ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ ನಿರ್ವಹಣೆ ಬಗ್ಗೆ, ಲಸಿಕೆ ನೀಡುವಲ್ಲಿ ವಿಫಲತೆ, ಚಾಮರಾಜನಗರ ದುರಂತ ಪ್ರಕರಣ ಸೇರಿದಂತೆ ಹಲವು ವಿಚಾರಗಳಲ್ಲಿ ಹೈಕೋರ್ಟ್ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಹೈಕೋರ್ಟ್ ನ್ಯಾಯಾಧೀಶರ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದಶಿ ಸಿಟಿ ರವಿ ನ್ಯಾಯಾಧೀಶರು ಸರ್ವಜ್ಞರಲ್ಲ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಇತ್ತೀಚೆಗಷ್ಟೇ ಆಕ್ಸಿಜನ್ ಪೂರೈಕೆ ಕುರಿತು ಕೇಂದ್ರ ಸರ್ಕಾರಕ್ಕೆ ಚಾಟಿ ಬೀಸಿದ್ದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಮತ್ತು ನ್ಯಾಯಮೂರ್ತಿ ಅರವಿಂದ ಕುಮಾರ್, ಲಸಿಕೆ ವಿಚಾರದಲ್ಲೂ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ತರಾಟೆಗೆ ತೆಗೆದುಕೊಂಡಿದ್ದಾರೆ. ಕೊರೊನಾ ಎರಡನೇ ಅಲೆ ನಿಯಂತ್ರಣದಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದಿದ್ದಾರೆ.
ನ್ಯಾಯಾಧೀಶರು ಸರ್ವಜ್ಞರಲ್ಲ ಎಂಬ ಹೇಳಿಕೆಗೆ ಸಾರ್ವಜನಿಕ ವಲಯ, ವಿಪಕ್ಷ ನಾಯಕರು, ಮತ್ತು ವಕೀಲರು ವ್ಯಾಪಲ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಲೆಕ್ಕಕ್ಕೆ ತೆಗೆದುಕೊಳ್ಳದ ಮಾಜಿ ಸಚಿವ ಸಿಟಿ ರವಿ ಮತ್ತೆ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಇದನ್ನೂ ಓದಿ: ಸಾಲದ ವಿಚಾರದಲ್ಲಿ ಸುಳ್ಳು ಹೇಳುವುದು ಬಿಟ್ಟು, ಬಡವರಿಗೆ ಆಹಾರ, ಪ್ಯಾಕೇಜ್ ಘೋಷಿಸಿ- ಸಿದ್ದರಾಮಯ್ಯ
.@CTRavi_BJP ಅವರೇ ಜನರ ಸಂಕಟಕ್ಕೆ ದನಿಯಾಗಲು ಸರ್ವಜ್ಞನಾಗಬೇಕಿಲ್ಲ, ಮಾನವೀಯತೆಯುಳ್ಳ ಮನುಷ್ಯನಾಗಿದ್ದರೆ ಸಾಕು.
ಅಧಿಕಾರದ ದುರಹಂಕಾರ ಬಿಟ್ಟು ಮೊದಲು ಮನುಷ್ಯರಾಗಿ.ನ್ಯಾಯಾಧೀಶರ ನಿಂದನೆ ನ್ಯಾಯಾಲಯದ ನಿಂದನೆ ಕೂಡಾ ಆಗುತ್ತದೆ ಎಂದು ಗೊತ್ತಿಲ್ಲದ ನಿಮ್ಮಂತಹವರನ್ನು
ಸರ್ವಜ್ಞ ಎನ್ನುವುದಿಲ್ಲ, ಮೂರ್ಖ ಎನ್ನುತ್ತಾರೆ. pic.twitter.com/vkQNBMoRTx— Siddaramaiah (@siddaramaiah) May 13, 2021
ಸಿಟಿ ರವಿ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಮೊದಲು ಮನುಷ್ಯರಾಗಿ ಎಂದು ಕಿಡಿಕಾರಿದ್ದಾರೆ. “ಸಿಟಿ ರವಿ ಅವರೇ ಜನರ ಸಂಕಟಕ್ಕೆ ದನಿಯಾಗಲು ಸರ್ವಜ್ಞನಾಗಬೇಕಿಲ್ಲ, ಮಾನವೀಯತೆಯುಳ್ಳ ಮನುಷ್ಯನಾಗಿದ್ದರೆ ಸಾಕು. ಅಧಿಕಾರದ ದುರಹಂಕಾರ ಬಿಟ್ಟು ಮೊದಲು ಮನುಷ್ಯರಾಗಿ. ನ್ಯಾಯಾಧೀಶರ ನಿಂದನೆ ನ್ಯಾಯಾಲಯದ ನಿಂದನೆ ಕೂಡಾ ಆಗುತ್ತದೆ ಎಂದು ಗೊತ್ತಿಲ್ಲದ ನಿಮ್ಮಂತಹವರನ್ನು ಸರ್ವಜ್ಞ ಎನ್ನುವುದಿಲ್ಲ, ಮೂರ್ಖ ಎನ್ನುತ್ತಾರೆ” ಎಂದು ಟ್ವೀಟ್ ಮಾಡಿದ್ದಾರೆ.
ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ನಾಯಕ ಸಿಟಿ ರವಿ ವಿರುದ್ಧ ವಕೀಲರ ಸಂಘ, ಹೈಕೋರ್ಟ್ ವಕೀಲರು ಆಕ್ರೋಶ ಹೊರಹಾಕಿದ್ದಾರೆ.
ಕೊರೊನಾ ಎರಡನೇ ಅಲೆ ಇಡೀ ದೇಶದ ನಾಗರಿಕರನ್ನು ಕಂಗೆಡಿಸಿರುವಾಗ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿರುವುದು ತಪ್ಪೇ ಎಂದು ವಕೀಲರ ಸಂಘದ ಅಧ್ಯಕ್ಷ ಎ.ಪಿ. ರಂಗನಾಥ್ ಪ್ರಶ್ನಿಸಿದ್ದಾರೆ.
ಹೈಕೋರ್ಟ್ ತೀರ್ಪು ನೀಡಿದ ಕೂಡಲೇ ಲಸಿಕೆ ಉತ್ಪಾದನೆ ಇಲ್ಲದೇ ನಾವು ನೇಣು ಹಾಕಿಕೊಳ್ಳುವುದಾ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಕೂಡ ಆಕ್ರೋಶ ವ್ಯಕ್ತಪಡಿಸಿದ್ದರು. ಹೀಗಾಗಿ ಸಿಟಿ ರವಿ ಮತ್ತು ಸದಾನಂದಗೌಡ ಇಬ್ಬರ ವಿಡಿಯೋ ತುಣುಕು ಆಧರಿಸಿ ದೂರು ನೀಡಿರುವ ವಕೀಲ ಜಿ.ಆರ್. ಮೋಹನ್ ಸ್ವಯಂ ಪ್ರೇರಿತ ಕೇಸು ದಾಖಲಿಸಿಕೊಂಡು ತನಿಖೆ ನಡೆಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ: ಚಾಮರಾಜನಗರ ದುರಂತಕ್ಕೆ ಆಮ್ಲಜನಕದ ಕೊರತೆ ಕಾರಣ: ಸಮಿತಿ ವರದಿ
ಇಷ್ಟಾದರೂ ಬಿಜೆಪಿ ಪ್ರಧಾನ ಕಾರ್ಯದಶೀ ಸಿಟಿ ರವಿ ನನ್ನ ಹೇಳಿಕೆಯಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸುವ ಮೂಲಕ ತಮ್ಮ ಹೇಳಿಕೆಯನ್ನು ಮತ್ತೆ ಸಮರ್ಥಿಸಿಕೊಂಡಿದ್ದಾರೆ.
ಟ್ವೀಟ್ ಮಾಡಿರುವ ಅವರು, “ನಾನು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾದರೂ ಏನು..? ನ್ಯಾಯಾಧೀಶರು ಸರ್ವಜ್ಞರಲ್ಲ , ಅವರೂ ತಾಂತ್ರಿಕ ಸಮಿತಿಯ ಸಲಹೆ ಮೇರೆಗೆ ನಿರ್ದೇಶನ ನೀಡುತ್ತಾರೆ ಎಂದಿದ್ದೇನೆ, ಸರ್ವೋಚ್ಚ ನ್ಯಾಯಾಲಯವೂ ಇದನ್ನೇ ಹೇಳಿದೆ. ಇದರಲ್ಲಿ ತಪ್ಪೇನಿದೆ…? ಮೊಸರಲ್ಲಿ ಕಲ್ಲು ಹುಡುಕುವ ಮನೋಭಾವದವರು ಎಲ್ಲದರಲ್ಲೂ ತಪ್ಪು ಹುಡುಕುತ್ತಾರೆ” ಎಂದಿದ್ದಾರೆ.
ಅಷ್ಟಕ್ಕೂ ನಾನು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾದರೂ ಏನು? ನ್ಯಾಯಾಧೀಶರು ಸರ್ವಜ್ಞರಲ್ಲ, ಅವರೂ ತಾಂತ್ರಿಕ ಸಮಿತಿಯ ಸಲಹೆ ಮೇರೆಗೆ ನಿರ್ದೇಶನ ನೀಡುತ್ತಾರೆ ಎಂದಿದ್ದೇನೆ, ಸರ್ವೋಚ್ಚ ನ್ಯಾಯಾಲಯವೂ ಇದನ್ನೇ ಹೇಳಿದೆ.
ಇದರಲ್ಲಿ ತಪ್ಪೇನಿದೆ?
ಮೊಸರಲ್ಲಿ ಕಲ್ಲು ಹುಡುಕುವ ಮನೋಭಾವದವರು ಎಲ್ಲದರಲ್ಲೂ ತಪ್ಪು ಹುಡುಕುತ್ತಾರೆ.ಯದ್ಭಾವಂ ತದ್ಭವತಿ
3/3— C T Ravi ?? ಸಿ ಟಿ ರವಿ (@CTRavi_BJP) May 14, 2021
ಇದನ್ನೂ ಓದಿ: ಸೆಂಟ್ರಲ್ ವಿಸ್ತಾ ಯೋಜನೆಗೆ ವ್ಯಾಪಕ ವಿರೋಧ: ಪೋಟೋ, ವಿಡಿಯೊ ನಿಷೇಧಿಸಿದ ಸರ್ಕಾರ



Kuppa CT Ravi. Don’t have basic knowledge. Slap contempt of the court case on him.
Sadananda Gowda a decent politician also bexome fool like other bhakts.