Homeಕರೋನಾ ತಲ್ಲಣತಿಂಗಳಾಂತ್ಯದಲ್ಲಿ ಉತ್ತರಪ್ರದೇಶ ಹೆಚ್ಚು ಕೋವಿಡ್ ಪೀಡಿತ ರಾಜ್ಯ ಆಗಬಹುದು: ನೀತಿ ಆಯೋಗ ಎಚ್ಚರಿಕೆ

ತಿಂಗಳಾಂತ್ಯದಲ್ಲಿ ಉತ್ತರಪ್ರದೇಶ ಹೆಚ್ಚು ಕೋವಿಡ್ ಪೀಡಿತ ರಾಜ್ಯ ಆಗಬಹುದು: ನೀತಿ ಆಯೋಗ ಎಚ್ಚರಿಕೆ

- Advertisement -
- Advertisement -

ಉತ್ತರಪ್ರದೇಶ ರಾಜ್ಯವು ಏಪ್ರಿಲ್ ಅಂತ್ಯದ ವೇಳೆಗೆ ಕೆಟ್ಟ ಹಿಟ್ ಸ್ಟೇಟ್ (ತೀವ್ರ ಕೋವಿಡ್ ಬಾಧಿತ) ಆಗಬಹುದು ಎಂದು ನೀತಿ ಆಯೋಗ ಪ್ರಧಾನಿಯವರಿಗೆ ಹೇಳುತ್ತಿದ್ದರೆ, ಇತ್ತ ಯುಪಿ ಸರ್ಕಾರ ನಮ್ಮಲ್ಲಿ ಆಮ್ಲಜನಕ ಕೊರತೆಯೇ ಇಲ್ಲ, ಇಲ್ಲಿ ಕೋವಿಡ್ ಸಂಖೆಗಳು ಕಡಿಮೆ ಎಂದು ಸಮರ್ಥಿಸಿಕೊಳ್ಳುತ್ತಿದೆ ಎಂದು ದಿ ವೈರ್ ವರದಿ ಮಾಡಿದೆ.

ನೀತಿ ಆಯೋಗದ ಅಂದಾಜಿನ ಪ್ರಕಾರ, ಏಪ್ರಿಲ್ ಅಂತ್ಯದ ವೇಳೆಗೆ ಉತ್ತರಪ್ರದೇಶದಲ್ಲಿ ದೈನಿಕ 1 ಲಕ್ಷ 20 ಸಾವಿರ ಪಾಸಿಟಿವ್ ಪ್ರಕರಣಗಳು ದಾಖಲಾಗುವ ಸಾಧ್ಯತೆ ಇದೆ. ಆದರೆ ಸನ್ನಿಹಿತವಾಗುತ್ತಿರುವ ಅನಾಹುತವನ್ನು ಎದುರಿಸುವಲ್ಲಿ ರಾಜ್ಯ ಸರ್ಕಾರದ ವಿಧಾನ ಮತ್ತು ವರ್ತನೆಯ ಬಗ್ಗೆ ಪ್ರಶ್ನೆಗಳು ಎದ್ದಿವೆ.

ಎಕನಾಮಿಕ್ ಟೈಮ್ಸ್ ವರದಿ ಮಾಡಿದಂತೆ ನೀತಿ ಆಯೋಗದ ಸದಸ್ಯ ವಿನೋದ್ ಕೆ. ಪೌಲ್ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ನೀಡಿದ ವರದಿಯ ಪ್ರಕಾರ, ಉತ್ತರಪ್ರದೇಶವು ಏಪ್ರಿಲ್ ಅಂತ್ಯದ ವೇಳೆಗೆ ಕೋವಿಡ್‌ನಿಂದ ಹೆಚ್ಚು ಹಾನಿಗೊಳಗಾದ ರಾಜ್ಯವಾಗಲಿದೆ ಎಂದು ಊಹಿಸಲಾಗಿದೆ. ಏಪ್ರಿಲ್ 30 ರಂದು ಉತ್ತರಪ್ರದೇಶವು 1.20 ಲಕ್ಷದ ಸಮೀಪ ಪಾಸಿಟಿವ್ ಪ್ರಕರಣಗಳನ್ನು ವರದಿ ಮಾಡಬಹುದೆಂದು ಪೌಲ್ ಅವರ ಪ್ರಕ್ಷೇಪಗಳು ಸೂಚಿಸಿವೆ. ನಂತರ ಮಹಾರಾಷ್ಟ್ರ (99,665), ದೆಹಲಿ (67,134) ಮತ್ತು ಛತ್ತೀಸಘಡ್ (61,474) ರಾಜ್ಯಗಳಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗಬಹುದು.

ದೇಶದ ಇತರೆಡೆಗಳಂತೆ, ಯುಪಿ ರಾಜಧಾನಿ ಲಕ್ನೋ ಸೇರಿದಂತೆ ಯುಪಿಯ ಪ್ರಮುಖ ನಗರಗಳಲ್ಲಿ ಆಮ್ಲಜನಕದ ತೀವ್ರ ಕೊರತೆಯು ಅನೇಕರ ಜೀವವನ್ನು ತೆಗೆದುಕೊಳ್ಳುತ್ತಿದೆ. ಇಲ್ಲಿ, ಮೃತ ದೇಹಗಳ ಸಾಮೂಹಿಕ ಶವಸಂಸ್ಕಾರದ ‘ಕೆಟ್ಟ’ ದೃಶ್ಯಗಳು ಭಯಾನಕವಾಗಿದ್ದು, ಕಠೋರ ವಾಸ್ತವತೆಗೆ ಸಾಕ್ಷಿಯಾಗಿವೆ. ಯುಪಿ ಸರ್ಕಾರ ಮಾತ್ರ ಕೋವಿಡ್ ಸಾವಿನ ಸಂಖ್ಯೆ ಮುಚ್ಚಿಡುತ್ತ ಜನರನ್ನು ದಾರಿ ತಪ್ಪಿಸುವ ಮೂಲಕ ಎರಡನೇ ಅಲೆ ತೀವ್ರಗೊಳ್ಳಲು ಕಾರಣವಾಗುತ್ತಿದೆ ಎಂದು ವೈರ್ ಆರೋಪಿಸಿದೆ.

ಆದರೂ ಈ ವಾರ, ಉತ್ತರ ಪ್ರದೇಶದ ವೈದ್ಯಕೀಯ ಶಿಕ್ಷಣ ಸಚಿವ ಸುರೇಶ್ ಖನ್ನಾ ಅವರು ಆಮ್ಲಜನಕದ ಕೊರತೆಯಿಂದ ಯಾವುದೇ ಸಾವು ಸಂಭವಿಸಿಲ್ಲ ಎಂದು ಹೇಳಿದ್ದಾರೆ ಎಂದು ನವಭಾರತ್ ಟೈಮ್ಸ್ ವರದಿ ಮಾಡಿದೆ.

ರಾಜ್ಯದಲ್ಲಿ ಆಮ್ಲಜನಕದ ಕೊರತೆಯಿಲ್ಲ ಎಂದು ಈ ಸಚಿವರು ಸುದ್ದಿಗಾರರಿಗೆ ತಿಳಿಸಿದ್ದಾರೆ. ಆಮ್ಲಜನಕದ ಕೊರತೆಯಿಂದ ಲಕ್ನೋದಲ್ಲಿ ಯಾರೂ ಸಾವನ್ನಪ್ಪಿಲ್ಲ ಎಂದು ಅವರು ಹೇಳಿದ್ದಾರೆ. ಆದರೆ ಸ್ಥಳೀಯ ಮಾಧ್ಯಮ ವರದಿಗಳು ಬೇರೆ ದುರಂತ ಕತೆಗಳನ್ನು ಹೇಳುತ್ತಿವೆ. ಕಳೆದ ಹಲವಾರು ದಿನಗಳಿಂದ ಲಕ್ನೋ ಸೇರಿದಂತೆ ಹಲವು ನಗರಗಳು ಆಮ್ಲಜನಕ ಕೊರತೆಯನ್ನು ಎದುರಿಸುತ್ತಿವೆ ಎಂದು ನಿತ್ಯವೂ ಅವು ವರದಿ ಮಾಡುತ್ತಿವೆ.
ಆಮ್ಲಜನಕ ಅಗತ್ಯ ಇರುವ ರೋಗಿಗಳನ್ನು ಆಸ್ಪತ್ರೆಯಿಂದ ಹೊರಹಾಕಲಾಗಿದೆ. ಲಕ್ನೋ, ಕಾನ್ಪುರ್, ಆಗ್ರಾ ಮತ್ತು ಸುಲ್ತಾನಪುರದ ಹಲವಾರು ಆಸ್ಪತ್ರೆಗಳಲ್ಲಿ ಆಮ್ಲಜನಕದ ಕೊರತೆಯ ಬಗ್ಗೆ ನೋಟಿಸ್ ನೀಡಲಾಗಿದೆ ಎಂದು ವರದಿಗಳು ತಿಳಿಸಿವೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು 2017 ರಲ್ಲಿ ತಮ್ಮ ಮೊದಲ ವರ್ಷದ ಅವಧಿಯಲ್ಲಿ ಮಾಡಿದ ಅದೇ ನಿರಾಕರಣೆ ಕ್ರಮಕ್ಕೆ ಸಚಿವ ಖನ್ನಾ ಹೋಗಿದ್ದಾರೆಂದು ತೋರುತ್ತದೆ. ಆಮ್ಲಜನಕದ ಅಲಭ್ಯತೆಯಲ್ಲಿ 160ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿದರು. ನಂತರದಲ್ಲಿ ಸಿಎಂ ಕ್ಷೇತ್ರ, ಹುಟ್ಟೂರು ಗೋರಖ್‌ಪುರದ ಬಿಆರ್‌ಡಿ ವೈದ್ಯಕೀಯ ಕಾಲೇಜಿನಲ್ಲೂ ಆಮ್ಲಜನಕ ಕೊರತೆಯಿಂದ ಮಕ್ಕಳು ಸಾವನ್ನಪ್ಪಿದವು.

ಕೋವಿಡ್ ನಿಗ್ರಹಕ್ಕೆ ಹಲವಾರು ಬಿಜೆಪಿ ನಾಯಕರು ಮೂರ್ಖ ಮತ್ತು ಅವೈಜ್ಞಾನಿಕ ಸಲಹೆಗಳನ್ನು ನೀಡಿದ್ದಕ್ಕಾಗಿ ಟೀಕೆಗೆ ಗುರಿಯಾಗಿದ್ದಾರೆ. ಇತ್ತೀಚೆಗೆ, ಉತ್ತರಾಖಂಡ ಮುಖ್ಯಮಂತ್ರಿ ತಿರಥ್ ಸಿಂಗ್ ರಾವತ್ ಅವರು ಕೋವಿಡ್ ಪ್ರಕರಣಗಳು ನಿಯಂತ್ರಣದಿಂದ ಹೊರಬರಲು ಪ್ರಾರಂಭಿಸಿದಾಗಲೂ ಕುಂಭಮೇಳವನ್ನು ನಡೆಸುವ ತಮ್ಮ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿ ಟೀಕೆಗೆ ಗುರಿಯಾದರು.

ಇದಕ್ಕೆ ಪ್ರತಿಕ್ರಿಯೆಯಾಗಿ ಅವರು, “ಮುಖ್ಯವಾಗಿ, ಕುಂಭ ಗಂಗಾ ನದಿಯ ದಡದಲ್ಲಿ ನಡೆದಿದೆ. ಮಾ ಗಂಗಾ ಆಶೀರ್ವಾದವು ನೀರಿನ ಹರಿವಿನಲ್ಲಿದೆ. ಆದ್ದರಿಂದ, ಯಾವುದೇ ಕೊರೋನಾ ಉಳಿಯುವುದಿಲ್ಲ’ ಎನ್ನುವ ಮೂಲಕ ಅವರು ತೀವ್ರ ನಿರ್ಲಕ್ಷ್ಯದ  ವ್ಯಕ್ತಿ ಎಂಬುದನ್ನು ಸಾಬೀತು ಮಾಡಿದ್ದರು.


ಇದನ್ನೂ ಓದಿ: 1 ವರ್ಷ, 10 ಪತ್ರ, 7 ಪ್ರೆಸ್‌ಮೀಟ್, ಒಂದು ಮುಖಾಮುಖಿ: ಕೋವಿಡ್ ಕುರಿತ ಎಚ್.ಕೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...