Homeಕರ್ನಾಟಕಕಳೆದ ಬಾರಿಗಿಂತ ಕೊರೊನಾ ಆರ್ಥಿಕ ಪ್ಯಾಕೇಜ್ ಪರಿಹಾರ ಮೊತ್ತ ಕಡಿತಗೊಳಿಸಿದ ರಾಜ್ಯ ಸರ್ಕಾರ

ಕಳೆದ ಬಾರಿಗಿಂತ ಕೊರೊನಾ ಆರ್ಥಿಕ ಪ್ಯಾಕೇಜ್ ಪರಿಹಾರ ಮೊತ್ತ ಕಡಿತಗೊಳಿಸಿದ ರಾಜ್ಯ ಸರ್ಕಾರ

- Advertisement -
- Advertisement -

ಕೊರೊನಾ ಎರಡನೇ ಅಲೆಯಲ್ಲಿ ಸಂಕಷ್ಟಕ್ಕೆ ಈಡಾಗಿರುವ ಜನರಿಗೆ ರಾಜ್ಯ ಸರ್ಕಾರ 1,250 ಕೋಟಿ ರೂ. ಗಾತ್ರದ ಪ್ಯಾಕೇಜ್ ಘೋಷಣೆ ಮಾಡಿದೆ. ಮೇ 24ರ ಬಳಿಕ ಲಾಕ್​ಡೌನ್ ಮುಂದುವರೆಸುವ ಬಗ್ಗೆ ಮೇ 23ರಂದು ನಿರ್ಧಾರ ಮಾಡಿ, ಘೋಷಿಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಆದರೆ, ಕಳೆದ ಬಾರಿಗಿಂತ ಕೊರೊನಾ ಆರ್ಥಿಕ ಪ್ಯಾಕೇಜ್ ಪರಿಹಾರದ ಮೊತ್ತವನ್ನು ರಾಜ್ಯ ಸರ್ಕಾರ ಕಡಿತಗೊಳಿಸಿದೆ.

ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದೆ ಎಂದು 14 ದಿನಗಳು ಕಠಿಣ ಕ್ರಮ ವಿಧಿಸಿದ್ದ ರಾಜ್ಯ ಸರ್ಕಾರ ಕಾರ್ಮಿಕರಿಗೆ, ಶ್ರಮಿಕರಿಗೆ ಆರ್ಥಿಕ ಪ್ಯಾಕೇಜ್ ಘೋಷಿಸಿಲ್ಲ ಎಂದು ಸಾರ್ವಜನಿಕ ವಲಯ, ಪ್ರತಿ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ್ದವು. ಲಾಕ್‌ಡೌನ್ ಎಂದು ಘೋಷಣೆ ಮಾಡಿ, ಆರ್ಥಿಕ ಪ್ಯಾಕೇಜ್ ನೀಡಿ ಎಂದು ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯು, ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದರು.

ಸಚಿವರು ಮತ್ತು ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಮುಖ್ಯಮಂತ್ರಿ ಯಡಿಯೂರಪ್ಪ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದಾರೆ. ಈ ವೇಳೆ ಕೊರೊನಾ ಸಂಕಷ್ಟದಲ್ಲಿರುವ ಶ್ರಮಿಕರಿಗೆ, ಕಾರ್ಮಿಕರಿಗೆ, ಬೀದಿ ಬದಿಯ ವ್ಯಾಪಾರಿಗಳು, ಆಟೋ, ಟ್ಯಾಕ್ಸಿ, ಕ್ಯಾಬ್ ಚಾಲಕರು ಸೇರಿದಂತೆ ಬಹುತೇಕ ಎಲ್ಲರಿಗೂ ಪ್ಯಾಕೇಜ್‌ ಘೋಷಿಸಿದ್ದಾರೆ.ಇದರಿಂದ ಸುಮಾರು 30 ಲಕ್ಷ ಫಲಾನುಭವಿಗಳಿಗೆ ಸಹಾಯಕವಾಗಲಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಇದನ್ನೂ ಓದಿ: ಪಿಣರಾಯಿ 2.0 – ಸಿಪಿಐ(ಎಂ)ನಿಂದ ಹೊಸ ಮುಖಗಳಿಗೆ ಮಂತ್ರಿ ಸ್ಥಾನ; ಕೆ.ಕೆ. ಶೈಲಜಾ ಔಟ್‌!

ಹೂ ಬೆಳೆಗಾರರಿಗೆ ಪ್ರತಿ ಹೆಕ್ಟೇರ್‌ಗೆ ಹೂವು ಹಾನಿಗೆ 10 ಸಾವಿರ ರೂ. ಮತ್ತು ಹಣ್ಣು ಮತ್ತು ತರಕಾರಿ ಬೆಳೆಗಾರರಿಗೆ ನಷ್ಟ ಉಂಟಾಗಿದ್ದರೆ ಗರಿಷ್ಠ 1 ಹೆಕ್ಟೇರ್‌ಗೆ ಮಿತಿಗೊಳಿಸಿ ಪ್ರತಿ ಹೆಕ್ಟೇರ್‌ಗೆ 10,000 ರೂ.ನಂತೆ ಸಹಾಯ ಒದಗಿಸಲಾಗುತ್ತದೆ.

ಲೈಸೆನ್ಸ್ ಹೊಂದಿದ ಹಾಗೂ ನೋಂದಣಿ ಮಾಡಿಸಿದ ಆಟೋ, ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಚಾಲಕರಿಗೆ  ರೂ. 3000 ಪ್ರತಿ ಚಾಲಕರಿಗೆ ಪರಿಹಾರ ನೀಡಲಾಗುತ್ತದೆ. ಇದರ ಅಡಿ ಒಟ್ಟು 2.10 ಲಕ್ಷ ಫಲಾನುಭವಿಗಳಿಗೆ ಅನುಕೂಲವಾಗಲಿದ್ದು, 63 ಕೋಟಿ ವೆಚ್ಚವಾಗಲಿದೆ ಎಂದಿದ್ದಾರೆ.

ಕಟ್ಟಡ ಕಾರ್ಮಿಕರಿಗೆ ತಲಾ 3 ಸಾವಿರದಂತೆ 490 ಕೋಟಿ ರೂ. ಪ್ಯಾಕೇಜ್ ಮೀಸಲಿಡಲಾಗಿದೆ. ಅಸಂಘಟಿತ ಕಾರ್ಮಿಕರಿಗೆ- 61 ಕೋಟಿ ರೂ, ರಸ್ತೆ ಬದಿ ವ್ಯಾಪಾರಸ್ಥರಿಗೆ 2 ಸಾವಿರ ರೂಪಾಯಿಯಂತೆ ಒಟ್ಟು 45 ಕೋಟಿ, ಕಲಾವಿದರಿಗೆ, ಕಲಾತಂಡಗಳಿಗೆ 2,000 ರೂ. ಇಡಲಾಗಿದೆ.

ಬಿಬಿಎಂಪಿ, ನಗರಾಭಿವೃದ್ಧಿ ಅಡಿಯಲ್ಲಿ ಇಂದಿರಾ ಕ್ಯಾಂಟೀನ್‌ಗಳಲ್ಲಿ 6 ಲಕ್ಷ ಜನರಿಗೆ ಊಟ ನೀಡಲಾಗುತ್ತಿದೆ. ಇದಕ್ಕೆ 25 ಕೋಟಿ ಖರ್ಚು ಆಗುತ್ತಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕೋವಿಡ್‌ನಿಂದ ಯುಪಿ ಸಚಿವ ನಿಧನ: 2ನೆ ಅಲೆಗೆ ಯುಪಿ ಬಿಜೆಪಿಯ 5 ಶಾಸಕರು ಬಲಿ

ಆದರೆ, ಕಳೆದ ವರ್ಷ ಲಾಕ್​ಡೌನ್ ವೇಳೆ ತಲಾ ಕಾರ್ಮಿಕರಿಗೆ ರಾಜ್ಯ ಸರ್ಕಾರ 5 ಸಾವಿರ ರೂ. ಸಹಾಯಧನ ಘೋಷಿಸಿತ್ತು. ಈ ಬಾರಿ ಅದಕ್ಕಿಂತ ಕಡಿಮೆ ನೀಡಲಾಗಿದೆ.

ರಾಜ್ಯ ಸರ್ಕಾರ ಘೋಷಿಸಿರುವ ಪ್ಯಾಕೇಜ್‌ಗೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, “ಇದ್ಯಾವುದೂ ಜನರಿಗೆ ತಲುಪುವುದಿಲ್ಲ. ಕಳೆದ ಬಾರಿಯೂ ಇಂತಹದ್ದೇ ಪ್ಯಾಕೇಜ್ ಘೋಷಣೆ ಮಾಡಿದ್ದರು. ಪಂಚಾಯಿತಿಗಳಿಗೆ ಪ್ಯಾಕೇಜ್ ನೀಡುವ ಜವಾಬ್ದಾರಿ ವಹಿಸಬೇಕು ಇಲ್ಲದಿದ್ದರೇ ಇದು ಬರಿ ಹಾಳೆಗೆ ಮಾತ್ರ ಸೀಮಿತವಾಗುತ್ತದೆ” ಎಂದಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ’ಇದು ಅತ್ಯಂತ ನಿರಾಶದಾಯಕ ಪ್ಯಾಕೇಜ್, ಕಳೆದ ಬಾರಿ ಮೊದಲ ಕಂತಿನಲ್ಲಿ 1, 200 ಕೋಟಿ ರೂಪಾಯಿಗಳ ಪ್ಯಾಕೇಜ್ ಘೋಷಿಸಿ, ಹೂವಿನ ಬೆಳೆಗಾರರಿಗೆ ಹೆಕ್ಟೆರ್‌ಗೆ 25 ಸಾವಿರ ಘೋಷಿಸಿತ್ತು. ಆದರೆ ಅದನ್ನೂ ಈಗ 10 ಸಾವಿರಕ್ಕೆ ಇಳಿಸಿದೆ. ರಸಗೊಬ್ಬರ, ಬೆಲೆ ಹೆಚ್ಚಳದ ನಡುವೆ ಇದು ಯಾವ ರೀತಿ ರೈತರಿಗೆ ಸಹಕಾರಿ..? ಆಟೋ, ಕ್ಯಾಬ್, ಟ್ಯಾಕ್ಸಿ ಚಾಲಕರಿಗೆ ಕಳೆದ ಬಾರಿ 5000 ನೀಡಿ ಈಗ 3000 ಸಾವಿರ ಎಂದು ಘೋಷಣೆ ಮಾಡಿದ್ದಿರಿ ಇದು ನಿಜಕ್ಕೂ ಕೆಟ್ಟ ಪ್ಯಾಕೇಜ್” ಎಂದು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಗೋವಿನ ಸೆಗಣಿ, ಮೂತ್ರ ಕೊರೊನಾಗೆ ಮದ್ದಲ್ಲ ಎಂದ ಪತ್ರಕರ್ತರ ವಿರುದ್ದ NSA ಅಡಿ ಪ್ರಕರಣ ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...