Homeಮುಖಪುಟಪ್ರೀತಿಗಾಗಿ ಬೆಂಗಳೂರು - ನಮ್ಮೂರ ಎಲ್ಲರೂ ನಮ್ಮೋರು ಎಂದ ನೆಟ್ಟಿಗರು

ಪ್ರೀತಿಗಾಗಿ ಬೆಂಗಳೂರು – ನಮ್ಮೂರ ಎಲ್ಲರೂ ನಮ್ಮೋರು ಎಂದ ನೆಟ್ಟಿಗರು

- Advertisement -
- Advertisement -

ಯುಗಾದಿಗೆ DVG ರೋಡು
ಕ್ರಿಸ್ಮಸ್‌ಗೆ Brigade ರೋಡು
ರಂಜಾನ್‌ಗೆ Mosque ರೋಡು
ಈ ಒಗ್ಗಟ್ಟನ್ನು ಮುರಿಯಬೇಡ ಬಿಟ್ಟು ಬಿಡು
#ನಮ್ಮೂರ_ಎಲ್ಲರೂ_ನಮ್ಮೋರು…

ಬದುಕು ಅರಸಿ ಬರುವ ಯಾರಿಗೂ ಬೆಂಗಳೂರೇ ಭೇದ ಮಾಡುವುದಿಲ್ಲ. ಇನ್ನು ಮನುಷ್ಯತ್ವದ ಸಿಹಿ ಉಂಡ ನಮಗ್ಯಾವ ವಿಷ? ವಿಷ ಕಕ್ಕುವ ಕೋಮುವಾದವನ್ನು ಬೇರು ಸಮೇತ ಕಿತ್ತು ಬಿಸಾಕೋಣ. ಮಾನವತ್ವದ ಸೇತುವೆ ಕಟ್ಟೋಣ. #ನಮ್ಮೂರ_ಎಲ್ಲರೂ_ನಮ್ಮೋರು…

ಇವು ಪ್ರೀತಿಗಾಗಿ ಬೆಂಗಳೂರು – Bengaluru For Love ವತಿಯಿಂದ ಕರೆ ನೀಡಿದ್ದ ಟ್ವಿಟರ್ ಅಭಿಯಾನದಲ್ಲಿ ಕೇಳಿಬಂದ ಘೋಷವಾಕ್ಯಗಳು.. ಕೋವಿಡ್ ಎರಡನೇ ಅಲೆ ತೀವ್ರಗೊಂಡಿರುವ ಸಂದರ್ಭದಲ್ಲಿ ಕೋಮು ದ್ವೇಷವೂ ತಲೆಎತ್ತಿದೆ. ನಮಗೆ ಉತ್ತಮ ಆರೋಗ್ಯ ವ್ಯವಸ್ಥೆ, ಎಲ್ಲರಿಗೂ ಲಸಿಕೆ ಬೇಕು ಹೊರತು ಕೋಮು ರಾಜಕಾರಣವಲ್ಲ ಎಂದು ನೂರಾರು ಜನರು ಸಾರಿ ಹೇಳುವ ಮೂಲಕ ಜಾತಿ-ಮತ ದ್ವೇಷಕ್ಕೆ ನಮ್ಮಲ್ಲಿ ಜಾಗವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬಿಬಿಎಂಪಿ ವಾರ್‌ ರೂಂನಲ್ಲಿ ಬೆಡ್ ಬ್ಲಾಕಿಂಗ್ ಹಗರಣ ನಡೆಯುತ್ತಿದೆ, 17 ಜನ ಮುಸ್ಲಿಂ ಸಿಬ್ಬಂದಿ ಇದಕ್ಕೆ ಕಾರಣ ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಮಾಡಿದ ಆರೋಪದ ನಂತರ ಕೋಮುದ್ವೇಷ ತೀವ್ರವಾಗಿದ್ದು, ಅನ್ಯಧರ್ಮ ದ್ವೇಷ ಆರಂಭವಾಗಿದೆ. ಆದರೆ ನಮ್ಮ ಬೆಂಗಳೂರು ಸರ್ವಧರ್ಮ ಸಹಿಷ್ಣು ಸಂಸ್ಕೃತಿ ಉಳ್ಳ ನಗರವಾಗಿದೆ. ಹಾಗಾಗಿ ನಮ್ಮೂರಿನ ಎಲ್ಲರೂ ನಮ್ಮವರೆ ಎಂದು ಸಾರಿ ಹೇಳುವ ಮೂಲಕ ಪ್ರೀತಿಯನ್ನು ಹಂಚೋಣ, ದ್ವೇಷವನ್ನು ತಡಯೋಣ ಎಂಬ ಉದ್ದೇಶದಿಂದ ಈ ಟ್ವಿಟರ್ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು.

ಸಾಮಾಜಿಕ ಕಾರ್ಯಕರ್ತರು, ಪತ್ರಕರ್ತರು, ಪ್ರಜ್ಞಾವಂತರು ಕರೆ ನೀಡಿದ್ದ ಈ ಅಭಿಯಾನಕ್ಕೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಬೆಂಗಳೂರನ್ನು ಕೋಮುವಾದಿಗಳ ನಾಡಗಲು ಬಿಡುವುದಿಲ್ಲ, ಇದು ಮಾನವೀಯತೆಯ ಬೀಡು ಎಂದು ಸಾರಿದ್ದಾರೆ.

“ನಮಗೆ‌ ಬೇಕಿರುವುದು ಪ್ರೀತಿಯ ರಾಜಕೀಯ. ನಮ್ಮ‌ಜನರಿಗೆ ಬೇಕಿರುವುದು ಊಟ, ಬೆಡ್, ಆಮ್ಲಜನಕ, ಔಷಧಿ. ಅದನ್ನು ನೀಡಿ, ನಿಮ್ಮ ಕೊಳಕು ರಾಜಕೀಯ‌ ಪಕ್ಕಕಿಡಿ” ಎಂದು ವಕೀಲರು ಮತ್ತು ಸಾಮಾಜಿಕ ಕಾರ್ಯಕರ್ತರಾದ ವಿನಯ್ ಶ್ರೀನಿವಾಸನ್ ಟ್ವೀಟ್ ಮಾಡಿದ್ದಾರೆ.

ಅದೇ ರೀತಿ ಲಸಿಕೆಯ ಮೇಲೆ ಗಮನ ನೀಡಬೇಕೆ ಹೊರತು ಧ್ರುವೀಕರಣದ ಮೇಲಲ್ಲ. ಜಾತಿ-ಧರ್ಮ ಈಗಾದರೂ ಬಿಡಿ, ಲಸಿಕೆ ಆಮ್ಲಜನಕ ತಂದುಕೊಡಿ ಎಂದು ರಕ್ಷಿತ್ ಪೊನ್ನಾಥಪುರರವರು ಟ್ವೀಟ್ ಮಾಡಿದ್ದಾರೆ.

ಬದುಕು ಅರಸಿ ಬರುವ ಯಾರಿಗೂ ಬೆಂಗಳೂರೇ ಭೇದ ಮಾಡುವುದಿಲ್ಲ. ಇನ್ನು ಮನುಷ್ಯತ್ವದ ಸಿಹಿ ಉಂಡ ನಮಗ್ಯಾವ ವಿಷ? ವಿಷ ಕಕ್ಕುವ ಕೋಮುವಾದವನ್ನು ಬೇರು ಸಮೇತ ಕಿತ್ತು ಬಿಸಾಕೋಣ. ಮಾನವತ್ವದ ಸೇತುವೆ ಕಟ್ಟೋಣ ಪ್ರಸಾದ್ ಎಂಬುವವರು ತಿಳಿಸಿದ್ದಾರೆ.

ಮತ್ತಷ್ಟು ಗಮನ ಸೆಳೆದ ಟ್ವೀಟ್‌ಗಳು ಇಲ್ಲಿವೆ ನೋಡಿ…


ಇದನ್ನೂ ಓದಿ: ಕೋವಿಡ್ ನಿರ್ವಹಣೆಗೆ ಕಾರ್ಯಪಡೆ ನೇಮಿಸಿದ ಸುಪ್ರೀಂ: ಮೋದಿ ಸರ್ಕಾರದ ವೈಫಲ್ಯಕ್ಕೆ ಕನ್ನಡಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...