Homeಕರೋನಾ ತಲ್ಲಣ‘ಮೋದಿಯೇ ಕೊರೋನಾ ಸೂಪರ್ ಸ್ಪ್ರೆಡರ್, 2ನೆ ಅಲೆಗೆ ಅವರೇ ಕಾರಣ’: ಭಾರತೀಯ ವೈದ್ಯಕೀಯ ಸಂಘದ ಉಪಾಧ್ಯಕ್ಷರ...

‘ಮೋದಿಯೇ ಕೊರೋನಾ ಸೂಪರ್ ಸ್ಪ್ರೆಡರ್, 2ನೆ ಅಲೆಗೆ ಅವರೇ ಕಾರಣ’: ಭಾರತೀಯ ವೈದ್ಯಕೀಯ ಸಂಘದ ಉಪಾಧ್ಯಕ್ಷರ ಟೀಕೆ

- Advertisement -
- Advertisement -

ಭಾರತೀಯ ವೈದ್ಯಕೀಯ ಸಂಘದ (ಐಎಂಎ) ರಾಷ್ಟ್ರೀಯ ಉಪಾಧ್ಯಕ್ಷ ಡಾ.ನವಜೋತ್ ದಹಿಯಾ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಕೊರೋನಾ ‘ಸೂಪರ್ ಸ್ಪ್ರೆಡರ್’ ಎಂದು ಟೀಕಿಸಿದ್ದು ಕೋವಿಡ್ 2ನೆ ಅಲೆಗೆ ಮೋದಿಯವರೇ ಕಾರಣ ಎಂದು ಆರೋಪಿಸಿದ್ದಾರೆ.

“ವೈದ್ಯಕೀಯ ಸಮೂಹವು ಜನರಿಗೆ ಕಡ್ಡಾಯವಾದ ಕೋವಿಡ್ ಮಾನದಂಡಗಳನ್ನು ಅರ್ಥ ಮಾಡಿಸಲು ಶ್ರಮಿಸುತ್ತಿದ್ದರೆ, ಎಲ್ಲಾ ಕೋವಿಡ್ ಮಾರ್ಗಸೂಚಿಗಳನ್ನು ಗಾಳಿಯಲ್ಲಿ ತೂರುವ ದೊಡ್ಡ ರಾಜಕೀಯ ರ‍್ಯಾಲಿಗಳನ್ನು ನಡೆಸಲು ಪ್ರಧಾನಿ ಮೋದಿ ಹಿಂಜರಿಯಲಿಲ್ಲ” ಎಂದು ಡಾ ದಹಿಯಾ ದಿ ಟ್ರಿಬ್ಯೂನ್‌ಗೆ ತಿಳಿಸಿದ್ದಾರೆ.

ಆರೋಗ್ಯ ಬಿಕ್ಕಟ್ಟಿನ ತೀವ್ರತೆಯ ಹೊರತಾಗಿಯೂ, ಚುನಾವಣಾ ರ‍್ಯಾಲಿಗಳು ಮತ್ತು ಹರಿದ್ವಾರದಲ್ಲಿನ ಕುಂಭಮೇಳದಂತಹ ಧಾರ್ಮಿಕ ಸಭೆಗಳು ಮುಂದುವರೆದವು, ಇದು, ಮಾರಣಾಂತಿಕ ವೈರಸ್ ಹರಡುವುದನ್ನು ನಿಭಾಯಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಗಂಭೀರತೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಅವರು ಹೇಳಿದ್ದಾರೆ.

“ವೈದ್ಯಕೀಯ ಆಮ್ಲಜನಕದ ಕೊರತೆಯು ದೇಶದ ಪ್ರತಿಯೊಂದು ಭಾಗದಲ್ಲೂ ಅನೇಕ ರೋಗಿಗಳ ಸಾವಿಗೆ ಕಾರಣವಾಗಿದೆ, ಆಮ್ಲಜನಕ ಸ್ಥಾವರಗಳನ್ನು ಸ್ಥಾಪಿಸುವ ಹಲವಾರು ಯೋಜನೆಗಳು ಇನ್ನೂ ಕೇಂದ್ರ ಸರ್ಕಾರದಲ್ಲಿ ಬಾಕಿ ಉಳಿದಿವೆ, ಆದರೆ ಇಂತಹ ಪ್ರಮುಖ ಅಗತ್ಯಕ್ಕೆ ಮೋದಿ ಸರ್ಕಾರ ಯಾವುದೇ ಗಮನ ನೀಡಲಿಲ್ಲ’ ಎಂದು ದಹಿಯಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇಶದ ಎಲ್ಲ ನಗರದ ಆಸ್ಪತ್ರೆಗಳಲ್ಲಿ ಭರ್ತಿಯಾಗುತ್ತಿರುವ ಶವಾಗಾರಗಳು ಮತ್ತು ಆಸ್ಪತ್ರೆಗಳ ಹೊರಗಿನ ಆಂಬುಲೆನ್ಸ್‌ಗಳ ಉದ್ದದ ಸಾಲುಗಳಲ್ಲಿ ಸಾಂಕ್ರಾಮಿಕ ರೋಗವು ದೇಶಾದ್ಯಂತ ಹರಡಿದ್ದು ಸ್ಪಷ್ಟವಾಗಿ ಗೋಚರಿಸುತ್ತದೆ ಎಂದು ಅವರು ಟ್ರಿಬ್ಯೂನ್‌ಗೆ ತಿಳಿಸಿದ್ದಾರೆ.

ತಮ್ಮ ವೈಫಲ್ಯವನ್ನು ಖಾಸಗಿ ವೈದ್ಯಕೀಯ ವಲಯ ಮತ್ತು ರಾಜ್ಯ ಸರ್ಕಾರಗಳಿಗೆ ವರ್ಗಾಯಿಸಲು ಯತ್ನಿಸಿದ ಪ್ರಧಾನಮಂತ್ರಿಯವರ ವಿರುದ್ಧ ಡಾ. ದಹಿಯಾ ಕಿಡಿ ಕಾರಿದ್ದಾರೆ.

“ಕೃಷಿ ಕಾನೂನುಗಳ ವಿರುದ್ಧ ನಿಂತ ರೈತರ ಆಂದೋಲನದ ವಿಷಯದಲ್ಲೂ, ಪ್ರಧಾನಿ ನರೇಂದ್ರ ಮೋದಿ ಅವರು ಯಾವುದೇ ರೀತಿಯಲ್ಲಿ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಲಿಲ್ಲ. ರೈತರ ಸಮಸ್ಯೆಗಳನ್ನು ಪರಿಹರಿಸದೆ ರೈತರು ಬೃಹತ್ ಸಂಖ್ಯೆಯಲ್ಲಿ ಸೇರುವುದಕ್ಕೆ ಕಾರಣರಾದ ಮೋದಿ, ಕೋವಿಡ್ ಹರಡುವಿಕೆಯ ಸಾಧ್ಯತೆಯನ್ನು ಹೆಚ್ಚಿಸಿದರು ಎಂದು ದಹಿಯಾ ತಿಳಿಸಿದ್ದಾರೆ.

ಭಾರತದಲ್ಲಿ ಕೋವಿಡ್ ಎರಡನೇ ಅಲೆಯನ್ನು ಮೋದಿ ಮತ್ತು ಅವರ ಸರ್ಕಾರವು ನಿರ್ವಹಿಸುತ್ತಿರುವುದನ್ನು ಜಾಗತಿಕ ಸುದ್ದಿ ಸಂಸ್ಥೆಗಳು ವ್ಯಾಪಕವಾಗಿ ಟೀಕಿಸಿವೆ.
ಸದ್ಯ ದೈನಿಕ ಕೇಸುಗಳ ಸಂಖ್ಯೆ 3.6 ಲಕ್ಷವನ್ನು ದಾಟಿದೆ ಮತ್ತು ದೈನಿಕ ಸಾವುಗಳ ಸಂಖ್ಯೆ 3 ಸಾವಿರದಷ್ಟಿದೆ.


ಇದನ್ನೂ ಓದಿ: 8 ಸಾವುಗಳಾದರೂ ಎಚ್ಚೆತ್ತುಕೊಳ್ಳದ ಕೋಲಾರದ ಜಿಲ್ಲಾಸ್ಪತ್ರೆ: ಅಲ್ಲೆ ದಾಖಲಾಗಿರುವ ಮಹಿಳಾ ಮುಖಂಡೆ ವಿ.ಗೀತಾ ಆಕ್ರೋಶ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. Why not every district responsible person is suing against the district authority who suppose to control the religious. Election. Many other gatherings. They are the main responsible allowed the gathering

  2. Modi controlled election commission to have election in many phases to help them but failed to anticipate second wave.
    Even Pakistan has done better in controlling second wave of Covid-19.
    Now time has come to replace Modi govt and his supporters by responsibly voting for nation building people.

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...