ಕೊರೊನಾ ಸಾಂಕ್ರಾಮಿಕ ರೋಗ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪರಿಸ್ಕೃತ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ಈಗಾಗಲೇ ರಾಜ್ಯದಲ್ಲಿ ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಜಾರಿ ಜೊತೆಗೆ ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅವರು ಹೊಸ ಮಾರ್ಗಸೂಚಿಯನ್ನು ಹೊರಡಿಸಿದ್ದು, ಈ ಮಾರ್ಗಸೂಚಿ ಪ್ರಕಾರ ಅಗತ್ಯ ಸೇವೆ ಬಿಟ್ಟು ಉಳಿದೆಲ್ಲ ಅಂಗಡಿ ಮಳಿಗೆಗಳನ್ನು ಬಂದ್ ಮಾಡಲು ಆದೇಶಿಸಿಸಲಾಗಿದೆ.
ಶಾಲಾ- ಕಾಲೇಜುಗಳು, ಸಿನೆಮಾ ಹಾಲ್‌ಗಳು, ಶಾಪಿಂಗ್ ಮಾಲ್‌ಗಳು, ಜಿಮ್ಗಳು, ಯೋಗ ಕೇಂದ್ರಗಳು, ಸ್ಪಾಗಳು, ಕ್ರೀಡಾ ಸಂಕೀರ್ಣಗಳು, ಸ್ಟೇಡಿಯಂ, ಈಜುಕೊಳಗಳು, ಉದ್ಯಾನಗಳು, ಕ್ಲಬ್‌ಗಳು, ಬಾರ್‌ಗಳಿಗೆ ನಿಷೇಧ ಹೇರಲಾಗಿದೆ.
ಇದನ್ನೂ ಓದಿ: ಭಿಕ್ಷೆ ಬೇಡಿ, ಸಾಲ ತನ್ನಿ ಇಲ್ಲವೇ ಕದ್ದುಕೊಂಡು ಬನ್ನಿ: ಆಮ್ಲಜನಕ ವಿಷಯವಾಗಿ ಕೇಂದ್ರದ ವಿರುದ್ಧ ಕಿಡಿಕಾರಿದ ಹೈಕೋರ್ಟ್
ರೆಸ್ಟೋರೆಂಟ್ ಮತ್ತು ಹೋಟೆಲ್ಗಳಲ್ಲಿ ಪಾರ್ಸೆಲ್‌ಗೆ ಅನುಮತಿ ನೀಡಲಾಗಿದೆ. ಮದುವೆ ಸಮಾರಂಭಗಳಲ್ಲಿ 50 ಮಂದಿ, ಅಂತ್ಯ ಸಂಸ್ಕಾರದಲ್ಲಿ 20 ಜನರಿಗಷ್ಟೇ ಭಾಗವಹಿಸಲು ಅವಕಾಶ. ಸರ್ಕಾರಿ ಕಚೇರಿಗಳಲ್ಲಿ ಶೇ. 50 ರಷ್ಟು ಸಿಬ್ಬಂದಿ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.
ಪಡಿತರ ಅಂಗಡಿಗಳು (ಪಿಡಿಎಸ್) ಸೇರಿದಂತೆ, ಆಹಾರ, ದಿನಸಿ, ಹಣ್ಣುಗಳು ಮತ್ತು ತರಕಾರಿಗಳು, ಡೈರಿ ಮತ್ತು ಹಾಲಿನ ಬೂತ್‌ಗಳು, ಮಾಂಸ ಮತ್ತು ಮೀನಿನ ಅಂಗಡಿ ತೆರೆಯಲು ಅನುಮತಿಸಲಾಗಿದೆ. ಮದ್ಯದಂಗಡಿಗಳು ಮತ್ತು ಬಾರ್‌ಗಳಲ್ಲಿ ಪಾರ್ಸೆಲ್‌ಗೆ ಅನುಮತಿ. ಬ್ಯಾಂಕುಗಳು, ವಿಮಾ ಕಚೇರಿಗಳು ಮತ್ತು ಎಟಿಎಂ, ಮುದ್ರಣ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮದವರಿಗೆ ಅನುಮತಿ ನೀಡಲಾಗಿದೆ.
ಐಟಿ-ಬಿಟಿ ವಲಯದ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂಗೆ ಅವಕಾಶ, ಪೆಟ್ರೋಲ್, ಡೀಸೆಲ್ ಬಂಕ್‌ಗಳು, ಅನಿಲ ಕೇಂದ್ರಗಳು ಸಂಪೂರ್ಣವಾಗಿ ಕಾರ್ಯಾಚರಣೆಯಲ್ಲಿ ಇರಲಿವೆ. ಇ-ಕಾಮರ್ಸ್ ಮೂಲಕ ಎಲ್ಲ ವಸ್ತುಗಳ ಡೆಲಿವರಿಗೆ ಅವಕಾಶ ನೀಡಲಾಗಿದೆ. ಕಟಿಂಗ್ ಶಾಪ್, ಸಲೂನ್, ಬ್ಯೂಟಿ ಪಾರ್ಲರ್‌ಗಳಿಗೆ ಅನುಮತಿ ನೀಡಲಾಗಿದೆ.
ಭಾರತ ಸರ್ಕಾರದ ಎಲ್ಲಾ ಕಚೇರಿಗಳು, ಅದರ ಸ್ವಾಯತ್ತ, ಅಧೀನ ಕಚೇರಿಗಳು, ರಕ್ಷಣಾ, ತುರ್ತು ಮತ್ತು ಅಗತ್ಯ ಸೇವೆಗಳು ಮತ್ತು ಸಾರ್ವಜನಿಕ ನಿಗಮಗಳು ಕೊರೊನಾ ಮಾರ್ಗಸೂಚಿಗಳ ಪ್ರಕಾರ ಕಾರ್ಯನಿರ್ವಹಿಸುತ್ತವೆ ಎಂದು ತಿಳಿಸಲಾಗಿದೆ.
ಇದನ್ನೂ ಓದಿ: ಕರ್ನಾಟಕದ ಜನರ ತುರ್ತು ಒತ್ತಾಯ ಪತ್ರ: ಪ್ರತಿದಿನ ವರದಿ ಪ್ರಕಟಿಸಲು ಸಿಎಂ & ಆರೋಗ್ಯ ಸಚಿವರ ಮೇಲೆ ಒತ್ತಡ


