Homeಕರ್ನಾಟಕಕೊರೊನಾ ಲಸಿಕೆ ಖರೀದಿಗೆ ಕಾಂಗ್ರೆಸ್‌ನಿಂದ 100 ಕೋಟಿ ನೆರವು- ಸಿದ್ದರಾಮಯ್ಯ

ಕೊರೊನಾ ಲಸಿಕೆ ಖರೀದಿಗೆ ಕಾಂಗ್ರೆಸ್‌ನಿಂದ 100 ಕೋಟಿ ನೆರವು- ಸಿದ್ದರಾಮಯ್ಯ

- Advertisement -
- Advertisement -

ಕಾಂಗ್ರೆಸ್ ಪಕ್ಷದ ಎಲ್ಲಾ ವಿಧಾನಸಭಾ, ವಿಧಾನ ಪರಿಷತ್ ಸದಸ್ಯರು ಮತ್ತು ಸಂಸದರ ಪ್ರದೇಶಾಭಿವೃದ್ಧಿ ನಿಧಿಯಲ್ಲಿ ತಲಾ ಒಂದು ಕೋಟಿಯಂತೆ ಒಟ್ಟು 100 ಕೋಟಿ ರೂಪಾಯಿ ಹಣವನ್ನು ವ್ಯಾಕ್ಸಿನ್ ಹಂಚಿಕೆ ಪ್ರಕ್ರಿಯೆಗೆ ನೀಡಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಜೊತೆಗೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಈ ನಿರ್ಧಾರ ಪ್ರಕಟಿಸಿದ್ದಾರೆ. ಜೊತೆಗೆ ಎಲ್ಲರಿಗೂ ಆದಷ್ಟು ಬೇಗ ವ್ಯಾಕ್ಸಿನ್ ಸಿಗಲಿ ಎಂಬುದು ನಮ್ಮ ಆಶಯ ಎಂದಿದ್ದಾರೆ.

ದೇಶದ ಪ್ರತಿಯೊಬ್ಬರಿಗೂ ಕೊರೊನಾ ವ್ಯಾಕ್ಸಿನ್ ನೀಡುವುದೇ ಸೋಂಕು ತಡೆಗಟ್ಟಲು ಇರುವ ಪರಿಣಾಮಕಾರಿ ಮಾರ್ಗವೆಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇಷ್ಟರೊಳಗೆ ಕನಿಷ್ಠ ಅರ್ಧದಷ್ಟು ಜನರಿಗೆ ವ್ಯಾಕ್ಸಿನ್ ನೀಡಿದ್ದರೆ ಕೊರೊನಾ ವಿರುದ್ಧದ ಹೋರಾಟಕ್ಕೆ ಇನ್ನಷ್ಟು ಬಲ ಬಂದಿರುತ್ತಿತ್ತು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಸಾಲದ ವಿಚಾರದಲ್ಲಿ ಸುಳ್ಳು ಹೇಳುವುದು ಬಿಟ್ಟು, ಬಡವರಿಗೆ ಆಹಾರ, ಪ್ಯಾಕೇಜ್ ಘೋಷಿಸಿ- ಸಿದ್ದರಾಮಯ್ಯ

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಬೇಜವಾಬ್ದಾರಿಯಿಂದಾಗಿ ಇಂದು ಜನ ವ್ಯಾಕ್ಸಿನ್‌ಗಾಗಿ ಆಸ್ಪತ್ರೆಗಳಿಗೆ ಅಲೆಯುವ ಪರಿಸ್ಥಿತಿ ಬಂದಿದೆ. ಕರ್ನಾಟಕ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ವ್ಯಾಕ್ಸಿನ್ ನೀಡಿಕೆ ಸಂಬಂಧ ಎರಡೂ ಸರ್ಕಾರಗಳಿಗೆ ಛೀಮಾರಿ ಹಾಕಿವೆ. ಇಷ್ಟಾದರೂ ಬಿಜೆಪಿ ನಾಯಕರಿಗೆ ಬುದ್ದಿ ಬಂದಂತೆ ಕಾಣುತ್ತಿಲ್ಲ ಎಂದು ಕಿಡಿಕಾರಿದ್ದಾರೆ.

ರಾಜ್ಯಕ್ಕೆ ವ್ಯಾಕ್ಸಿನ್ ಬರಲು ಇನ್ನು ಹಲವು ತಿಂಗಳುಗಳಾಗಬಹುದು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರು ಹೇಳಿದ್ದಾರೆ. ಕೆಲವೇ ದಿನಗಳಲ್ಲಿ ಕೊರೊನಾ 3ನೇ ಅಲೆ ಬರಲಿದ್ದು, ಅದರ ಬಗೆಗಿನ ತಜ್ಞರ ಅಭಿಪ್ರಾಯವನ್ನು ಗಮನಿಸಿದರೆ ಮುಂದಿನ ದಿನಗಳ ಬಗ್ಗೆ ಆತಂಕವಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ವ್ಯಾಕ್ಸಿನ್ ನೀಡಿಕೆ ವಿಚಾರದಲ್ಲಿ ಸರ್ಕಾರ ತನ್ನ ಅನುಕೂಲಕ್ಕೆ ತಕ್ಕಂತೆ ಮಾರ್ಗಸೂಚಿಗಳನ್ನು ಬದಲಾವಣೆ ಮಾಡಿಕೊಳ್ಳುತ್ತಿದೆ. ಇದೊಂದು ವೈಜ್ಞಾನಿಕ ಪ್ರಕ್ರಿಯೆ, ವ್ಯಾಕ್ಸಿನ್ ತಯಾರಿಕಾ ಹಂತದಲ್ಲಿಯೇ ಎರಡು ಡೋಸ್ ಗಳ ನಡುವಿನ ದಿನಗಳ ಅಂತರವನ್ನೂ ನಿರ್ಧರಿಸಲಾಗಿರುತ್ತದೆ, ಹಾಗಿದ್ದಾಗ ಪದೇ ಪದೇ ಬದಲಾವಣೆ ಹೇಗೆ ಸಾಧ್ಯ..? ಎಂದು ಪ್ರಶ್ನಿಸಿದ್ದಾರೆ.

ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರಿಗೆ ಕ್ಷೇತ್ರದ ಅಭಿವೃದ್ಧಿ ನಿಧಿಗೆ 2 ಕೋಟಿ ಬರುತ್ತೆ. ನಮ್ಮ 100 ಜನಪ್ರತಿನಿಧಿಗಳು ಡಿಸೈಡ್ ಮಾಡಿದ್ದೇವೆ. ಪ್ರತಿಯೊಬ್ಬರೂ 1 ಕೋಟಿಯನ್ನ ಲಸಿಕೆಗೆ ನೀಡುತ್ತೇವೆ. ಎಲ್ಲಾ ಸೇರಿಸಿ, 100 ಕೋಟಿಗಳನ್ನು ಲಸಿಕೆ ಖರೀದಿಗೆ ಕೊಡುತ್ತೇವೆ ಎಂದಿದ್ದಾರೆ.


ಇದನ್ನೂ ಓದಿ: ಮಧ್ಯಪ್ರದೇಶ: ಕೊರೊನಾದಿಂದ ಅನಾಥರಾದ ಮಕ್ಕಳಿಗೆ ಉಚಿತ ಶಿಕ್ಷಣ, ಮಾಸಿಕ 5000 ರೂ. ಪಿಂಚಣಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...