Homeಮುಖಪುಟಸುಳ್ಳನ್ನು ಎತ್ತಿ ತೋರಿಸಿದ್ದಕ್ಕೆ ಟ್ವಿಟರ್‌ ಅನ್ನು ಬೆದರಿಸುತ್ತಿರುವ ಕೇಂದ್ರ ಸರ್ಕಾರ!

ಸುಳ್ಳನ್ನು ಎತ್ತಿ ತೋರಿಸಿದ್ದಕ್ಕೆ ಟ್ವಿಟರ್‌ ಅನ್ನು ಬೆದರಿಸುತ್ತಿರುವ ಕೇಂದ್ರ ಸರ್ಕಾರ!

- Advertisement -
- Advertisement -

ಕೊರೊನಾವನ್ನು ಬಳಸಿಕೊಂಡು ಬಿಜೆಪಿ ಸರ್ಕಾರಗಳನ್ನು ಹಣಿಯಲು ಕಾಂಗ್ರೆಸ್ ಪಕ್ಷವು “ಟೂಲ್ಕಿಟ್” ತಯಾರಿಸಿದೆ ಎಂದು ಬಿಜೆಪಿಯ ನಾಯಕ ಸಂಬಿತ್‌ ಪಾತ್ರ ಟ್ವೀಟ್ ಮಾಡಿದ್ದರು. ಆದರೆ ಈ ಟ್ವೀಟ್‌ಗೆ ‘ತಿರುಚಲ್ಪಟ್ಟ ವಿಷಯ’(ಮ್ಯಾನಿಪ್ಯುಲೇಟೆಡ್ ಮೀಡಿಯಾ) ಎಂದು ಟ್ವಿಟರ್‌ ಅಧೀಕೃತವಾಗಿ ಟ್ಯಾಗ್‌ ಮಾಡಿ, ಅವರು ಹಂಚಿರುವ ಮಾಹಿತಿ ಸುಳ್ಳು ಎಂದು ಸೂಚಿಸಿದೆ. ಇದು ಬಿಜೆಪಿಗೆ ಭಾರಿ ಮುಖಭಂಗ ಉಂಟು ಮಾಡಿದ್ದು, ಇದೀಗ ಕೇಂದ್ರ ಸರ್ಕಾರವು ಆ ಟ್ಯಾಗ್‌ ಅನ್ನು ತೆಗೆಯುವಂತೆ ಟ್ವಿಟರ್‌ ಅನ್ನು ಕೇಳಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಸಂಬಿತ್‌ ಪಾತ್ರ ಅವರ ಟ್ವೀಟ್‌ಗೆ ಹಾಕಿರುವ ‘ಟ್ಯಾಗ್‌’ ಪೂರ್ವಾಗ್ರಹದಿಂದ ಕೂಡಿದ್ದು, ಸ್ಪಷ್ಟ ಅತಿಕ್ರಮಣ ಮತ್ತು ಅನಗತ್ಯವಾಗಿದೆ ಎಂದು ಹೇಳಿದೆ.

ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯವು ಟ್ವಿಟರ್‌‌ನ ಜಾಗತಿಕ ತಂಡದೊಂದಿಗೆ, ಕಠಿಣವಾದ ಸಂವಹನ ನಡೆಸಿದ್ದು, ‘ತಿರುಚಲ್ಪಟ್ಟ ವಿಷಯ’ ಎಂಬ ಟ್ಯಾಗ್‌ ಹಾಕಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ‘ಕಾಂಗ್ರೆಸ್‌ ಟೂಲ್‌ಕಿಟ್‌ ಎಕ್ಸ್‌ಪೋಸ್ಡ್‌‌’ ಎಂದು ನಕಲಿಯನ್ನು ಹಂಚಿದ ಇಡೀ ‘ಬಿಜೆಪಿ ಪರಿವಾರ’!

ಮೇ 18 ರಂದು ಸಂಬಿತ್ ಪತ್ರಾ ಮಾಡಿದ್ದ ಟ್ವೀಟ್‌ ಅನ್ನು ಹಲವಾರು ಬಿಜೆಪಿ ನಾಯಕರು ಹಂಚಿಕೊಂಡಿದ್ದು, ಅದರಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿಯನ್ನು ಹಣಿಯಲು, ಕೊರೊನಾವನ್ನು ಬಳಸುವಂತೆ ಕಾಂಗ್ರೆಸ್ “ಟೂಲ್ಕಿಟ್” ತಯಾರಿಸಿದೆ ಎಂದು ಹೇಳುವ ಸ್ಕ್ರೀನ್‌‌ಶಾರ್ಟ್‌ಗಳನ್ನು ಟ್ವೀಟ್ ಮಾಡಿದ್ದರು.

 

ಆದರೆ ಈ ಸ್ಕ್ರೀನ್‌ಶಾಟ್‌ ನಕಲಿ ಹಾಗೂ ಪಕ್ಷದ ಲೆಟರ್‌‌‌ಹೆಡ್‌ ಅನ್ನು ನಕಲಿಸಿ ದುರುಪಯೋಗ ಮಾಡಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಅದೇ ದಿನ ಛತ್ತೀಸ್‌ಗಡ ಮತ್ತು ರಾಜಸ್ಥಾನದಲ್ಲಿ ಎಫ್‌ಐಆರ್ ದಾಖಲಿಸಿತ್ತು.

ಇದನ್ನೂ ಓದಿ: ಕಾಂಗ್ರೆಸ್ ವಿರುದ್ಧ ‘ಟೂಲ್‌ಕಿಟ್’ ಆರೋಪ ಸುಳ್ಳು: ಬಿಜೆಪಿಗೆ ಭಾರೀ ಮುಖಭಂಗ

ಅಷ್ಟೇ ಅಲ್ಲದೆ, ಸಂಬಿತ್ ಪತ್ರ ಮತ್ತು ಇತರ ಬಿಜೆಪಿ ನಾಯಕರ ಟ್ವೀಟ್‌ಗಳನ್ನು ತೆಗೆದುಹಾಕಿ, ಸಮಾಜದಲ್ಲಿ ತಪ್ಪು ಮಾಹಿತಿ ಮತ್ತು ಅಶಾಂತಿಯನ್ನು ಹರಡಿದ್ದಕ್ಕಾಗಿ ಅವರ ಖಾತೆಗಳನ್ನು ಶಾಶ್ವತವಾಗಿ ಸ್ಥಗಿತಗೊಳಿಸುವಂತೆ ಒತ್ತಾಯಿಸಿ ಪಕ್ಷವು ನಿನ್ನೆ ಟ್ವಿಟರ್‌ಗೆ ಪತ್ರ ಬರೆದಿದೆ.

ಇದಾಗಿ ಸಂಜೆ, ಸಂಬಿತ್‌ ಪತ್ರಾ ಅವರ ಟ್ವೀಟ್ ಕೆಳಗೆ “ಮ್ಯಾನಿಪ್ಯುಲೇಟೆಡ್ ಮೀಡಿಯಾ” ಟ್ಯಾಗ್ ಕಾಣಿಸಿಕೊಂಡಿದೆ.

ಟ್ವಿಟರ್‌ನ ಈ ಕ್ರಮವನ್ನು “ಪೂರ್ವ ನಿರ್ಣಯ, ಪೂರ್ವಾಗ್ರಹ ಮತ್ತು ತನಿಖೆಯನ್ನು ಒಂದು ಕಡೆಗೆ ಮಾಡುವ ಉದ್ದೇಶಪೂರ್ವಕ ಪ್ರಯತ್ನ” ಎಂದು ಸರ್ಕಾರ ದೂಷಿಸಿದೆ.

“ಟೂಲ್ಕಿಟ್” ನ ನಿಖರತೆಯನ್ನು ಪ್ರಶ್ನಿಸಿ ಈಗಾಗಲೇ ದೂರು ನೀಡಲಾಗಿದೆ ಮತ್ತು ಅದು ತನಿಖೆಯಲ್ಲಿದೆ. ಈ ವಿಷಯದ ಕುರಿತು ಸತ್ಯತೆಯನ್ನು ತನಿಖೆಯು ನಿರ್ಧರಿಸುತ್ತದೆಯೆ ಹೊರತು ಟ್ವಿಟ್ಟರ್ ಅಲ್ಲ. ಟ್ವಿಟರ್ ತನಿಖಾ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡಬಾರದು. ಈ ವಿಷಯವು ತನಿಖೆಯಲ್ಲಿದ್ದಾಗ ಟ್ವಿಟರ್ ತನ್ನ ತೀರ್ಪನ್ನು ರವಾನಿಸಬಾರು” ಎಂದು ಸರ್ಕಾರ ಹೇಳಿದ್ದಾಗಿ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ‘ಮುಗ್ಧ ಜನರ ರಕ್ತವು ಮೊಸಳೆ ಕಣ್ಣೀರಿನಿಂದ ಅಳಿಸಲಾಗುವುದಿಲ್ಲ’ – #CrocodileTears ಟ್ರೆಂಡ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...