Homeಮುಖಪುಟಅಸ್ಸಾಂ ಸಿಎಂ ಸರ್ಬಾನಂದ ಸೋನೊವಾಲ್ ರಾಜೀನಾಮೆ: ಹೊಸ ಸಿಎಂ ಆಗಲಿರುವ ಹಿಮಂತ ಶರ್ಮಾ

ಅಸ್ಸಾಂ ಸಿಎಂ ಸರ್ಬಾನಂದ ಸೋನೊವಾಲ್ ರಾಜೀನಾಮೆ: ಹೊಸ ಸಿಎಂ ಆಗಲಿರುವ ಹಿಮಂತ ಶರ್ಮಾ

- Advertisement -
- Advertisement -

ಅಸ್ಸಾಂನ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆಗೆ ತೆರೆಬಿದ್ದಿದ್ದು, ಹಾಲಿ ಸಿಎಂ ಸರ್ಬಾನಂದ ಸೋನೊವಾಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅಲ್ಲಿಗೆ ಸದ್ಯ ಆರೋಗ್ಯ ಸಚಿವರಾಗಿದ್ದ ಹಿಮಂತ ಬಿಸ್ವ ಶರ್ಮಾ ಅಸ್ಸಾಂ ನೂತನ ಮುಖ್ಯಮಂತ್ರಿಯಾಗುವುದು ಖಚಿತವಾಗಿದೆ.

ಅಸ್ಸಾಂನ ಸ್ಥಳೀಯ ಸೋನೊವಾಲ್-ಕಾಚಾರಿ ಬುಡಕಟ್ಟು ಜನಾಂಗಕ್ಕೆ ಸೇರಿದ ಸೋನೊವಾಲ್ ಮತ್ತು ಈಶಾನ್ಯ ರಾಜ್ಯಗಳ ಎನ್‌ಡಿಎ ಕನ್ವೀನರ್ ಆಗಿರುವ ಅಸ್ಸಾಮೀ ಬ್ರಾಹ್ಮಣರಾದ ಹಿಮಂತ ಬಿಸ್ವ ಶರ್ಮಾರವರ ನಡುವೆ ಮೇ 02 ರಂದು ಫಲಿತಾಂಶ ಪ್ರಕಟವಾದಾಗಿನಿಂದಲೂ ಮುಖ್ಯಮಂತ್ರಿ ಸ್ಥಾನಕ್ಕಾಗಿ ತೀವ್ರ ಪೈಪೋಟಿ ನಡೆದಿತ್ತು. ನಿನ್ನೆ ಇಬ್ಬರು ನಾಯಕರು ದೆಹಲಿಗೆ ತೆರಳಿ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಮತ್ತು ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್‌ರವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.

ಹಿಮಂತ ಬಿಸ್ವಾ ಶರ್ಮಾ 2014ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಸೇರಿದ್ದರು. ನಂತರ ಪ್ರಬಲವಾಗಿ ಬೆಳೆದ ಅವರನ್ನು ಪಕ್ಷದ ಟ್ರಬಲ್ ಶೂಟರ್ ಎನ್ನಲಾಗುತ್ತದೆ. ಪ್ರಚೋದನಾಕಾರಿ ಹೇಳಿಕೆಗಳಿಗೆ ಕುಖ್ಯಾತಿಯಾದ ಅವರು ಈ ಚುನವಣೆಯ ಸಂದರ್ಭದಲ್ಲಿಯೂ ಸಹ “ಹಗ್ರಾಮ ಮೊಹಿಲರಿ ಉಗ್ರವಾದ ಚಟುವಟಿಕೆಯಲ್ಲಿ ತೊಡಗಿದರೆ… ಆತ ಜೈಲಿಗೆ ಹೋಗುತ್ತಾನೆ. ಇದು ನೇರವಾದ ಮಾತು… ಈಗಾಗಲೇ ಸಾಕಷ್ಟು ಪುರಾವೆಗಳು ದೊರೆತಿವೆ. ಈ ಪ್ರಕರಣವನ್ನು ಎನ್ಐಎ (ರಾಷ್ಟ್ರೀಯ ತನಿಖಾ ಸಂಸ್ಥೆ) ಗೆ ನೀಡಲಾಗುತ್ತಿದೆ” ಎಂದು ಬೆದರಿಕೆ ಹಾಕಿದ್ದರು.

ಆ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘನೆ ಅಡಿಯಲ್ಲಿ 48 ಗಂಟೆಗಳ ಕಾಲ ಪ್ರಚಾರದಿಂದ ಚುನಾವಣಾ ಆಯೋಗ ನಿಷೇಧ ಹೇರಿತ್ತು.

ಅಸ್ಸಾಂನ 126 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ 60 ಸ್ಥಾನಗಳಲ್ಲಿ ಜಯಗಳಿಸಿದೆ. ಎನ್‌ಡಿಎ ಮಿತ್ರಪಕ್ಷಗಳಾದ ಎಜಿಪಿ 09 ಮತ್ತು ಯುಪಿಪಿಎಲ್ 06 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಬಹುಮತ ಹೊಂದಿವೆ.

ಈಗ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸರ್ಬಾನಂದ ಸೋನೊವಾಲ್‌ಗೆ ಕೇಂದ್ರ ಸಂಪುಟದಲ್ಲಿ ಸ್ಥಾನಮಾನ ನೀಡಲಾಗುವುದು ಎನ್ನಲಾಗಿದೆ.


ಇದನ್ನೂ ಓದಿ: ಕೊರೊನಾ ಎದುರಿಸಲು ನೆಹರು-ಇಂದಿರಾ-ಮನಮೋಹನ್‌ ಸಿಂಗ್‌ ಕಟ್ಟಿದ ವ್ಯವಸ್ಥೆಯೆ ದೇಶಕ್ಕೆ ಸಹಾಯ ಮಾಡಿದೆ: ಶಿವಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...