Homeಕರೋನಾ ತಲ್ಲಣಬೆಡ್‌ಗಾಗಿ ಸೋಂಕಿತರ ಪರದಾಟ: ಬೆಂಗಳೂರಿನ 10,100 ಬೆಡ್‌ಗಳ ದೇಶದ ಅತಿದೊಡ್ಡ ಕೋವಿಡ್ ಕೇರ್ ಸೆಂಟರ್ ಏನಾಯಿತು?

ಬೆಡ್‌ಗಾಗಿ ಸೋಂಕಿತರ ಪರದಾಟ: ಬೆಂಗಳೂರಿನ 10,100 ಬೆಡ್‌ಗಳ ದೇಶದ ಅತಿದೊಡ್ಡ ಕೋವಿಡ್ ಕೇರ್ ಸೆಂಟರ್ ಏನಾಯಿತು?

- Advertisement -
- Advertisement -

ಕೋವಿಡ್ ಎರಡನೇ ಅಲೆಗೆ ಇಡೀ ದೇಶವೇ ತತ್ತರಿಸಿದೆ. ಎಲ್ಲೆಡೆ ಬೆಡ್‌ಗಾಗಿ, ಆಕ್ಸಿಜನ್‌ ಮತ್ತು ಔಷಧಿಗಾಗಿ ಆಹಾಕಾರ ಎದ್ದಿದೆ. ಕರ್ನಾಟಕದಲ್ಲಿಯೂ ಪರಿಸ್ಥಿತಿ ಮಿತಿ ಮೀರಿದ್ದು ಬೆಡ್‌ ಸಿಗದೇ ರಸ್ತೆಯಲ್ಲಿ, ಬೀದಿಬದಿಯಲ್ಲಿ ರೋಗಿಗಳು ಪರದಾಡುತ್ತಿರುವ ದೃಶ್ಯಗಳು ದಿನನಿತ್ಯ ವರದಿಯಾಗುತ್ತಿವೆ. ಕರ್ನಾಟಕಕ್ಕೆ ಇಂತಹ ಪರಿಸ್ಥಿತಿ ಏಕೆ ಬಂತು? ಕಳೆದ ಕೊರೊನಾ ಸೋಂಕು ಗೋಚರಿಸಿ 15 ತಿಂಗಳಾದರೂ ವೈದ್ಯಕೀಯ ಕ್ಷೇತ್ರವನ್ನು ಸಜ್ಜುಗೊಳಿಸಲು ರಾಜ್ಯ ಸರ್ಕಾರ ವಿಫಲವಾಗಿದ್ದೇಕೆ ಎಂಬ ಪ್ರಶ್ನೆಗೆ ಬಿ.ಎಸ್ ಯಡಿಯೂರಪ್ಪನವರು ಉತ್ತರಿಸುವರೆ?

ಇನ್ನು ಕಳೆದ ವರ್ಷ ಕೋವಿಡ್ ಪ್ರಕರಣಗಳು ತೀವ್ರಗತಿಯಲ್ಲಿ ಏರಿಕೆಯಾಗುತ್ತಿದ್ದಾಗ ಚಿಕಿತ್ಸೆ ಮತ್ತು ರೋಗಿಗಳ ಐಸೋಲೇಶನ್‌ಗಾಗಿ 10,100 ಹಾಸಿಗೆಗಳನ್ನು ಹೊಂದಿರುವ ದೇಶದ ಅತಿದೊಡ್ಡ ಕೋವಿಡ್ ಕೇರ್ ಸೆಂಟರ್ ಅನ್ನು ತುಮಕೂರು ರಸ್ತೆಯ ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ (ಬಿಐಇಸಿ) ತೆರೆದಿತ್ತು. ಇದಕ್ಕಾಗಿ ರಾಜ್ಯ ಸರ್ಕಾರ ಕೋಟ್ಯಂತರ ರೂ ಖರ್ಚು ಮಾಡಿ ಭಾರೀ ಪ್ರಚಾರ ಗಿಟ್ಟಿಸಿತ್ತು.

ಆ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಮಾತನಾಡಿ “ಈ ಸಾಂಕ್ರಾಮಿಕ ರೋಗವು ಇನ್ನೂ ಕೆಲವು ತಿಂಗಳುಗಳ ಕಾಲ ಉಳಿಯುತ್ತದೆ, ಮತ್ತು ಅದನ್ನು ನಿಭಾಯಿಸಲು ರಾಜ್ಯ ಸರ್ಕಾರ ಸಜ್ಜಾಗಿದೆ. ಅದರ ಭಾಗವಾಗಿ ದೇಶದ ಅತಿದೊಡ್ಡ ಕೋವಿಡ್ ಕೇರ್ ಸೆಂಟರ್ ಅನ್ನು ಸ್ಥಾಪಿಸುತ್ತಿದ್ದೇವೆ ಎಂದಿದ್ದರು. ಐಸಿಯು ರೋಗಿಗಳಿಗೆ 100 ಸೇರಿದಂತೆ 10,100 ಹಾಸಿಗೆಗಳೊಂದಿಗೆ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಹೊಂದಿರುವ ಕೇಂದ್ರ ಇದಾಗಿದ್ದು ಹಿರಿಯ ಐಎಎಸ್ ಅಧಿಕಾರಿಗಳ ತಂಡವು ಇದನ್ನು ಸ್ಥಾಪಿಸಿದೆ” ಎಂದಿದ್ದರು.

ವೈದ್ಯರು ಮತ್ತು ಪೊಲೀಸರು ಸೇರಿದಂತೆ 2,200 ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ಇಲ್ಲಿ ನಿಯೋಜಿಸಲಾಗುವುದು. ಪ್ರತಿ 100 ರೋಗಿಗಳಿಗೆ ಒಬ್ಬ ವೈದ್ಯರು, ಇಬ್ಬರು ದಾದಿಯರು, ಇಬ್ಬರು ಶುಚಿಗೊಳಿಸುವ ಸಿಬ್ಬಂದಿ ಮತ್ತು ಮಾರ್ಷಲ್‌ಗಳು ಇರುತ್ತಾರೆ. ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ವ್ಯವಸ್ಥೆ, ಮತ್ತು ಲಾಂಡ್ರಿಗಾಗಿ ಮೀಸಲಾದ ತಂಡ, ಬೆಡ್‌ಶೀಟ್‌ಗಳು, ಕಂಬಳಿಗಳು ಮತ್ತು ಮೆತ್ತೆ ಕವರ್‌ಗಳನ್ನು ತೊಳೆಯಲು ವ್ಯವಸ್ಥೆ ಇದೆ. ಕಡಿಮೆ ರೋಗಲಕ್ಷಣದ ರೋಗಿಗಳನ್ನು ಇಲ್ಲಿ ಇರಿಸಲಾಗುವುದು, ಹಾಸಿಗೆಯ ವ್ಯವಸ್ಥೆಗಾಗಿ ಕೇಂದ್ರೀಕೃತ ವ್ಯವಸ್ಥೆಯನ್ನು ಹೊಂದಿರುತ್ತದೆ. ಐಸಿಯು, ಇಸಿಜಿ ಮತ್ತು ಆಮ್ಲಜನಕ ಬೆಂಬಲ ಸೌಲಭ್ಯಗಳೂ ಇವೆ, ಮತ್ತು ಹತ್ತಿರದ ಆಸ್ಪತ್ರೆಯಲ್ಲಿ ಸ್ಥಾಪಿಸಲಾದ ನಿಯಂತ್ರಣ ಕೊಠಡಿಯು ಈ ಸೆಂಟರ್‌ಅನ್ನು 24×7 ಮೇಲ್ವಿಚಾರಣೆ ಮಾಡುತ್ತದೆ. “ಕೇಂದ್ರ ತಂಡವು ಈ ಸೆಂಟರ್‌ಗೆ ಭೇಟಿ ನೀಡಿ, ವ್ಯವಸ್ಥೆಗಳನ್ನು ಶ್ಲಾಘಿಸಿದೆ. ಕೊರೊನಾ ಮಾರ್ಗಸೂಚಿಗಳನ್ನು ಅನ್ಲಾಕ್ ಮಾಡಿದ ನಂತರ ಪ್ರಕರಣಗಳು ಏರಿಕೆಯಾದಲ್ಲಿ ಅವರನ್ನು ಇಲ್ಲಿ ದಾಖಲಿಸಲಾಗುತ್ತಿದೆ. ನಾವು ಸಜ್ಜುಗೊಂಡಿದ್ದೇವೆ’’ ಎಂದು ಯಡಿಯೂರಪ್ಪ ದೃಢವಾಗಿ ಹೇಳಿದ್ದರು.

ಇದಕ್ಕೆ ಮಾಧ್ಯಮಗಳು ಸಾಕಷ್ಟು ಮಹತ್ವ ಕೊಟ್ಟು ವರದಿ ಮಾಡಿದ್ದವು. ಇದು ಸಾರ್ವಜನಿಕರಲ್ಲಿ ಭರವಸೆ ಮೂಡಿಸಿತ್ತು. ನಿಜಕ್ಕೂ ಅಂತಹ ವ್ಯವಸ್ಥೆ ಅಂದಿಗಿಂತ ಇಂದು ತುರ್ತು ಅಗತ್ಯವಿದೆ. ಆದರೆ ನೀವೀಗ ತುಮಕೂರು ರಸ್ತೆಯ ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರಕ್ಕೆ ಹೋಗಿ ನೋಡಿದರೆ ಈ ದೇಶದ ಅತಿದೊಡ್ಡ ಕೋವಿಡ್ ಕೇರ್ ಸೆಂಟರ್ ಮಾಯವಾಗಿರುವುದು ನಿಮ್ಮ ಗಮನಕ್ಕೆ ಬರುತ್ತದೆ. ಕಳೆದ ವರ್ಷ ಜುಲೈ 27ರಂದು ಉದ್ಘಾಟನೆಯಾದ ಈ ಕೇಂದ್ರ ಈಗ ಉಪಯೋಗಕ್ಕೆ ಸಿಗುತ್ತಿಲ್ಲ ಏಕೆ?

ಏಕೆಂದರೆ ಉದ್ಘಾಟನೆಯಾದ ಒಂದೂವರೆ ತಿಂಗಳಿನಲ್ಲಿಯೇ ಸರ್ಕಾರ ಈ ಸೆಂಟರ್ ಅನ್ನು ಮುಚ್ಚಿಬಿಟ್ಟಿದೆ. ಅದಕ್ಕೆ ಕಾರಣ ಹೆಚ್ಚಿನ ಸೋಂಕಿತರು ದಾಖಲಾಗುತ್ತಿಲ್ಲವೆಂಬುದಾಗಿದೆ! ಸೆಪ್ಟಂಬರ್ 05 ರಂದು ಈ ಕುರಿತು ತೀರ್ಮಾನ ತೆಗೆದುಕೊಂಡ ಬಿಬಿಎಂಪಿ ಸೆಪ್ಟಂಬರ್ 15ಕ್ಕೆ ಇದಕ್ಕೆ ಎಳ್ಳುನೀರು ಬಿಟ್ಟಿದೆ. ಇದು ಕಾರ್ಯ ನಿರ್ವಹಿಸುತ್ತಿದ್ದಾಗಲೂ ಅಗತ್ಯ ಮೂಲಸೌರ್ಕರ್ಯಗಳಿಲ್ಲ, ಸಾಮಾಗ್ರಿ ಖರೀದಿಯಲ್ಲಿ ಕೋಟ್ಯಂತರ ರೂ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಗಳು ಕೇಳಿಬಂದಿದ್ದವು..

ಇದನ್ನೂ ಓದಿ: ಒಂದೂವರೆ ತಿಂಗಳಷ್ಟೇ ಬಳಕೆ: ಬೆಂಗಳೂರಿನ ಅತಿ ದೊಡ್ಡ ಕೋವಿಡ್ ಕೇರ್ ಸೆಂಟರ್ ಮುಚ್ಚಲು ನಿರ್ಧಾರ!

ಅದೇನೇ ಇರಲಿ ಇಂದು ಆ ಕೋವಿಡ್ ಕೇರ್ ಇದ್ದಿದ್ದೇ ಆದಲ್ಲಿ ಜನ ಇಷ್ಟು ಪ್ರಮಾಣದಲ್ಲಿ ಬೆಡ್ ಇಲ್ಲದೆ ಬೀದಿಯಲ್ಲಿ ಸಾಯುವು ನರಳುವ ಪರಿಸ್ಥಿತಿ ಬರುತ್ತಿತ್ತೇ? ಜನ ಬಾರದಿದ್ದರೂ ಪರವಾಗಿಲ್ಲ ಮುಂದೆ ಬೇಕಾಗುತ್ತದೆ ಎಂಬ ಮುನ್ನೋಟದೊಂದಿಗೆ ಅದನ್ನು ಉಳಿಸಿಕೊಂಡಿದ್ದರೆ ಇಂದು ರಾಜ್ಯದಲ್ಲಿ ಭೀಕರ ಪರಿಸ್ಥಿತಿ ಬರುತ್ತಿರಲಿಲ್ಲ ಅಲ್ಲವೇ?

ಅಂದು ಪ್ರಕರಣಗಳು ಹೆಚ್ಚಾಗುತ್ತವೆ, ನಾವು ಸಜ್ಜಾಗಿದ್ದೇವೆ ಎಂದು ವೀರಾವೇಶದಿಂದ ಮಾತನಾಡಿದ್ದ ಯಡಿಯೂರಪ್ಪನವರು ಈಗ ಏನು ಮಾಡುತ್ತಿದ್ದಾರೆ? ಆರೋಗ್ಯ ಇಲಾಖೆಯ ಅಂಕಿ ಅಂಶಗಳ ಪ್ರಚಾರ ಕರ್ನಾಟಕದಲ್ಲಿ ಏಪ್ರಿಲ್ 21 ರಂದು ಒಟ್ಟು 116 ಸಾವುಗಳು ಸಂಭವಿಸಿ, 23,558 ಹೊಸ ಪ್ರಕರಣಗಳು ವರದಿಯಾಗಿವೆ. ಅದರಲ್ಲಿ ಬೆಂಗಳೂರು ಒಂದರಲ್ಲೆ ಇದುವರೆಗೂ 24,600 ಸಕ್ರಿಯ ಪ್ರಕರಣಗಳಿವೆ. ಇಂದು ಆ ಸೆಂಟರ್ ಇದ್ದಲ್ಲಿ ಎಷ್ಟು ಜನ ಅದರ ಪ್ರಯೋಜನ ಪಡೆಯಬಹುದಿತ್ತಲ್ಲವೇ?

ಇದೇ ಸಂದರ್ಭದಲ್ಲಿ ಗಮನಿಸಬೇಕಾದ ಇನ್ನೊಂದು ಸಂಗತಿಯಿದೆ. ದೆಹಲಿಯಲ್ಲೂ ಸರ್ದಾರ್ ಪಟೇಲ್ ಕೋವಿಡ್ ಕೇರ್ ಸೆಂಟರ್ ಮತ್ತು ಆಸ್ಪತ್ರೆಯನ್ನು ನಿರ್ಮಿಸಲಾಗಿತ್ತು. ಅದಿನ್ನೂ ಉಳಿದುಕೊಂಡಿದ್ದು, ಅದಕ್ಕೆ ಈಗ ಪುನರ್ ಚಾಲನೆ ಕೊಡಲು ಉದ್ದೇಶಿಸಲಾಗಿದೆ. ಆದರೆ ಕರ್ನಾಟಕದಲ್ಲಿ ಪುನರ್ ಚಾಲನೆ ಕೊಡುವ ಪರಿಸ್ಥಿತಿಯಿಲ್ಲ. ಕನಿಷ್ಠ, ಅಲ್ಲಿ ಕೂಡಲೇ ಪುನರ್ ನಿರ್ಮಾಣಕ್ಕೆ ಮುಂದಾಗಿ ಒಂದು ವಾರದ ಒಳಗಾದರೂ ಆಕ್ಸಿಜನ್ ಸರಬರಾಜು ಇರುವ ಹಾಸಿಗೆಗಳಾಗಿ ಅದನ್ನು ಕಟ್ಟಲು ಈ ಸರ್ಕಾರವು ಮುಂದಾಗುತ್ತದೆಯೇ ಎಂಬುದು ಈಗಿನ ಪ್ರಶ್ನೆಯಾಗಿದೆ.

ಈ ಸಂಬಂಧ ಸರ್ಕಾರದ ಉತ್ತರ ಪಡೆಯಲು ಸಚಿವ ಸುಧಾಕರ್ ಅವರಿಗೆ ನಾನುಗೌರಿ.ಕಾಂ ಪ್ರಯತ್ನಿಸುತ್ತಿದ್ದು, ಅವರು ಇದುವರೆಗೂ ಸಿಕ್ಕಿಲ್ಲ. ಅವರು ಪ್ರತಿಕ್ರಿಯಿಸಿದರೆ ಇಲ್ಲಿ ಅದನ್ನು ಅಪ್ʼಡೇಟ್ ಮಾಡಲಾಗುವುದು.


ಇದನ್ನೂ ಓದಿ: ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ: ಸಾಂವಿಧಾನಿಕ ಉಲ್ಲಂಘನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈಗಲೂ ಕರ್ನಾಟಕದಲ್ಲಿ ಮಾಸ್ಕ್ ಹಾಕುವವರು ತೀರಾ ಕಡಿಮೆ. ಪೇಟೆಯಲ್ಲಿ ಪೊಲೀಸರಿಗೆ ಹೆದರಿ ಮಾಸ್ಕ್ ಧರಿಸಿದಂತೆ ತೋರುತ್ತದೆ. ವೈದ್ಯಕೀಯ ಪರಿಶೋಧನೆಯ ಸಂಖ್ಯೆಯೂ ಏನೇನೂ ಸಾಲದು.
    ಕೇರಳದಲ್ಲಿ ಮಾಡಿದಂತೆ ಪ್ರತಿಯೊಬ್ಬರನ್ನೂ ಟೆಸ್ಟ್ ಮಾಡಲಿ. ಆರೋಗ್ಯ ಇಲಾಖೆಗೆ ದಿನಕ್ಕೆ ಇಂತಿಷ್ಟು ಲಕ್ಷ ಜನರನ್ನು ಎಂದು ಟಾರ್ಗೆಟ್ ಕೊಟ್ಟು ಟೆಸ್ಟ್ ಮಾಡಲು ಕ್ರಮ ಕೈಗೊಳ್ಳಲಿ. ಆವಾಗ ಗೊತ್ತಾಗುವುದು ಕರ್ನಾಟಕದಲ್ಲಿಯ ಕೊರೋನಾ ವಿಜೃಂಭಣೆ. ಜನರನ್ನು ರಕ್ಷಿಸುವಲ್ಲಿ ಸರಕಾರ ಜವಾಬ್ದಾರಿ ತೆಗೆದುಕೊಳ್ಳಲಿ…. ಹೀಗೆ ರಾಜ್ಯಗಳೆಲ್ಲವೂ ಒಂದಾಗಿ ಶ್ರಮಿಸಲಿ. ಭಾರತ ರಕ್ಷೆಪಡುವುದು.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...