Homeಮುಖಪುಟಲಸಿಕಾ ನೀತಿಯಲ್ಲಿ ನ್ಯಾಯಾಂಗದ ಹಸ್ತಕ್ಷೇಪ ವಿರೋಧಿಸಿದ ಕೇಂದ್ರ ಸರ್ಕಾರ

ಲಸಿಕಾ ನೀತಿಯಲ್ಲಿ ನ್ಯಾಯಾಂಗದ ಹಸ್ತಕ್ಷೇಪ ವಿರೋಧಿಸಿದ ಕೇಂದ್ರ ಸರ್ಕಾರ

- Advertisement -
- Advertisement -

ಕೇಂದ್ರ ಸರ್ಕಾರದ ವ್ಯಾಕ್ಸಿನೇಷನ್ ನೀತಿಯ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿದೆ. ಕೇಂದ್ರದ ಲಸಿಕಾ ನೀತಿ, ವಿಭಿನ್ನ ದರ ನಿಗದಿ, ಲಸಿಕೆಗಳ ಕೊರತೆ ಮತ್ತು ನಿಧಾನಗತಿಯ ಲಸಿಕಾ ಅಭಿಯಾನಗಳ ಕುರಿತು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.

ಕಳೆದ ವಾರ ಉನ್ನತ ನ್ಯಾಯಾಲಯವು ಕೇಂದ್ರ ಸರ್ಕಾರಕ್ಕೆ ಲಸಿಕಾ ನೀತಿಯ ಬಗ್ಗೆ ಕೇಳಿದ ಪ್ರಶ್ನೆಗಳಿಗೆ ಉತ್ತರವಾಗಿ ಕೇಂದ್ರವು ಅಫಿಡವಿಟ್ ಸಲ್ಲಿಸಿತ್ತು. ಅಫಿಡವಿಟ್‌ನಲ್ಲಿ ತನ್ನ ಲಸಿಕಾ ನೀತಿಯನ್ನು ಕೇಂದ್ರ ಸರ್ಕಾರ ಸಮರ್ಥಿಸಿಕೊಂಡಿದ್ದು, ಇದರಲ್ಲಿ ನ್ಯಾಯಾಂಗದ ಹಸ್ತಕ್ಷೇಪವನ್ನು ವಿರೋಧಿಸಿದೆ.

ಕೇಂದ್ರ ಸರ್ಕಾರದ ವ್ಯಾಕ್ಸಿನೇಷನ್ ನೀತಿಯಲ್ಲಿ ನ್ಯಾಯಾಂಗದ ಹಸ್ತಕ್ಷೇಪವುವನ್ನು ವಿರೋಧಿಸಿರುವ ಕೇಂದ್ರ, ಇದು ಅನಿರೀಕ್ಷಿತ ಮತ್ತು ಅನಪೇಕ್ಷಿತ ಪರಿಣಾಮಗಳಿಗೆ ಕಾರಣವಾಗಬಹುದು ಎಂದು ತಾನು ಸಲ್ಲಿಸಿರುವ ಅಫಿಡವಿಟ್‌ನಲ್ಲಿ ತಿಳಿಸಿದೆ.

ಇದನ್ನೂ ಓದಿ: ಡಿಆರ್‌ಡಿಒ ಅಭಿವೃದ್ಧಿಪಡಿಸಿದ ಕೊರೊನಾ ಔಷಧಿಯ ತುರ್ತು ಬಳಕೆಗೆ ಅನುಮೋದಿಸಿದ ಡಿಸಿಜಿಐ!

ಸೋಮವಾರ ಬೆಳಗ್ಗೆ ಕೇಂದ್ರ ಸರ್ಕಾರದ ಅಫಿಡವಿಟ್ ಬಗ್ಗೆ ವಿಚಾರಣೆ ವೇಳೆ ಹಲವು ತಾಂತ್ರಕ ಸಮಸ್ಯೆಗಳು ಕಂಡು ಬಂದಿದ್ದು, ವಿಚಾರಣೆ ತಡವಾಗಿ ಆರಂಭವಾಗಿತ್ತು. ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್, ಎಲ್.ಎನ್. ರಾವ್ ಮತ್ತು ಎಸ್ ರವೀಂದ್ರ ಭಟ್ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿದ್ದಾರೆ.

“ಸರ್ವರ್ ಇಂದು ಸ್ಥಗಿತಗೊಂಡಿದೆ. ನಾವು ನ್ಯಾಯಾಧೀಶರು ನಮ್ಮ ನಡುವೆ ಚರ್ಚೆ ನಡೆಸಿದ್ದೇವೆ ಮತ್ತು ಗುರುವಾರ ಈ ವಿಷಯವನ್ನು ತೆಗೆದುಕೊಳ್ಳಲು ನಿರ್ಧರಿಸಿದ್ದೇವೆ” ಎಂದು ನ್ಯಾಯಾಲಯ ತಿಳಿಸಿದೆ.

ಕೊರೊನಾ ಲಸಿಕೆ ತಯಾರಕರಾದ ಸೀರಮ್ ಇನ್ಸ್ಟಿಟ್ಯೂಟ್ ಮತ್ತು ಭಾರತ್ ಬಯೋಟೆಕ್ ಕೇಂದ್ರಗಳು ರಾಜ್ಯಗಳು ಮತ್ತು ಖಾಸಗಿ ಆಸ್ಪತ್ರೆಗಳಿಗೆ ವಿಭಿನ್ನ ಬೆಲೆಗಳನ್ನು ಘೋಷಿಸಿದ ನಂತರ ಈ ಲಸಿಕಾ ನೀತಿಯ ಬಗ್ಗೆ ಹಲವು ಟೀಕೆಗಳು, ಆಕ್ರೋಶ ದೇಶಾದ್ಯಂತ ಆರಂಭವಾಗಿದ್ದವು. ಸಾರ್ವಜನಿಕ ವಲಯದ ಆಕ್ರೋಶದ ನಂತರವೇ  ಬೆಲೆಗಳು ಕಡಿಮೆಯಾದವು.

ಬೆಲೆಗಳನ್ನು ಮರುಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಕಳೆದ ವಾರ ಕೇಂದ್ರಕ್ಕೆ ನಿರ್ದೇಶನ ನೀಡಿ, “ಇದು ಆರ್ಟಿಕಲ್ 14 (ಕಾನೂನಿನ ಮುಂದೆ ಸಮಾನತೆ) ಮತ್ತು ಆರ್ಟಿಕಲ್ 21 (ಜೀವ ರಕ್ಷಣೆ ಮತ್ತು ವೈಯಕ್ತಿಕ ಸ್ವಾತಂತ್ರ್ಯ)ವನ್ನು ಪಾಲಿಸುತ್ತಿದೆಯೇ ಎಂದು ಖಚಿತಪಡಿಸಿಕೊಳ್ಳಿ ಎಂದು ಹೇಳಿತ್ತು.

ಭಾರತವು ಜನವರಿಯಲ್ಲಿ ವ್ಯಾಕ್ಸಿನೇಷನ್ ಪ್ರಾರಂಭಿಸಿದೆ. ಇದುವರೆಗೆ 17 ಕೋಟಿ ಡೋಸ್‌ಗಳನ್ನು ನೀಡಿದೆ ಎನ್ನಲಾಗಿದೆ. ಆದರೆ ಲಸಿಕಾ ಅಭಿಯಾನದ ವೇಗವನ್ನು ಪ್ರಶ್ನಿಸಲಾಗಿದೆ, ಜೊತೆಗೆ ರಾಜ್ಯಗಳಲ್ಲಿ ಸ್ಟಾಕ್ ಮುಗಿದು ಲಸಿಕಾ ಕೇಂದ್ರಗಳನ್ನು ಮುಚ್ಚುತ್ತಿವೆ.

ರಾಷ್ಟ್ರ ರಾಜಧಾನಿ ದೆಹಲಿ, ಮಧ್ಯಪ್ರದೇಶ, ಕರ್ನಾಟಕ ಮತ್ತು ರಾಜಸ್ಥಾನ ಸೇರಿದಂತೆ ಹಲವಾರು ರಾಜ್ಯಗಳು ಡೋಸೇಜ್‌ಗಳ ಕೊರತೆಯಿಂದಾಗಿ ಮೂರನೇ ಹಂತದ ಲಸಿಕೆ ಅಭಿಯಾನದ ಆರಂಭವನ್ನು ಮುಂದೂಡಿದೆ.

ವ್ಯಾಕ್ಸಿನೇಷನ್ ಮತ್ತು ವೈದ್ಯಕೀಯ ಸಂಪನ್ಮೂಲಗಳ ಲಭ್ಯತೆ, ಆಸ್ಪತ್ರೆಯಲ್ಲಿ ಹಾಸಿಗೆಗಳು ಮತ್ತು ಆಮ್ಲಜನಕದ ಸುತ್ತಲಿನ ಸಮಸ್ಯೆಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.


ಇದನ್ನೂ ಓದಿ: ಆಮ್ಲಜನಕ ಮತ್ತು ವ್ಯಾಕ್ಸಿನೇಷನ್‌ ಸಂಬಂಧಿಸಿ ರಾಷ್ಟ್ರೀಯ ನೀತಿ ಜಾರಿಗೆ ತನ್ನಿ: ಕೇಂದ್ರಕ್ಕೆ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...