿ ಮಂಜೂರು?: ವಾಸ್ತವವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...