Homeಕರೋನಾ ತಲ್ಲಣಮಂಗಳೂರು: ಮಾಸ್ಕ್ ಧರಿಸದಿದ್ದುದ್ದಕ್ಕೆ ಡಾ.ಶ್ರೀನಿವಾಸ ಕಕ್ಕಿಲಾಯ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ಮಾಸ್ಕ್ ಧರಿಸದಿದ್ದುದ್ದಕ್ಕೆ ಡಾ.ಶ್ರೀನಿವಾಸ ಕಕ್ಕಿಲಾಯ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಮಂಗಳೂರಿನ ಸೂಪರ್ ಮಾರ್ಕೆಟ್ ಒಂದರಲ್ಲಿ ಮಾಸ್ಕ್ ಧರಿಸದೇ ಕೋವಿಡ್‌ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ವೈದ್ಯ ಡಾ.ಶ್ರೀನಿವಾಸ ಕಕ್ಕಿಲಾಯರವರ ವಿರುದ್ಧ ಪ್ರಕರಣ ದಾಖಲಾಗಿದೆ.

ನಗರದ ಕದ್ರಿ ಪೊಲೀಸ್ ಠಾಣೆಯಲ್ಲಿ ಸಾಂಕ್ರಾಮಿಕ ರೋಗ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ವೈದ್ಯರು ಸೂಪರ್ ಮಾರ್ಕೆಟ್ ಸಿಬ್ಬಂದಿಯೊಡನೆ ವಾಗ್ವಾದ ನಡೆಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮಂಗಳವಾರ ಬೆಳಿಗ್ಗೆ ಸೂಪರ್ ಮಾರ್ಕೆಟ್ ತೆರಳಿದ್ದು ಕಕ್ಕಿಲಾಯರು ಮಾಸ್ಕ್ ಧರಿಸಿಲ್ಲವೆಂದು ಸಿಬ್ಬಂದಿ ಪ್ರಶ್ನಿಸಿದ್ದಾರೆ. ಹೌದು ನಾನು ಧರಿಸುವುದಿಲ್ಲ ಎಂದು ಕಕ್ಕಿಲಾಯರು ತಿಳಿಸಿದ್ದಾರೆ. ಹಾಗಾಗಿ ಸೂಪರ್ ಮಾರ್ಕೆಟ್ ಸಿಬ್ಬಂದಿ ದೂರು ದಾಖಲಿಸಿದ್ದಾರೆ.

ಇಲ್ಲಿ ಎಲ್ಲರಿಗೂ ಒಂದೇ ನಿಯಮ.. ನೀವು ಮಾಸ್ಕ್ ಏಕೆ ಹಾಕಿಲ್ಲ ಎಂದು ಸಿಬ್ಬಂದಿ ಪ್ರಶ್ನಿಸಿದ್ದಾರೆ. ನನಗೆ ಕೋವಿಡ್‌ನಿಂದ ಗುಣಮುಖನಾಗಿದ್ದೇನೆ. ನಾನು ಸರ್ಕಾರದ ದಡ್ಡ ನಿಯಮಗಳನ್ನು ಪಾಲಿಸುವುದಿಲ್ಲ ಎಂದು ಶ್ರೀನಿವಾಸ ಕಕ್ಕಿಲಾಯರು ಉತ್ತರಿಸಿದ್ದಾರೆ. ಲಾಕ್‌ಡೌನ್ ಎಂಬುದು ವ್ಯರ್ಥ ನಿಯಮ ಇದನ್ನು ನೀವು ಏಕೆ ವಿರೋಧಿಸುವುದಿಲ್ಲ ಎಂದು ಅವರು ಪ್ರಶ್ನಿಸಿದ್ದಾರೆ.

ನಾನು ವಿಜ್ಞಾನವನ್ನು ಅನುಸರಿಸುತ್ತೇನೆ ಹೊರತು ಸರ್ಕಾರದ ದಡ್ಡ ನಿಯಮಗಳನ್ನಲ್ಲ ಎಂದು ಶ್ರೀನಿವಾಸ ಕಕ್ಕಿಲಾಯರು ಹೇಳಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.


ಇದನ್ನೂ ಓದಿ: ನಿಗಮಗಳಿಗೆ ನೂರಾರು ಕೋಟಿಯಿದೆ; ಕೊರೊನಾ ಪರಿಹಾರಕ್ಕೆ ಹಣವಿಲ್ಲವೆ: ಕುಮಾರಸ್ವಾಮಿ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಶ್ರೀನಿವಾಸ್ ಕಕ್ಕಿಲಾಯ ಅಂತವರ ಮಾರ್ಗದರ್ಶನ ಸರ್ಕಾರಕ್ಕೆ ಬೇಕಿಲ್ಲ. ಇದು ತಾನು ಮಾಡಿರುವ ದಡ್ಡ ನಿಯಮಗಳು ಸರಿಯೋ ತಪ್ಪೋ ಅದನ್ನು ಪಾಲಿಸಬೇಕು ಎನ್ನುವುದು ಸರಕಾರದ ನೀತಿ.

  2. We as doctors should set good example for the people to follow in a public health emergency even if we personally differ from the current public advice on the health policy.

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...