Homeಕರೋನಾ ತಲ್ಲಣಉಚಿತ ಕೊರೊನಾ ಲಸಿಕೆ ನೀಡುವುದಾಗಿ ಒರಿಸ್ಸಾ ಘೋಷಣೆ

ಉಚಿತ ಕೊರೊನಾ ಲಸಿಕೆ ನೀಡುವುದಾಗಿ ಒರಿಸ್ಸಾ ಘೋಷಣೆ

ಗುಜರಾತ್, ರಾಜಸ್ಥಾನ, ಉತ್ತರ ಪ್ರದೇಶ, ಅಸ್ಸಾಂ, ಕೇರಳ, ಛತ್ತೀಸ್‌ಗಡ, ಮಹಾರಾಷ್ಟ್ರ, ದೆಹಲಿ, ಬಿಹಾರ ಮತ್ತು ಮಧ್ಯಪ್ರದೇಶ ರಾಜ್ಯಗಳು ಈಗಾಗಲೇ ಉಚಿತ ಲಸಿಕೆ ನೀಡುವುದಾಗಿ ಘೋಷಿಸಿವೆ.

- Advertisement -
- Advertisement -

18 ರಿಂದ 45 ವರ್ಷ ವಯಸ್ಸಿನವರಿಗೆ ಉಚಿತ ವ್ಯಾಕ್ಸಿನೇಷನ್ ಘೋಷಿಸುವ ಸರ್ಕಾರಗಳ ಪಟ್ಟಿಯಲ್ಲಿ ಒರಿಸ್ಸಾ ಕೂಡಾ ಸೇರಿಕೊಂಡಿದೆ. ರಾಜ್ಯದ ಮುಖ್ಯಮಂತ್ರಿ ನವೀನ್‌‌ ಪಟ್ನಾಯಕ್ ಈ ಘೋಷಣೆಯನ್ನು ಮಾಡಿದ್ದು, ಎಲ್ಲಾ ಜನರ ಚುಚ್ಚುಮದ್ದಿನ ಸಂಪೂರ್ಣ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ ಎಂದು ಹೇಳಿದ್ದಾರೆ. 18 ರಿಂದ 45 ವರ್ಷದ ಜನರಿಗೆ ವ್ಯಾಕ್ಸಿನೇಷನ್ ಮೇ 1 ರಿಂದ ಪ್ರಾರಂಭವಾಗುತ್ತದೆ.

ಗುಜರಾತ್, ರಾಜಸ್ಥಾನ, ಉತ್ತರ ಪ್ರದೇಶ, ಅಸ್ಸಾಂ, ಕೇರಳ, ಛತ್ತೀಸ್‌ಗಡ, ಮಹಾರಾಷ್ಟ್ರ, ದೆಹಲಿ, ಬಿಹಾರ ಮತ್ತು ಮಧ್ಯಪ್ರದೇಶ ರಾಜ್ಯಗಳು ಈಗಾಗಲೇ ಉಚಿತ ಲಸಿಕೆ ನೀಡುವುದಾಗಿ ಘೋಷಿಸಿವೆ.

ಇದನ್ನೂ ಓದಿ: ಸಂಪಾದಕರ ವಿರುದ್ಧ ಪತ್ರ: ಟೈಮ್ಸ್ ನೌ ಚಾನೆಲ್‌ನ ಹಾಲಿ, ಮಾಜಿ ಪತ್ರಕರ್ತರ ಜೊತೆ ನಿಲ್ಲೋಣ

3.87 ಕೋಟಿ ಡೋಸ್ ಲಸಿಕೆಗಳನ್ನು ಸರ್ಕಾರ ಭಾನುವಾರ ಆದೇಶಿಸಿದೆ. ಭಾರತ್ ಬಯೋಟೆಕ್‌ನಿಂದ 10.34 ಲಕ್ಷ ಡೋಸ್ ಕೋವಾಕ್ಸಿನ್ ಅನ್ನು ಆದೇಶಿಸಲಾಗಿದ್ದು, 377 ಲಕ್ಷ ಡೋಸ್ ಕೋವಿಶೀಲ್ಡ್ ಅನ್ನು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದಿಂದ ಪಡೆಯಲಾಗುತ್ತದೆ. ಭುವನೇಶ್ವರ ಮುನ್ಸಿಪಲ್ ಕಾರ್ಪೊರೇಶನ್‌ನ ವ್ಯಾಪ್ತಿಯ ಜನರಿಗೆ ಕೋವಾಕ್ಸಿನ್ ಹಾಗೂ ಉಳಿದಂತೆ ಒಡಿಶಾದಾದ್ಯಂತ ಕೋವಿಶೀಲ್ಡ್ ಅನ್ನು ನೀಡಲಾಗುವುದು ಎಂದು ತಿಳಿದು ಬಂದಿದೆ.

ರಾಜ್ಯದ ಜನರನ್ನುದ್ದೇಶಿಸಿ ಮಾತನಾಡಿದ ನವೀನ್ ಪಟ್ನಾಯಕ್, “ಸುಮಾರು ಎರಡು ಕೋಟಿ ಜನರು ಇದರ ಪ್ರಯೋಜನ ಪಡೆಯಲಿದ್ದಾರೆ. ಲಸಿಕೆಗಳನ್ನು ಖರೀದಿಸಲು ರಾಜ್ಯ ಸರ್ಕಾರ 2,000 ಕೋಟಿ ರೂ. ಖರ್ಚು ಮಾಡುತ್ತದೆ. ವ್ಯಾಕ್ಸಿನೇಷನ್ಗಾಗಿ ನೀವು ಏನನ್ನೂ ಖರ್ಚು ಮಾಡಬೇಕಾಗಿಲ್ಲ. ಇದು ಸರ್ಕಾರದ ಜವಾಬ್ದಾರಿಯಾಗಿದೆ. ಆದರೆ ಎಲ್ಲಾ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ನಿಮ್ಮ ಜವಾಬ್ದಾರಿಯನ್ನು ನೀವು ತೆಗೆದುಕೊಳ್ಳಬೇಕಾಗುತ್ತದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ಉಲ್ಬಣ: ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ‌ ಮುಂದೂಡಿಕೆ

ದೆಹಲಿ, ಉತ್ತರ ಪ್ರದೇಶ, ಮಧ್ಯಪ್ರದೇಶ, ಕರ್ನಾಟಕ, ಗುಜರಾತ್, ಮಹಾರಾಷ್ಟ್ರ ಮತ್ತು ಚತ್ತೀಸ್‌ಗಡದಂತಹ ರಾಜ್ಯಗಳಲ್ಲಿ ಪರಿಸ್ಥಿತಿ ಆತಂಕಕಾರಿಯಾಗಿದೆ. ಮಾರಣಾಂತಿಕ ವೈರಸ್‌ಗೆ ಬಲಿಯಾಗುವವರ ಅಂತ್ಯ ಸಂಸ್ಕಾರ ಮಾಡಲು ಕೂಡಾ ಸ್ಥಳವಿಲ್ಲದ ಪರಿಸ್ಥಿತಿ ಏರ್ಪಟ್ಟಿದೆ. ದೇಶವು ತನ್ನ ಇತಿಹಾಸದಲ್ಲಿ ಇಂತಹ ಅಪಾಯಕಾರಿ ಪರಿಸ್ಥಿತಿಯನ್ನು ಎದುರಿಸಲಿಲ್ಲ ಎಂದು ಮುಖ್ಯಮಂತ್ರಿ ಪಟ್ನಾಯಕ್ ಹೇಳಿದ್ದಾರೆ.

ಒರಿಸ್ಸಾದಲ್ಲಿ ಇದುವರೆಗೂ 4 ಲಕ್ಷ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 1981 ಜನರು ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ 3.59 ಲಕ್ಷ ಜನರು ಇರುವರೆಗೂ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ಇದನ್ನೂ ಓದಿ: ಲಸಿಕೆ ಸ್ಟಾಕ್ ಇಲ್ಲ: ಮೇ 1ರಿಂದ ‘ಎಲ್ಲರಿಗೂ ಲಸಿಕೆ’ ಅಭಿಯಾನ ಅಸಾಧ್ಯವೆಂದ 4 ರಾಜ್ಯಗಳು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...