Homeಮುಖಪುಟಆಕ್ಸಿಜನ್ ಟ್ಯಾಂಕ್, ಕೋವಿಡ್ ಔಷಧಿಗಳಿಗೆ ತೆರಿಗೆ ವಿನಾಯಿತಿ ನೀಡಿ: ಪ್ರಧಾನಿಗೆ ಮಮತಾ ಬ್ಯಾನರ್ಜಿ ಆಗ್ರಹ

ಆಕ್ಸಿಜನ್ ಟ್ಯಾಂಕ್, ಕೋವಿಡ್ ಔಷಧಿಗಳಿಗೆ ತೆರಿಗೆ ವಿನಾಯಿತಿ ನೀಡಿ: ಪ್ರಧಾನಿಗೆ ಮಮತಾ ಬ್ಯಾನರ್ಜಿ ಆಗ್ರಹ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಆಮ್ಲಜನಕ ಪೂರೈಕೆ ಸಂಭಾವ್ಯ ಬಿಕ್ಕಟ್ಟನ್ನು ಕಾಣುತ್ತಿರುವ ಸಂದರ್ಭದಲ್ಲಿ ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿರುವ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಆಮ್ಲಜನಕ ಪೂರೈಕೆ ಮತ್ತು ಕೋವಿಡ್ ಚಿಕಿತ್ಸೆಯಲ್ಲಿ ಬಳಕೆಯಾಗುವ ಔಷಧಿಗಳಿಗೆ ತೆರಿಗೆ ವಿನಾಯಿತಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಕೋವಿಡ್ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಬೇಕಾದ ಔಷಧಿ ಮತ್ತು ಸಲಕರಣೆಗಳ ಆಮದಿನ ಮೇಲೆ ತೆರಿಗೆ ವಿನಾಯಿತಿ ನೀಡುವಂತೆ ಕೋರಿ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು ಭಾನುವಾರ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ಆರೋಗ್ಯ ಮೂಲಸೌಕರ್ಯಗಳನ್ನು ಬಲಪಡಿಸಲು, ಬಂಗಾಳ ಮತ್ತು ಭಾರತದಾದ್ಯಂತ ಕೊರೊನಾ ವೈರಸ್-ಪಾಸಿಟಿವ್ ರೋಗಿಗಳ ಚಿಕಿತ್ಸೆಗಾಗಿ ಔಷಧಿಗಳು ಮತ್ತು ಆಮ್ಲಜನಕದ ಪೂರೈಕೆಯನ್ನು ಹೆಚ್ಚಿಸಲು ಅವರು ಪ್ರಧಾನಿಯನ್ನು ಒತ್ತಾಯಿಸಿದ್ದಾರೆ ಎಂದು ಎನ್‌ಡಿಟಿವಿ ಮತ್ತು ಇತರ ಪ್ರಮುಖ ಮಾಧ್ಯಮಗಳು ವರದಿ ಮಾಡಿವೆ.

ಆಮ್ಲಜನಕ ಸಾಂದ್ರಕಗಳು ಮತ್ತು ಸಿಲಿಂಡರ್‌ಗಳಿಂದ ಕ್ರಯೋಜೆನಿಕ್ ಶೇಖರಣಾ ಟ್ಯಾಂಕ್‌ಗಳು ಮತ್ತು ಕೋವಿಡ್ ಔಷಧಿಗಳವರೆಗೆ, ಸಂಸ್ಥೆಗಳು, ವ್ಯಕ್ತಿಗಳು ಮತ್ತು ಪರೋಪಕಾರಿ ಏಜೆನ್ಸಿಗಳು ನೆರವು ನೀಡಿವೆ ಮತ್ತು ಈಗಲೂ ನೀಡಲು ಮುಂದೆ ಬರುತ್ತಿವೆ ಎಂದು ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ. “ಖಾಸಗಿ ನೆರವು ಪ್ರೋತ್ಸಾಹಿಸಲು” ಅಂತಹ ವಸ್ತುಗಳನ್ನು ಜಿಎಸ್‌ಟಿ ಮತ್ತು ಕಸ್ಟಮ್ಸ್ ಸುಂಕದಿಂದ ವಿನಾಯಿತಿ ನೀಡುವಂತೆ ಅವರು ಕೇಂದ್ರವನ್ನು ಒತ್ತಾಯಿಸಿದ್ದಾರೆ.

“ಈ ವಸ್ತುಗಳಿಗೆ ಡ್ಯೂಟಿ ಟ್ಯಾಕ್ಸ್/ ಎಸ್‌ಜಿಎಸ್‌ಟಿ / ಸಿಜಿಎಸ್‌ಟಿ / ಐಜಿಎಸ್‌ಟಿಯಿಂದ ವಿನಾಯಿತಿ ನೀಡಬೇಕು ಎಂದು ಅನೇಕ ದಾನಿಗಳು ಮತ್ತು ಏಜೆನ್ಸಿಗಳು ರಾಜ್ಯ ಸರ್ಕಾರವನ್ನು ಸಂಪರ್ಕಿಸಿವೆ. ಈ ವಸ್ತುಗಳು ಕೇಂದ್ರದ ವ್ಯಾಪ್ತಿಗೆ ಬರುತ್ತವಾದ್ದರಿಂದ ತೆರಿಗೆ, ಸುಂಕ ರದ್ದು ಮಾಡಲು ನಾನು ವಿನಂತಿಸುತ್ತೇನೆ ಎಂದು ಮಮತಾ ಹೇಳಿದ್ದಾರೆ.

ಸಾಕಷ್ಟು ನೆರವಿನ ಸಂಸ್ಥೆಗಳು, ಜನಪರ ಸಂಘಟನೆಗಳು, ಎನ್‌ಜಿಒಗಳು ಸರಬರಾಜು ನಿರ್ಬಂಧಗಳನ್ನು ತೆಗೆದುಹಾಕಲು ಸಹಾಯ ಮಾಡುವಂತೆ, ಜಿಎಸ್‌ಟಿ/ ಕಸ್ಟಮ್ಸ್ ಸುಂಕ ಮತ್ತು ಇತರ ತೆರಿಗೆಗಳಿಂದ ವಿನಾಯಿತಿ ನೀಡುವಂತೆ ಕೇಳಿವೆ. ಕೇಂದ್ರ ಸರ್ಕಾರ ಈ ಬಿಕ್ಕಟ್ಟಿನ ಸಮಯದಲ್ಲಿ ಅದನ್ನು ಮಾಡಿದರೆ ಎಲ್ಲ ರಾಜ್ಯಗಳಿಗೂ ಅನುಕೂಲ ಆಗಲಿದೆ’ ಎಂದು ಮಮತಾ ಪತ್ರದಲ್ಲಿ ವಿವರಿಸಿದ್ದಾರೆ.

‘ಈ ರೀತಿಯ ದೇಣಿಗೆಗಳು ವೈದ್ಯಕೀಯ ಸಂಪನ್ಮೂಲಗಳ ಬೇಡಿಕೆ ಮತ್ತು ಪೂರೈಕೆಯಲ್ಲಿನ ದೊಡ್ಡ ಅಂತರವನ್ನು ಪೂರೈಸುವಲ್ಲಿ ರಾಜ್ಯ ಸರ್ಕಾರಗಳ ಪ್ರಯತ್ನಗಳಿಗೆ ಹೆಚ್ಚು ಪೂರಕವಾಗುತ್ತವೆ” ಎಂದು ಬ್ಯಾನರ್ಜಿ ಒತ್ತಿ ಹೇಳಿದ್ದಾರೆ.

ಇದು ಪಶ್ಚಿಮ ಬಂಗಾಳದ ಕೋವಿಡ್ ಬಿಕ್ಕಟ್ಟಿನ ಕುರಿತು ಮಮತಾ ಬ್ಯಾನರ್ಜಿ ಪಿಎಂ ಮೋದಿಗೆ ಬರೆದ ಮೂರನೇ ಪತ್ರವಾಗಿದೆ. ಬುಧವಾರ ಮೂರನೇ ಅವಧಿಗೆ ಪ್ರಮಾಣವಚನ ಸ್ವೀಕರಿಸಿದ ನಂತರ ಅವರು ಆಮ್ಲಜನಕ ಪೂರೈಕೆ ಬಿಕ್ಕಟ್ಟನ್ನು ಎತ್ತಿ ಶುಕ್ರವಾರ ಪತ್ರ ಬರೆದಿದ್ದರು.
ಆಮ್ಲಜನಕ ಬೇಡಿಕೆ ಈಗಾಗಲೇ ದಿನಕ್ಕೆ 470 ಮೆಟ್ರಿಕ್ ಟನ್‌ಗಳಿಗೆ ಏರಿದೆ ಮತ್ತು ಏಳರಿಂದ ಎಂಟು ದಿನಗಳಲ್ಲಿ ಇದು 550 ಮೆ.ಟನ್.ಗೆ ಏರಿಕೆಯಾಗುವ ನಿರೀಕ್ಷೆಯಿದೆ ಎಂದು ಮುಖ್ಯಮಂತ್ರಿ ಹೇಳಿದ್ದರು.

ವಿದೇಶದಿಂದ ಬರುವ ಕೋವಿಡ್ ಸಂಬಂಧಿತ ಪರಿಹಾರ ಸಾಮಗ್ರಿಗಳ ಮೇಲಿನ ಐಜಿಎಸ್ಟಿ ಮನ್ನಾ ಮಾಡಲಾಗುವುದು ಎಂದು ಸೋಮವಾರ ಕೇಂದ್ರ ತಿಳಿಸಿದೆ.

ಮಮತಾ ಬ್ಯಾನರ್ಜಿ ರಾಜ್ಯವನ್ನು ಭಾಗಶಃ ಲಾಕ್ ಡೌನ್ ಮಾಡಲು ಆದೇಶಿಸಿದ್ದಾರೆ. ಇದರಲ್ಲಿ ಚಳುವಳಿ, ಹೋರಾಟ , ಪ್ರತಿಭಟನೆಗಳ ಮೇಲೆ ವ್ಯಾಪಕವಾದ ನಿರ್ಬಂಧಗಳಿವೆ ಮತ್ತು ರಾಜ್ಯಕ್ಕೆ ಭೇಟಿ ನೀಡುವ ಹೊರಗಿನವರು 72 ಗಂಟೆಗಳಿಗಿಂತ ಹಳೆಯದಾದ ಕೋವಿಡ್- ಋಣಾತ್ಮಕ ವರದಿಯನ್ನು ತೋರಿಸಬೇಕು ಎಂಬ ಆದೇಶ ಹೊರಡಿಸಲಾಗಿದೆ.


ಇದನ್ನೂ ಓದಿ: 10 ಲಕ್ಷ ಭಾರತೀಯರು ಈಗಾಗಲೇ ಕೋವಿಡ್‌ಗೆ ಬಲಿಯಾಗಿದ್ದಾರೆ, ಶೇ. 80ರಷ್ಟು ಸಾವು ದಾಖಲಾಗುತ್ತಿಲ್ಲ: ಗಣಿತ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...