Homeಕರ್ನಾಟಕಸಂಕೇಶ್ವರರ ‘ನಿಂಬೆ’ ಸಲಹೆ ಪಾಲಿಸಿ ಎಂದ ಬಿಜೆಪಿ ಸಂಸದ; ಅವೈಜ್ಞಾನಿಕತೆ ಹರಡುತ್ತಿದ್ದಾರೆಂದು ಆಕ್ರೋಶ

ಸಂಕೇಶ್ವರರ ‘ನಿಂಬೆ’ ಸಲಹೆ ಪಾಲಿಸಿ ಎಂದ ಬಿಜೆಪಿ ಸಂಸದ; ಅವೈಜ್ಞಾನಿಕತೆ ಹರಡುತ್ತಿದ್ದಾರೆಂದು ಆಕ್ರೋಶ

- Advertisement -
- Advertisement -

ಬಿಜೆಪಿ ನಾಯಕ ಹಾಗೂ ವಿಆರ್‌ಎಲ್‌ ಮಾಲಿಕರಾದ ವಿಜಯ ಸಂಕೇಶ್ವರ ಅವರು, ಕೊರೊನಾ ಸೋಂಕಿನಿಂದಾಗಿ ಉಂಟಾಗುವ ಆಮ್ಲಜನಕದ ಸಮಸ್ಯೆಯನ್ನು ಬಗೆಹರಿಸಲು, ಮೂಗಿಗೆ ನಿಂಬೆ ರಸ ಹಾಕುವಂತೆ ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಅವೈಜ್ಞಾನಿಕ ಸಲಹೆ ನೀಡಿ ತಜ್ಞ ವೈದ್ಯರ ಆಕ್ರೋಶಕ್ಕೆ ಕಾರಣರಾಗಿದ್ದರು. ಇದೀಗ ಬಿಜೆಪಿ ಸಂಸದ ಎಸ್‌. ಮುನಿಸ್ವಾಮಿ ಕೂಡಾ ಸಂಕೇಶ್ವರ ಅವೈಜ್ಞಾನಿಕ ಸಲಹೆಯನ್ನು ಪಾಲಿಸುವಂತೆ ಜನರಿಗೆ ಕರೆ ನೀಡಿದ್ದಾರೆ.

ಕೊಲಾರದ ಬಿಜೆಪಿ ಸಂಸದರಾಗಿರುವ ಎಸ್‌. ಮುನಿಸ್ವಾಮಿ ಸೋಮವಾರ ತನ್ನ ಫೇಸ್‌ಬುಕ್‌ನಲ್ಲಿ ಸಂಕೇಶ್ವರರ ಅವೈಜ್ಞಾನಿಕ ಸಲಹೆಯನ್ನು ಪಾಲಿಸುವಂತೆ ಜನರಿಗೆ ಕರೆ ನೀಡಿ ಸಾಮಾಜಿಕ ಜಾಲತಾಣದಲ್ಲಿ ಟೀಕೆಗೆ ಒಳಗಾಗಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ದೇಶಾದ್ಯಂತ ಆಕ್ಸಿಜನ್ ಪ್ಲಾಂಟ್‌ ಸ್ಥಾಪನೆ ವಿಳಂಬಕ್ಕೆ ಮೋದಿ ಸರ್ಕಾರವೇ ಕಾರಣ ಹೊರತು ರಾಜ್ಯಗಳಲ್ಲ

ಅವರು ತನ್ನ ಫೇಸ್‌‌ಬುಕ್‌ನಲ್ಲಿ, “ಕೊರೊನಾ ಸೋಂಕಿನಿಂದ ಕೆಮ್ಮು, ನೆಗಡಿ ಮತ್ತು ಉಸಿರಾಟಕ್ಕೆ ತೊಂದರೆಯಾದರೆ ನಿಂಬೆಹಣ್ಣಿನ ರಸವನ್ನು ಮೂಗಿನಲ್ಲಿ ಹಾಕಿಕೊಳ್ಳುವುದರಿಂದ ಆಕ್ಸಿಜನ್ ಸಮಸ್ಯೆ ಕಡಿಮೆಯಾಗುತ್ತದೆ. ಇದನ್ನು 200 ಕ್ಕೂ ಹೆಚ್ಚು ಜನ ಪ್ರಯೋಗ ಮಾಡಿದ್ದಾರೆ ಎಂದು ಡಾ॥ವಿಜಯ್ ಸಂಕೇಶ್ವರ ರವರು ಹೇಳಿದ್ದಾರೆ. ಎಲ್ಲರೂ ಆಕ್ಸಿಜನ್ ಸಮಸ್ಯೆ ಉಂಟಾದಲ್ಲಿ ಮನೆಯ ಮದ್ದನ್ನು ಬಳಸಿ” ಎಂದು ಹೇಳಿದ್ದಾರೆ.(ಫೇಸ್‌ಬುಕ್ ಆರ್ಕೈವ್‌ ಇಲ್ಲಿದೆ)

ಸಂಸದನಾಗಿ ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಕೊರೊನಾ ತೀವ್ರವಾಗಿ ಹರಡುತ್ತಿರುವ ಕಾಲದಲ್ಲಿ ಅವೈಜ್ಞಾನಿಕತೆಯನ್ನು ಹರಡುತ್ತಿರುವುದು ಎಷ್ಟು ಸರಿ ಎಂದು ಹಲವಾರು ಜನರು ಸಂಸದ ಮುನಿಸ್ವಾಮಿ ನೀಡಿರುವ ಸಲಹೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಲಿಂಗಾಯತ ಧರ್ಮ ಕುರಿತು ಎಂ.ಬಿ. ಪಾಟೀಲ್ ಬಗ್ಗೆ ವಿಜಯ್ ಸಂಕೇಶ್ವರ್ ಪತ್ರಿಕೆಯಲ್ಲಿ ಫೇಕ್ ನ್ಯೂಸ್

ಈ ಬಗ್ಗೆ ನಾನುಗೌರಿ.ಕಾಮ್‌‌ನೊಂದಿಗೆ ಮಾತನಾಡಿದ ವೈದ್ಯರೊಬ್ಬರು, “ಮುಖ್ಯವಾಗಿ ಮೂಗಿನಲ್ಲಿ ಗಾಳಿಯನ್ನು ಬಿಟ್ಟು ಬೇರೆ ಯಾವುದೆ ವಸ್ತುಗಳನ್ನು ಸೇವಿಸಬಾರದು. ಒಂದು ವೇಳೆ ಹಾಗೆ ಮಾಡಿದರೆ ಅದು ಶ್ವಾಸನಾಳಕ್ಕೆ ಗಂಭೀರ ಹಾನಿಯುಂಟು ಮಾಡುತ್ತದೆ. ಅಷ್ಟೇ ಅಲ್ಲದೆ ನಿಂಬೆ ರಸದಿಂದ ಕೊರೊನಾ ವೈರಸ್ ಸಾಯುತ್ತದೆ ಎಂಬುದಕ್ಕೆ ಯಾವ ವೈಜ್ಞಾನಿಕ ಆಧಾರವು ಇಲ್ಲ. ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರು, ಅದರಲ್ಲೂ ಕೊರೊನಾದಂತಹ ಸಮಯದಲ್ಲಿ ಇಂತಹ ಸುಳ್ಳು ಸುದ್ದಿಗಳನ್ನು ಹರಡಬಾರದು” ಎಂದು ಹೇಳಿದ್ದಾರೆ.

ಹಿರಿಯ ಪತ್ರಕರ್ತ ಅಮೀನ್ ಮಟ್ಟು ಅವರು, “ಲಿಂಬೆ ಹಣ್ಣು ಚಿಕಿತ್ಸೆಯ ಸಲಹೆ ನೀಡಿದ ಮಾಧ್ಯಮೋದ್ಯಮಿ ವಿಜಯ್ ಸಂಕೇಶ್ವರ್, ಕನ್ನಡ ಪತ್ರಿಕೋದ್ಯಮದ ಹಾಲಿನ ಬಟ್ಟಲಿಗೆ ಲಿಂಬೆಹುಳಿ ಹಿಂಡಿದವರು” ಎಂದು ಸ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಸದರ ಫೇಸ್‌ಬುಕ್ ಸ್ಟೇಟಸ್‌ನಲ್ಲಿ ಕೂಡಾ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಧರ್ಮ ಎಂಬ ಫೇಸ್‌ಬುಕ್ ಖಾತೆಯು, “ಬರೀ ಇದೆ ಆಯ್ತು. ಗೋಮೂತ್ರ ಕುಡಿಯಿರಿ, ಚಪ್ಪಾಳೆತಟ್ಟಿ, ಜಾಗಟೆ ಹೊಡಿರಿ, ಲಿಂಬೆರಸ ಕುಡಿರಿ. ಸಾಮಾನ್ಯನ್ನು ವೈಜ್ಞಾನಿಕವಾಗಿ ಮೇಲೆತ್ತುವುದ ಬಿಟ್ಟು ಬರೀ ಇಂಥ ಮೂಢ ನಂಬಿಕೆಗಳಿಂದ ದೇಶವನ್ನು ಅಧಃ ಪತನದತ್ತ ತೆಗೆದುಕೊಂಡು ಹೋಗುತ್ತಿದ್ದೀರಿ. ಸಂಶಯವೇ ಇಲ್ಲ ಅದಕ್ಕೋಸ್ಕರವೆ ಬಿಜೆಪಿಯನ್ನು ಜನರು ಅಷ್ಟು ವಿರೋಧ ಮಾಡುವುದು. ವೈಜ್ಞಾನಿಕ ತಿಳುವಳಿಕೆ ಇಲ್ಲ, ವೈಚಾರಿಕತೆ ಅಂತೂ ಇಲ್ಲವೇ ಇಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೋಹನ್ ಬಲ್ಲಿದವ್‌ ಅವರು, “ವಿಜಯ ಸಂಕೇಶ್ವರ ಅವರು ವೈದ್ಯಕೀಯ ಶಿಕ್ಷಣ ಎಲ್ಲಿ ಪಡೆದರು” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಸಂಕೇಶ್ವರರ Some-ಶೋಧನೆಗಳು: ಉಚಿತ ರೇಷನ್ ಕೊಟ್ಟರೆ ಜನ ಕೆಲಸಕ್ಕೆ ಬರಲ್ಲ! ಆಮ್ಲಜನಕ ಸಮಸ್ಯೆ ಬಗೆಹರಿಸಲು ನಿಂಬೆರಸ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...