Homeಕರ್ನಾಟಕದ್ವಿತೀಯ ಪಿಯು ಪರೀಕ್ಷೆ ಮುಂದೂಡಿಕೆ; ಪ್ರಥಮ ಪಿಯು ಪರೀಕ್ಷೆ ರದ್ದು!

ದ್ವಿತೀಯ ಪಿಯು ಪರೀಕ್ಷೆ ಮುಂದೂಡಿಕೆ; ಪ್ರಥಮ ಪಿಯು ಪರೀಕ್ಷೆ ರದ್ದು!

- Advertisement -
- Advertisement -

ಹೆಚ್ಚುತ್ತಿರುವ ಕೊರೊನಾ ಹಿನ್ನಲೆಯಲ್ಲಿ ಇದೇ ತಿಂಗಳು 24 ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ರಾಜ್ಯ ಸರ್ಕಾರವು ಮುಂದೂಡಿದೆ. ಪರೀಕ್ಷೆಗಳ ದಿನಾಂಕಗಳನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಮಂಗಳವಾರ ತಿಳಿಸಿದ್ದಾರೆ.

ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಮಾತನಾಡಿದ ಅವರು, “ಪರೀಕ್ಷೆಗಳು ಆರಂಭವಾಗುದಕ್ಕಿಂತ 15-20 ದಿನಗಳ ಮೊದಲೆ ಪರೀಕ್ಷಾ ದಿನಾಂಕವನ್ನು ಪ್ರಕಟಿಲಾಗುವುದು. ಪ್ರಸ್ತುತ ಪರೀಕ್ಷೆಗೆ ಸಜ್ಜಾಗಿರುವ ವಿದ್ಯಾರ್ಥಿಗಳು ವಿಚಲಿತರಾಗದೇ ಶ್ರದ್ಧೆಯಿಂದ ವಿದ್ಯಾಭ್ಯಾಸವನ್ನು ಮುಂದುವರೆಸಬೇಕು” ಎಂದು ಕೇಳಿಕೊಂಡಿದ್ದಾರೆ.

ಪ್ರಥಮ ಪಿಯುಸಿ ಪರೀಕ್ಷೆಗಳು ರದ್ದು

ಪ್ರಥಮ ಪಿಯುಸಿಗೆ ನಡೆಯಬೇಕಾಗಿದ್ದ ಪರೀಕ್ಷೆಗಳನ್ನು ರದ್ದು ಮಾಡಲಾಗಿದೆ ಎಂದು ಸಚಿವ ಸುರೇಶ್‌ ಕುಮಾರ್‌ ತಿಳಿಸಿದ್ದು, “ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆ ಮಾಡಲಾಗುವುದು” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: 1 ರಿಂದ 9 ನೇ ತರಗತಿವರೆಗಿನ ವಿದ್ಯಾರ್ಥಿಗಳು ಪರೀಕ್ಷೆಗಳಿಲ್ಲದೆ ಪಾಸ್‌!

“ತೇರ್ಗಡೆ ಮಾಡಲಾಗಿರುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದ ಆರಂಭದಲ್ಲಿ ‘ಸೇತುಬಂಧ’ ಕೋರ್ಸ್‌ಗಳನ್ನು ನಡೆಸಲಾಗುವುದು. ಜೊತೆಗೆ ಶಿಕ್ಷಣ ಇಲಾಖೆಯ ಯೂಟ್ಯೂಬ್‌ ಚಾನೆಲ್‌ನಲ್ಲಿ ಈ ಕೋರ್ಸ್‌ಗಳನ್ನು ಈಗಿನಿಂದಲೇ ಲಭ್ಯವಾಗುವಂತೆ ಕ್ರಮ ಕೈಗೊಳ್ಳುತ್ತೇವೆ” ಎಂದು ಸಚಿವ ಹೇಳಿದ್ದಾರೆ.

ಹಿಂದಿನ ವೇಳಾಪಟ್ಟಿಯಂತೆ ಮೇ 24 ರಿಂದ ಜೂ.16 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಮತ್ತು ಇದರ ನಂತರ ಪ್ರಥಮ ಪಿಯುಸಿ ಪರೀಕ್ಷೆಗಳನ್ನು ನಡೆಸುವುದಾಗಿ ಇಲಾಖೆಯು ಈ ಮೊದಲು ನಿರ್ಧರಿಸಿತ್ತು. ದ್ವಿತೀಯ ಪಿಯುಸಿ ಪ್ರಾಯೋಗಿಕ ಪ್ರಾಯೋಗಿಕ ಪರೀಕ್ಷೆಗಳನ್ನು ಈಗಾಗಲೇ ಮುಂದೂಡಲಾಗಿದೆ.

ಇದನ್ನೂ ಓದಿ: ಕೊರೊನಾ ಉಲ್ಬಣ: ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ‌ ಮುಂದೂಡಿಕೆ

ಇದನ್ನೂ ಓದಿ:ನೀಟ್-ಪಿಜಿ ಪರೀಕ್ಷೆ 4 ತಿಂಗಳು ಮುಂದೂಡಿಕೆ: ಅಂತಿಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿಗಳು ಕೊರೊನಾ ಕರ್ತವ್ಯಕ್ಕೆ

ಇದನ್ನೂ ಓದಿ:ಕೊರೊನಾ ಆತಂಕ: ಸಿಬಿಎಸ್‌ಇ 10 ನೇ ತರಗತಿ ಪರೀಕ್ಷೆಗಳು ರದ್ದು, 12 ನೇ ತರಗತಿ ಪರೀಕ್ಷೆ ಮುಂದೂಡಿಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...