Homeಕರೋನಾ ತಲ್ಲಣರಾಜ್ಯದ 97 ಜನರಲ್ಲಿ ಬ್ಲಾಕ್ ಫಂಗಸ್ ಪತ್ತೆ, ನಾಲ್ವರು ಬಲಿ- ಸಚಿವ ಸುಧಾಕರ್‌

ರಾಜ್ಯದ 97 ಜನರಲ್ಲಿ ಬ್ಲಾಕ್ ಫಂಗಸ್ ಪತ್ತೆ, ನಾಲ್ವರು ಬಲಿ- ಸಚಿವ ಸುಧಾಕರ್‌

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ಜೊತೆ ಜೊತೆಗೆ ಕಪ್ಪು ಶಿಲೀಂದ್ರ ಪ್ರಕರಣಗಳು ಪತ್ತೆಯಾಗುತ್ತಿವೆ. ಇದುವರೆಗೆ 97 ಮಂದಿಯಲ್ಲಿ ಸೋಂಕು ಕಂಡು ಬಂದಿದೆ ಮತ್ತು ನಾಲ್ವರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವ ಸುಧಾಕರ್‌​ ಹೇಳಿದ್ದಾರೆ.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬ್ಲಾಕ್​​ ಫಂಗಸ್​ ಕಾಣಿಸಿಕೊಂಡಿದೆ. ಕಪ್ಪು ಶಿಲೀಂದ್ರ ಸೋಂಕಿಗೆ ಒಳಗಾಗಿ ಸಾವನ್ನಪ್ಪಿದ ನಾಲ್ವರಲ್ಲಿ ಮೂರು ಬೆಂಗಳೂರಿನವರಾಗಿದ್ದಾರೆ, ಒಬ್ಬರು ಕೋಲಾರ ಜಿಲ್ಲೆಯವರು ಎಂದು ಮಾಹಿತಿ ನೀಡಿದ್ದಾರೆ.

ಸೋಂಕಿನ​​ ​ಬಗ್ಗೆ ಚರ್ಚಿಸಲು ಆರೋಗ್ಯ ಸೌಧದಲ್ಲಿ ಸಚಿವ ಕೆ. ಸುಧಾಕರ್ ನೇತೃತ್ವದಲ್ಲಿ, ನೇತ್ರ ತಜ್ಞ ಭುಜಂಗಶೆಟ್ಡಿ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ತಜ್ಞರ ಸಭೆ ನಡೆಯಿತು. ಸಭೆ ಬಳಿಕ ಮಾತನಾಡಿದ ಆರೋಗ್ಯ ಸಚಿವ ಸುಧಾಕರ್​, ಬೆಂಗಳೂರು ಹೊರತುಪಡಿಸಿ ಮೈಸೂರು ಮೆಡಿಕಲ್ ಕಾಲೇಜು, ಶಿವಮೊಗ್ಗ ಮೆಡಿಕಲ್, ಜಿಮ್ಸ್, ಕಿಮ್ಸ್, ಕೆಎಂಸಿ ಹಾಗೂ ವೆನ್‌ಲಾಕ್ ಆಸ್ಪತ್ರೆಗಳಲ್ಲಿ ಸೋಂಕಿಗೆ ಚಿಕಿತ್ಸೆ ನೀಡಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಬ್ಲಾಕ್ ಫಂಗಸ್‌ಗೆ ಇಬ್ಬರು ಬಲಿ- ಪ್ರಕರಣಗಳ ನಿಖರ ಮಾಹಿತಿಯಿಲ್ಲ ಎಂದ ಆರೋಗ್ಯ ಸಚಿವರು!

ಕಪ್ಪು ಶಿಲೀಂದ್ರ ಸೋಂಕನ್ನು ಈಗ ಅಧಿಕೃತವಾಗಿ ಸೂಚಿತ ಖಾಯಿಲೆ ಎಂದು ಘೋಷಿಸಲಾಗಿದ್ದು ಎಲ್ಲ ಆಸ್ಪತ್ರೆಗಳು ಪ್ರಕರಣಗಳನ್ನು ವರದಿ ಮಾಡಬೇಕು. ಇದರ ಚಿಕಿತ್ಸೆಗೆ ಬಳಸುವ Amphotericin B ಎಂಬ ಔಷಧದ 20,000 ವೈಯಲ್ಸ್ ಗಳನ್ನ ತರಿಸಲು ನಿರ್ಧರಿಸಿದ್ದು, ಆಕ್ಸಿಜನ್ ಕಲುಷಿತಗೊಳ್ಳುತ್ತಿರುವ ಮೂಲಗಳನ್ನು ಅರಿಯಲು ಕ್ರಮ ಕೈಗೊಳ್ಳಲಾಗುವುದು ಎಂದು ಸುಧಾಕರ್‌ ತಿಳಿಸಿದ್ದಾರೆ.

ಡಾ.ಎಚ್.ಎಸ್.ಸತೀಶ್ ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸಿಲಾಗಿದ್ದು ಸೋಂಕಿನ ಕಾರಣ ಮತ್ತು ಚಿಕಿತ್ಸೆ ಬಗ್ಗೆ ಸರ್ಕಾರಕ್ಕೆ ವರದಿ ನೀಡಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಭಾನುವಾರ ಈ ಕುರಿತು ಮಾತನಾಡಿದ್ದ ಸಚಿವರು, “ರಾಜ್ಯದಲ್ಲಿ ಎಷ್ಟು ಜನ ಬ್ಲಾಕ್ ಫಂಗಸ್ ಪ್ರಕರಣ ದಾಖಲಾಗಿದೆ. ಎಷ್ಟು ಜನ ಸಾವನ್ನಪ್ಪಿದ್ದಾರೆ ಎನ್ನುವ ಬಗ್ಗೆ ನಿಖರ ಮಾಹಿತಿಯಿಲ್ಲ. ಖಾಸಗಿ ಆಸ್ಪತ್ರೆಯಲ್ಲಿಯೂ ಅನೇಕರು ದಾಖಲಾಗಿದ್ದಾರೆ, ಹೀಗಾಗಿ ಖಚಿತ ಮಾಹಿತಿ ಲಭ್ಯವಿಲ್ಲ. ಇದಕ್ಕಾಗಿ ನಾವು ತಜ್ಞರ ಸಮಿತಿ ರಚನೆ ಮಾಡ್ತಿದ್ದೇವೆ. ಅಂಕಿ ಅಂಶಗಳು, ಚಿಕಿತ್ಸೆ ವಿಧಾನದ ಬಗ್ಗೆ ಸಮಿತಿ ನಮಗೆ ಮಾರ್ಗದರ್ಶನ ಈ ಸಮಿತಿ ನೀಡುತ್ತೆ ಎಂದು ತಿಳಿಸಿದ್ದರು.


ಇದನ್ನೂ ಓದಿ: ಮೋದಿಯವರೇ ನಮ್ಮ ಮಕ್ಕಳ ಲಸಿಕೆಯನ್ನು ವಿದೇಶಕ್ಕೆ ಏಕೆ ಕಳಿಸಿದಿರಿ? – ಕಾಂಗ್ರೆಸ್ ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...