Homeಮುಖಪುಟಕೊರೊನಾ ಚಿಕಿತ್ಸೆಗೆ ಹಸುವಿನ ಸಗಣಿ ಬಳಕೆ ಅಪಾಯಕಾರಿ- ವೈದ್ಯರ ಎಚ್ಚರಿಕೆ

ಕೊರೊನಾ ಚಿಕಿತ್ಸೆಗೆ ಹಸುವಿನ ಸಗಣಿ ಬಳಕೆ ಅಪಾಯಕಾರಿ- ವೈದ್ಯರ ಎಚ್ಚರಿಕೆ

- Advertisement -
- Advertisement -

ಕೊರೊನಾ ವೈರಸ್ ನಿವಾರಿಸುತ್ತದೆ ಎಂಬ ನಂಬಿಕೆಯಲ್ಲಿ ಹಸುವಿನ ಸಗಣಿ ಬಳಸುವ ಅಭ್ಯಾಸದ ವಿರುದ್ಧ ದೇಶದಲ್ಲಿ ವೈದ್ಯರು ಎಚ್ಚರಿಕೆ ನೀಡಿದ್ದಾರೆ. ಹಸುವಿನ ಸಗಣಿ ಕೊರೊನ ನಿವಾರಣೆಗೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತದೆ ಎಬುದಕ್ಕೆ ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲ ಎಂದಿದ್ದಾರೆ.

ಈ ರೀತಿ ಸಗಣಿಯ ಬಳಕೆಯಿಂದ ಇತರ ರೋಗಗಳು ಹರಡುವ ಅಪಾಯವಿದೆ ಎಂದು ದೇಶದಲ್ಲಿ ವೈದ್ಯರು ಹೇಳಿದ್ದಾರೆ. ಗುಜರಾತ್‌ನಲ್ಲಿ, ಕೆಲವು ಮಂದಿ ವಾರಕ್ಕೊಮ್ಮೆ ಗೋಶಾಲೆಗೆ ಹೋಗಿ ತಮ್ಮ ದೇಹವನ್ನು ಗೋವಿನ ಸಗಣಿ ಮತ್ತು ಮೂತ್ರದಲ್ಲಿ ಮುಚ್ಚಿಡುತ್ತಾರೆ, ಇದರಿಂದ ರೋಗನಿರೋಧಕ ಶಕ್ತಿಯನ್ನು ಹೆಚ್ಚುತ್ತದೆ ಮತ್ತು ಕೊರೊನಾ ವೈರಸ್‌ನಿಂದ ಚೇತರಿಸಿಕೊಳ್ಳಲು ಸಹಾಯ ಮಾಡುತ್ತದೆ ಎಂದು ನಂಬಿದ್ದಾರೆ.

ಕೊರೊನಾ ವೈರಸ್ ಸಾಂಕ್ರಾಮಿಕ ರೋಗವು ದೇಶದಲ್ಲಿ ಬಾರಿ ಪರಿಣಾಮ ಉಂಟುಮಾಡಿದ್ದು, ಲಸಿಕೆಗಳ ಕೊರತೆ, ಆಸ್ಪತ್ರೆಗಳಲ್ಲಿ ಬೆಡ್‌ಗಳ ಕೊರತೆ, ಆಕ್ಸಿಜನ್ ಬಿಕ್ಕಟಿಗೆ ಕಾರಣವಾಗಿದೆ. ದೇಶದ ನಾಗರಿಕರು ಆಸ್ಪತ್ರೆಯ ಹಾಸಿಗೆಗಳು, ಆಮ್ಲಜನಕ ಅಥವಾ ಔಷಧಿಗಳನ್ನು ಹುಡುಕಲು ಹೆಣಗಾಡುತ್ತಿದ್ದಾರೆ, ಚಿಕಿತ್ಸೆಯ ಕೊರತೆಯಿಂದಾಗಿ ಅನೇಕರು ಕೊರೊನಾಗೆ ಬಲಿಯಾಗುತ್ತಿದ್ದಾರೆ.

ಇದನ್ನೂ ಓದಿ: ಬೆಡ್ ಬ್ಲಾಕಿಂಗ್ ಹಗರಣಕ್ಕೆ ಕೋಮುಬಣ್ಣ: ಪತ್ರಕರ್ತರ ಮುಖ್ಯ ಪ್ರಶ್ನೆಗಳಿಗೆ ಸಂಸದ ತೇಜಸ್ವಿ ಸೂರ್ಯ ನಿರುತ್ತರ!

“ವೈದ್ಯರು ಸಹ ಇಲ್ಲಿಗೆ ಬರುವುದನ್ನು ನಾವು ನೋಡುತ್ತಿದ್ದೇವೆ. ಈ ಚಿಕಿತ್ಸೆಯು ಅವರ ರೋಗನಿರೋಧಕ ಶಕ್ತಿಯನ್ನು ಸುಧಾರಿಸುತ್ತದೆ  ಇದರಿಂದ ಅವರು ಯಾವುದೇ ಭಯವಿಲ್ಲದೆ ಕೊರೊನಾ ಸೋಂಕಿತ ರೋಗಿಗಳಿಗೆ ಚಿಕಿತ್ಸೆ ನೀಡಬಹುದು ಎಂಬುದು ಅವರ ನಂಬಿಕೆ” ಎಂದು ಔಷಧೀಯ ಕಂಪನಿಯ ಸಹಾಯಕ ವ್ಯವಸ್ಥಾಪಕ ಗೌತಮ್ ಮನಿಲಾಲ್ ಬೋರಿಸಾ ಹೇಳಿದ್ದಾರೆ. ಜೊತೆಗೆ ಕಳೆದ ವರ್ಷ ಕೊರೊನಾದಿಂದ ಗೌತಮ್ ಮನಿಲಾಲ್ ಬೋರಿಸಾ ಅವರು ಚೇತರಿಸಿಕೊಳ್ಳಲು ಸಹಾಯ ಮಾಡಿದೆ ಎಂದು ತಿಳಿಸಿದ್ದಾರೆ.

ಭಾರತ ಮತ್ತು ವಿಶ್ವದಾದ್ಯಂತದ ವೈದ್ಯರು ಮತ್ತು ವಿಜ್ಞಾನಿಗಳು ಕೊರೊನಾಗೆ ಪರ್ಯಾಯ ಚಿಕಿತ್ಸೆಯನ್ನು ತೆಗೆದುಕೊಳ್ಳುವುದರ ವಿರುದ್ಧ ಪದೇ ಪದೇ ಎಚ್ಚರಿಕೆ ನೀಡಿದ್ದಾರೆ. ಇಂತಹ ಅಭ್ಯಾಸಗಳು ಹಲವು ಬಗೆಯ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ಹೇಳಿದ್ದಾರೆ.

“ಕೊರೊನಾ ವಿರುದ್ಧ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಗಣಿ ಅಥವಾ ಗೋ ಮೂತ್ರವು ಕೆಲಸ ಮಾಡುತ್ತದೆ ಎಂಬುದಕ್ಕೆ ಯಾವುದೇ ದೃಢವಾದ ವೈಜ್ಞಾನಿಕ ಪುರಾವೆಗಳಿಲ್ಲ, ಇದು ಸಂಪೂರ್ಣವಾಗಿ ನಂಬಿಕೆಯನ್ನು ಆಧರಿಸಿದೆ” ಎಂದು ಭಾರತೀಯ ವೈದ್ಯಕೀಯ ಸಂಘದ ರಾಷ್ಟ್ರೀಯ ಅಧ್ಯಕ್ಷ ಡಾ.ಜೆ.ಎ.ಜಯಲಾಲ್ ತಿಳಿಸಿದ್ದಾರೆ.

ಗೋ ಶಾಲೆಯಲ್ಲಿ ಚಿಕಿತ್ಸೆಗಾಗಿ ಬರುವವರರು ತಮ್ಮ ದೇಹದ ಮೇಲಿನ ಸಗಣಿ ಮತ್ತು ಮೂತ್ರದ ಮಿಶ್ರಣವನ್ನು ಬಳಿದುಕೊಂಡು ಅದು ಒಣಗುವವರೆಗೂ ಕಾಯುತ್ತಾರೆ. ಜೊತೆಗೆ ಆಶ್ರಯದಲ್ಲಿರುವ ಹಸುಗಳನ್ನು ತಬ್ಬಿಕೊಳ್ಳುತ್ತಾರೆ, ಗೌರವಿಸುತ್ತಾರೆ. ರೋಗನಿರೋಧಕ ಶಕ್ತಿಯ ಮಟ್ಟವನ್ನು ಹೆಚ್ಚಿಸಲು ಯೋಗವನ್ನು ಅಭ್ಯಾಸ ಮಾಡುತ್ತಾರೆ. ಸಗಣಿ ಮತ್ತು ಗೋಮೂತ್ರದ ಮಿಶ್ರಣ ಒಣಗಿದ ಮೇಲೆ ಅದನ್ನು ಹಾಲು ಅಥವಾ ಮಜ್ಜಿಗೆಯಿಂದ ತೊಳೆಯಲಾಗುತ್ತದೆ.

ಇದನ್ನೂ ಓದಿ: ತಮಿಳುನಾಡು: ಸ್ಟಾಲಿನ್ ಸಂಪುಟದಲ್ಲಿ ಪುರುಷರದೇ ದರ್ಬಾರು – ಮಹಿಳೆಯರಿಗೆ ಕನಿಷ್ಠ ಪ್ರಾತಿನಿಧ್ಯ!

“ಈ ಉತ್ಪನ್ನಗಳನ್ನು ಬಳಸುವುದು ಮತ್ತು ಸೇವಿಸುವುದರಿಂದ ಆರೋಗ್ಯದ ಅಪಾಯಗಳೂ ಇವೆ. ಇತರ ರೋಗಗಳು ಪ್ರಾಣಿಗಳಿಂದ ಮನುಷ್ಯರಿಗೆ ಹರಡಬಹುದು” ಎಂದು ವೈದ್ಯರು ಹೇಳಿದ್ದಾರೆ.

ಜೊತೆಗೆ ಕೊರೊನಾ ವೈರಸ್ ಹರಡಲು ಗೋಶಾಲೆಯಲ್ಲಿ ಚಿಕಿತ್ಸೆಗೆ ಬರುವ ಜನರು ಕಾರಣವಾಗಬಹುದು ಎಂಬ ಆತಂಕಗಳಿವೆ, ಏಕೆಂದರೆ ಗುಂಪು ಗುಂಪುಗಳಲ್ಲಿ ಜನ ಸೇರುತ್ತಿದ್ದಾರೆ. ಅಹಮದಾಬಾದ್‌ನ ಗೋಶಾಲೆಯ ಉಸ್ತುವಾರಿ ವಹಿಸಿಕೊಂಡಿರುವ ಮಧುಚರಣ್ ದಾಸ್ ಗೋಶಾಲೆಯಲ್ಲಿ ಚಿಕಿತ್ಸೆಗೆ ಭಾಗವಹಿಸುವವರ ಸಂಖ್ಯೆಯನ್ನು ಸೀಮಿತಗೊಳಿಸುತ್ತಿದ್ದಾರೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕೇರಳಕ್ಕೆ ಆಕ್ಸಿಜನ್ ಅವಶ್ಯಕತೆ ಇದೆ, ಬೇರೆ ರಾಜ್ಯಗಳಿಗೆ ನೀಡಲಾಗದು- ಪಿಣರಾಯಿ ವಿಜಯನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...