Homeಕರ್ನಾಟಕಮಾತಿನ ಶೂರ ಮೋದಿಯವರು ಈಗ ಎಲ್ಲಿದ್ದಾರೆ: ವ್ಯಾಕ್ಸಿನೇಷನ್ ಮುಂದೂಡಿಕೆಗೆ ಸಿದ್ದರಾಮಯ್ಯ ಆಕ್ರೋಶ

ಮಾತಿನ ಶೂರ ಮೋದಿಯವರು ಈಗ ಎಲ್ಲಿದ್ದಾರೆ: ವ್ಯಾಕ್ಸಿನೇಷನ್ ಮುಂದೂಡಿಕೆಗೆ ಸಿದ್ದರಾಮಯ್ಯ ಆಕ್ರೋಶ

- Advertisement -
- Advertisement -

ಟಿವಿಯಲ್ಲಿ ಕಾಣಿಸಿಕೊಂಡು ವೀರಾವೇಶದಿಂದ 18 ರಿಂದ 45 ವಯಸ್ಸಿನವರಿಗೆ ಮೇ ಒಂದರಿಂದ ಲಸಿಕೆಯ ಘೋಷಣೆ ‌ಮಾಡಿದವರು‌ ಪ್ರಧಾನಿ ನರೇಂದ್ರ ಮೋದಿ. ಈಗ ರಾಜ್ಯದ ಬಿಜೆಪಿ ಸರ್ಕಾರ ಲಸಿಕೆಯನ್ನು ಮುಂದೂಡಿದೆ. ಮಾತಿನ ಶೂರ ಮೋದಿಯವರು ಎಲ್ಲಿದ್ದಾರೆ ಈಗ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಶನಿವಾರ ಪ್ರಶ್ನಿಸಿದ್ದಾರೆ.

“18 ರಿಂದ 25 ವರ್ಷ ವಯಸ್ಸಿನವರಿಗೆ ಲಸಿಕೆ ನೀಡಲು ರಾಜ್ಯ ಸರ್ಕಾರ ಸಿದ್ಧತೆ ಮಾಡಿಕೊಂಡಿಲ್ಲ ಎಂದು ಪ್ರಧಾನಿಯವರಿಗೆ ಗೊತ್ತಿರಲಿಲ್ಲವೇ? ಮುಖ್ಯಮಂತ್ರಿಗಳ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿಲ್ಲವೇ? ಮಾತು ತಪ್ಪಿದ ಪ್ರಧಾನಿ ಅವರು ಟಿವಿಯಲ್ಲಿ‌ ಕಾಣಿಸಿಕೊಂಡು ನಿಜ‌ ಸಂಗತಿ ತಿಳಿಸಿ ದೇಶದ ಜನತೆಯಲ್ಲಿ ಕ್ಷಮೆ ಕೇಳಬೇಕು” ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

“ಲಸಿಕೆ ಪಡೆದುಕೊಳ್ಳಲು ಆನ್‌ಲೈನ್ ಮೂಲಕ ಜನರು ಹೆಸರನ್ನು ನೋಂದಣಿ ಮಾಡಬೇಕು. ಗ್ರಾಮೀಣ ಭಾಗದ ಜನರಿಗೆ ಈ ಆನ್‌ಲೈನ್ ನೋಂದಣಿ ಕಷ್ಟದ ಕೆಲಸ. ಹೀಗಾಗಿ ಕೊರೊನಾ ಲಸಿಕೆ ನೀಡುವುದನ್ನು ಪೋಲಿಯೋ ಲಸಿಕೆ ಮಾದರಿಯಲ್ಲೆ ಒಂದು ಅಭಿಯಾನವಾಗಿ ರೂಪಿಸಿ, ಜನರ ಬಳಿಗೆ ಹೋಗಿ ಲಸಿಕೆ ನೀಡಬೇಕು” ಎಂದು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಕರ್ನಾಟಕ ನಗರ ಸ್ಥಳೀಯ ಸಂಸ್ಥೆಗಳ ಫಲಿತಾಂಶ: ಕಾಂಗ್ರೆಸ್‌ಗೆ ಭರ್ಜರಿ ಜಯ – ಬಿಜೆಪಿಗೆ ಮುಖಭಂಗ

“ಲಸಿಕೆ ಪಡೆದವರಿಗೆ ಕೊರೊನಾ ಸೋಂಕು ತಗುಲುವ ಸಾಧ್ಯತೆ ತುಂಬಾ ಕಡಿಮೆ ಇದೆ. ಹೀಗಾಗಿ ರಾಜ್ಯದಲ್ಲಿರುವ 18 ವರ್ಷ ಮೇಲ್ಪಟ್ಟ ಹಾಗೂ 18 ವರ್ಷದೊಳಗಿನ ಎಲ್ಲರಿಗೂ ಶೀಘ್ರವಾಗಿ ಲಸಿಕೆ ಸಿಗುವಂತೆ ಮಾಡಲು ರಾಜ್ಯ ಸರ್ಕಾರ ಗಂಭೀರ ಪ್ರಯತ್ನ ಮಾಡಬೇಕು” ಎಂದು ಹೇಳಿದ್ದಾರೆ.

“ಸರ್ಕಾರದ ಮುಖ್ಯಕಾರ್ಯದರ್ಶಿಯವರ ಜೊತೆ ಲಸಿಕೆ ವಿಚಾರವಾಗಿ ಚರ್ಚಿಸಿದ್ದೇನೆ. ಆರುವರೆ ಕೋಟಿ ಲಸಿಕೆಯ ಅಗತ್ಯವಿದೆ ಎಂದಿದ್ದಾರೆ. ನನ್ನ ಪ್ರಕಾರ ಈ ತಿಂಗಳ ಅಂತ್ಯದ ಒಳಗೆ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡುವುದನ್ನು ಪ್ರಾರಂಭಿಸಲು ಸಾಧ್ಯವಾಗದು. ಬೇಗ ಸಿಕ್ಕಿದ್ದರೆ ಸೋಂಕು ಇನ್ನಷ್ಟು ಕಡಿಮೆಯಾಗುತ್ತಿತ್ತು” ಎಂದು ಅವರು ಹೇಳಿದ್ದಾರೆ.

“ಕಳೆದ ಅಕ್ಟೋಬರ್ ತಿಂಗಳಿನಲ್ಲಿ ಲಸಿಕೆ ತಯಾರಿಕೆ ಸಂಬಂಧ 162 ಯುನಿಟ್ ಗಳಿಗೆ ಕೇಂದ್ರ ಸರ್ಕಾರ ಟೆಂಡರ್ ಕರೆದಿತ್ತು. ಈ ಪೈಕಿ 30 ಯುನಿಟ್ ಗಳಷ್ಟೇ ಕಾರ್ಯಾರಂಭ ಮಾಡಿವೆ. ದೇಶದಲ್ಲಿ ಲಸಿಕೆಯ ಅಭಾವ ಉಂಟಾಗಲು ಇದೇ ಮುಖ್ಯ ಕಾರಣ. ಒಟ್ಟಿನಲ್ಲಿ ಕೇಂದ್ರ ಸರ್ಕಾರದ ತಾತ್ಸಾರ ಧೋರಣೆಗೆ ಜನ ಜೀವ ತೆರುವಂತಾಗಿದೆ” ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೋವಿಡ್ 2ನೆ ಅಲೆ ತೀವ್ರವಾಗುತ್ತಿದ್ದಾಗ ಕುಂಭಮೇಳದಲ್ಲಿ ಮುಳುಗೆದ್ದವರು 70 ಲಕ್ಷ ಜನ!

“45 ವರ್ಷ ಮೇಲ್ಪಟ್ಟವರಿಗೆ ನೀಡುವ ಲಸಿಕೆಗಷ್ಟೇ ಕೇಂದ್ರ ಸರ್ಕಾರ ಹಣ ಕೊಡುವುದು. ಅದಕ್ಕಿಂತ ಕೆಳಗಿನ ವಯೋಮಾನದ ಜನರಿಗೆ ನೀಡುವ ಲಸಿಕೆಗೆ ರಾಜ್ಯಗಳೇ ಹಣ ಹಾಕಬೇಕು. ಸದ್ಯದ ಪರಿಸ್ಥಿತಿಯಲ್ಲಿ ಲಸಿಕೆ ಪಡೆಯುವುದೊಂದೆ ಸೋಂಕು ತಡೆಗಟ್ಟಲು ಇರುವ ದಾರಿ. ಹೀಗಾಗಿ ರಾಜ್ಯ ಸರ್ಕಾರ ವಿಳಂಬ ಮಾಡದೆ ಎಲ್ಲರಿಗೂ ಲಸಿಕೆ ನೀಡಬೇಕು” ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

“ಈ ವರೆಗೆ 45 ವರ್ಷ ಮೇಲ್ಪಟ್ಟ ಶೇ.25 ಜನರಿಗಷ್ಟೇ ಕೊರೊನಾ ಲಸಿಕೆ ನೀಡಲಾಗಿದೆ. ನಮ್ಮಲ್ಲೇ ಲಸಿಕೆಯ ಅಗತ್ಯತೆ ಹೆಚ್ಚಿರುವಾಗ ಪ್ರಧಾನಿ ಮೋದಿ ಅವರು ವಿದೇಶಗಳಿಗೆ 6 ಕೋಟಿ ಲಸಿಕೆ ನೀಡಿ ಭಾರತೀಯರು ಲಸಿಕೆಗಾಗಿ ಪರದಾಡುವಂತೆ ಮಾಡಿದ್ದಾರೆ. ಸೋಂಕು ಹರಡಲು ಇದೂ ಒಂದು ಕಾರಣ. ನಿತ್ಯ ಕೊರೊನಾ ಸೋಂಕು ಮಿತಿಮೀರಿ ಏರಿಕೆಯಾಗುತ್ತಿದ್ದು, ಇದನ್ನು ತಡೆಗಟ್ಟುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ” ಎಂದು ಅವರು ಕಿಡಿ ಕಾರಿದ್ದಾರೆ.

“ಬಿಜೆಪಿ ನಾಯಕರು ಕೊರೊನಾ ಸೋಂಕು ತಡೆಗಟ್ಟುವ ಪ್ರಾಮಾಣಿಕ ಪ್ರಯತ್ನ ಮಾಡಲಿ, ಇಲ್ಲವೇ ಅಧಿಕಾರ ಬಿಟ್ಟು ತೊಲಗಲಿ. ಸರ್ಕಾರದ ಅದಕ್ಷತೆ ಹಾಗೂ ದುರಾಡಳಿತಕ್ಕೆ ಅಮಾಯಕ ಜನರು ಬಲಿಯಾಗುವುದು ಬೇಡ.
ರಾಜ್ಯ ಕಾಂಗ್ರೆಸ್ ಪಕ್ಷವು ಬಡರೋಗಿಗಳಿಗಾಗಿ 10 ಆಂಬುಲೆನ್ಸ್ ಗಳನ್ನು ವ್ಯವಸ್ಥೆಗೊಳಿಸಿ ಅವುಗಳ ಮೂಲಕ ಉಚಿತ ಸೇವೆ ನೀಡುತ್ತಿದೆ ಹಾಗೂ ಕೊರೊನಾ ಸಹಾಯವಾಣಿಯನ್ನು ತೆರೆದು ಸಂಕಷ್ಟದಲ್ಲಿರುವವರಿಗೆ ಅಗತ್ಯ ನೆರವು ನೀಡುತ್ತಿದೆ. ನಮ್ಮ ಪಕ್ಷದ ಶಾಸಕರು, ಮುಖಂಡರು, ಕಾರ್ಯಕರ್ತರು ಇಂಥಾ ಸಂಕಷ್ಟದ ಸಮಯದಲ್ಲಿ ಜನರ ಜೊತೆ ನಿಂತು, ನೆರವಾಗಬೇಕು” ಪಕ್ಷಕ್ಕೆ ಸಿದ್ದರಾಮಯ್ಯ ಅವರು ಕರೆ ನೀಡಿದ್ದಾರೆ.

ಇದನ್ನೂ ಓದಿ: ‘ಸತೀಶ್ ಆಚಾರ್ಯ ಅವರೇ, ನೀವು ಆನೆಯಂತೆ‌ ನಡೆಯಿರಿ’: ಬಿಜೆಪಿ ಐಟಿ ಸೆಲ್‌ ದಾಳಿ ವಿರುದ್ದ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...