Homeಕರೋನಾ ತಲ್ಲಣಮೇ 10 ರಿಂದ ಲಾಕ್‌ಡೌನ್‌‌‌ - ‘ಜನ ಹೊಟ್ಟೆಗೆ ಏನು ತಿಂತಾರೆ?’; ಆಕ್ರೋಶ

ಮೇ 10 ರಿಂದ ಲಾಕ್‌ಡೌನ್‌‌‌ – ‘ಜನ ಹೊಟ್ಟೆಗೆ ಏನು ತಿಂತಾರೆ?’; ಆಕ್ರೋಶ

ತಮಿಳುನಾಡು ಮತ್ತು ಕೇರಳ ರಾಜ್ಯಗಳು ಲಾಕ್‌ಡೌನ್‌ ಹೇರುವುದರ ಜೊತೆಗೆ ಜನರಿಗೆ ಕೊರೊನಾ ಪರಿಹಾರವಾಗಿ ನಗದು ಮತ್ತು ದಿನಸಿಗಳನ್ನು ಪಡಿತರ ವ್ಯವಸ್ಥೆಯ ಮೂಲಕ ನೀಡುತ್ತಿದೆ.

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ಎರಡನೆ ಅಲೆಯು ತೀವ್ರಗೊಂಡ ಪರಿಣಾಮ ಆರೋಗ್ಯ ಸೌಲಭ್ಯಗಳು ಸಿಗದೆ ಜನರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಇದುವರೆಗೂ ರಾಜ್ಯದಲ್ಲಿ ಅಘೋಷಿತ ಲಾಕ್‌ಡೌನ್ ಇದೆ. ಶುಕ್ರವಾರ ಸಚಿವ ಸಂಪುಟ ಹಾಗೂ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಯಡಿಯೂರಪ್ಪ ಮೇ 10 ರಿಂದ 24 ರವೆಗೆ ‘ಸಂಪೂರ್ಣ ಲಾಕ್‌ಡೌನ್‌’ ಹೇರಿದ್ದಾರೆ. ಆದರೆ ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ತೀವ್ರವಾಗಿ ಆಕ್ರೋಶಗಳೆದ್ದಿದ್ದು ಸರ್ಕಾರವನ್ನು ತಾರಾಟೆಗೆ ತೆಗೆದುಕೊಂಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಅಘೋಷಿತ ಲಾಕ್‌ಡೌನ್‌ ಬಗ್ಗೆ ಮಾತನಾಡಿದ ಸಿಎಂ, “ಕರ್ಫ್ಯೂ ವಿಧಿಸಿರುವುದು ಹೆಚ್ಚಿನ ಪರಿಣಾಮ ಬೀರಿಲ್ಲ. ಜನರು ನಿಯಮ ಉಲ್ಲಂಘಿಸಿ ಓಡಾಡುತ್ತಿರುವುದು ಕಂಡು ಬಂದಿದೆ. ಆದ್ದರಿಂದ 10 ರಿಂದ 24 ರವರೆಗೆ ಲಾಕ್‌ಡೌನ್‌ ಘೋಷಿಸಲಾಗುವುದು. ಈ ಸಮಯದಲ್ಲಿ ಹಾಲು, ಹಣ್ಣು, ತರಕಾರಿ, ಮಾಂಸ, ದಿನಸಿ ವಸ್ತುಗಳ ಮಾರಾಟಕ್ಕೆ ಬೆಳಿಗ್ಗೆ 6 ರಿಂದ 10 ರವರೆಗೆ ಅವಕಾಶವಿದೆ. ತಳ್ಳು ಗಾಡಿಯ ಮೂಲಕ ಹಣ್ಣು ತರಕಾರಿ ಮಾರಾಟಕ್ಕೆ ಅವಕಾಶ ಇದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಂಸ್ಕಾರಕ್ಕೆ ಬರುವವರಿಗೆ ಉಚಿತ ಟಿ,ಕಾಫಿ ನೀಡುತ್ತೇವೆಂದು ನಗುಮುಖದ ಫ್ಲೆಕ್ಸ್‌; ಕನಿಷ್ಠ ಸಂವೇದನೆ ಮರೆತ BJP

ಉಳಿದಂತೆ, ಲಾಕ್‌ಡೌನ್‌ನಲ್ಲಿ ಏನಿದೆ ಏನಿಲ್ಲ ಎಂದು ಮುಖ್ಯಮಂತ್ರಿ ಟ್ವೀಟ್ ಮಾಡಿದ್ದರು. ಅದನ್ನು ಕೆಳಗಿನ ಚಿತ್ರದಲ್ಲಿ ನೋಡಬಹುದಾಗಿದೆ.

ಮುಖ್ಯಮಂತ್ರಿ ಲಾಕ್‌ಡೌನ್‌ ಹೇರುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶಗಳೆದ್ದಿದೆ. ಕೇವಲ ಲಾಕ್‌ಡೌನ್‌ ಹೇರಿದರೆ ಮುಗಿಯಿತೆ, ಜನರು ಕೆಲಸವಿಲ್ಲದೆ ಬದುಕುವುದಾರೂ ಹೇಗೆ? ತಮಿಳುನಾಡು ಮತ್ತು ಕೇರಳ ರಾಜ್ಯಗಳು ಲಾಕ್‌ಡೌನ್‌ ಹೇರುವುದರ ಜೊತೆಗೆ ಜನರಿಗೆ ಕೊರೊನಾ ಪರಿಹಾರವಾಗಿ ನಗದು ಮತ್ತು ದಿನಸಿಗಳನ್ನು ಪಡಿತರ ವ್ಯವಸ್ಥೆಯ ಮೂಲಕ ನೀಡುತ್ತಿದೆ. ಆದರೆ ಯಡಿಯುರಪ್ಪ ನೇತೃತ್ವದ ರಾಜ್ಯ ಸರ್ಕಾರ ಇದು ಯಾವುದನ್ನೂ ಮಾಡದೆ ಕೇವಲ ಲಾಕ್‌ಡೌನ್‌ ಹೇರಿ ಸುಮ್ಮನಿದ್ದರೆ ಸಾಕೆ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಬೆಡ್‌‌ಗೆ ಪರದಾಟ; ತನ್ನ ಪತಿಗಾಗಿ ಮುಖ್ಯಮಂತ್ರಿ ನಿವಾಸದ ಎದುರು ಪ್ರತಿಭಟಿಸಿದ ಮಹಿಳೆ

ಸಾಫ್ಟ್‌ವೇರ್‌ ಇಂಜಿನಿಯರ್‌ ಆಗಿರುವ ಇರ್ಫಾನ್ ಹಕ್, “ಮುಖ್ಯಮಂತ್ರಿ ಬಡ ಜನರಿಗೆ ಪರಿಹಾರವೇನು ಎಂದು ಕೇಳಿದರೆ, ಮಾರ್ಗಸೂಚಿ ಆಮೇಲೆ ಬಿಡುಗಡೆ ಮಾಡ್ತೀವಿ ಅಂತ ಮುಖ ತಿರುಗಿಸಿ ಹೋಗುತ್ತಾರೆ. ಪರಿಹಾರಗಳಿಲ್ಲದ ಲಾಕ್‌ಡೌನ್‌ ಬಡವರಿಗೆ ಬಹಳ ತೊಂದರೆ ನೀಡಲಿದೆ. ನೆರೆಯ ಸರಕಾರಗಳು ಜನರ ಕಷ್ಟಗಳಿಗೆ ಈ ರೀತಿ ಸ್ಪಂದಿಸುತ್ತಿದ್ದಾರೆ. ನಮ್ಮವರು ಬೆಳಿಗ್ಗೆಯೊಮ್ಮೆ, ಸಂಜೆಗೊಮ್ಮೆ ಮಾರ್ಗಸೂಚಿ ಬದಲಾಯಿಸಲು ಲಾಯಕ್ಕು” ಎಂದು ತಮಿಳುನಾಡು ಮತ್ತು ಕೇರಳ ಸರ್ಕಾರದ ಕೊರೊನಾ ಪರಿಹಾರದ ಸುದ್ದಿಯ ಚಿತ್ರವನ್ನು ಹಂಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ‘ನಮ್ಮ ಮಾತನ್ನೂ ಕೇಳಿ’- ಪ್ರಧಾನಿ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಜಾರ್ಖಂಡ್ ಸಿಎಂ

ಸಮುದ್ಯತಾ ರಾಜೇಶ್ ಅವರು, “ಹೀಗೇ ಲಾಕ್‌ಡೌನ್ ಮಾಡ್ತಾ ಇದ್ರೆ. ಆಮೇಲೆ ಜನರು #Act1978 ಸಿನಿಮಾದಲ್ಲಿ ಬರುವ ದೃಶ್ಯದ ಥರ ಬಾಂಬ್ ಕಟ್ಕೊಂಡು ಬಂದು ಮನೆ ಅಡ್ರೆಸ್ ಕೊಟ್ಟು ಬಾಡಿಗೆ, ಕರೆಂಟ್ ಬಿಲ್, ವಾಟರ್ ಬಿಲ್ ಕಟ್ಟಿ ಅಂತ ರಾಜಕಾರಣಿಗಳಿಗೆ ಹೇಳಬಹುದು. ಇರೋ ಅಕ್ಕಿನೂ ಕಿತ್ಕೊಂಡು ಏನೂ ನೆರವಾಗದೇ ಮನೆಲಿ‌ ಇರು ಅಂದ್ರೆ ಜನ ಹೊಟ್ಟೆಗೆ ಏನು ತಿಂತಾರೆ?? ಲಾಕ್‌ಡೌನ್ ಒಂದೇ ಪರಿಹಾರ ಅಂತಾದ್ರೆ‌ ಅದಕ್ಕೆ ಸರಿಯಾದ ವ್ಯವಸ್ಥೆ ಕೂಡ ಮಾಡಬೇಕಲ್ವಾ?” ಎಂದು ಪ್ರಶ್ನಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತರಾದ ಸಾಹಕಾರ್‌ ಅಚ್ಚು, “ನಿರ್ದಿಷ್ಟ ಸಮಯದ ನಂತರ ಜನರು ರಸ್ತೆಗಿಳಿಯುವಂತಿಲ್ಲ. ಹಾಲಿನ ಬೂತ್ ಪೂರ್ತಿ ತೆರೆದಿರುತ್ತದೆ. ಬಹುಷಃ ಬೆಕ್ಕಿಗಾಗಿ ಇರಬಹುದು” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ರಾಜ್ಯಕ್ಕೆ ಆಮ್ಲಜನಕ ನೀಡುವಂತೆ ಕೇಂದ್ರಕ್ಕೆ ಸುಪ್ರೀಂಕೋರ್ಟ್ ಆದೇಶ- ’ಬೆಡ್’ ವಿಚಾರದಲ್ಲೇ ಇರುವ BJP ಸಂಸದರು!

ಕನ್ನಡಪರ ಹೋರಾಟಗಾರ ದಿನೇಶ್ ಕುಮಾರ್‌ ಅವರು, “ಲಾಕ್ ಡೌನ್ ಮಾಡಿದ್ದೀರಿ, ಮಾಡ್ಕೊಳ್ಳಿ. ನಿಮ್ದು,‌ ಮೀಡಿಯಾಗಳದ್ದು ಬಿಟ್ಟಿ ಉಪದೇಶಗಳ ಜಾತ್ರೆ ನಡೀತಾ ಇದೆ. ನಡೀಲಿ. ನಮ್ಮ ಜವಾಬ್ದಾರಿ ನಾವು ಪಾಲಿಸುತ್ತೇವೆ. ನೀವು ಒಂದೇ ಒಂದು‌ ಕೆಲಸ ಮಾಡಿಬಿಡಿ. ಹೇಗೂ ಈ ತಿಂಗಳ ಅಂತ್ಯದವರೆಗೆ ಲಾಕ್ ಡೌನ್ ಇರುತ್ತೆ.‌ ನಾವು ಮನೆಗಳ ಒಳಗೆ ಇರ‌್ತೀವಿ. ಅದೇನು ಮಾಡ್ತೀರೋ ಮಾಡಿ, ಹದಿನೆಂಟು ವಯಸ್ಸು ದಾಟಿದ ರಾಜ್ಯದ ಪ್ರತಿಯೊಬ್ಬ ನಾಗರಿಕನಿಗೆ ಮನೆಮನೆಗೆ ಹೋಗಿ ಕೋವಿಡ್ ಲಸಿಕೆ ಕೊಟ್ಟುಬಿಡಿ. ಎರಡನೇ ಅಲೆಯಿಂದ ಬದುಕಿ‌ ಉಳಿದವರು ಮೂರನೇ ಅಲೆಯಲ್ಲಿ ಜೀವ ಉಳಿಸಿಕೊಳ್ಳುವ ಪ್ರಯತ್ನನಾದ್ರೂ ಮಾಡ್ತೀವಿ. ಇದೊಂದೇ ಕೆಲಸ ಮಾಡಿಬಿಡಿ. ಎಲ್ಲ ಜನಗಳ ಮೇಲೆ ಜವಾಬ್ದಾರಿ ಹೊರೆಸಿದರೆ ಮುಗೀತಾ? ನೀವು ಏನನ್ನೂ ಮಾಡೋದಿಲ್ವಾ? ನಾಚಿಗೆಗೆಟ್ಟೋರೇ, ಇಷ್ಟನ್ನಾದ್ರೂ ಮಾಡಿ ಅಥವಾ ನಾವು ಅಯೋಗ್ಯರು ಅಂತ ಒಪ್ಪಿಕೊಂಡು ತಲೆತಗ್ಗಿಸಿ ನಿಂತುಕೊಳ್ಳಿ” ಎಂದು ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ಆಮ್ಲಜನಕ ಪೂರೈಕೆಯ ಹೊಣೆ ಹೊರಬೇಕಾದ ಕೈಗಾರಿಕಾ ಸಚಿವ ಶೆಟ್ಟರ್ ಎಲ್ಲಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...