Homeಮುಖಪುಟಪಿಎಂ ಕೇರ್ಸ್ ಫಂಡ್‌ನಿಂದ 551 ಆಮ್ಲಜನಕ ಉತ್ಪಾದನಾ ಘಟಕ ಸ್ಥಾಪನೆ

ಪಿಎಂ ಕೇರ್ಸ್ ಫಂಡ್‌ನಿಂದ 551 ಆಮ್ಲಜನಕ ಉತ್ಪಾದನಾ ಘಟಕ ಸ್ಥಾಪನೆ

- Advertisement -
- Advertisement -

ದೇಶದ ಕೊರೊನಾ ಸೋಂಕಿತರಲ್ಲಿ ಹೆಚ್ಚು ಸಾವಿರಾರು ಮಂದಿ ಆಕ್ಸಿಜನ್ ಪೂರೈಕೆ ಇಲ್ಲದೆ ಸಾವನ್ನಪ್ಪುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಪಿಎಂ ಕೇರ್ಸ್‌ನ ನೆರವಿನಲ್ಲಿ 551 ಆಮ್ಲಜನಕ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲಾಗುವುದು ಎಂದು ಪ್ರಧಾನ ಮಂತ್ರಿ ಕಚೇರಿ ತಿಳಿಸಿದೆ.

ದೇಶದ ಹಲವು ಸ್ಥಳಗಳಲ್ಲಿ ಆಕ್ಸಿಜನ್ ಕೊರತೆಯ ವರದಿಗಳು ಹೆಚ್ಚಾಗುತ್ತಿರುವ ಕಾರಣ, ಜೀವ ಉಳಿಸುವ ಅನಿಲದ ಲಭ್ಯತೆಯನ್ನು ಹೆಚ್ಚಿಸಲು ದೇಶಾದ್ಯಂತ ಸಾರ್ವಜನಿಕ ಆರೋಗ್ಯ ಸೌಲಭ್ಯ ಘಟಕಗಳಲ್ಲಿ 500 ಕ್ಕೂ ಹೆಚ್ಚು ವೈದ್ಯಕೀಯ ಆಮ್ಲಜನಕ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲಾಗುವುದು ಎಂದಿದೆ.

551 ಸ್ಥಾವರಗಳ ಸ್ಥಾಪನೆಗೆ ಹಣ ಹಂಚಿಕೆ ಮಾಡಲು ಪಿಎಂ ಕೇರ್ಸ್ ಫಂಡ್ ತಾತ್ವಿಕವಾಗಿ ಅನುಮೋದನೆ ನೀಡಿದೆ ಎಂದು ಪ್ರಧಾನಿ ಕಚೇರಿ (ಪಿಎಂಒ) ಭಾನುವಾರ ತಿಳಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಈ ಘಟಕಗಳನ್ನು ಆದಷ್ಟು ಬೇಗ ಕಾರ್ಯರೂಪಕ್ಕೆ ತರಬೇಕು ಎಂದು ನಿರ್ದೇಶಿಸಿದ್ದಾರೆ ಎಂದು ತಿಳಿಸಿದೆ.

ಇದನ್ನೂ ಓದಿ: ಕೊರೊನಾ ತಲ್ಲಣ: #ModiOxygenDo, भाषणबाज_मोदी, #oxygenbedslekkakodi ಟ್ವಿಟರ್‌ ಟ್ರೆಂಡ್

ಈ ಆಮ್ಲಜನಕ ಉತ್ಪಾದನಾ ಘಟಕಗಳು ಜಿಲ್ಲಾ ಮಟ್ಟದಲ್ಲಿ ಆಮ್ಲಜನಕದ ಲಭ್ಯತೆಗೆ ಪ್ರಮುಖ ಉತ್ತೇಜನ ನೀಡುತ್ತವೆ ಎನ್ನಲಾಗಿದೆ.

ಈ ಮೀಸಲಾದ ಸ್ಥಾವರಗಳನ್ನು ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ ಜಿಲ್ಲಾ ಕೇಂದ್ರಗಳಲ್ಲಿ ಆಯ್ದ ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ಥಾಪಿಸಲಾಗುವುದು. ಅವುಗಳ ಹೊಣೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮೂಲಕ  ಮಾಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಜಿಲ್ಲಾ ಕೇಂದ್ರದಲ್ಲಿರುವ ಸರ್ಕಾರಿ ಆಸ್ಪತ್ರೆಗಳಲ್ಲಿ ಪಿಎಸ್‌ಎ (Pressure Swing Adsorption) ಆಮ್ಲಜನಕ ಸ್ಥಾವರಗಳನ್ನು ಸ್ಥಾಪಿಸುವ ಹಿಂದಿನ ಮೂಲ ಉದ್ದೇಶವೆಂದರೆ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವುದಾಗಿದೆ. ಆಮ್ಲಜನಕ ಉತ್ಪಾದನಾ ಸೌಲಭ್ಯವು ಈ ಆಸ್ಪತ್ರೆಗಳು ಮತ್ತು ಜಿಲ್ಲೆಯ ದಿನನಿತ್ಯದ ವೈದ್ಯಕೀಯ ಆಮ್ಲಜನಕದ ಅಗತ್ಯಗಳನ್ನು ಪೂರೈಸುತ್ತದೆ.

ಇದರಿಂದ ಜಿಲ್ಲೆಗಳಲ್ಲಿನ ಸರ್ಕಾರಿ ಆಸ್ಪತ್ರೆಗಳು ಆಮ್ಲಜನಕದ ಪೂರೈಕೆಯಲ್ಲಿ ಹಠಾತ್ ಅಡೆತಡೆಗಳನ್ನು ಎದುರಿಸುವುದಿಲ್ಲ. ಜೊತೆಗೆ ಕೊರೊನಾ ಸೋಂಕಿತ ರೋಗಿಗಳು ಮತ್ತು ಆಮ್ಲಜನಕ ಅಗತ್ಯವಿರುವ ಇತರ ರೋಗಿಗಳಿಗೆ ಸಹಾಯವಾಗುತ್ತದೆ ಎಂದು ತಿಳಿಸಿದೆ.

ರಾಷ್ಟ್ರ ರಾಜಧಾನಿಯ ಹಲವಾರು ಆಸ್ಪತ್ರೆಗಳು ವೈದ್ಯಕೀಯ ಆಮ್ಲಜನಕದ ತೀವ್ರ ಕೊರತೆಯಿಂದ ಬಳಲುತ್ತಿವೆ. ಕೆಲವು ಆಸ್ಪತ್ರೆಗಳು ಅಲ್ಪಾವಧಿಯ ವ್ಯವಸ್ಥೆಗಳನ್ನು ಮಾಡುವಲ್ಲಿ ಯಶಸ್ವಿಯಾಗಿದ್ದರೂ, ಸೋಂಕಿತರ ತೀವ್ರ ಏರಿಕೆ ನೊಡುತ್ತಿದ್ದರೆ ಈ ಸಮಸ್ಯೆ ಇಲ್ಲಿಗೆ ಮುಗಿಯುವಂತಿಲ್ಲ ಎನ್ನಲಾಗಿದೆ.


ಇದನ್ನೂ ಓದಿ: ಸಾಂಕ್ರಾಮಿಕ ದುರಂತದ ಸಮಯದಲ್ಲಿ ಐಪಿಎಲ್ ಕವರೇಜ್ ಮಾಡುವುದಿಲ್ಲವೆಂದ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...