Homeಮುಖಪುಟಚುನಾವಣಾ ಆಯೋಗದ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು: ಮದ್ರಾಸ್​ ಹೈಕೋರ್ಟ್

ಚುನಾವಣಾ ಆಯೋಗದ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು: ಮದ್ರಾಸ್​ ಹೈಕೋರ್ಟ್

- Advertisement -
- Advertisement -

ದೇಶದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡಲು ಚುನಾವಣಾ ಆಯೋಗವೇ ಕಾರಣ. ಕೊರೊನಾ ಸಂದರ್ಭದಲ್ಲಿ 5 ರಾಜ್ಯಗಳ ಚುನಾವಣೆಯಲ್ಲಿ ಬೃಹತ್ ರ್‍ಯಾಲಿ ನಡೆಸಲು ಅನುಮತಿ ನೀಡುವ ಮೂಲಕ ಚುನಾವಣಾ ಆಯೋಗ ಸ್ವತಃ ಕೊರೊನಾ ಹರಡಿದೆ. ಹೀಗಾಗಿ ಚುನಾವಣಾ ಅಧಿಕಾರಿಗಳ ವಿರುದ್ಧ ಏಕೆ ಕೊಲೆ ಪ್ರಕರಣ ದಾಖಲಿಸಬಾರದು?” ಎಂದು ಮದ್ರಾಸ್ ಹೈಕೋರ್ಟ್ ಹರಿಹಾಯ್ದಿದೆ.

ದೇಶದಲ್ಲಿ ಕೊರೊನಾ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿದೆ. ಸಾವಿರಾರು ಜನರು ಸೋಂಕಿನಿಂದ ಸಾವನ್ನಪ್ಪುತ್ತಿದ್ಧಾರೆ. ಈ ನಡುವೆ ಭಾರತೀಯ ಚುನಾವಣಾ ಆಯೋಗದ ರಾಜಕೀಯ ಪಕ್ಷಗಳ ಪರ ಕೆಲಸ ಮಾಡುತ್ತಿದೆ ಎಂದು ಮದ್ರಾಸ್​ ಹೈಕೋರ್ಟ್​ ಛೀಮಾರಿ ಹಾಕಿದೆ.

ಜೊತೆಗೆ ಚುನಾವಣಾ ಆಯೋಗಕ್ಕೆ ಏಪ್ರಿಲ್ 06 ರಂದು ನಡೆದ ತಮಿಳುನಾಡು ವಿಧಾನಸಭಾ ಚುನಾವಣಾ ಮತ ಎಣಿಕೆಗೂ ತಡೆ ಒಡ್ಡುವ ಎಚ್ಚರಿಕೆ ನೀಡಿದೆ.

’ಕೊರೊನಾ ಎರಡನೇ ಅಲೆ ವ್ಯಾಪಕವಾಗಲು ಚುನಾವಣಾ ಆಯೋಗ ಏಕೈಕ ಕಾರಣವಾಗಿದೆ. ನಿಮ್ಮ ಅಧಿಕಾರಿಗಳ ಮೇಲೆ ಏಕೆ ಕೊಲೆ ಆರೋಪದ ಅಡಿಯಲ್ಲಿ ಪ್ರಕರಣ ದಾಖಲಿಸಬಾರದು?. ನ್ಯಾಯಾಲಯದ ಆದೇಶದ ಹೊರತಾಗಿಯೂ ಪ್ರಚಾರದ ಸಮಯದಲ್ಲಿ ಮಾಸ್ಕ್, ಸ್ಯಾನಿಟೈಸರ್​ಗಳ ಬಳಕೆ ಮತ್ತು ದೈಹಿಕ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಕೊರೊನಾ ಸುರಕ್ಷತಾ ನಿಯಮಗಳನ್ನು ಜಾರಿಗೆ ತರವಲ್ಲಿ ಚುನಾವಣಾ ಸಂಸ್ಥೆ ವಿಫಲವಾಗಿದೆ” ಎಂದು ಹೈಕೋರ್ಟ್ ಹೇಳಿದೆ.

ಇದನ್ನೂ ಓದಿ: ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿದ ಉಡುಪಿ ಜಿಲ್ಲಾಧಿಕಾರಿ? ಅವರು ಹೇಳಿದ್ದೇನು?

ಮೇ.2 ರಂದು ತಮಿಳುನಾಡಿನಲ್ಲಿ ಮತ ಎಣಿಕೆ ಆರಂಭವಾಗಲಿದೆ. ಆದರೆ, ಶುಕ್ರವಾರದೊಳಗೆ ಕೊರೊನಾ ನಿಯಮಗಳನ್ನು ಜಾರಿಗೊಳಿಸುವ ಯೋಜನೆಯ ಬಗ್ಗೆ ಚುನಾವಣಾ ಆಯೋಗವನ್ನು ಮದ್ರಾಸ್ ಹೈಕೋರ್ಟ್ ಕೇಳಿದೆ. ಒಂದು ವೇಳೆ ಚುನಾವಣಾ ಆಯೋಗ ಈ ನೀಲನಕ್ಷೆಯನ್ನು ನೀಡದಿದ್ದರೆ ಮತ ಎಣಿಕೆಯನ್ನೇ ನಿಲ್ಲಿಸುವುದಾಗಿಯೂ ಎಚ್ಚರಿಸಿದೆ.

“ಸಾರ್ವಜನಿಕ ಆರೋಗ್ಯ ಅತ್ಯುನ್ನತವಾದುದು. ಸಾಂವಿಧಾನಿಕ ಅಧಿಕಾರಗಳನ್ನು ನೆನಪಿಸಬೇಕಾಗಿರುವುದು ದುಃಖಕರವಾಗಿದೆ. ದೇಶದ ನಾಗರಿಕರು ಬದುಕುಳಿದಾಗ ಮಾತ್ರ ಅವರು ಪ್ರಜಾಪ್ರಭುತ್ವ ಹಕ್ಕುಗಳನ್ನು ಆನಂದಿಸಲು ಸಾಧ್ಯವಾಗುತ್ತದೆ” ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

“ಚುನಾವಣಾ ರ್‍ಯಾಲಿಗಳು ನಡೆದಾಗ ನೀವು ಇನ್ನೊಂದು ಗ್ರಹದಲ್ಲಿ ಇದ್ದಿರೇ?” ಎಂದು ಮುಖ್ಯ ನ್ಯಾಯಮೂರ್ತಿ ಸಂಜೀಬ್ ಬ್ಯಾನರ್ಜಿ ಚುನಾವಣಾ ಆಯೋಗಕ್ಕೆ ಪ್ರಶ್ನಿಸಿದ್ದಾರೆ.

ತಮಿಳುನಾಡು ಸಾರಿಗೆ ಸಚಿವ ಎಂ.ಆರ್.ವಿಜಯಬಾಸ್ಕರ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿದ ಸಂದರ್ಭದಲ್ಲಿ ಚುನಾವಣಾ ಆಯೋಗಕ್ಕೆ ಮದ್ರಾಸ್ ಹೈಕೋರ್ಟ್ ಎಚ್ಚರಿಕೆ ನೀಡಿದೆ.

ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ನಡೆದ ವಿಧಾನಸಭಾ ಚುನಾವಣೆಗಳ ನಂತರ ದೇಶದಲ್ಲಿ ಕೊರೊನಾ ಪ್ರಕರಣಗಳು ಸ್ಫೋಟಗೊಂಡಿವೆ. ಪ್ರಸ್ತುತ ಭಾರತದಲ್ಲಿ ದಿನವೊಂದಕ್ಕೆ 3.52 ಲಕ್ಷಕ್ಕೂ ಪ್ರಕರಣಗಳು ಮತ್ತು 2,812 ಸಾವುಗಳು ವರದಿಯಾಗುತ್ತಿವೆ.


ಇದನ್ನೂ ಓದಿ: ಜನರ ಸಂಕಷ್ಟ ಮರೆತು ಬಿಜೆಪಿಯ ಪಿಆರ್ ಕೆಲಸ ಮಾಡುತ್ತಿರುವ ಟೈಮ್ಸ್ ನೌ: ಸಂಪಾದಕರಿಗೆ ಚಾನೆಲ್ ವರದಿಗಾರರ ’ದಿಟ್ಟ ಪತ್ರ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...