Homeಮುಖಪುಟ‘ಅದು ಹೃದಯವಲ್ಲ, ಕಲ್ಲು’- ಮೋದಿಗೆ ಪರೋಕ್ಷವಾಗಿ ಕುಟುಕಿದ ರಾಹುಲ್‌ ಗಾಂಧಿ

‘ಅದು ಹೃದಯವಲ್ಲ, ಕಲ್ಲು’- ಮೋದಿಗೆ ಪರೋಕ್ಷವಾಗಿ ಕುಟುಕಿದ ರಾಹುಲ್‌ ಗಾಂಧಿ

- Advertisement -
- Advertisement -

ಕೊರೊನಾ ಎರಡನೆ ಅಲೆಯು ದೇಶದಾದ್ಯಂತ ತೀವ್ರವಾಗಿ ಹೆಚ್ಚುತ್ತಿದೆ. ಇಂದು ದೇಶದಲ್ಲಿ 3.86 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದೆ. ಸೋಂಕಿನ ಎರಡನೆ ಅಲೆಯ ಬಗ್ಗೆ ತಜ್ಞರು ಬಿಜೆಪಿಯ ನರೇಂದ್ರ ಮೋದಿ ಸರ್ಕಾರವನ್ನು ಈ ಹಿಂದೆಯೆ ಎಚ್ಚರಿಸಿದ್ದರು. ಆದರೆ ಕೇಂದ್ರ ಸರ್ಕಾರ ಮಾತ್ರ ಯಾವುದೆ ತಯಾರಿಗಳನ್ನು ಮಾಡಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ.

ದೇಶದಲ್ಲಿ ಕನಿಷ್ಠ ಆರೋಗ್ಯ ಸೌಲಭ್ಯ ಸಿಗದ ಸಾಮಾನ್ಯ ಜನರ ಆಕ್ರಂದನ ಮುಗಿಲು ಮುಟ್ಟಿದೆ ಎಂದು ಮಾಧ್ಯಮಗಳು ವರದಿ ಮಾಡುತ್ತಿವೆ. ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಪ್ರಧಾನಿ ಮೋದಿಯನ್ನು ಉಲ್ಲೇಖಿಸದೆ, “ನೋವು ಕೇಳಲು ಸಿದ್ದರಿಲ್ಲದ ಹೃದಯ ಹೃದಯವೇ ಅಲ್ಲ, ಅದು ಕಲ್ಲು” ಎಂದು ಗುರುವಾರ ಕುಟುಕಿದ್ದಾರೆ.

ಇದನ್ನೂ ಓದಿ: ‘ಕೊಲೆ ಪ್ರಕರಣ’- ವರದಿ ನಿಲ್ಲಿಸುವಂತೆ ಕೋರ್ಟ್ ಮೆಟ್ಟಿಲೇರಿದ ಚುನಾವಣಾ ಆಯೋಗ!

ಅವರು ಟ್ವಿಟರ್‌ನಲ್ಲಿ, “ಭಾವನೆಗಳಿಂದ ತುಂಬಿಲ್ಲದ, ನೋವು ಕೇಳಲು ಯಾರು ಸಿದ್ಧರಿಲ್ಲದ, ಹೃದಯವು ಹೃದಯವೇ ಅಲ್ಲ, ಅದು ಕಲ್ಲು. ಈ ‘ವ್ಯವಸ್ಥೆ’ಗೆ ಜನರೊಂದಿಗೆ ಪ್ರೀತಿಯೆ ಇಲ್ಲ” ಎಂದು ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಶುಕ್ರವಾರ ಮತ್ತೆ ಟ್ವೀಟ್ ಮಾಡಿರುವ ಅವರು, ಚಿಕಿತ್ಸೆ ಸಿಗದೆ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಳ್ಳುತ್ತಿರುವ ಭಾರತೀಯರಿಗೆ ಸಂತಾಪ ವ್ಯಕ್ತಪಡಿಸಿದ್ದು, ನಾನು ನಿಮ್ಮೊಂದಿಗೆ ಇದ್ದೇನೆ ಎಂದು ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಎಕ್ಸಿಟ್ ಪೋಲ್: ತಮಿಳುನಾಡಿನಲ್ಲಷ್ಟೇ ಬದಲು, ಉಳಿದೆಡೆ ಅವೇ ಸರ್ಕಾರ ಮುಂದುವರಿಕೆ 

ಅವರು, “ಚಿಕಿತ್ಸೆಯ ಕೊರತೆಯಿಂದಾಗಿ ಪ್ರೀತಿಪಾತ್ರರನ್ನು ಕಳೆದುಕೊಳ್ಳುತ್ತಿರುವ ದೇಶವಾಸಿಗಳಿಗೆ ನನ್ನ ಸಂತಾಪ ಸಲ್ಲಿಸುತ್ತೇನೆ. ಈ ದುರಂತದಲ್ಲಿ ನೀವು ಒಬ್ಬಂಟಿಯಲ್ಲ. ದೇಶದ ಪ್ರತಿಯೊಂದು ರಾಜ್ಯದಿಂದಲೂ ಪ್ರಾರ್ಥನೆ ಮತ್ತು ಸಹಾನುಭೂತಿ ನಿಮ್ಮೊಂದಿಗೆ ಇರುತ್ತದೆ. ನಾವು ಒಟ್ಟಿಗೆ ಇದ್ದರೆ, ಭರವಸೆ ಇದ್ದಂತೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಇತಿಹಾಸ: 60 ಲಕ್ಷ ಜನರ ಹತ್ಯಾಕಾಂಡದ ರೂವಾರಿ ‘ಅಡಾಲ್ಫ್‌ ಹಿಟ್ಲರ್‌‌’ ಆತ್ಮಹತ್ಯೆ ಮಾಡಿಕೊಂಡ ದಿನವಿಂದು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...