Homeಕರ್ನಾಟಕಮೋದಿಯವರೆ ಬಾಯಿ ಬಡಾಯಿ ಬಿಟ್ಟಾಕಿ ಉಚಿತ ಲಸಿಕೆ ನೀಡಿ: ಸಿದ್ದರಾಮಯ್ಯ

ಮೋದಿಯವರೆ ಬಾಯಿ ಬಡಾಯಿ ಬಿಟ್ಟಾಕಿ ಉಚಿತ ಲಸಿಕೆ ನೀಡಿ: ಸಿದ್ದರಾಮಯ್ಯ

- Advertisement -
- Advertisement -

ಲಸಿಕೆ‌ ಪಡೆಯುವುದನ್ನು ಪ್ರೊತ್ಸಾಹಿಸಬೇಕಾದ ಕೇಂದ್ರ ಬಿಜೆಪಿ ಸರ್ಕಾರ, ಲಸಿಕೆ ಬೆಲೆ ಏರಿಸಿ ಜನತೆ ಅದನ್ನು  ಪಡೆಯದಂತೆ ಮಾಡಲು ಹೊರಟಿದೆ. ನರೇಂದ್ರ ಮೋದಿ ಅವರೇ, ‘ಟೀಕಾ ಉತ್ಸವ್’ ನಂತಹ ಬಾಯಿ ಬಡಾಯಿಯನ್ನು ಬಿಟ್ಟಾಕಿ ಮೊದಲು ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಿ ಎಂದು ಭಾನುವಾರ ಹೇಳಿದ್ದಾರೆ.

ನಿನ್ನೆ ಸರಣಿ ಟ್ವೀಟ್ ಮಾಡಿದ್ದ ಸಿದ್ದರಾಮಯ್ಯ, “ಅನ್ನಭಾಗ್ಯ ಯೋಜನೆ ಎಂದರೆ ಉರ್ಕೊಳ್ಳುತ್ತಿದ್ದ ಮತ್ತು ಆ ಯೋಜನೆಗೆ ಕಲ್ಲು ಹಾಕಲು ಪ್ರಯತ್ನಿಸುತ್ತಿರುವ ರಾಜ್ಯ ಬಿಜೆಪಿ ನಾಯಕರು, ಈಗ ಪ್ರಧಾನಿಗಳು ಘೋಷಿಸಿರುವ ಎರಡು ತಿಂಗಳ ಕಾಲ ಐದು ಕಿಲೋ ಅಕ್ಕಿ ನೀಡುವ ಯೋಜನೆಯನ್ನು ಕೊಂಡಾಡುತ್ತಿರುವುದು ತಮಾಷೆಯಾಗಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ’ಕೊರೊನಾ ಸಾವುಗಳೆಲ್ಲವೂ ಬಿಜೆಪಿ ನಡೆಸುತ್ತಿರುವ ಕಗ್ಗೊಲೆಗಳು’- ಕಾಂಗ್ರೆಸ್

“ಕೊರೊನಾದಿಂದ ತೀವ್ರ ಸಂಕಷ್ಟಕ್ಕೀಡಾಗಿರುವ ಜನರಿಗೆ ಪ್ರತಿ ತಿಂಗಳು ಉಚಿತವಾಗಿ ಹತ್ತು ಕಿಲೋ ಅಕ್ಕಿ ನೀಡಬೇಕೆಂದು ಪ್ರಾರಂಭದಿಂದಲೂ ಒತ್ತಾಯಿಸುತ್ತಾ ಬಂದಿದ್ದೇನೆ. ಪ್ರಧಾನಿಗಳು ಈಗಲಾದರೂ ಎಚ್ಚೆತ್ತುಕೊಳ್ಳಿ. ಕೊರೊನಾ‌ ಕಷ್ಟ ಕೊನೆಯಾಗುವ ವರೆಗಾದರೂ ಹತ್ತು ಕಿಲೋ ಅಕ್ಕಿ ನೀಡಿ ಪುಣ್ಯ ಕಟ್ಕೊಳ್ಳಿ” ಎಂದು ವಿನಂತಿಸಿದ್ದಾರೆ.

“ಅನ್ನಭಾಗ್ಯ ಯೋಜನೆಯನ್ನು ನಿಲ್ಲಿಸಲು ಶತಪ್ರಯತ್ನ ಮಾಡುತ್ತಿರುವ ರಾಜ್ಯ ಸರ್ಕಾರ ಹಲವಾರು ಜಿಲ್ಲೆಗಳಲ್ಲಿ ತಿಂಗಳಿಗೆ ಐದು‌ ಕಿಲೋ ಅಕ್ಕಿ ಬದಲಿಗೆ ಎರಡು ಕಿಲೋ ಅಕ್ಕಿ ನೀಡುತ್ತಿದೆ. ಮುಖ್ಯಮಂತ್ರಿ ಅವರೇ, ಈ ಅನ್ಯಾಯವನ್ನು ತಕ್ಷಣ ಸರಿಪಡಿಸಿ. ಬಡವರ ಶಾಪಕ್ಕೆ ಈಡಾಗಬೇಡಿ” ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಸಂಪಾದಕರ ವಿರುದ್ಧ ಪತ್ರ: ಟೈಮ್ಸ್ ನೌ ಚಾನೆಲ್‌ನ ಹಾಲಿ, ಮಾಜಿ ಪತ್ರಕರ್ತರ ಜೊತೆ ನಿಲ್ಲೋಣ

“ಕರ್ನಾಟಕವನ್ನು ಹಸಿವು ಮುಕ್ತ ರಾಜ್ಯ ಮಾಡುವ ಉದ್ದೇಶದಿಂದ ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್, ಮಾತೃಪೂರ್ಣ ಮೊದಲಾದ ಯೋಜನೆಗಳನ್ನು ಜಾರಿಗೆ ತಂದಿದ್ದೆ. ಅವೆಲ್ಲವನ್ನೂ ಬಡವರ ವಿರೋಧಿ ಬಿಜೆಪಿ ಸರ್ಕಾರ ನಿಲ್ಲಿಸಲು ಹೊರಟಿದೆ. ಅವುಗಳಿಗೆ ಅಡ್ಡಗಾಲು ಹಾಕಿದರೆ ಬಡವರ ಶಾಪ ತಟ್ಟದೆ ಇರದು” ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಔಷಧಿ,‌ಆಮ್ಲಜನಕ, ವೆಂಟಿಲೇಟರ್ ಕೊಡಿ ಎಂದು‌  ಪ್ರಧಾನಿ ಅವರನ್ನು ಬೇಡುತ್ತಿರುವ ಮುಖ್ಯಮಂತ್ರಿ ಅವರನ್ನು ಕಂಡಾಗ‌ ಕನಿಕರ ಮೂಡುತ್ತಿದೆ. 25 ಬಿಜೆಪಿ  ಸಂಸದರು ಎಲ್ಲಿ ಅಡಗಿ ಕೂತಿದ್ದಾರೆ? ಅವರನ್ನು ದೆಹಲಿಗೆ ಅಟ್ಟಿ ರಾಜ್ಯದ ನ್ಯಾಯಬದ್ಧ ಪಾಲಿಗಾಗಿ ಪ್ರಧಾನಿ ಮನೆ ಮುಂದೆ ಧರಣಿ ಕೂರಿಸಿ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರಾಜಕೀಯ ಕೆಲಸ ಬಿಟ್ಟು, ಜನರ ಸಹಾಯಕ್ಕೆ ನಿಲ್ಲುವಂತೆ ಕಾರ್ಯಕರ್ತರಲ್ಲಿ ರಾಹುಲ್ ಗಾಂಧಿ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...