Homeಕರೋನಾ ತಲ್ಲಣಎಚ್ಚರ: ದೈಹಿಕ ಅಂತರ ಕಾಪಾಡದ ಸೋಂಕಿತ ವ್ಯಕ್ತಿ 406 ಜನರಿಗೆ ಕೊರೊನಾ ಹರಡಬಲ್ಲ!

ಎಚ್ಚರ: ದೈಹಿಕ ಅಂತರ ಕಾಪಾಡದ ಸೋಂಕಿತ ವ್ಯಕ್ತಿ 406 ಜನರಿಗೆ ಕೊರೊನಾ ಹರಡಬಲ್ಲ!

- Advertisement -
- Advertisement -

ಕೊರೊನಾ ವೈರಸ್ ಸೋಂಕು ಹರಡುವುದನ್ನು ತಡೆಗಟ್ಟಲು ದೈಹಿಕ ಅಂತರ ಕಾಪಾಡುವುದು ಮತ್ತು ಮಾಸ್ಕ್‌ಗಳ ಬಳಕೆ ಅತ್ಯಗತ್ಯವಾಗಿವೆ ಎಂದು ಕೇಂದ್ರ ಸರ್ಕಾರ ಸೋಮವಾರ ತಿಳಿಸಿದೆ. ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಲಾವ್ ಅಗ್ರವಾಲ್ ಅವರು ಈ ವಿಷಯದಲ್ಲಿನ ಅಧ್ಯಯನಗಳನ್ನು ಉಲ್ಲೇಖಿಸಿದ್ದಾರೆ.

ಒಬ್ಬ ಕೊರೊನಾ ಸೋಂಕಿತ ವ್ಯಕ್ತಿಯು ದೈಹಿಕ ಅಂತರ ಕ್ರಮಗಳನ್ನು ಅನುಸರಿಸದೆ ಓಡಾಡಿದರೆ 30 ದಿನಗಳಲ್ಲಿ 406 ಜನರಿಗೆ ಸೋಂಕು ತಗುಲಿಸಬಹುದು ಎಂದು ಅನೇಕ ವಿಶ್ವವಿದ್ಯಾಲಯಗಳು ಸಂಶೋಧನೆ ನಡೆಸಿವೆ ಎಂದು ಅವರು ತಿಳಿಸಿದ್ದಾರೆ.

“ಸೋಂಕಿತ ವ್ಯಕ್ತಿಯು ತನ್ನ ಓಡಾಟದಲ್ಲಿ 50% ದಷ್ಟು ದೈಹಿಕ ಅಂತರ ಕಾಪಾಡಿದರೆ 30 ದಿನಗಳಲ್ಲಿ 406 ರ ಬದಲು 15 ಜನರು ಸೋಂಕಿಗೆ ಒಳಗಾಗುತ್ತಾರೆ ಎಂದು ತಿಳಿದುಬಂದಿದೆ. ಅದೇ ಸೋಂಕಿತ ವ್ಯಕ್ತಿಯು ದೈಹಿಕ ಅಂತರವನ್ನು 75% ಕಾಪಾಡಿದರೆ 2.5 ಜನರಿಗೆ ಸೋಂಕು ತಗುಲಿಸುವ ಸಾಧ್ಯತೆ ಇದೆ” ಎಂದು ಅಗ್ರವಾಲ್ ಹೇಳಿದ್ದಾರೆ.

ಇದನ್ನೂ ಓದಿ: ಮೋದಿಯವರೆ ಬಾಯಿ ಬಡಾಯಿ ಬಿಟ್ಟಾಕಿ ಉಚಿತ ಲಸಿಕೆ ನೀಡಿ: ಸಿದ್ದರಾಮಯ್ಯ

ನಮ್ಮ ಗಮನವು ಒಂದು ಕಡೆ ಕ್ಲಿನಿಕಲ್ ನಿರ್ವಹಣೆಯತ್ತ, ಮತ್ತೊಂದೆಡೆ ಕೊರೊನಾವನ್ನು ನಿಯಂತ್ರಿಸುವತ್ತ ಇರಬೇಕು ಎಂದು ಅವರು ಹೇಳಿದ್ದಾರೆ. ಮಾಸ್ಕ್‌ಗಳ ಬಳಕೆಯನ್ನು ಅಗ್ರವಾಲ್ ಮತ್ತೆ ಒತ್ತಿ ಹೇಳಿದ್ದಾರೆ.

“ಸೋಂಕಿತ ವ್ಯಕ್ತಿಯಿಂದ ನಾವು ಆರು ಅಡಿಗಳಷ್ಟು ದೂರದಲ್ಲಿದ್ದರೂ ವೈರಸ್ ಹರಡುವ ಸಾಧ್ಯತೆ ಇದೆ ಎಂದು ಅಧ್ಯಯನವು ಹೇಳುತ್ತದೆ. ಇಂತಹ ಪ್ರಕರಣಗಳನ್ನು ಮನೆಯಲ್ಲೇ ಐಸೋಲೇಷನ್‌ ಹೊಂದಿದ್ದ ಕಡೆ ಕಾಣಬಹುದು. ಮಾಸ್ಕ್‌ಗಳನ್ನು ಸರಿಯಾಗಿ ಬಳಸದಿದ್ದರೆ ಸೋಂಕಿತ ವ್ಯಕ್ತಿಯಿಂದ ಸೋಂಕು ಹರಡುವ 90% ದಷ್ಟು ಸಾಧ್ಯತೆಯಿದೆ” ಎಂದು ಅವರು ತಿಳಿಸಿದ್ದಾರೆ.

ಒಂದು ವೇಳೆ ಸೋಂಕು ರಹಿತ ವ್ಯಕ್ತಿಯು ಮುಖವಾಡ ಧರಿಸಿ, ಸೋಂಕಿತ ವ್ಯಕ್ತಿಯು ಮಾಸ್ಕ್‌ ಧರಿಸದೆ ಇದ್ದರೆ, ಅವರಿಂದ ಸೋಂಕು ಹರಡುವ 30% ಸಾಧ್ಯತೆಯಿದೆ ಎಂದು ಅವರು ಹೇಳಿದ್ದಾರೆ.

ಸೋಂಕಿತ ಮತ್ತು ಸೋಂಕಿತನಲ್ಲದ ವ್ಯಕ್ತಿಗಳು ಮಾಸ್ಕ್‌ ಧರಿಸಿದ್ದರೆ, ಕೊರೊನಾ ಪಾಸಿಟಿವ್ ಆಗುವ ಸಾಧ್ಯತೆಯು 1.5% ಆಗಿದೆ ಎಂದು ಅಗ್ರವಾಲ್ ಹೇಳಿದ್ದಾರೆ.

ಇದನ್ನೂ ಓದಿ: ಚುನಾವಣಾ ಆಯೋಗದ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು: ಮದ್ರಾಸ್​ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...