Homeಕರೋನಾ ತಲ್ಲಣಬಿಹಾರದ ಗಂಗಾ ನದಿ ತೀರದಲ್ಲಿ ತೇಲಿ ಬಂದ ಮೃತ ದೇಹಗಳು; ಸ್ಥಳೀಯರಲ್ಲಿ ಹೆಚ್ಚಿದ ಆತಂಕ

ಬಿಹಾರದ ಗಂಗಾ ನದಿ ತೀರದಲ್ಲಿ ತೇಲಿ ಬಂದ ಮೃತ ದೇಹಗಳು; ಸ್ಥಳೀಯರಲ್ಲಿ ಹೆಚ್ಚಿದ ಆತಂಕ

- Advertisement -
- Advertisement -

ಬಿಹಾರದ ಬಕ್ಸಾರ್ನ್ ಪ್ರದೇಶದಲ್ಲಿರುವ ಗಂಗಾ ನದಿ ತೀರದಲ್ಲಿ ಸೋಮವಾರ 100 ಕ್ಕೂ ಹೆಚ್ಚು ಉಬ್ಬಿರುವ, ಕೊಳೆಯುವ ಸ್ಥಿತಿಯಲ್ಲಿರುವ ಮೃತ ದೇಹಗಳು ತೇಲಿ ಬಂದಿದ್ದು, ಸ್ಥಳೀಯರಲ್ಲಿ ಕೊರೊನಾ ಹರಡುವ ಆತಂಕ ಹೆಚ್ಚಾಗಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಉತ್ತರ ಪ್ರದೇಶದ ಮತ್ತು ಬಿಹಾರದ ಗಡಿಯಲ್ಲಿರುವ ಚೌಸಾ ಪಟ್ಟಣದಲ್ಲಿ 100 ಕ್ಕೂ ಹೆಚ್ಚು ಮೃತ ದೇಹಗಳು ಗಂಗಾ ನದಿಯಲ್ಲಿ ತೇಲುತ್ತಾ ನದಿ ದಡಗಳಲ್ಲಿ ರಾಶಿ ರಾಶಿಯಾಗಿ ಬಿದ್ದಿವೆ. ಈ ದೃಶ್ಯಗಳನ್ನು ಕಂಡ  ಸ್ಥಳೀಯ ನಿವಾಸಿಗಳು ಭಯಭೀತರಾಗಿದ್ದಾರೆ.

ಈ ಮೃತದೇಹಗಳು ಉತ್ತರ ಪ್ರದೇಶದ ಕಡೆಯಿಂದ ತೇಲಿ ಬಂದಿದ್ದು, ಕೊರೊನಾ ಸೋಂಕಿತ ರೋಗಿಗಳಿಗೆ ಸೇರಿದವು ಎಂದು ಸ್ಥಳೀಯ ಆಡಳಿತ ಅನುಮಾನ ಪಟ್ಟಿದೆ. ಉತ್ತರ ಪ್ರದೇಶದಲ್ಲಿ ಕೊರೊನಾ ಸೋಂಕಿತ ರೋಗಿಗಳಿಗೆ ಶವಸಂಸ್ಕಾರ ಮಾಡಲು ಅಥವಾ ಹೂಳಲು ಸ್ಥಳ ಸಿಗದೆ ನದಿಯಲ್ಲಿ ತೇಲಿ ಬಿಟ್ಟಿದ್ದಾರೆ ಎಂದು ಅಧಿಕಾರಿಗಳು ಆರೋಪಿಸಿದ್ದಾರೆ.

ಇದನ್ನೂ ಓದಿ: ಹರಿಯಾಣ: ಮೇ 17 ರವರೆಗೆ ಲಾಕ್‌ಡೌನ್, ಬಿಪಿಎಲ್ ಕುಟುಂಗಳಿಗೆ 5 ಸಾವಿರ ರೂ. ಪ್ಯಾಕೇಜ್

ಹೆಣಗಳು ತೇಲುತ್ತಿರುವ ಚೌಸಾದ ಮಹಾದೇವ ಘಾಟ್ ಬಳಿ ನಿಂತಿದ್ದ ಅಧಿಕಾರಿ ಅಶೋಕ್ ಕುಮಾರ್,   “ಸುಮಾರು 40 ರಿಂದ 45 ಶವಗಳು ತೇಲುತ್ತಿರುವುದು ಕಂಡುಬಂದಿದೆ. ಶವಗಳನ್ನು ನದಿಗೆ ಎಸೆಯಲಾಗಿದೆ ಎಂದು ತೋರುತ್ತದೆ. ಕೆಲವು ಮಾಹಿತಿ ಪ್ರಕಾರ, 100 ಮೃತ ದೇಹಗಳಿರಬಹುದು” ಎಂದಿದ್ದಾರೆ.

“ಮೃತ ದೇಹಗಳು ನೀರಿನಲ್ಲಿ ಉಬ್ಬಿಕೊಳ್ಳುತ್ತವೆ. ಕನಿಷ್ಠ ಐದರಿಂದ ಏಳು ದಿನಗಳವರೆಗೆ ನೀರಿನಲ್ಲಿ ಇರುತ್ತವೆ. ಉತ್ತರ ಪ್ರದೇಶದ ಯಾವ ನಗರದಿಂದ ಇಲ್ಲಿಗೆ ಬಂದಿವೆ ಎಂದು ನಾವು ತನಿಖೆ ಮಾಡಬೇಕಾಗಿದೆ” ಎಂದು ಮತ್ತೊಬ್ಬ ಅಧಿಕಾರಿ ಕೆ.ಕೆ. ಉಪಾಧ್ಯಾಯ ಹೇಳಿದ್ದಾರೆ.

ಗಂಗಾ ನದಿಯಲ್ಲಿ ತೇಲುತ್ತಿರುವ ಮೃತ ದೇಹಗಳಿಂದ ಮತ್ತು ನದಿಯ ನೀರಿನ ಸೋಂಕಿನ ಬಗ್ಗೆ ಸ್ಥಳೀಯರಲ್ಲಿ ಮತ್ತು ಸುತ್ತಮುತ್ತಲಿನ ಇತರರಲ್ಲಿ ಕೊರೊನಾ ಆತಂಕದ ಭೀತಿ ಎದುರಾಗಿದೆ.

“ಜನರು ಕೊರೊನಾ ಹರಡುವ ಬಗ್ಗೆ ಭಯಭೀತರಾಗಿದ್ದಾರೆ. ನಾವು ಬೇಗ ಶವಗಳನ್ನು ಹೂಳಬೇಕು” ಎಂದು ಗ್ರಾಮಸ್ಥ ನರೇಂದ್ರ ಕುಮಾರ್ ಹೇಳಿದರು. “ಜಿಲ್ಲಾಡಳಿತದ ಅಧಿಕಾರಿಯೊಬ್ಬರು ಬಂದು ಶವಗಳನ್ನು ನದಿಯಿಂದ ಸ್ವಚ್ಛಗೊಳಿಸಲು 500 ರೂಪಾಯಿಗಳನ್ನು ಪಾವತಿಸುವುದಾಗಿ ಹೇಳಿದ್ದಾರೆ” ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಗಂಗಾ ನದಿ ದಂಡೆಯಲ್ಲಿ ತೇಲುತ್ತಿರುವ ಈ ಮೃತ ದೇಹಗಳು ಉತ್ತರ ಪ್ರದೇಶ ಮತ್ತು ಬಿಹಾರ ನಡುವೆ ಆರೋಪ ಪ್ರತ್ಯಾರೋಪಕ್ಕೆ ಕಾರಣವಾಗಿವೆ.


ಇದನ್ನೂ ಓದಿ: ಸರ್ಕಾರ ಜನರ ಮೇಲೆ ದರ್ಪ ಪ್ರದರ್ಶಿಸುವುದು ಬಿಟ್ಟು ಪರಿಹಾರ ನೀಡಲಿ- ಎಚ್.ಡಿ.ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...