Homeಕರೋನಾ ತಲ್ಲಣಕೋವಿಡ್ ಉಲ್ಬಣಕ್ಕೆ ದೇಶದ ಎಲ್ಲಾ ವರ್ಗದ ಜನರು ಮತ್ತು ಸರ್ಕಾರದ ನಿರ್ಲಕ್ಷ್ಯ ಕಾರಣ: ಮೋಹನ್ ಭಾಗವತ್

ಕೋವಿಡ್ ಉಲ್ಬಣಕ್ಕೆ ದೇಶದ ಎಲ್ಲಾ ವರ್ಗದ ಜನರು ಮತ್ತು ಸರ್ಕಾರದ ನಿರ್ಲಕ್ಷ್ಯ ಕಾರಣ: ಮೋಹನ್ ಭಾಗವತ್

- Advertisement -
- Advertisement -

ಮೊದಲ ಕೋವಿಡ್ ಅಲೆಯನ್ನು ದೇಶದ ಎಲ್ಲಾ ವರ್ಗದ ಜನರು ಮತ್ತು ಸರ್ಕಾರ ನಿರ್ಲಕ್ಷಿಸಿದ್ದರಿಂದಲೇ ನಾವು ಈ ವೈದ್ಯಕೀಯ ತುರ್ತುಪರಿಸ್ಥಿತಿಯನ್ನು ಎದುರಿಸುತ್ತಿದ್ದೇವೆ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವಾತ್ ಪ್ರತಿಪಾದಿಸಿದ್ದಾರೆ.

ಪಾಸಿಟಿವಿಟಿ ಅನ್‌ಲಿಮಿಟೆಡ್ (ಕೋವಿಡ್ ಕಷ್ಟಕಾಲದಲ್ಲಿ ಸಕರಾತ್ಮತೆಯನ್ನು ಹರಡಬೇಕು) ಎನ್ನುವ ಪ್ರಚಾರಾಂದೋಲನದ ಸರಣಿ ಉಪನ್ಯಾಸ ಮಾಲಿಕೆಯಲ್ಲಿ ಮಾತನಾಡಿದ ಅವರು, “ಕೋವಿಡ್ ಮೊದಲ ಅಲೆಯ ಸಂದರ್ಭದಲ್ಲಿ ವೈದ್ಯರುಗಳು ನಮಗೆ ಎಚ್ಚರಿಕೆ ನೀಡಿದ್ದರು. ಆದರೆ ಸರ್ಕಾರ, ಆಡಳಿತ ಅಥವಾ ಸಾರ್ವಜನಿಕರು ಸುರಕ್ಷತಾ ಕ್ರಮಗಳನ್ನು ಕೈಚೆಲ್ಲಿದುದರ ಪರಿಣಾಮವನ್ನು ನಾವಿಂದು ಅನುಭವಿಸುತ್ತಿದ್ದೇವೆ” ಎಂದರು.

ಈಗ ಮೂರನೇ ಅಲೆ ಬರಲಿದೆ ಎನ್ನಲಾಗಿದೆ. ಇದಕ್ಕೆ ನಾವು ಹೆದರಿ ಕೂರಬೇಕೆ ಅಥವಾ ಹೋರಾಡಿ ಅದರ ವಿರುದ್ಧ ಗೆಲುವು ಸಾಧಿಸಬೇಕೆ? ಈಗಿನ ಪರಿಸ್ಥಿತಿಯಿಂದ ನಾವು ಕಲಿತು ಭವಿಷ್ಯದ ಹೋರಾಟಕ್ಕೆ ಸಜ್ಜಾಗಬೇಕು. ಸದ್ಯ ಭಾರತ ಎದುರಿಸುತ್ತಿರುವ ಆಕ್ಸಿಜನ್, ಔಷಧ, ಬೆಡ್ ಕೊರತೆಗಳ ಸಮಸ್ಯೆಯನ್ನು ಕಡೆಗಣಿಸಿದ ಅವರು, ಇಂದಿನ ತಪ್ಪುಗಳಿಂದ ಪಾಠ ಕಲಿತು ಮುಂದಿನ ಮೂರನೇ ಅಲೆಗೆ ಆತ್ಮವಿಶ್ವಾಸದಿಂದ ಸಜ್ಜಾಗಬೇಕು ಎಂದರು.

“ಬದುಕು ಮತ್ತು ಸಾವಿನ ಚಕ್ರವು ಮುಂದುವರಿಯುತ್ತದೆ… ಈ ವಿಷಯಗಳು ನಮ್ಮನ್ನು ಹೆದರಿಸಲು ಸಾಧ್ಯವಿಲ್ಲ. ಈ ಸಂದರ್ಭಗಳೇ ಭವಿಷ್ಯಕ್ಕಾಗಿ ನಮಗೆ ತರಬೇತಿ ನೀಡುತ್ತವೆ. ಯಶಸ್ಸು ಅಂತಿಮವಲ್ಲ. ವೈಫಲ್ಯ ಮಾರಕವಲ್ಲ. ಮುಂದುವರಿಯುವ ಧೈರ್ಯ ಮಾತ್ರ ಮುಖ್ಯವಾಗಿದೆ” ಎಂದು ಅವರು ಹೇಳಿದರು.

ಜನ ಸಾಯುತ್ತಿರುವುದು ಪಾಸಿಟಿವಿಟಿಯೇ?

ಕೋವಿಡ್ ಉಲ್ಬಣಕ್ಕೆ ಮೋದಿ ಸರ್ಕಾರದ ನಿರ್ಲಕ್ಷ್ಯ, ಅದಕ್ಷತೆ ಮತ್ತು ಅಹಂಕಾರಗಳೆ ನೇರ ಕಾರಣ. ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಪಾಸಿಟಿವಿಟಿ ಹರಡಿ ಎಂಬ ಕಾರ್ಯಕ್ರಮಗಳನ್ನು ಮಾಡುತ್ತಿದೆ. ಜನ ಸಾಯುತ್ತಿರುವುದು ನಿಮಗೆ ಪಾಸಿಟಿವಿಯೇ ಎಂದು ವಿರೋಧ ಪಕ್ಷಗಳು ಸೇರಿದಂತೆ ಹಲವರು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಕಾಶ್ಮೀರದಾಗಿನ ಅಲೌಕಿಕ ಚಲುವೆಯರು ಎಲ್ಲೇ, ಈ ಲೌಕಿಕದ ಜುಜುಬಿ ಸರಕಾರೀ ಆಸ್ಪತ್ರೆ ಬೆಡ್, ಆಕ್ಸಿಜನ್, ಇಂಜೆಕ್ಷನ್ ಎಲ್ಲೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...